Breaking News

ಬಿ.ಎಲ್​.ಸಂತೋಷ್​ ಅವರು ಮೊದಲು ಬಿಜೆಪಿಯಲ್ಲಿರುವ ಶಾಸಕರು, ಮಾಜಿ ಶಾಸಕರನ್ನು‌ ಉಳಿಸಿಕೊಳ್ಳಲಿ‌

ಹುಬ್ಬಳ್ಳಿ: ಬಿ.ಎಲ್​.ಸಂತೋಷ್​ ಅವರು ಮೊದಲು ಬಿಜೆಪಿಯಲ್ಲಿರುವ ಶಾಸಕರು, ಮಾಜಿ ಶಾಸಕರನ್ನು‌ ಉಳಿಸಿಕೊಳ್ಳಲಿ‌. ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ ಎಂದು ವಿಧಾನ ಪರಿಷತ್​ ಸದಸ್ಯ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್ ನೀಡಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್​ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್.ಸಂತೋಷ್​ ಹೇಳಿಕೆಗೆ ತಿರುಗೇಟು ನೀಡುತ್ತಾ, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ. ಬಿಜೆಪಿ ಬರೀ ಆಪರೇಷನ್ ಮಾಡಿ ಸರ್ಕಾರ ರಚನೆ …

Read More »

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಪಾಲಿಕೆ ಅನುಮತಿ ನೀಡಿದೆ.

ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾದ ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕೊನೆಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಪ್ಪಿಗೆ ನೀಡಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿಸುವ ಕುರಿತು ನಿನ್ನೆ ನಡೆದ ಸಭೆಯಲ್ಲಿ ವಿಷಯ ಮಂಡಿಸಲಾಯಿತು. ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದ್ದು, ಬಳಿಕ ಉತ್ಸವಕ್ಕೆ ಪಾಲಿಕೆ ಮೇಯರ್ ವೀಣಾ ಬರದ್ವಾಡ್ ಅನುಮತಿ ಕಲ್ಪಿಸಿದರು. ಬಳಿಕ ಪ್ರತಿಕ್ರಿಯೆ ನೀಡಿದ ಮೇಯರ್ ವೀಣಾ ಬರದ್ವಾಡ್, ಕಳೆದ ವರ್ಷದಂತೆ ಈ ವರ್ಷವೂ ಗಣೇಶ ಪ್ರತಿಷ್ಠಾಪನೆಗೆ ಪರವಾನಗಿ …

Read More »

NWKRTC ಹೊಸ ಪ್ರಯೋಗ: ನಗದುರಹಿತ ವ್ಯವಹಾರ ಉತ್ತೇಜಿಸಲು ಪ್ರಾಯೋಗಿಕವಾಗಿ UPI ಬಳಕೆ

ಹುಬ್ಬಳ್ಳಿ : ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸಲು ಹಾಗೂ ನಗದು ರಹಿತ ವ್ಯವಹಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಯುಪಿಐ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ. ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಮಾರ್ಗದರ್ಶನದಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಪ್ರಯಾಣದ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ ಹುದ್ದಾರ್​ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ …

Read More »

ಚಂದ್ರನ ಮೇಲ್ಮೈಯನ್ನು ಅನ್ವೇಷಿಸಿದ ನಂತರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಸೂರ್ಯನ ಕಡೆಗೆ ಚಲಿಸುತ್ತಿದ್ದು, Aditya L1 ಉಡ್ಡಯನಕ್ಕೆ ಕ್ಷಣಗಣನೆ ಆರಂಭವಾಗಿದೆ.

  ಬೆಂಗಳೂರು: ಚಂದ್ರನ ಮೇಲ್ಮೈಯನ್ನು ಅನ್ವೇಷಿಸಿದ ನಂತರ ಇಸ್ರೋ ತನ್ನ ಪ್ರಯಾಣವನ್ನು ಸೂರ್ಯನ ಕಡೆಗೆ ಚಲಿಸುತ್ತಿದೆ. ಇಂದು ಆಗಸಕ್ಕೆ ಹಾರಲಿರುವ Aditya L1 ಉಪಗ್ರಹ ಭಾಗಮಂಡಲದಲ್ಲಿ ಅಡಗಿರುವ ಹಲವು ರಹಸ್ಯಗಳನ್ನು ಬಿಚ್ಚಿಡಲಿದೆ ಎನ್ನುತ್ತಾರೆ ವಿಜ್ಞಾನಿಗಳು. ಇದು ಸೂರ್ಯನಿಂದ ಹೊರಹೊಮ್ಮುವ ವಿನಾಶಕಾರಿ ಸೌರ ಬಿರುಗಾಳಿಗಳು, ಪ್ಲಾಸ್ಮಾ ಮತ್ತು ಜ್ವಾಲೆಗಳ ಬಗ್ಗೆ ಹೆಚ್ಚಿನ ಅಧ್ಯಯನ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದು ರೋಡೇಶಿಯಾದಲ್ಲಿ ಉಪಗ್ರಹಗಳು ಮತ್ತು ಬಾಹ್ಯಾಕಾಶ ನೌಕೆಗಳ ಪರಿಣಾಮಕಾರಿ ರಕ್ಷಣೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಹೇಳಲಾಗುತ್ತದೆ. …

Read More »

ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ’: ಪ್ರಜ್ವಲ್ ರೇವಣ್ಣ

ಹಾಸನ: 2019ರ ಲೋಕಸಭೆ ಚುನಾವಣೆಯ ವೇಳೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಅಂದಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ಇತರರು ಹೈಕೋರ್ಟ್‌​ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜ್ವಲ್​ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿದೆ. ಈ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯೆ …

Read More »

ನಾಳೆ ‘ಆದಿತ್ಯ-ಎಲ್1’ ಉಡ್ಡಯನ: ಇಸ್ರೋ ತಿಳಿಸಿದ 3 ಸಂಗತಿಗಳಿವು..

ನವದೆಹಲಿ: ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಸಂಶೋಧನಾ ಸಂಸ್ಥೆಯ (ಇಸ್ರೋ) ಆದಿತ್ಯ-ಎಲ್1 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ (ಶನಿವಾರ) ಬೆಳಗ್ಗೆ 11:50ಕ್ಕೆ ನೌಕೆ ನಭಕ್ಕೆ ಚಿಮ್ಮಲಿದೆ. ಇದಕ್ಕೂ ಮುನ್ನ ದಿನವಾದ ಇಂದು ಇಸ್ರೋ ಕೆಲ ವಾಸ್ತವ ಸಂಗತಿಗಳನ್ನು ತಿಳಿಸಿದೆ. ಆದಿತ್ಯ-ಎಲ್1 ಸೂರ್ಯನ ಸಮಗ್ರ ಅಧ್ಯಯನಕ್ಕೆ ಮೀಸಲಾದ ನೌಕೆ. ಸ್ಥಳೀಯವಾಗಿ ಅಭಿವೃದ್ಧಿ ಪಡಿಸಲಾದ 7 ವಿಭಿನ್ನವಾದ ಪೇಲೋಡ್‌ಗಳನ್ನು (ಉಪಕರಣ) ಹೊಂದಿದೆ. ಏಳರ ಪೈಕಿ …

Read More »

ಸಂಸದ ಸ್ಥಾನದಿಂದ ಪ್ರಜ್ವಲ್​ ರೇವಣ್ಣ ಅನರ್ಹ: ಹೈಕೋರ್ಟ್‌ ಆದೇಶದ ಪ್ರಮುಖ ಅಂಶಗಳು.

ಬೆಂಗಳೂರು : 2019ರ ಲೋಕಸಭೆ ಚುನಾವಣೆಯ ವೇಳೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಅಂದಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ಇತರರು ಹೈಕೋರ್ಟ್‌​ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜ್ವಲ್​ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ. ಆದೇಶದಲ್ಲಿನ ಪ್ರಮುಖ ಅಂಶಗಳು: …

Read More »

ನಟ ಗಣೇಶ್‌ ಅವರಿಗೆ ಮನೆ ನಿರ್ಮಿಸಲು ಅವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು : ಬಂಡೀಪುರ ಸಮೀಪದ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ನಟ ಗಣೇಶ್​ ಕಿಶನ್​ ಅವರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಹೈಕೋರ್ಟ್, ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ ಎಂದು ತಿಳಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಅರಣ್ಯ ಇಲಾಖೆ ನೀಡಿದ್ದ ನೊಟೀಸ್ ಪ್ರಶ್ನಿಸಿ ಗಣೇಶ್​ ಕಿಶನ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ …

Read More »

ಚಿಂಚಲಿ ಮಾಯಕ್ಕನ ದರ್ಶನಕ್ಕೆ ಹೊರಟ ಭಕ್ತರಿದ್ದ ಟ್ರ್ಯಾಕ್ಟರ್ ಪಲ್ಟಿ, ಮಹಿಳೆ ಸಾವು

ಚಿಕ್ಕೋಡಿ : ಶ್ರಾವಣ ಮಾಸದ ನಿಮಿತ್ತ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಶಕ್ತಿದೇವತೆ ಮಾಯಕ್ಕ ದೇವಿಯ ದರ್ಶನಕ್ಕೆ ಹೊರಟ ಭಕ್ತಾದಿಗಳ ಟ್ರ್ಯಾಕ್ಟರ್ ಪಲ್ಟಿಯಾಗಿ, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ್ ಬ್ಯಾರೇಜ್ ಮೇಲೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಮೃತರನ್ನು ಅಥಣಿ ತಾಲೂಕಿನ ಕಕಮರಿ ಗ್ರಾಮದ ಅಕ್ಷತಾ ಕನಮಡಿ (20) ಎಂದು ಗುರುತಿಸಲಾಗಿದೆ. ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ …

Read More »

ವಿದ್ಯುತ್ ತಂತಿ ತಗುಲಿ ತಂದೆ – ಮಗ ದುರ್ಮರಣ

ಬೆಳಗಾವಿ: ವಿದ್ಯುತ್ ಕಂಬಕ್ಕೆ ಸಪೋರ್ಟಿವ್ ಆಗಿ ಕಟ್ಟಿದ್ದ ಅರ್ಥಿಂಗ್ ವೈಯರ್ ಸ್ಪರ್ಶಿಸಿದ ಪರಿಣಾಮ ತಂದೆ ಹಾಗೂ ಮಗ ಮೃತಪಟ್ಟಿರುವ ದಾರುಣ ಘಟನೆ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ‌. ಪ್ರಭು ಹುಂಬಿ (68), ಮಂಜುನಾಥ ಹುಂಬಿ (29) ಮೃತ ದುರ್ದೈವಿಗಳು. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ: ಮನೆ ಮುಂದಿನ ಕಸ ತೆಗೆಯುವಾಗ ನೆಲಕ್ಕೆ ಬಿಗಿದಿದ್ದ ವೈಯರ್ ತಂದೆ ಹಿಡಿದುಕೊಂಡಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದರಿಂದ ತಂದೆ ಕೆಳಗೆ ಬಿದ್ದು ಒದ್ದಾಡುತ್ತಿದ್ದರು. ಅದನ್ನು …

Read More »