ಬೆಂಗಳೂರು: ರಾಜ್ಯಕ್ಕೆ ಪ್ರಧಾನಿ ಭೇಟಿ ವೇಳೆ ಶಿಷ್ಟಾಚಾರದ ಪ್ರಕಾರ ರಾಜ್ಯದ ಪ್ರಥಮ ಪ್ರಜೆಯಾದ ರಾಜ್ಯಪಾಲರು, ಮುಖ್ಯಮಂತ್ರಿಗಳು ಅಥವಾ ಹಿರಿಯ ಸಚಿವರು ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತ ಮಾಡಬೇಕು. ಆದರೆ, ಇಂದು ಹೆಚ್ಎಎಲ್ ನಲ್ಲಿ ಅಂತಹ ಸ್ವಾಗತ ಕಾಣಲಿಲ್ಲ. ಕೇವಲ ಅಧಿಕಾರಿಗಳು ಮಾತ್ರ ಹಾಜರಿದ್ದರು. ಈ ಕುರಿತಂತೆ ಸ್ವತಃ ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಿ ಆಗಮನದ ಸಂದರ್ಭದಲ್ಲಿ ಕಾರ್ಯಕ್ರಮದ ವಿಷಯವಾಗಿ ಎಂದು ಪಿಎಂ ಕಚೇರಿಯಿಂದ ಮಾಹಿತಿ ಬಂದ ಕಾರಣದಿಂದಾಗಿಯೇ ರಾಜ್ಯ ಸರ್ಕಾರ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ದೇವಸ್ಥಾನದ ಹುಂಡಿಗೆ 100 ಕೋಟಿ ರೂಪಾಯಿ ಮೊತ್ತದ ಚೆಕ್!ಖಾತೆಯಲ್ಲಿದ್ದಿದ್ದು?
ವಿಶಾಖಪಟ್ಟಣಂ (ಆಂಧ್ರಪ್ರದೇಶ): ವಿಶಾಖಪಟ್ಟಣದ ಸುಪ್ರಸಿದ್ಧ ಸಿಂಹಾಚಲಂನ ವರಮಹಾಲಕ್ಷ್ಮೀ ನರಸಿಂಹ ದೇವಸ್ಥಾನದ ಹುಂಡಿಯಲ್ಲಿ ಭಕ್ತರೊಬ್ಬರು ಹಾಕಿರುವ 100 ಕೋಟಿ ರೂ. ಮೊತ್ತದ ಚೆಕ್ ಸಿಕ್ಕಿದೆ. ತಿಂಗಳಲ್ಲಿ ಎರಡು ಬಾರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯುತ್ತದೆ. ನಿನ್ನೆಯೂ (ಗುರುವಾರ) ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ವೇಳೆ ಚೆಕ್ ಸಿಕ್ಕಿದ್ದು ಹುಬ್ಬೇರಿಸಿತ್ತು. ಇಷ್ಟು ದೊಡ್ಡ ಮೊತ್ತದ ಚೆಕ್ ನೋಡಿ ದೇವಸ್ಥಾನದ ಸಿಬ್ಬಂದಿ ಅರೆಕ್ಷಣ ಹೌಹಾರಿದ್ದಾರೆ. ಚೆಕ್ ಅನ್ನು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ (ಇಒ) …
Read More »ಚಂದ್ರಯಾನ-3 ಯಶಸ್ವಿ: ಬೆಂಗಳೂರಿಗೆ ಬಂದಿಳಿದ ಪ್ರಧಾನಿ, ಹೆಚ್ಎಎಲ್ನಲ್ಲಿ ಅದ್ಧೂರಿ ಸ್ವಾಗತ
ಬೆಂಗಳೂರು: ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಮಿಷನ್ ಕಂಟ್ರೋಲ್ ಕಾಂಪ್ಲೆಕ್ಸ್‌ನಲ್ಲಿ ಚಂದ್ರಯಾನ-3 ಮಿಷನ್‌ನಲ್ಲಿ ಭಾಗಿಯಾಗಿರುವ ಇಸ್ರೋ ತಂಡದ ವಿಜ್ಞಾನಿಗಳನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದರು. ಮೋದಿ ಅವರನ್ನು ಸ್ಥಳೀಯ ಕಲಾವಿದರು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಬೀದಿಗಳಲ್ಲಿ ಧೋಲ್ ನುಡಿಸುವ ಮೂಲಕ ಸ್ವಾಗತಿಸಿದರು. ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ಗೆ ಎರಡು ರಾಷ್ಟ್ರಗಳ ಭೇಟಿಯನ್ನು ಮುಗಿಸಿದ ನಂತರ ಪ್ರಧಾನಿ ಮೋದಿ …
Read More »ಪ್ರಾರ್ಥನೆ ಸಲ್ಲಿಸುವುದರಿಂದ ಅಪಾಯವಿದೆ’.. ಅರ್ಜಿ ವಜಾಗೊಳಿಸಿ ತರಾಟೆಗೆ ತೆಗೆದುಕೊಂಡ ಹೈಕೋರ್ಟ್
ಬೆಂಗಳೂರು : ವಸತಿ ಪ್ರದೇಶದ ಜಾಗವನ್ನು ಪಾರ್ಥನಾ ಸಭಾಂಗಣವಾಗಿ ಬಳಕೆ ಮಾಡುವುದನ್ನು ಪ್ರಶ್ನಿಸಿ ಬೆಂಗಳೂರು ನಗರದ ಎಚ್‌ಬಿಆರ್ ಬಡಾವಣೆಯ ನೂರಾರು ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸ್ಯಾಮ್ ಪಿ ಫಿಲಿಪ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ಅಲ್ಲದೇ, ಅರ್ಜಿಯನ್ನು ಕೆಲವು ಊಹೆ ಹಾಗೂ ತಪ್ಪು ಕಲ್ಪನೆಗಳಿಂದಾಗಿ …
Read More »‘ಜೈ ಜವಾನ್, ಜೈ ವಿಜ್ಞಾನ,’ ಇಸ್ರೋ ವಿಜ್ಞಾನಿಗಳನ್ನು ಮನಸಾರೆ ಶ್ಲಾಘಿಸಿದ ಪ್ರಧಾನಿ ಮೋದಿ
ಬೆಂಗಳೂರು: ಚಂದ್ರಯಾನ 3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮುಂಜಾನೆ ನಗರಕ್ಕೆ ಆಗಮಿಸಿದ್ದಾರೆ. ಇನ್ನು ಇಸ್ರೋ ವಿಜ್ಞಾನಿಗಳ ಭೇಟಿಗೂ ಮುನ್ನ ಪ್ರಧಾನಿ ಮೋದಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಜನರನ್ನುದ್ದೇಶಿ ಮಾತನಾಡಿದರು. ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮುಂದೆ ಸೇರಿದ್ದ ಜನತೆ ಉದ್ದೇಶಿಸಿ ಚುಟುಕು ಭಾಷಣ ಮಾಡಿದರು. ಇದು …
Read More »ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಮಹಿಳೆಯರಿಗೆ ಅರಿಶಿಣ, ಕುಂಕುಮ ವಿತರಣೆ
ಬೆಳಗಾವಿ: ಇಂದು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಮಹಿಳಾ ಭಕ್ತರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ ವಿತರಿಸಲಾಯಿತು. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸರ್ಕಾರದ ಆದೇಶದಂತೆ ದೇವಸ್ಥಾನದಲ್ಲಿ ಶಾಸಕ ವಿಶ್ವಾಸ ವೈದ್ಯ ಅರಿಶಿಣ, ಕುಂಕುಮ, ಹಸಿರು ಬಳೆ ವಿತರಿಸಿದರು. ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಕಾರ್ಯನಿರ್ವಾಹಕ ಅಧಿಕಾರಿ ಎಸ್ಪಿಬಿ ಮಹೇಶ ಸೇರಿ ಮತ್ತಿತರರು ಉಪಸ್ಥಿತರಿದ್ದರು. ವಿಶೇಷ ಉಡುಗೊರೆ ಪಡೆದುಕೊಂಡ ಭಕ್ತೆಯರು ಸರ್ಕಾರಕ್ಕೆ ಕೃತಜ್ಞತೆ …
Read More »ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ ಮಗನನ್ನುಕೊಲೆ ಮಾಡಿಸಿರುವ ತಂದೆ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿಗೋಷ್ಠಿ
ಬೆಳಗಾವಿ : ಕುಡಿದು ಬಂದು ಮನೆಯಲ್ಲಿ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಕೊಲೆ ಮಾಡಿಸಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸಂಗಮೇಶ ಮಾರುತಿ ತಿಗಡಿ (35) ಕೊಲೆಯಾದವ. ಯರಗಟ್ಟಿ ತಾಲೂಕಿನ ಹಿರೇಕೊಪ್ಪ ಗ್ರಾಮದ ಮಂಜುನಾಥ ಶೇಖಪ್ಪ ಹೊಂಗಲ (43) ಮತ್ತು ಅಡಿವೆಪ್ಪ ಅಜ್ಜಪ್ಪ ಬೊಳತ್ತಿನ (38) ಬಂಧಿತು ಆರೋಪಿಗಳು. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
Read More »ಕಾವೇರಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವು
ಚಾಮರಾಜನಗರ : ಕಾವೇರಿ ನೀರು ಬಿಡುಗಡೆ ಸಂಬಂಧ ಕಾನೂನು ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆಎಸ್‌ಆರ್‌ಪಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು (ಶುಕ್ರವಾರ) ನಡೆದಿದೆ. ಮೋಹನ್ (44) ಮೃತರು. ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೋಹನ್ ಸಂಬಂಧಿಕರುಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ನಡೆಯದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್‌ಆರ್‌ಪಿ ಮೈಸೂರು ಬೆಟಾಲಿಯನ್ 23 ಸಿಬ್ಬಂದಿ ಕೊಳ್ಳೇಗಾಲದಲ್ಲಿ ಕರ್ತವ್ಯಕ್ಕೆಂದು ಎರಡು ದಿನಗಳ ಹಿಂದೆ ಆಗಮಿಸಿ …
Read More »ಮೇಕೆದಾಟು ಯೋಜನೆಯೊಂದೇ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ: ಡಿ.ಕೆ.ಶಿವಕುಮಾರ್
ಬೆಂಗಳೂರು: ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದ್ದೇವೆ ಎಂದು ನೀರಾವರಿ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿದ್ದು, ಇದು ತಾಂತ್ರಿಕ ಸಮಿತಿಯಾಗಿದೆ. ಸದ್ಯ ಅವರು ತಾಂತ್ರಿಕ ಅಂಶಗಳ ಬಗ್ಗೆ ಗಮನಹರಿಸಬೇಕು. ಈ …
Read More »