Breaking News

ದಯಾನಂದ್​ ಅಮಾನತು ಆದೇಶ ರದ್ದು ಪಡಿಸುವಂತೆ ಹೆಡ್ ಕಾನ್ಸ್​ಟೇಬಲ್​ ಏಕಾಂಗಿ ಪ್ರತಿಭಟನೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಏಕಾಏಕಿ ಮಾಡಿರುವ ದಯಾನಂದ್ ಅವರ ಸಸ್ಪೆಂಡ್ ರದ್ದುಪಡಿಸಬೇಕೆಂದು ರಾಜಭವನ ಮುಂದೆ ಹೆಡ್​ ಕಾನ್ಸ್​ಟೇಬಲ್​ ಏಕಾಂಗಿ ಪ್ರತಿಭಟನೆ ನಡೆಸಿದರು. ತೋಳಿಗೆ ಕಪ್ಪುಪಟ್ಟಿ ಧರಿಸಿ ಅಂಬೇಡ್ಕರ್ ಫೋಟೊ ಇಟ್ಟುಕೊಂಡು ರಾಜಭವನ ಮುಂದೆ ಪ್ರತಿಭಟನೆ ನಡೆಸಿದರು. ದಯಾನಂದ್ ಅವರನ್ನು ಅಮಾನತುಗೊಳಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಹಾಗೂ ಪೊಲೀಸರಿಗೆ ರಕ್ಷಣೆ ನೀಡಬೇಕೆಂದು ನರಸಿಂಹರಾಜ್ ಅವರು ದೂರಿನಲ್ಲಿ …

Read More »

ಕೆಆರ್​ಎಸ್​ ಸುತ್ತ ಕಲ್ಲು ಗಣಿಗಾರಿಕೆ ವರದಿ ನೀಡಲು IISCಗೆ ಎಷ್ಟು ದಿನ ಬೇಕಾಗಲಿದೆ:HIGH COURT

ಬೆಂಗಳೂರು: ಕೃಷ್ಣ ರಾಜ ಸಾಗರ ಜಲಾಶಯ (ಕೆಆರ್​ಎಸ್​)ದ ಸುತ್ತಮುತ್ತಲಿನ 20 ಕಿಮೀ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟದಿಂದ ಆಗುತ್ತಿರುವ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ಎಷ್ಟು ಸಮಯಬೇಕು ಎಂಬ ಬಗ್ಗೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್​ಸಿ)ಯಿಂದ ಮಾಹಿತಿ ಪಡೆದು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಸಿ.ಜಿ.ಕುಮಾರ್‌ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರರಾವ್‌ ಮತ್ತು ನ್ಯಾಯಮೂರ್ತಿ …

Read More »

ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

ಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ವೇಳೆ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ವೈಫಲ್ಯದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಡಿಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಗುಪ್ತಚರ ಇಲಾಖೆಯ ಪ್ರಭಾರಿ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನ ಎತ್ತಂಗಡಿ ಮಾಡಲಾಗಿದೆ. ಈ ಸ್ಥಾನಕ್ಕೆ ಎಸ್ .ರವಿ ಅವರನ್ನು ವರ್ಗಾವಣೆ ಮಾಡಿದೆ. ಗೃಹ ಇಲಾಖೆಯ ಕಾರ್ಯದರ್ಶಿಯಾಗಿ ಕೆ.ವಿ.ಶರತ್ ಚಂದ್ರ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಇವರಿಗೆ ಹೆಚ್ಚುವರಿಯಾಗಿ ಪೊಲೀಸ್ ನೇಮಕಾತಿ …

Read More »

ಕಮಿಷನರ್ ಸೇರಿ ಹಿರಿಯ ಅಧಿಕಾರಿಗಳ ಅಮಾನತು ಸ್ವಾಗತಾರ್ಹ: ಹೊರಟ್ಟಿ

ಹುಬ್ಬಳ್ಳಿ: “ಬೆಂಗಳೂರು ಕಾಲ್ತುಳಿತ ಪ್ರಕರಣ ದುರಾದುಷ್ಟಕರ. ನನ್ನ ರಾಜಕೀಯ ಜೀವನದಲ್ಲಿ ಇಂತಹದೊಂದು ದುರ್ಘಟನಡೆ ನಡೆದಿಲ್ಲ. ಸರ್ಕಾರ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಮೇಲೆ ತೆಗೆದುಕೊಂಡ ಕ್ರಮ ಸ್ವಾಗತಾರ್ಹ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, “ನನ್ನ ವಿಧಾನ ಪರಿಷತ್​ನ ರಾಜಕೀಯ ಜೀವನದಲ್ಲಿ 45 ವರ್ಷಗಳ ಅನುಭವದಲ್ಲಿ ಪೊಲೀಸ್ ಕಮಿಷನರ್ ಸೇರಿದಂತೆ ‌ದೊಡ್ಡ ದೊಡ್ಡ ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಇದೇ ಮೊದಲು. ಈ ಘಟನೆ ಹೇಗೆ …

Read More »

ಹೆಂಡತಿ ಜೊತೆ ಜಗಳ, ಬೀದಿಯಲ್ಲಿದ್ದ ಮಹಿಳೆ ಕೆಣಕಿ ಕಲ್ಲಲ್ಲಿ ಹೊಡೆಸಿಕೊಂಡು ಪ್ರಾಣಬಿಟ್ಟ!

ಚಿಕ್ಕಬಳ್ಳಾಪುರ: ಹೆಂಡತಿ ಜೊತೆ ಜಗಳ ಮಾಡಿಕೊಂಡು ರಾತ್ರಿ ಮನೆಯಿಂದ ಹೊರಗೆ ಬಂದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಮಲಗಿದ್ದವಳೊಂದಿಗೆ ಅಸಭ್ಯವಾಗಿ ವರ್ತಿಸಿ ಕಲ್ಲಿನೇಟು ತಿಂದು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜೂನ್ 4 ರ ಬೆಳಗ್ಗೆ ಚಿಕ್ಕಬಳ್ಳಾಪುರದ ಬಿ.ಬಿ.ರಸ್ತೆಯಲ್ಲಿರುವ ಆರ್.ಕೆ. ಕಾಂಪ್ಲೆಕ್ಸ್ ಕಟ್ಟಡದ ನೆಲಮಹಡಿಯಲ್ಲಿರುವ ಅಂಗಡಿ ಮುಂಭಾಗದಲ್ಲಿ ಯುವಕನ ಶವ ಪತ್ತೆಯಾಗಿದೆ. ರಕ್ತದ ಮಡಿವಿನಲ್ಲಿ ಬಿದ್ದಿದ್ದ ಶವದ ಮುಖವನ್ನ ಯಾರೋ ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಸ್ಥಿತಿಯಲ್ಲಿತ್ತು. ಏನಿದು ಘಟನೆ?: ವಿಷಯ ತಿಳಿದು …

Read More »

ಅನುಮತಿ ಇದ್ದಿದ್ದು ಕೇವಲ 30 ಅತಿಥಿಗಳಿಗೆ, ಇದ್ದದ್ದು 200ಕ್ಕೂ ಹೆಚ್ಚು! (IANS)

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಆರ್​ಸಿಬಿ ತಂಡದ ಸರ್ಕಾರಿ ಸನ್ಮಾನ ಕಾರ್ಯಕ್ರಮದ ವೇದಿಕೆಯಲ್ಲೂ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್​​​ನಲ್ಲಿ ಹಾಕಲಾದ ವೇದಿಕೆ ಮೇಲೆ 25-30 ಅತಿಥಿಗಳಿಗೆ ಮಾತ್ರ ಅನುಮತಿಸಲಾಗಿದ್ದರೂ, ನೂರಾರು ಜನ ವೇದಿಕೆಯಲ್ಲಿ ಜಮಾವಣೆಯಾಗುವ ಮೂಲಕ ಲೋಪ ಎಸಗಲಾಗಿತ್ತು ಎಂದು ತಿಳಿದು ಬಂದಿದೆ. ವಿಧಾನಸೌಧ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೇವಲ 25-30 ಮಂದಿ ಅಥಿತಿಗಳಿಗೆ ಮಾತ್ರ ವೇದಿಕೆ ಮೇಲೆ ಅನುಮತಿಸಿ ವಿಧಾನಸೌಧ ಭದ್ರತೆ ಪೊಲೀಸ್ ಇನ್ಸ್​ಪೆಕ್ಟರ್​ಗೆ ಸೂಚನೆ …

Read More »

ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳಿಗೆ ನೀಡುತ್ತಿರುವ ಕಿರುಕುಳ ಹಾಗೂ ರಾಜ್ಯದ ಹಿಂದೂ ಸಂಘಟಕರಿಗೆ ಕೊಡುತ್ತಿರುವ ಹಿಂಸೆ ಖಂಡಿಸಿ ನಗರದಲ್ಲಿಂದು ಶ್ರೀರಾಮಸೇನೆ, ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ದಕ್ಷಿಣ ಕನ್ನಡ ಜಿಲ್ಲೆಯನ್ನು ಭಯ ಮುಕ್ತಗೊಳಿಸಲು ನಿಷೇಧಿತ ಪಿಎಫ್ಐ ಕಾರ್ಯಕರ್ತರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು, ಎಸ್.ಡಿ.ಪಿ.ಐ ಮೂಲಯ ಭಯ ಬೆದರಿಕೆಯ ಭಾಷಣಗಳ ಮೇಲೆ ನಿಗಾ ಇಟ್ಟು …

Read More »

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರು ಅಮಾನತ್ತು; ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ; ಉಮೇಶ ಕಾರಜೋಳ

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರು ಅಮಾನತ್ತು; ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ; ಉಮೇಶ ಕಾರಜೋಳ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಜನರ ರಕ್ಷಣೆಗಾಗಿ ತಮ್ಮ ಜೀವನ ಮುಡುಪಾಗಿರಿಸುವ ಆರಕ್ಷಕರ ಮೇಲೆ ಗದಾ ಪ್ರಹಾರ ಮಾಡುವ ಮೂಲಕ ರಾಜ್ಯ ಸರ್ಕಾರ ಒಂದು ರೀತಿ ತುಘಲಕ್ ದರ್ಬಾರ ನಡೆಸುತ್ತಿದೆ ಎಂದು ಭಾರತೀಯ ಜನತಾ ಪಕ್ಷ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ‌ಕಾರ್ಯದರ್ಶಿ ಉಮೇಶ ಕಾರಜೋಳ ಸರ್ಕಾರದ ನಡೆ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, …

Read More »

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸದಲ್ಲಿ ಕಾಲ್ತುಳಿ ಪ್ರಕರಣ…. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದ ಸಂಘಟನೆ

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸದಲ್ಲಿ ಕಾಲ್ತುಳಿ ಪ್ರಕರಣ…. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದ ಸಂಘಟನೆ ಬೆಂಗಳೂರಿನಲ್ಲಿ ಆರ್ ಸಿ ಬಿ‌ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದ್ದನ್ನು ಖಂಡಿಸಿ ಹಾಗೂ ಸಿಎಂ ಡಿಸಿಎಂ ಸೇರಿ ಗೃಹ ಸಚಿವರ ರಾಜೀನಾಮೆ ಆಗ್ರಹಿಸಿ ಧಾರವಾಡದಲ್ಲಿ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ …

Read More »

ಚಿಕ್ಕೋಡಿಯ ಕೆ. ಎಲ್. ಇ. ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿಜೇತ ವಿದ್ಯಾರ್ಥಿಗಳ ಸತ್ಕಾರ ಕಾರ್ಯಕ್ರಮ: ಆಗಮನ

ಚಿಕ್ಕೋಡಿಯ ಕೆ. ಎಲ್. ಇ. ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿಜೇತ ವಿದ್ಯಾರ್ಥಿಗಳ ಸತ್ಕಾರ ಕಾರ್ಯಕ್ರಮ: ಆಗಮನ ಚಿಕ್ಕೋಡಿ: ಕೆ. ಎಲ್. ಇ. ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಎರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾಂತೇಶ ಕವಟಗಿಮಠ, ನಿರ್ದೇಶಕರು, ಕೆ ಎಲ್ ಇ ಸಂಸ್ಥೆ, ಬೆಳಗಾವಿ – ನಮ್ಮ ಚಿಕ್ಕೋಡಿ ಭಾಗದ ಮಕ್ಕಳು ಮಂಗಳೂರು-ಬೆAಗಳೂರಿನಲ್ಲಿ …

Read More »