Breaking News

ಮಂಗಳೂರು: ಸಂಚರಿಸುತ್ತಿದ್ದ ಬಸ್​ನಿಂದ ಹೊರಗೆ ಬಿದ್ದು ಕಂಡಕ್ಟರ್ ಸಾವು​- ಘಟನೆಯ ವಿಡಿಯೋ ವೈರಲ್​

ಮಂಗಳೂರು: ಸಂಚಾರದಲ್ಲಿದ್ದ ನಗರ ಸಾರಿಗೆ ಬಸ್​ನಿಂದ ಕಂಡಕ್ಟರ್‌ ಹೊರಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿರುವ ಘಟನೆ ನಂತೂರಿನಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ನಿವಾಸಿ, ಪ್ರಸ್ತುತ ಸುರತ್ಕಲ್ ತಡಂಬೈಲ್​​ನಲ್ಲಿ ನೆಲೆಸಿರುವ ಈರಯ್ಯ (23) ಮೃತಪಟ್ಟವರು. ಇವರು 15 ಸಂಖ್ಯೆಯ ಖಾಸಗಿ ಸಿಟಿ ಬಸ್ ನಿರ್ವಾಹಕರಾಗಿದ್ದರು. ಮಂಗಳವಾರ ಮಧ್ಯಾಹ್ನದ ಸುಮಾರಿಗೆ ಘಟನೆ ನಡೆದಿದೆ. ಬಸ್ ಕೆಪಿಟಿಯಿಂದ ಆಗಮಿಸಿ ನಂತೂರು ವೃತ್ತದಲ್ಲಿ ವೇಗವಾಗಿ ತಿರುವು ಪಡೆಯುತ್ತಿದ್ದಾಗ, ಮುಂಭಾಗದ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಬಿದ್ದಿದ್ದಾರೆ. …

Read More »

ದೆಹಲಿಯಲ್ಲಿ ಖಾಸಗಿ ಕಂಪನಿಯ​ ಹಿರಿಯ ಮ್ಯಾನೇಜರ್​ಗೆ ಗುಂಡಿಕ್ಕಿ ಹತ್ಯೆ

ನವದೆಹಲಿ: ಖಾಸಗಿ ಆನ್​ಲೈನ್​ ಶಾಪಿಂಗ್​ ವೆಬ್​ಸೈಟ್​ವೊಂದರ​ ಕಂಪನಿಯಲ್ಲಿ ಹಿರಿಯ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಹರ್​ಪ್ರೀತ್​ ಗಿಲ್​ (36) ಕೊಲೆಯಾದ ವ್ಯಕ್ತಿಯಾಗಿದ್ದು, ಇವರ ಸಂಬಂಧಿ ಗೋವಿಂದ್​ ಸಿಂಗ್​ ಎಂಬುವವರು ಕೂಡ ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಭಜನಪುರ ಪ್ರದೇಶದ ಸುಭಾಷ್ ವಿಹಾರ ಪ್ರದೇಶದಲ್ಲಿ ಕಳೆದ ರಾತ್ರಿ 11.20ರ ಸುಮಾರಿಗೆ ಐವರು ದುಷ್ಕರ್ಮಿಗಳ ತಂಡ …

Read More »

ಮಹಾನಗರ ಪಾಲಿಕೆಯಲ್ಲಿ ನೇಮಕಗೊಂಡ ಮಹಾರಾಷ್ಟ್ರ ಮೂಲದ ಪೌರ ಕಾರ್ಮಿಕರನ್ನು ತಕ್ಷಣ ವಜಾಗೊಳಿಸಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಪ್ರತಿಭಟನೆ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನೇಮಕಗೊಂಡ ಮಹಾರಾಷ್ಟ್ರ ಮೂಲದ ಪೌರ ಕಾರ್ಮಿಕರನ್ನು ತಕ್ಷಣ ವಜಾಗೊಳಿಸಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.   ಬೆಳಗಾವಿ ಪಾಲಿಕೆಯ ವ್ಯಾಪ್ತಿಯಲ್ಲಿ ಸಾಕಷ್ಟು ಪೌರ ಕಾರ್ಮಿಕರು ಇದ್ದಾರೆ. ಕೆಲ‌ ಬಿಜೆಪಿ‌ ಸದಸ್ಯರ ಕುಮ್ಮಕ್ಕಿನಿಂದ ಮಹಾರಾಷ್ಟ್ರ ಮೂಲದ ಪೌರಕಾರ್ಮಿಕರ ನೇಮಕ ಮಾಡಿಕೊಂಡಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ”ಪಾಲಿಕೆಯಲ್ಲಿ ಮಹಾರಾಷ್ಟ್ರದ ಕೋವಾಡದ ಪೌರ …

Read More »

ಬೆಳಗಾವಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಅನಿರೀಕ್ಷಿತ ಭೇಟಿ‌

ಬೆಳಗಾವಿ: ಇಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಅನಿರೀಕ್ಷಿತ ಭೇಟಿ‌ ನೀಡಿ, ದಾಖಲೆಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಂದ ಅನೇಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ದಕ್ಷಿಣ ಕ್ಷೇತ್ರದಲ್ಲಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಲೋಕಾಯುಕ್ತ ಎಸ್​ಪಿ ಹನುಮಂತರಾಯ್ ನೇತೃತ್ವದಲ್ಲಿ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ಬೇನಾಮಿ ಹೆಸರಲ್ಲಿ ಆಸ್ತಿ ಖರೀದಿಗೆ ಅವಕಾಶ ನೀಡದಂತೆ ನೋಂದಣಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೇನಾಮಿ ಹೆಸರಿನಲ್ಲಿ ಆಸ್ತಿ ಖರೀದಿಗೆ ಬಂದರೆ ಅಂಥವರ ವಿರುದ್ಧ ದೂರು ದಾಖಲಿಸಬೇಕು. …

Read More »

ಪಿಜಿಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ.. ಸೆಪ್ಟೆಂಬರ್ 23 ಮತ್ತು 24 ರಂದು ಪರೀಕ್ಷೆ

ಬೆಂಗಳೂರು: ಬಹು ನಿರೀಕ್ಷಿತ ಪಿಜಿ ಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ. ಸೆಪ್ಟಂಬರ್ 9 ಮತ್ತು 10 ರಂದು ನಡೆಯಬೇಕಿದ್ದ ಪಿಜಿಸಿಇಟಿ-2023 ಪರೀಕ್ಷೆಯನ್ನು ಸೆಪ್ಟೆಂಬರ್ 23 ಮತ್ತು 24 ರಂದು ನಿಗದಿಪಡಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದು ಪ್ರಕಟಣೆ ಹೊರಡಿಸಿದೆ. ಕರ್ನಾಟಕದಲ್ಲಿನ ವಿವಿಧ ವಿಶ್ವವಿದ್ಯಾಲಯಗಳಲ್ಲಿ 2023ನೇ ಸಾಲಿನ ಪದವಿ ಕೋರ್ಸ್​ಗಳ ಅಂತಿಮ ಸೆಮಿಸ್ಟರ್​ ಪರೀಕ್ಷೆಗಳು ಪೂರ್ಣಗೊಳ್ಳದೇ ಇರುವುದರಿಂದ ಮತ್ತು ಅಭ್ಯರ್ಥಿಗಳ ಹಿತದೃಷ್ಟಿಯಿಂದ ಪಿಜಿಸಿಇಟಿ-2023 ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರಸ್ತುತ ಎಂಬಿಎ, ಎಂಸಿಎ, …

Read More »

ಅಕ್ರಮ ಜಾಹೀರಾತುದಾರರ ವಿರುದ್ಧ 264 ಎಫ್​ಐಆರ್​​

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಸೇರಿ ಅಕ್ರಮ ಜಾಹೀರಾತುಗಳ ಹಾವಳಿ ತಪ್ಪಿಸಲು ಪ್ರತಿ ಅಕ್ರಮ ಜಾಹೀರಾತು ಅಳವಡಿಕೆಗೆ 50 ಸಾವಿರ ರೂ ದಂಡ ವಿಧಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ.   ಅಲ್ಲದೆ, ಈ ಸಂಬಂಧ 50 ಸಾವಿರ ರೂ.ಗಳವರೆಗೂ ದಂಡ ವಿಧಿಸಲಾಗುತ್ತಿದೆ. ಅಕ್ರಮ ಜಾಹೀರಾತು ಅಳವಡಿಸಿದ್ದ ವ್ಯಕ್ತಿಗಳ ವಿರುದ್ಧ ಒಟ್ಟು 264 ಎಫ್‌ಐಆರ್​ಗಳನ್ನು ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ಬಿಬಿಎಂಪಿ …

Read More »

ಬಿಬಿಎಂಪಿ ಅಗ್ನಿ ಅನಾಹುತದಲ್ಲಿ ಗಾಯಗೊಂಡ ಮುಖ್ಯ ಅಭಿಯಂತರ ಶಿವಕುಮಾರ್ ಸಾವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿ ಆವರಣದ ಗುಣ ನಿಯಂತ್ರಣ ಪ್ರಯೋಗಾಲಯದ ಕಚೇರಿಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭಾರಿ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮುಖ್ಯ ಅಭಿಯಂತರ ಶಿವಕುಮಾರ್ ಇಂದು (ಬುಧವಾರ) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಗುರುವಾರ ಕುಟುಂಬಸ್ಥರಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ. ಶೇಷಾದ್ರಿಪುರ ಅಪೋಲೊ ಆಸ್ಪತ್ರೆ ಮುಖ್ಯಸ್ಥ ಡಾ.ಉದಯ್ ಮಾತನಾಡಿ, “ಬಿಬಿಎಂಪಿ ಎಂಜಿನಿಯರ್ ಶಿವಕುಮಾರ್ ಚಿಕಿತ್ಸೆ …

Read More »

ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಬಂಧ ಎಲ್ಲ ಆಯಾಮದಲ್ಲೂ ತನಿಖೆ: ಸಚಿವ ಶಿವಾನಂದ ಪಾಟೀಲ್

ಹಾವೇರಿ: “ನಗರದ ಸಮೀಪದ ಆಲದಕಟ್ಟಿ ಗ್ರಾಮದಲ್ಲಿ ನಡೆದ ಪಟಾಕಿ ದುರಂತಕ್ಕೆ ಹಲವು ವೈಫಲ್ಯಗಳು ಕಾರಣ” ಎಂದು ಜವಳಿ ಮತ್ತು ಸಕ್ಕರೆ ಹಾಗೂ ಹಾವೇರಿ ಜಿಲ್ಲೆಯ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಇಂದು ಆಲದಕಟ್ಟಿಯ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಘಟನೆ ಸಂಬಂಧ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ಈ ದುರಂತ ನಡೆದಿರುವುದು ದುರಾದೃಷ್ಟಕರ, ಆಗಬಾರದಾಗಿತ್ತು ಆಗಿದೆ. …

Read More »

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸುವ ಚಿಂತನೆ ಇದೆ: ರಾಹುಲ್ ಗಾಂಧಿ

ಮೈಸೂರು : “ಮಹಿಳೆಯರ ಆರ್ಥಿಕ ಹೊರೆ ಇಳಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಕರ್ನಾಟಕದಲ್ಲಿ ಜಾರಿಗೊಳಿಸಿರುವ ಈ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸುವ ಚಿಂತನೆ ಇದೆ. ಇವು ಇಡೀ ದೇಶಕ್ಕೆ ದಿಕ್ಸೂಚಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿಂದು ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಭರವಸೆ ನೀಡಿತ್ತು. ಅಧಿಕಾರಕ್ಕೆ ಬಂದ …

Read More »

ಕಾಂಗ್ರೆಸ್ ಸರ್ಕಾರದ ನೂರು ದಿನದ ಸಾಧನೆ ಅಂದ್ರೆ ಅದು ವರ್ಗಾವಣೆ ಮಾತ್ರ:ಯತ್ನಾಳ್

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ನೂರು ದಿನದ ಸಾಧನೆ ಅಂದರೆ ಅದು ವರ್ಗಾವಣೆ ಮಾತ್ರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಎಲ್ಲಾ ಸ್ಥಗಿತ ಆಗಿದೆ. ನಮ್ಮ ಅಧಿಕಾರಾವಧಿಯಲ್ಲಿನ ಕೆಲಸಗಳನ್ನೆಲ್ಲಾ ಸ್ಥಗಿತ ಮಾಡಿದ್ದಾರೆ. ಎಲ್ಲರಿಗೂ ಉಚಿತ ಖಚಿತ ಅಂದ್ರು. ಆದರೆ ಈಗ ನೂರಾರು ಷರತ್ತುಗಳನ್ನು ಹಾಕಿದ್ದಾರೆ. ಯಾವುದೇ ಯೋಜನೆ ಪೂರ್ಣ ಪ್ರಮಾಣದಲ್ಲಿ ಜನರಿಗೆ ಸಿಗುವುದಿಲ್ಲ …

Read More »