Breaking News

ದಶಕದಿಂದ ಪಡತರವಾಡಿ ಗ್ರಾಮಕ್ಕಿಲ್ಲ ಬಸ್​ ಸಂಪರ್ಕ.. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ, ಗ್ರಾಮಸ್ಥರಿಗೂ ತೊಂದರೆ

ಚಿಕ್ಕೋಡಿ: ಅಥಣಿ ತಾಲೂಕಿನ ಪಡತರವಾಡಿ ಗ್ರಾಮಕ್ಕೆ ಸರಿಯಾದ ಬಸ್​ ಸಂಪರ್ಕವಿಲ್ಲದೆ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಮತ್ತು ಜನರು ಸಂಕಷ್ಟ ಎದುರಿಸುವಂತಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಈ ಗ್ರಾಮಕ್ಕೆ ಕಳೆದ 15 ವರ್ಷಗಳಿಂದ ಬಸ್​ ಸಂಚಾರ ಸ್ಥಗಿತಗೊಂಡಿದ್ದು ಗ್ರಾಮದ ಜನರು, ವಿದ್ಯಾರ್ಥಿಗಳು, ವಯೋವೃದ್ಧರು, ಮಹಿಳೆಯರಿಗೆ ತೊಂದರೆಯಾಗಿದೆ. ಒಂದೂವರೆ ಕಿಲೋಮೀಟರ್ ದೂರದ ಐಗಳಿ-ತೆಲಸಂಗ್ ರಸ್ತೆಗೆ ಸಂಚಾರ ಮಾಡಿ ಬಳಿಕ ಅಲ್ಲಿಂದ ಬೇರೊಂದು ಬಸ್ ಮೂಲಕ ಊರುಗಳಿಗೆ ಸಂಚರಿಸಬೇಕಾಗಿದೆ​. ಮಳೆಗಾಲ ಹಾಗೂ ರಾತ್ರಿ ಸಮಯದಲ್ಲಿ …

Read More »

ಕಳ್ಳರೆಂದು ಬಾವಿಸಿ ಮೂವರು ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ಬೆಳಗಾವಿ: ಶೈಕ್ಷಣಿಕ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಆದರೆ ಕಳ್ಳರೆಂದು ತಪ್ಪಾಗಿ ಭಾವಿಸಿ ಮೂರು ಜನ ಯುವಕರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಕಳ್ಳರೆಂದು ಭಾವಿಸಿ ಮೂವರು ಯುವಕರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಜೋಡಕುರಳಿ ಗ್ರಾಮಕ್ಕೆ ನಾಲ್ವರು ಯುವಕರು ಬಂದಿದ್ದರು. ಈ ವೇಳೆ ಯುವಕರನ್ನು ಯಾರು ಎಂದು ವಿಚಾರಿಸುತ್ತಿದ್ದಾಗ ಸರಿಯಾಗಿ ಮಾಹಿತಿ ನೀಡಿದೇ ಯುವಕನೊಬ್ಬ …

Read More »

ಬೆಳಗಾವಿ ಹಾಲು ಉತ್ಪಾದಕರ ಸಂಘದಲ್ಲಿದೆ ವಿವಿಧ ಉದ್ಯೋಗ; 46 ಹುದ್ದೆ ನೇಮಕಾತಿ

ಬೆಮುಲ್​ನ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಲು ಉತ್ಪಾದಕರ ಸಂಘದಿಂದ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಮುಲ್​ನ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟೆಂಟ್​ ಮ್ಯಾನೇಜರ್​, ಟೆಕ್ನಿಕಲ್​ ಆಫೀಸರ್​ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳು ಆನ್​ಲೈನ್​ ಮೂಲಕ …

Read More »

ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ : ನಿಖಿಲ್ ಸ್ಪಷ್ಟನೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್​ ಕುಮಾರಸ್ವಾಮಿ ಅವರ ರಾಜಕೀಯ ಜೀವನದ ಬಗ್ಗೆ ಚರ್ಚೆ ಏರ್ಪಟ್ಟಿದ್ದು, ಈ ಬಗ್ಗೆ ಖುದ್ದು ಅವರೇ ಟ್ವೀಟ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ. ”ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ” ಎಂದು ಜೆಡಿಎಸ್​ …

Read More »

ಗುದ್ದಲಿಯಿಂದ ಹೊಡೆದು ಅಣ್ಣ, ಅತ್ತಿಗೆಯನ್ನೇ ಕೊಂದು ಪೊಲೀಸ್​ ಠಾಣೆಗೆ ಬಂದ ತಮ್ಮ

ಮೈಸೂರು : ಗೋಮಾಳದ ಜಾಗದಲ್ಲಿ ತನಗೂ ಪಾಲು ಬೇಕು ಎಂದು ಜಗಳ ತೆಗೆದು, ಸಹೋದರನೊಬ್ಬ ಜಮೀನಿನಲ್ಲೇ ಅಣ್ಣ, ಅತ್ತಿಗೆಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಟಿ ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿ. ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದ ಸಮೀಪದ ಜೀನುಗುಡ್ಡ ಬಳಿ ಸುಮಾರು 170 ಎಕರೆ ಗೋಮಾಳವಿದೆ. …

Read More »

ಶ್ರೀರಾಘವೇಂದ್ರಸ್ವಾಮಿಗಳ 352ನೇ ಆರಾಧನ ಮಹೋತ್ಸವಕ್ಕೆ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು.

ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರಸ್ವಾಮಿ‌ಗಳ 352ನೇ ಆರಾಧನೆ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂಗಳವಾರ ಚಾಲನೆ ನೀಡಿದರು. ಶ್ರೀಮಠದ ಮುಂಭಾಗದಲ್ಲಿ ಗೋ ಪೂಜೆ, ಧಾನ್ಯ ಪೂಜೆ, ಆಶ್ವ, ಒಂಟೆ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಏಳು ದಿನಗಳ ಸಪ್ತ ಮಹೋತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬೆಳಗ್ಗೆ ರಾಯರ ಮೂಲ‌ ಬೃಂದಾವನಕ್ಕೆ ಅಭಿಷೇಕ ಹಾಗೂ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಂದ ಮೂಲ ರಾಮದೇವರ ಪೂಜೆ ನೆರವೇರಿಸಲಾಯಿತು. …

Read More »

ಮನೆಯ ಯಜಮಾನಿಯರ ಖಾತೆಗೆ ಒಂದೇ ಸಮಯಕ್ಕೆ ಬರಲಿದೆ 2000 ರೂಪಾಯಿ

ಬೆಂಗಳೂರು: ಬುಧವಾರ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಯಾಗಲಿದೆ. ಮೈಸೂರಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕೊನೆಗೂ ಹಲವು ದಿನಾಂಕಗಳ ಬಳಿಕ ಬೆಳಗ್ಗೆ ಮೈಸೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಜಾರಿಯಾಗಲಿದೆ. ಸಮಾವೇಶದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ‌ ಸೇರಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು …

Read More »

ಮೈಸೂರು ಮಣಿಸಿ ಮಹಾರಾಜ ಟ್ರೋಫಿ ಚಾಂಪಿಯನ್ ಪಟ್ಟ ಅಲಂಕರಿಸಿದ ಹುಬ್ಬಳ್ಳಿ

ಬೆಂಗಳೂರು : ರೋಚಕ ಫೈನಲ್ ಕಾದಾಟದಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು 8 ರನ್‌ಗಳಿಂದ ಸೋಲಿಸಿದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೈಸೂರು ಬೌಲರ್‌ಗಳ ವಿರುದ್ಧ ಬ್ಯಾಟಿಂಗ್​ನಲ್ಲಿ ಮೇಲುಗೈ ಸಾಧಿಸಿದ ಮೊಹಮ್ಮದ್ ತಾಹಾ, ಮನೀಶ್ ಪಾಂಡೆ ಹಾಗೂ ಮನ್ವಂತ್ ಕುಮಾರ್ ಉತ್ತಮ ಬೌಲಿಂಗ್ ನೆರವಿನಿಂದ ಹುಬ್ಬಳ್ಳಿ ಗೆದ್ದು ಬೀಗಿತು. ಮಹಾರಾಜ ಟ್ರೋಫಿ ಫೈನಲ್​ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಹುಬ್ಬಳ್ಳಿ ಟೈಗರ್ಸ್ ಮೊದಲು ಬ್ಯಾಟ್ ಮಾಡಿತು. ಎರಡನೇ …

Read More »

ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ

ಮೈಸೂರು: ಬುಧವಾರ (ಆ.30) ನಗರದಲ್ಲಿ ನಡೆಯಲಿರುವ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ. ಹಲವಾರು ರೀತಿಯ ವೈಶಿಷ್ಟ್ಯತೆಗಳಿಂದ ಕೂಡಿರುವ ಈ ಬೃಹತ್ ವೇದಿಕೆಯ ಸಿದ್ಧತೆಯ ಕಾರ್ಯ ಮಹಾರಾಜ ಕಾಲೇಜು ಮೈದಾನದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೇಲ್ವಿಚಾರಣೆಯಲ್ಲಿ ನಡೆದಿದೆ. ಡಿಸಿಎಂ ನಿನ್ನೆ ಸಂಜೆ ಮೈದಾನದಲ್ಲಿ ಸಿದ್ಧವಾಗುತ್ತಿರುವ ವೇದಿಕೆ ನಿರ್ಮಾಣ ಕಾರ್ಯವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದರು. ವೇದಿಕೆಯ ವಿಶೇಷತೆಗಳೇನು: ಗೃಹ ಲಕ್ಷ್ಮಿ ಯೋಜನೆ ಜಾರಿಗೆ …

Read More »

ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹಕ್ಕೆ ಕೂಡಿ ಬರದ ಮುಹೂರ್ತ: ಬೇಸತ್ತು ಹಸೆಮಣೆ ಏರಿದ 7 ಜೋಡಿ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹಕ್ಕೆ ಇನ್ನೂ ಮುಹೂರ್ತ ಕೂಡಿ ಬಾರದ ಕಾರಣ ಬೇಸತ್ತ 7 ಜೋಡಿಗಳು ಸ್ವಂತ ಹಣದಲ್ಲಿ ವಿವಾಹ ಮಾಡಿಕೊಂಡಿದ್ದಾರೆ. ಸಾಲೂರು ಮಠದಲ್ಲಿ ಹಸೆಮಣೆ ಏರಿದ ಜೋಡಿಗಳು ಹೌದು. ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಾಮೂಹಿಕ ವಿವಾಹ ಎರಡು ಬಾರಿ ಮುಂದೂಡಿಕೆಯಾಗಿದೆ. ಹೀಗಾಗಿ ಕ್ಷೇತ್ರದಲ್ಲಿರುವ ಸಾಲೂರು ಮಠದಲ್ಲಿ 7 ಜೋಡಿಗಳು ಹಸೆಮಣೆ ಏರಿ ನೂತನ ಜೀವನಕ್ಕೆ ಕಾಲಿಟ್ಟಿದ್ದಾರೆ. ಆ. 23 ರಂದು …

Read More »