ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಮತ್ತಷ್ಟು ತೀವ್ರಗೊಂಡಿದೆ. ಶ್ರೀರಂಗಪಟ್ಟಣದಲ್ಲಿಂದು ರೈತ ಸಂಘದ ವತಿಯಿಂದ ಹಣೆಗೆ ನಾಮ ಹಾಕಿಕೊಂಡು, ಜಾಗಟೆ ಬಾರಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಯಿತು. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ಸರ್ಕಾರ ನಮಗೆ ನಾಮ ಹಾಕಿದೆ. ಕುಡಿಯಲು ನೀರಿಲ್ಲದಂತೆ ಮಾಡಿದೆ ಎಂದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೋವಿಂದ, ಗೋವಿಂದ ನೀರು ಗೋವಿಂದ ಎಂದು ಜಾಗಟೆ ಬಾರಿಸುತ್ತ ಘೋಷಣೆ ಕೂಗುತ್ತಾ ಶ್ರೀರಂಗಪಟ್ಟಣದ ಬಸ್ …
Read More »ವಿಕ್ರಮ್ ಲ್ಯಾಂಡರ್‌ನ ಯಶಸ್ವಿ ಹಾಪ್ ಪ್ರಯೋಗ ಕೈಗೊಂಡ ಇಸ್ರೋ: ಭವಿಷ್ಯದ ಬಾಹ್ಯಾಕಾಶ ಅನ್ವೇಷಣೆಗಳಿಗೆ ವೇದಿಕೆ ಸಿದ್ಧ
ಚಂದ್ರನ ದಕ್ಷಿಣ ಧ್ರುವದಲ್ಲಿರುವ ವಿಕ್ರಂ ಲ್ಯಾಂಡರ್ನ್ನು ಶಿವಶಕ್ತಿ ಪಾಯಿಂಟ್ನಿಂದ 40 ಸೆಂ.ಮೀ ಎತ್ತರಕ್ಕೆ ಹಾರಿಸಿ ಮತ್ತೆ ನಂತರ 30ರಿಂದ 40 ಸೆಂ.ಮೀ ಪಕ್ಕಕ್ಕೆ ಲ್ಯಾಂಡ್ ಮಾಡಿಸಲಾಗಿದ್ದು, ಇಸ್ರೋದ ಈ ಸಾಧನೆ ಕುರಿತಂತೆ ಬಾಹ್ಯಾಕಾಶ ಲೇಖಕರು ಹಾಗೂ ರಕ್ಷಣಾ ಮತ್ತು ರಾಜಕೀಯ ವಿಶ್ಲೇಷಕರಾದ ಗಿರೀಶ್ ಲಿಂಗಣ್ಣ ಅವರು ವಿವರಿಸಿದ್ದಾರೆ. ಇಸ್ರೋದ ವಿಕ್ರಮ್ ಲ್ಯಾಂಡರ್ ತನ್ನ ಸಾಮರ್ಥ್ಯದ ವಿಚಾರದಲ್ಲಿ ಎಲ್ಲ ನಿರೀಕ್ಷೆಗಳನ್ನು ಮೀರಿ ಸಾಧನೆ ನಿರ್ಮಿಸಿದೆ ಎಂದು ಇಸ್ರೋ ಟ್ವೀಟ್ ಮೂಲಕ …
Read More »ಆಪರೇಷನ್ ಹಸ್ತ ಮಾಡುವವರು ಮತ್ತು ಆಪರೇಷನ್ ಹಸ್ತಕ್ಕೆ ಒಳಗಾಗುವವರು ಮೂರ್ಖರು :ರಮೇಶ್ ಜಾರಕಿಹೊಳಿ
ಚಿಕ್ಕೋಡಿ (ಬೆಳಗಾವಿ) : ಆಪರೇಷನ್ ಹಸ್ತ ಮಾಡುವವರು ಮತ್ತು ಆಪರೇಷನ್ ಹಸ್ತಕ್ಕೆ ಒಳಗಾಗುವವರು ಮೂರ್ಖರು. ಆಪರೇಷನ್ ಹಸ್ತ ನಡೆಸುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡಿದಾಗ ಒಂದು ಅರ್ಥ ಇತ್ತು. ಆಗ ಸರ್ಕಾರಕ್ಕೆ ಪೂರ್ಣ ಬಹುಮತ ಇರಲಿಲ್ಲ. ಬಿಜೆಪಿಯವರು ನಮಗೆ ಆಹ್ವಾನ ನೀಡಿರಲಿಲ್ಲ. …
Read More »ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಗೋಕಾಕ* : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ …
Read More »ಬೆಂಗಳೂರಿನಲ್ಲಿ ಮತ್ತೆ ಆರಂಭವಾಗಲಿದೆ ಡಬ್ಬಲ್ ಡೆಕ್ಕರ್ ಬಸ್ ಜಮಾನ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಬ್ಬಲ್ ಡೆಕ್ಕರ್ ಬಸ್ಗಳ ಜಮಾನ ಮತ್ತೆ ಶುರುವಾಗಲಿದೆ. ಪ್ರಾಯೋಗಿಕವಾಗಿ ಐದು ಮಾರ್ಗದಲ್ಲಿ ಡಬ್ಬಲ್ ಡೆಕ್ಕರ್ ಬಸ್ಗಳು ಸಂಚರಿಸಲಿವೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ಅನುಸಾರವಾಗಿ ಬಸ್ ಸಂಖ್ಯೆ ಹೆಚ್ಚಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕಲಾಸಿಪಾಳ್ಯ ಟಿಟಿಎಂಸಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಡಬ್ಬಲ್ ಡೆಕ್ಕರ್ ಬಸ್ಗಳಿಗೆ ಟೆಂಡರ್ ಕರೆಯಲಾಗಿದೆ. ಒಂದು ವಾರದಲ್ಲಿ ಟೆಂಡರ್ ಪೂರ್ಣವಾಗಲಿದೆ. ಮೊದಲ ಹಂತವಾಗಿ 5 ಡಬ್ಬಲ್ ಡೆಕ್ಕರ್ ಬಸ್ಗಳನ್ನು ರಸ್ತೆಗಿಳಿಸಲಾಗುತ್ತದೆ. ಇದಕ್ಕಾಗಿ …
Read More »ವಾಘಾ ಗಡಿ ಮೂಲಕ ಪಾಕಿಸ್ತಾನ ಪ್ರವೇಶಿಸಿದ ರೋಜರ್ ಬಿನ್ನಿ, ರಾಜೀವ್ ಶುಕ್ಲಾ
ಅಮೃತಸರ (ಪಂಜಾಬ್): ಏಷ್ಯಾಕಪ್ 2023 ಪಾಕಿಸ್ತಾನ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯುತ್ತಿದೆ. ಪಾಕಿಸ್ತಾನದ ಲಾಹೋರ್ನಲ್ಲಿ ಸಪ್ಟೆಂಬರ್ 5 ಮತ್ತು 6ರಂದು ನಡೆಯಲಿರುವ ಪಂದ್ಯದಲ್ಲಿ ಬಿಸಿಸಿಐನ ಇಬ್ಬರು ಅಧಿಕಾರಿಗಳು ಇರಲಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ತೆರಳಿದ್ದಾರೆ.. ನಾಳೆ (ಮಂಗಳವಾರ) ನಡೆಯುವ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯವನ್ನು ಗಡಾಫಿ ಕ್ರೀಡಾಂಗಣದಲ್ಲಿ …
Read More »370ನೇ ವಿಧಿ ರದ್ದತಿ ವಿಚಾರಣೆ: ಮುಖ್ಯ ಅರ್ಜಿದಾರ, ಸಂಸದ ಅಕ್ಬರ್ ಸಂವಿಧಾನ ನಿಷ್ಠೆ ಸಾಬೀತಿಗೆ ಕೋರ್ಟ್ ಸೂಚನೆ
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ 370 ನೇ ವಿಧಿ ರದ್ದತಿ ಬಗ್ಗೆ ಸುಪ್ರೀಂಕೋರ್ಟ್ ನಿತ್ಯ ವಿಚಾರಣೆ ನಡೆಸುತ್ತಿದ್ದು, ಮುಖ್ಯ ಅರ್ಜಿದಾರರಾಗಿರುವ ಬಾರಾಮುಲ್ಲಾ ಕ್ಷೇತ್ರದ ಸಂಸದ ಮುಹಮದ್ ಅಕ್ಬರ್ ಲೋನ್ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಖಂಡಿಸಿ, ದೇಶದ ಸಂವಿಧಾನದ ಮೇಲೆ ಇರುವ ನಿಷ್ಠೆಯ ಬಗ್ಗೆ ಅಫಿಡವಿಟ್ ಸಲ್ಲಿಸಲು ಕೋರ್ಟ್ ಸೂಚಿಸಿದೆ. 15ನೇ ದಿನದ ವಿಚಾರಣೆಯಲ್ಲಿ ಮುಖ್ಯ ಅರ್ಜಿದಾರ ಅಕ್ಬರ್ ಲೋನ್ ವಿರುದ್ಧವೇ ಭಾರತ ವಿರೋಧಿ …
Read More »ಚುನಾವಣಾ ಅಕ್ರಮ ನಡೆಸಿ ಗೆದ್ದ ಆರೋಪ : ಹೆಚ್ಡಿ ರೇವಣ್ಣಗೆ ಹೈಕೋರ್ಟ್ ಸಮನ್ಸ್
ಬೆಂಗಳೂರು : ಚುನಾವಣಾ ಅಕ್ರಮಗಳನ್ನು ನಡೆಸಿ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರು ಆಯ್ಕೆಯಾಗಿದ್ದು, ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ಹೊಳೆನರಸೀಪುರದ ಪರಾಜಿತ ಅಭ್ಯರ್ಥಿ ಹಾಗೂ ವಕೀಲ ದೇವರಾಜೇಗೌಡ ಎಂಬುವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ, ರೇವಣ್ಣಗೆ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ಕೂಡ …
Read More »ಕೆಎಸ್ಆರ್ಟಿಸಿಗೆ ಮುಡಿಗೆ ‘ಸಪ್ಲೈಚೈನ್ ಲೀಡರ್ ಶಿಪ್ -ಎಕ್ಸ್ಪ್ರೆಸ್ ಲಾಜಿಸ್ಟಿಕ್ ಪ್ರಶಸ್ತಿ
ಬೆಂಗಳೂರು : ದೇಶದ ಸರ್ಕಾರಿ ಸ್ವಾಮ್ಯದ ರಸ್ತೆ ಸಾರಿಗೆ ಸಂಸ್ಥೆಗಳ ನಿರ್ವಹಣೆಯಲ್ಲಿ ಪ್ರಶಸ್ತಿಗಳ ಬೇಟೆಯನ್ನು ಮುಂದುವರೆಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಪ್ರತಿಷ್ಠಿತ ಸಪ್ಲೈ ಚೈನ್ ಲೀಡರ್ ಶಿಪ್ ಪ್ರಶಸ್ತಿ ಲಭಿಸಿದೆ. ಇದರ ಜೊತೆಗೆ ಎಕ್ಸ್ ಪ್ರೆಸ್ ಲಾಜಿಸ್ಟಿಕ್ ಪ್ರಶಸ್ತಿಯೂ ಲಭಿಸಿದೆ. ಕಾಮಿಕಾಜೆ ಬಿ2ಬಿ ಮೀಡಿಯಾ ಪ್ರತಿಷ್ಠಾಪಿಸಿರುವ 15ನೇ ಆವೃತ್ತಿಯ ಎಕ್ಸ್ ಪ್ರೆಸ್ ಲಾಜಿಸ್ಟಿಕ್ ಮತ್ತು ಸಪ್ಲೈ ಚೈನ್ ಲೀಡರ್ ಶಿಪ್ ಪ್ರಶಸ್ತಿ ಕೆಎಸ್ಆರ್ಟಿಸಿ ಮುಡಿಗೇರಿದ್ದು, ಸೆಪ್ಟೆಂಬರ್ 14ರಂದು ಮುಂಬೈನಲ್ಲಿರುವ …
Read More »ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿ: ಪ್ರಕರಣ ದಾಖಲು
ಬೆಂಗಳೂರು: ಸಾಮಾನ್ಯವಾಗಿ ರಾಜಕೀಯ ನಾಯಕರು, ಪೊಲೀಸ್ ಅಧಿಕಾರಿಗಳು, ಸಿನಿಮಾ ತಾರೆಗಳು ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸುತ್ತಿದ್ದ ಸೈಬರ್ ವಂಚಕರು ಇದೀಗ ರಾಜ್ಯಪಾಲರ ಹೆಸರಿನಲ್ಲಿಯೂ ನಕಲಿ ಖಾತೆ ತೆರೆದಿರುವ ವಿಚಾರ ಬೆಳಕಿಗೆ ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರ ಫೋಟೋ, ಹೆಸರು ಬಳಸಿಕೊಂಡು ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಕರ್ನಾಟಕ ಪ್ರದೇಶ …
Read More »