Breaking News

ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರ ಸುಳ್ಳು ಪ್ರಚಾರದಿಂದ ನಮ್ಮ ಸರ್ಕಾರಕ್ಕೆ ಯಾವುದೇ ಧಕ್ಕೆ ಆಗಲ್ಲ

ಬೆಳಗಾವಿ: ಪ್ರಜಾಪ್ರಭುತ್ವದಲ್ಲಿ ಸರ್ಕಾರವನ್ನ ಅಭದ್ರ ಮಾಡುವುದು ಯಾವುದೇ ರಾಜಕೀಯ ಪಕ್ಷ ಅಥವಾ ರಾಜಕೀಯ ನಾಯಕನ ಉದ್ದೇಶ ಆಗಿರಬಾರದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. 50 ರಿಂದ 60 ಮಂದಿ ಶಾಸಕರ ಜೊತೆ ಪ್ರಭಾವಿ ಸಚಿವರೊಬ್ಬರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಹೆಚ್‌ ಡಿ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಹೆಚ್​ಡಿಕೆ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಕೊಡಲಿ ಏಟು ಕೊಡುವ ಪ್ರಯತ್ನವಾಗಿದೆ. ಈ ರೀತಿ ಪ್ರಯತ್ನ ಮಾಡಿದವರ …

Read More »

ಗುಡ್ಡಾಪುರ ದಾನಮ್ಮದೇವಿ ಜಾತ್ರೆ: ಪಾದಯಾತ್ರೆ ಮೂಲಕ ದೇವಿಯ ದರ್ಶನಕ್ಕೆ ತೆರಳುತ್ತಿರುವ ಭಕ್ತರು

ವಿಜಯಪುರ: ಕರ್ನಾಟಕದ ಗಡಿಗೆ ಸಮೀಪವಿರುವ ಗುಡ್ಡಾಪುರದಲ್ಲಿ ಶ್ರೀ ದಾನಮ್ಮದೇವಿಯ ಜಾತ್ರಾ ಮಹೋತ್ಸವದ ಕಳೆಗಟ್ಟಿದೆ. ಪ್ರತಿ ವರ್ಷದಂತೆ ಈ ವರ್ಷವೂ ಭಕ್ತರು ಪಾದಯಾತ್ರೆ ಮೂಲಕ ದೇವಿಯ ದರ್ಶನಕ್ಕೆ ಆಗಮಿಸುತ್ತಿದ್ದಾರೆ.   ಬೆಳಗಿನ ಜಾವದಿಂದಲೇ ವಿಜಯಪುರ ನಗರದ ದರ್ಗಾ ಕ್ರಾಸ್‌ ರಸ್ತೆ ಮೂಲಕ ಮತ್ತು ತಿಕೋಟಾ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಗುಡ್ಡಾಪುರಕ್ಕೆ ತೆರಳುತ್ತಿರುವುದು ಕಂಡುಬಂದಿದೆ. ಕೊರೆಯುವ ಚಳಿಯನ್ನು ಲೆಕ್ಕಿಸದೇ ದಾನಮ್ಮ ದೇವಿ ನಾಮಸ್ಮರಣೆ ಮಾಡುತ್ತ ಗುಡ್ಡಾಪುರದತ್ತ ಎಲ್ಲರೂ ಹೆಜ್ಜೆ ಹಾಕುತ್ತಿದ್ದಾರೆ. …

Read More »

ಅಯ್ಯಪ್ಪ ಭಕ್ತರಿಗೆ ಸಿಹಿಸುದ್ದಿ; ಶಬರಿಗಿರಿ ದರ್ಶನದ ಸಮಯ ಒಂದು ಗಂಟೆ ವಿಸ್ತರಣೆ

(ಕೇರಳ) : ತಿರುವಾಂಕೂರು ದೇವಸ್ಥಾನಂ ಮಂಡಳಿ ಅಯ್ಯಪ್ಪ ಭಕ್ತರಿಗೆ ಸಿಹಿಸುದ್ದಿ ನೀಡಿದೆ. ಶಬರಿಗಿರಿಯ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ದರ್ಶನ ಸಮಯವನ್ನು ಇನ್ನೂ ಒಂದು ಗಂಟೆ ಕಾಲ ವಿಸ್ತರಿಸಲಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 11ರ ವರೆಗೆ ಭಕ್ತರು ದೇಗುಲಕ್ಕೆ ಭೇಟಿ ನೀಡುವ ಸಮಯವಾಗಿತ್ತು. ಆದ್ರೆ ಈಗ ಮಧ್ಯಾಹ್ನ 3 ರಿಂದ ದೇಗುಲಕ್ಕೆ ಭೇಟಿ ನೀಡಬಹುದು ಎಂದು ಅವರು ಹೇಳಿದರು. ದರ್ಶನಕ್ಕಾಗಿ ಸರತಿ …

Read More »

ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಹೀನ ಕೃತ್ಯ, ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಹೀನ ಕೃತ್ಯ ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.   ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದರಿಂದ ಯುವಕನ ತಾಯಿಯ ಮೇಲೆ ಯುವತಿಯ ಕುಟುಂಬಸ್ಥರು ದೌರ್ಜನ್ಯ ಮೆರೆದಿದ್ದಾರೆ. 42 ವರ್ಷ ವಯಸ್ಸಿನ ಮಹಿಳೆ ಹಲ್ಲೆಗೆ ಒಳಗಾದವರು. ಕಂಬಕ್ಕೆ ಕಟ್ಟಿ ಬೆತ್ತಲೆ ಮಾಡಿ ಕೀಚಕರು ಅಮಾನವೀಯವಾಗಿ ವರ್ತಿಸಿದ್ದಾರೆ. ಯುವತಿಗೆ ಇಂದು ನಿಶ್ಚಯವಾಗಿದ್ದ ನಿಶ್ಚಿತಾರ್ಥ: ಯುವಕ ಮತ್ತು ಯುವತಿ …

Read More »

ಟಿ. ಎನ್ ಸೀತಾರಾಂ ಅವರ ‘ನೆನಪಿನ ಪುಟಗಳು’ ಪುಸ್ತಕ ಲೋಕಾರ್ಪಣೆ

ಬೆಂಗಳೂರು: ನಿರ್ದೇಶಕ ಟಿ ಎನ್ ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಟಿ. ಎನ್ ಸೀತಾರಾಂ ಅವರ ‘ನೆನಪಿನ ಪುಟಗಳು’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಟಿ. ಎನ್ ಸೀತಾರಾಂ ಅವರು ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು …

Read More »

ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ವಿಜಯಪುರ: ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಅವರು ಆಗಮಿಸುತ್ತಾರೋ, ಇಲ್ಲವೋ ಎಂಬುದು ಗೊತ್ತಾಗಲಿದೆ ಎಂದರು. ಜ.2ರಂದು ನಡೆಯುವ ಕಾರ್ಯಕ್ರಮದಲ್ಲಿ …

Read More »

ಇಂದಿನಿಂದ ಮೂರು ದಿನಗಳ ಕಾಲ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ

ಬೆಂಗಳೂರು: ಇತಿಹಾಸ ಪ್ರಸಿದ್ಧ ಬಸವನಗುಡಿಯ ಕಡಲೆಕಾಯಿ ಪರಿಷೆಯು ಮೂರು ದಿನಗಳ ಕಾಲ ನಡೆಯಲಿದ್ದು, ಅಧಿಕೃತವಾಗಿ ಇಂದು ಚಾಲನೆ ಸಿಗಲಿದೆ. ಬಸವನಗುಡಿ ಸುತ್ತಮುತ್ತ ಪರಿಷೆ ರಂಗೇರಿದೆ. ಭಾನುವಾರ ರಜೆ ಹಿನ್ನೆಲೆ ದೊಡ್ಡ ಗಣೇಶ ಮತ್ತು ದೊಡ್ಡ ಬಸವಣ್ಣ ದೇವಸ್ಥಾನದ ಸುತ್ತಮುತ್ತಲಿನ ಜನ ಸಾಗರವೇ ನೆರೆದಿತ್ತು. ಇಂದು ಅಧಿಕೃತ ಚಾಲನೆ ಸಿಗಲಿದ್ದು, ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಭಾನುವಾರ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಸಚಿವರು ದೊಡ್ಡ ಗಣೇಶನ ದೇವಸ್ಥಾನಕ್ಕೆ ಆಗಮಿಸಿ ವಿಶೇಷ …

Read More »

ಪುನಾರಂಭ ಆಗಲಿರುವ ಅಧಿವೇಶನ ಜಮೀರ್ ವಿವಾದಾತ್ಮಕ ಹೇಳಿಕೆ, ಡಿಕೆಶಿ ಕೇಸ್ ವಾಪಸ್ ವಿಚಾರ; ಹೆಚ್ಚಲಿದೆಯಾ ಸದನ ಕಾದಾಟ?

ಬೆಳಗಾವಿ/ಬೆಂಗಳೂರು: ಚಳಿಗಾಲದ ಅಧಿವೇಶನ ಶುರುವಾಗಿ ಮೊದಲ ಐದು ದಿನ ಕಳೆದಿದ್ದು, ಕಲಾಪ ಇನ್ನು ಐದು ದಿನ ಕಾಲ ಮಾತ್ರ ನಡೆಯಲಿದೆ.‌ ಸೋಮವಾರದಿಂದ ಪುನಾರಂಭ ಆಗಲಿರುವ ಅಧಿವೇಶನದಲ್ಲಿ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಹಾಗೂ ಡಿಕೆಶಿ ಶಿವಕುಮಾರ್ ಮೇಲಿನ ಸಿಬಿಐ ಕೇಸ್ ಅನುಮತಿ ವಾಪಸ್ ಪಡೆದಿರುವ ವಿಷಯ ಪ್ರಸ್ತಾಪಿಸಲು ಪ್ರತಿಪಕ್ಷ ಬಿಜೆಪಿ ಮುಂದಾಗಿದೆ. ಇದರಿಂದ ಸದನದಲ್ಲಿ ಕದನ ಕಾವೇರುವ ಸಾಧ್ಯತೆ ಇದೆ. ಮೊದಲ ವಾರದ ಐದು ದಿನದ ವಿಧಾನಸಭೆ ಕಲಾಪದಲ್ಲಿ ಬೆಳಗಾವಿ ಬಿಜೆಪಿ …

Read More »

ಬೆಳಗಾವಿಯಲ್ಲಿ ನಡೆದ ಜಿಲ್ಲಾಮಟ್ಟದ 64ನೇ ಫಲಪುಷ್ಪ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಕುಟುಂಬ ಸಮೇತ ಕುಂದಾನಗರಿ ಜನ ಆಗಮಿಸಿ ಕಣ್ತುಂಬಿಕೊಂಡರು.

ಬೆಳಗಾವಿ: ನಗರದಲ್ಲಿ ಮೂರು ದಿನ ಕಾಲ ಹಮ್ಮಿಕೊಂಡಿರುವ 64ನೇ ಫಲಪುಷ್ಪ ಪ್ರದರ್ಶನಕ್ಕೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ವೀಕೆಂಡ್ ಇರುವ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಜನ ಆಗಮಿಸಿ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡರು. ಹೌದು, ಬೆಳಗಾವಿ ಹ್ಯೂಮ್ ಪಾರ್ಕ್​ನಲ್ಲಿ ಜಿಪಂ, ತೋಟಗಾರಿಕೆ ಇಲಾಖೆ, ಕೃಷಿ , ಗ್ರಾಮೀಣ ಮತ್ತು ಸಣ್ಣ ಉದ್ಯಮ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ 64ನೇ ಫಲಪುಷ್ಪ ಪ್ರದರ್ಶನ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ವಿವಿಧ ಹೂವುಗಳಿಂದ ತಯಾರಿಸಿದ್ದ …

Read More »

ಬೆಳಗಾವಿ ಜಿಲ್ಲೆ ವಿಭಜನೆಗೆ ಹೆಚ್ಚಿದ ಕೂಗು; ನಾಳೆ ಅಥಣಿ ಬಂದ್, ಚಿಕ್ಕೋಡಿಯಲ್ಲೂ ಬೃಹತ್ ಪ್ರತಿಭಟನೆ

ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯನ್ನು ವಿಭಜನೆ ಮಾಡುವಂತೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಬೆಳಗಾವಿ ಜಿಲ್ಲೆ ವಿಭಜಿಸಿ 1997ರಲ್ಲಿ ಚಿಕ್ಕೋಡಿಯನ್ನು ಹೊಸ ಜಿಲ್ಲೆಯನ್ನಾಗಿ ಘೋಷಿಸಲು ಸರ್ಕಾರ ನಿರ್ಧರಿಸಿತ್ತು. ಜಿಲ್ಲೆ ವಿಭಜಿಸಿದರೆ ಮರಾಠಿಗರ ಪ್ರಾಬಲ್ಯ ಹೆಚ್ಚಾಗುತ್ತದೆ ಎಂದು ಕನ್ನಡ ಪರ ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಹೊಸ ಜಿಲ್ಲೆಯನ್ನಾಗಿ ಘೋಷಿಸುವ ನಿರ್ಧಾರದಿಂದ ಸರ್ಕಾರ ಹಿಂದಕ್ಕೆ ಸರಿದಿತ್ತು. ಆದರೆ ಇತ್ತೀಚೆಗೆ ಮತ್ತೆ ಗೋಕಾಕ್​ ಮತ್ತು ಅಥಣಿಯನ್ನು ನೂತನ ಜಿಲ್ಲೆಯಾಗಿ ರಚನೆ ಮಾಡಬೇಕೆಂಬ ಕೂಗು …

Read More »