Breaking News

ಆಯುಧಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ಅರಿಶಿನ ಕುಂಕುಮ ಬಳಸದಂತೆ ಸುತ್ತೋಲೆ: ಸಿಎಂ ಸ್ಪಷ್ಟನೆ

ಬೆಂಗಳೂರು: ಆಯುಧಪೂಜೆಯ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ, ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹೊರಡಿಸಿರುವ ವಿಚಾರ ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುತ್ತವೆ. ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು …

Read More »

ಇಂದು ಭಾರತ-ಬಾಂಗ್ಲಾದೇಶ ಮಧ್ಯೆ ಕದನ.. ಬಲಾಬಲ

ಪುಣೆ(ಮಹಾರಾಷ್ಟ್ರ): ಮೊದಲ ಪಂದ್ಯದಲ್ಲಿ ಸ್ವಲ್ಪ ಕಷ್ಟವೆನಿಸಿದ್ರೂ ಆಸ್ಟ್ರೇಲಿಯಾ ತಂಡವನ್ನು ಭಾರತ ಸೋಲಿಸಿತು. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಸುಲಭ ಜಯ ಸಾಧಿಸಿತ್ತು. ಆದ್ರೆ ಹೈವೋಲ್ಟೇಜ್​ ಪಂದ್ಯವಾಗಿದ್ದ ಪಾಕಿಸ್ತಾನ ವಿರುದ್ಧ ನಿಜವಾದ ಸ್ಪರ್ಧೆ ಇರಲಿಲ್ಲ. ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಸ್​ಗೆ ಫೇವರಿಟ್ ಎನಿಸಿಕೊಂಡಿದೆ. ಇಂದು ಬಾಂಗ್ಲಾದೇಶದೊಂದಿಗೆ ಹಣಾಹಣಿ ನಡೆಯಲಿದೆ. ಸಾಮರ್ಥ್ಯ ಮತ್ತು ಫಾರ್ಮ್‌ನಲ್ಲಿ ರೋಹಿತ್ ತಂಡಕ್ಕೆ ಬಾಂಗ್ಲಾದೇಶ ಯಾವುದೇ ಸಾಟಿಯಲ್ಲ. ಹಾಗಂತ ಕಡೆಗಣನೆ ಸಲ್ಲದು. ಯಾಕೆಂದರೆ ಇಂಗ್ಲೆಂಡ್‌ಗೆ ಅಫ್ಘಾನಿಸ್ತಾನ ಮತ್ತು …

Read More »

ಪಾದಚಾರಿಗಳಿಗೆ ಕಾರು ಡಿಕ್ಕಿ; ಯುವತಿ ಸಾವು, ನಾಲ್ವರಿಗೆ ಗಾಯ-

ಮಂಗಳೂರು: ಫುಟ್​ಪಾತ್​ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐವರು ಯುವತಿಯರಿಗೆ ಕಾರು ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಓರ್ವ ಯುವತಿ ಸಾವನ್ನಪ್ಪಿದ್ದಾರೆ. ಸುರತ್ಕಲ್​ನ ಕಾನ ಬಾಳದ ರೂಪಶ್ರೀ (23) ಸಾವನ್ನಪ್ಪಿದವರು. ಸ್ವಾತಿ, ಹಿತ್ನವಿ, ಕೃತಿಕಾ, ಯತಿಕಾ ಗಾಯಗೊಂಡಿದ್ದಾರೆ. ಸಂಜೆ 4 ಗಂಟೆಯ ಸುಮಾರಿಗೆ ಐವರು ಯುವತಿಯರು ಮಂಗಳೂರು ಕಾರ್ಪೊರೇಷನ್ ಈಜುಕೊಳದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಎಸ್.ಎಲ್.ಶೆಟ್ ಜ್ಯುವೆಲರ್ಸ್ ಬಳಿಯ ಫುಟ್‌ಪಾತ್‌ ಬಳಸಿ ಸಂಚರಿಸುತ್ತಿದ್ದಾಗ ಹಿಂದಿನಿಂದ ಫುಟ್‌ಪಾತ್‌ ಮೇಲೇರಿ ಬಂದ ಕಾರು …

Read More »

ರಾಜ್ಯ ಕಾಂಗ್ರೆಸ್ ಸರ್ಕಾರದ ಆಯುಸ್ಸು ಬಹಳ ಕಡಿಮೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಯುಸ್ಸು ಬಹಳ ಕಡಿಮೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಗ್ಯಾರಂಟಿ ಜಾರಿ ಮಾಡಲಾಗದೆ ಪರಿತಪಿಸುತ್ತಿದ್ದಾರೆ. ಅವರ ತಪ್ಪುಗಳನ್ನು ಸದಾ ಎಳೆಎಳೆಯಾಗಿ ಜನರ ಮುಂದಿಡುತ್ತೇವೆ. ಕಾಂಗ್ರೆಸ್ ಸರ್ಕಾರವನ್ನು ತೆಗೆಯುವವರೆಗೂ ನಮ್ಮ ಹೋರಾಟ ನಡೆಯಲಿದೆ. ಈ …

Read More »

ಆನ್​ಲೈನ್​​ ಗೇಮ್ಸ್​​ನಲ್ಲಿ 1.5 ಕೋಟಿ ರೂ. ಗೆದ್ದಿದ್ದ ಪಿಎಸ್​ಐ ಅಮಾನತು

ಪುಣೆ (ಮಹಾರಾಷ್ಟ್ರ): ಆನ್​ಲೈನ್​ ಗೇಮಿಂಗ್ ಆಯಪ್​ನಲ್ಲಿ ಒಂದೂವರೆ ಕೋಟಿ ರೂ. ಬಹುಮಾನ ಗೆದ್ದು ಸುದ್ದಿಯಾಗಿದ್ದ ಮಹಾರಾಷ್ಟ್ರದ ಪೊಲೀಸ್​ ಅಧಿಕಾರಿ ಸೋಮನಾಥ್​ ಝೆಂಡೆ ತಲೆದಂಡವಾಗಿದೆ. ಅಶಿಸ್ತಿನ ವರ್ತನೆ ಹಾಗೂ ಪೊಲೀಸ್ ಇಲಾಖೆಯ ಪ್ರತಿಷ್ಠೆಗೆ ಕಳಂಕ ತಂದ ಆರೋಪದಡಿ ಸಬ್​ ಇನ್ಸ್​ಪೆಕ್ಟರ್​ ಆಗಿದ್ದ ಸೋಮನಾಥ್ ಅವರನ್ನು ಅಮಾನತುಗೊಳಿಸಲಾಗಿದೆ. ಪುಣೆಯ ಪಿಂಪ್ರಿ ಚಿಂಚ್​ವಾಡ ನಗರದ ಪೊಲೀಸ್​ ಮುಖ್ಯ ಕಚೇರಿಯಲ್ಲಿ ಪಿಎಸ್​ಐ ಸೋಮನಾಥ್​ ಝೆಂಡೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಆನ್​ಲೈನ್​ ಕ್ರಿಕೆಟ್​ ಗೇಮ್​​​​​​ನಲ್ಲಿ 1.5 ಕೋಟಿ ರೂ. …

Read More »

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಶೇ.4ರಷ್ಟು ತುಟ್ಟಿ ಭತ್ಯೆ ಏರಿಕೆ

ನವದೆಹಲಿ: ಕೇಂದ್ರದ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಸರ್ಕಾರ ಬುಧವಾರ ಶೇ.4ರಷ್ಟು ಏರಿಕೆ ಮಾಡಿದೆ. ಇದು ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್​ ಠಾಕೂರ್​ ತಿಳಿಸಿದ್ದಾರೆ. ಇದು ಲಕ್ಷಾಂತರ ಹಾಲಿ ನೌಕರರು ಹಾಗೂ ಪಿಂಚಿಣಿದಾರರಿಗೆ ಅನುಕೂಲವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ನಡೆಯಿತು. ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಈಗ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗಿದೆ, …

Read More »

ಬೆಳಗಾವಿಯಿಂದಲೇ ಬಂಡಾಯ ಆರಂಭ ಆಗುತ್ತೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ತಿರುಗೇಟು ಕೊಟ್ಟಿರುವ ಡಿಸಿಎಂ

ಬೆಳಗಾವಿ: ಬೆಳಗಾವಿಯಿಂದಲೇ ಬಂಡಾಯ ಆರಂಭ ಆಗುತ್ತೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ತಿರುಗೇಟು ಕೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ, ಯಾರ ಬಗ್ಗೆಯೂ ಏನೂ ಇಲ್ಲ. ‌136 ಶಾಸಕರೆಲ್ಲರೂ ನಮ್ಮವರೆ.. ಬಿಜೆಪಿಯವರಿಗೆ ಒಂದು ನ್ಯೂಸ್ ಬೇಕು. ಅದಕ್ಕೆ ಈ ರೀತಿ ಏನೆನೋ ಸೃಷ್ಟಿಸುತ್ತಿದ್ದಾರೆ ಎಂದಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲರ ಭಾಷಣ ಕೇಳಿದ್ದೀರಾ.. ಅವಿಶ್ವಾಸ ನಿರ್ಣಯ ಮಂಡನೆ ವೇಳೆ …

Read More »

ನನ್ನನ್ನು ಜೈಲಿಗೆ ಕಳುಹಿಸಲು ಕಟೀಲ್, ಕುಮಾರಸ್ವಾಮಿ ಜಡ್ಜ್ ಅಲ್ಲ: ಡಿ.ಕೆ.ಶಿ.

ಬೆಳಗಾವಿ: ಡಿ.ಕೆ‌.ಶಿವಕುಮಾರ್ ಎರಡನೇ ಬಾರಿ ತಿಹಾರ್ ಜೈಲಿಗೆ ಹೋಗಲು ರೆಡಿಯಾಗಬೇಕು ಎಂಬ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಳಿನ್‌ ಕುಮಾರ್ ಕಟೀಲ್, ಹೆಚ್‌.ಡಿ.ಕುಮಾರಸ್ವಾಮಿ ನ್ಯಾಯಾಧೀಶರೇನು? ಎಂದು ತಿರುಗೇಟು ನೀಡಿದರು. ಇನ್ನು ಸಿ.ಟಿ.ರವಿಗೆ ಲೂಟಿ ರವಿ ಎಂದು ಹೆಸರು ಕೊಟ್ಟಿದ್ದೇ ಅವರ ಪಾರ್ಟಿ. ಯಾರು ಯಾರು ಏನೇನು ಮಾತನಾಡಿದ್ದಾರೆ ಎಂಬ ದಾಖಲೆ ನನ್ನ ಬಳಿ ಇದೆ. ಸಮಯ ಬರಲಿ, ಎಲ್ಲವನ್ನೂ ಹೇಳುತ್ತೇನೆ ಎಂದರು. ಇದೇ …

Read More »

ಆಧಾರರಹಿತ ಆರೋಪ ಮಾಡುವುದು ಬಿಜೆಪಿಯ ಚಾಳಿ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ಬಿಜೆಪಿ ಮುಖಂಡರಿಗೆ ಆಧಾರ ರಹಿತ ಆರೋಪ ಮಾಡುವುದು ಒಂದು ಚಾಳಿ ಆಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ‌ ಭೀತಿ ಅವರನ್ನು ಕಾಡತೊಡಗಿದೆ. ಕರ್ನಾಟಕದಲ್ಲಿ ಅವರು ಧೂಳಿಪಟ ಆಗಲಿದ್ದಾರೆ ಎಂದು ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಎಟಿಎಂ ಆಗಿ ಬಳಕೆ ಆಗುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ಬಿಜೆಪಿ ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಯಾವ ರೀತಿ‌ ಆಡಳಿತ ಕೊಟ್ಟಿದ್ದಾರೆ ಎಂಬುದು …

Read More »

ಪವಿತ್ರ ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಭಕ್ತಗಣ : ಹಲವು ಗಣ್ಯರು ಭಾಗಿ

ಕೊಡಗು : ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ಕ್ಷಣಕ್ಕೆ ಸಾಕ್ಷಿಯಾದರು. ಕೊಡಗಿನ ಕುಲದೇವಿ, ನಾಡಿನ ಜೀವನದಿ ಕಾವೇರಿ ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ರಾತ್ರಿ 1 ಗಂಟೆ 26 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಿದಳು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ. ಪಂ. …

Read More »