ಆನೇಕಲ್ (ಬೆಂಗಳೂರು): ಸಿಲಿಕಾನ್ ಸಿಟಿ ಬೆಂಗಳೂರಿಗೆ ಹತ್ತಿರದಲ್ಲೇ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ಒಂದಲ್ಲ ಒಂದು ವಿಶೇಷತೆಗಳಿಂದ ಪ್ರವಾಸರಿಗೆ ಅಚ್ಚುಮೆಚ್ಚಿನ ತಾಣ. ಆನೆಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಇಂದು ವಿಶೇಷ ಹುಟ್ಟುಹಬ್ಬದ ಸಂಭ್ರಮ ನಡೆಯಿತು. ಹೌದು, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆನೆ ‘ವನಶ್ರೀಯ’ ಹೆಣ್ಣು ಮರಿ ‘ಓಂ ಗಂಗಾ’ ಇಂದು ಮೊದಲನೇ ವರ್ಷದ ಹುಟ್ಟುಹಬ್ಬ. ಅಂತೆಯೇ ಪಾರ್ಕಿನ ಆವರಣದಲ್ಲಿ ಆನೆ ಮರಿಗೆ ಇಷ್ಟ ಆಗುವ ತರಕಾರಿ …
Read More »ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ತವರು ಜಿಲ್ಲೆ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 27ರ ಬೆಳಗ್ಗೆ 8 ಗಂಟೆಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 28ರ ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ರಾತ್ರಿ 7 ಗಂಟೆಗೆ ಹೋಟೆಲ್ ಜೆಪಿ ಪ್ಯಾಲೇಸ್ನಲ್ಲಿ …
Read More »40% ಕಮಿಷನ್ ಆರೋಪ ತನಿಖೆಗೆ ಆಯೋಗ ರಚಿಸಿ ಸರ್ಕಾರ ಆದೇಶ
ಬೆಂಗಳೂರು: ಬಿಜೆಪಿ ವಿರುದ್ಧ ಸರ್ಕಾರ ಮತ್ತೊಂದು ತನಿಖಾಸ್ತ್ರ ಬಿಟ್ಟಿದೆ. ಕೋವಿಡ್ ಅಕ್ರಮಗಳ ತನಿಖೆಗೆ ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಮೂರು ತಿಂಗಳೊಳಗೆ ವರದಿ ಕೊಡಲು ಆಯೋಗಕ್ಕೆ ಸೂಚನೆ ನೀಡಿ ಒಳಾಡಳಿತ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಈ ಮೊದಲು ಕೋವಿಡ್ ಕಾಲದ ಅಕ್ರಮಗಳ ಬಗ್ಗೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಹಲವು ಆರೋಪಗಳನ್ನು ಮಾಡಿತ್ತು. ಅಂದು ಪ್ರತಿಪಕ್ಷವಾಗಿ ಕಾಂಗ್ರೆಸ್, …
Read More »ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1 ಗಗನನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ
ತಿರುವನಂತಪುರಂ (ಕೇರಳ) : ಚಂದ್ರಯಾನ-3 ಬಾಹ್ಯಾಕಾಶ ಯೋಜನೆಯ ಲ್ಯಾಂಡರ್ ‘ವಿಕ್ರಮ್’ ಈಗಾಗಲೇ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದು, ವೈಜ್ಞಾನಿಕ ಸಂಶೋಧನೆಗಳ ಕೆಲಸ ಪ್ರಾರಂಭಿಸಿದೆ. ಇದರ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ತಮ್ಮ ಮುಂದಿನ ಗಮನವನ್ನು ಸೂರ್ಯನತ್ತ ಕೇಂದ್ರೀಕರಿಸಿದ್ದು, ದೇಶದ ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ಉಡಾವಣೆಗೆ ಸಿದ್ಧವಾಗಿದೆ. ಈ ನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) …
Read More »ಎಸ್.ಟಿ.ಸೋಮಶೇಖರ್ ‘ಘರ್ ವಾಪಸಿ’ ನಿಶ್ಚಿತ? ಕುತೂಹಲ ಹುಟ್ಟಿಸಿದ ಡಿಕೆಶಿ ಮಾತು!
ಬೆಂಗಳೂರು: ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ಗೆ ಇನ್ನಷ್ಟು ಹತ್ತಿರವಾಗುತ್ತಿದ್ದಾರಾ? ಎಂಬ ಬಲವಾದ ಅನುಮಾನ ಮೂಡಿಸಿದೆ. ಡಿಸಿಎಂ ಮಾತನಾಡುತ್ತಾ, “ನನ್ನದು ಮತ್ತು ಎಸ್.ಟಿ. ಸೋಮಶೇಖರ್ ಅವರದು 35 ವರ್ಷಗಳ ಸ್ನೇಹ. ಅವರನ್ನು ನೀರು, ಗೊಬ್ಬರ ಹಾಕಿ ರಾಜಕೀಯವಾಗಿ ಬೆಳೆಸಿದ್ದೇವೆ, ಹಣ್ಣು ಬಿಟ್ಟಿದೆ. ಅದನ್ನು ಬೇರೆಯವರು ಕಿತ್ಕೊಂಡು ತಿನ್ನೋದಕ್ಕೆ ಬಿಡಬಾರದು ಅನ್ನೋದು ನನ್ನ ಭಾವನೆ” ಎಂದು …
Read More »ಇಂದು ನಿಷ್ಠೆ ಎನ್ನುವುದು ಯಾವುದೇ ಪಕ್ಷದಲ್ಲೂ ಉಳಿದಿಲ್ಲ.: H.D.K.
ಹಾಸನ: “ಇಂದು ನಿಷ್ಠೆ ಎನ್ನುವುದು ಯಾವುದೇ ಪಕ್ಷದಲ್ಲೂ ಉಳಿದಿಲ್ಲ. ಕೇವಲ ತಕ್ಷಣಕ್ಕೆ ಸಿಗುವ ಅಧಿಕಾರಕ್ಕೆ ಮರುಳಾಗುತ್ತಾರೆ” ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. “1999ರಲ್ಲಿ ಆಪರೇಷನ್ ಹಸ್ತ ಮಾಡಿದ್ದ ಎಸ್.ಎಂ.ಕೃಷ್ಣ ನಮ್ಮಿಂದ ಐವರನ್ನು, ಬಿಜೆಪಿಯಿಂದ 8-10 ಜನರನ್ನು ಕರೆದುಕೊಂಡು ಹೋಗಿದ್ದರು. ನಂತರ ಅವರ ಸ್ಥಿತಿ ಎಲ್ಲಿಗೆ ಬಂತು?. ಬಿಜೆಪಿಯವರು ಆಪರೇಷನ್ ಕಮಲ ಮಾಡಿ 40 ಸೀಟ್ಗೆ ತೃಪ್ತಿಪಟ್ಟರು. 2013-2014ರಲ್ಲಿ ಸಿದ್ದರಾಮಯ್ಯ ಆಪರೇಷನ್ ಆಟವಾಡಿ 2018ರಲ್ಲಿ 78ಕ್ಕೆ ಬಂದು ನಿಂತಿದ್ದರು. ಹೀಗಾಗಿ, ಇತ್ತೀಚೆಗೆ ನಿಷ್ಠೆ ಎಂಬುದು …
Read More »ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಶತ ದಿನಗಳ ಸಂಭ್ರಮ
ಬೆಂಗಳೂರು: ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಶತ ದಿನಗಳ ಸಂಭ್ರಮ. ನೂರು ದಿನಗಳಲ್ಲಿ ಪಂಚ ಗ್ಯಾರಂಟಿಗಳ ಅನುಷ್ಠಾನ ಕೇಂದ್ರೀಕರಿಸಿ ಕಾಂಗ್ರೆಸ್ ಸರ್ಕಾರ ಕರ್ನಾಟಕ ಮಾದರಿ ಅಭಿವೃದ್ಧಿ ಆಡಳಿತ ನೀಡಲು ಕಸರತ್ತು ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಾಜ್ಯದ ಚುಕ್ಕಾಣಿ ಹಿಡಿದು ನೂರು ದಿನಗಳನ್ನು ಪೂರೈಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಬಹುಮತ ಗಳಿಸಿ ಕರುನಾಡ ಅಧಿಕಾರ ಹಿಡಿದ ಕಾಂಗ್ರೆಸ್ …
Read More »ಚಂದ್ರಯಾನ -3 ಯಶಸ್ವಿಯಾದ ಹಿನ್ನಲೆ ಯಾದಗಿರಿಯ ಇಬ್ಬರು ದಂಪತಿಗಳು ತಮ್ಮ ಮಕ್ಕಳಿಗೆ ವಿಕ್ರಮ್ ಮತ್ತು ಪ್ರಜ್ಞಾನ್ ಎಂದು ನಾಮಕರಣ
ಯಾದಗಿರಿ : ಭಾರತದ ಬಹುನಿರೀಕ್ಷಿತ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದೆ. ವಿಕ್ರಮ್ ಲ್ಯಾಂಡರ್ ಚಂದ್ರ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಕೆಲವೇ ಗಂಟೆಗಳಲ್ಲಿ, ಲ್ಯಾಂಡರ್ನಿಂದ ಪ್ರಜ್ಞಾನ್ ರೋವರ್ ಹೊರಬಂದಿದೆ. ಸದ್ಯ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಚಂದ್ರನ ಅನ್ವೇಷಣೆಯನ್ನು ಪ್ರಾರಂಭಿಸಿದೆ. ಈ ಸಂಬಂಧ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಈ ಐತಿಹಾಸಿಕ ಚಂದ್ರಯಾನದ ಸವಿನೆನಪಿಗಾಗಿ ಇಬ್ಬರು ಪೋಷಕರು ತಮ್ಮ ನವಜಾತ …
Read More »ಬೆಳಗಾವಿ ಸಸ್ಯ ಸಂತೆ: ಗಮನ ಸೆಳೆದ ದುಬಾರಿ ಮಿಯಾಜಾಕಿ ಮಾವಿನ ಸಸಿ
ಬೆಳಗಾವಿ : ತೋಟಗಾರಿಕೆ ಬೆಳೆ ಬೆಳೆಯುವ ರೈತರು ಹಾಗೂ ಮನೆ ಮುಂದೆ ಮತ್ತು ಟೆರಸ್ ಮೇಲೆ ಕೈತೋಟ ನಿರ್ಮಾಣ ಮಾಡುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ ನಿನ್ನೆಯಿಂದ ಮೂರು ದಿನ ಆಯೋಜಿಸಿರುವ ಸಸ್ಯ ಸಂತೆಗೆ ಚಾಲನೆ ಸಿಕ್ಕಿದ್ದು, ತರಹೇವಾರಿ ಸಸಿಗಳು ಎಲ್ಲರನ್ನೂ ಕೈ ಬೀಸಿ ಕರೆಯುತ್ತಿವೆ. ಹೌದು, ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿರುವ ಹ್ಯೂಮ್ ಪಾರ್ಕ್ನಲ್ಲಿ ತೋಟಗಾರಿಕಾ ಇಲಾಖೆಯಿಂದ ಆಯೋಜಿಸಿರುವ ಸಸ್ಯ ಸಂತೆ, ತೋಟಗಾರಿಕಾ ಅಭಿಯಾನ ಮತ್ತು ತಾಳೆ ಬೆಳೆ ಸಸಿ ವಿತರಣೆ …
Read More »ದೂದ್ ಪೇಡಾ ದಿಗಂತ್ ನಟನೆಯ ‘ಪೌಡರ್’ ಸಿನಿಮಾದ ಮುಹೂರ್ತ ಸಮಾರಂಭ, ಕಿಚ್ಚ ಸುದೀಪ್ ಸಾಥ್
ದೂದ್ ಪೇಡಾ ದಿಗಂತ್ ನಟನೆಯ ‘ಪೌಡರ್’ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು. ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಯ ಚಿತ್ರಗಳ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿರುವ ನಟ ದೂದ್ ಪೇಡಾ ದಿಗಂತ್. ಫಿಟ್ನೆಸ್ ಹೀರೋ ಅಂತಲೇ ಕರೆಸಿಕೊಂಡಿರುವ ಈ ಹ್ಯಾಂಡ್ಸಮ್ ಹಂಕ್ ಹೊಸ ಸಿನಿಮಾದೊಂದಿಗೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಚಿತ್ರಕ್ಕೆ ‘ಪೌಡರ್’ ಎಂದು ವಿಭಿನ್ನವಾಗಿ ಟೈಟಲ್ ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ …
Read More »