Breaking News

ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್: ಉಸಿರು ಬಿಗಿಹಿಡಿದುಕೊಂಡು ಕಾಯುತ್ತಿರುವ ಭಾರತ,

ನವದೆಹಲಿ: ಇಸ್ರೋ ಚಂದ್ರಯಾನ-3ರ ಸಾಫ್ಟ್ ಲ್ಯಾಂಡಿಂಗ್​ ಕಾರ್ಯಾಚರಣೆಯ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿದೆ. ಇಂದು (ಬುಧವಾರ) ಸಂಜೆ 5.20ಕ್ಕೆ ನೇರ ಪ್ರಸಾರ ಪ್ರಾರಂಭವಾಗುತ್ತದೆ. ದೇಶದ ಚಂದ್ರಯಾನ-3 ಮಿಷನ್​ನ ಮೇಲೆ ನಿರೀಕ್ಷೆಗಳು ಗಗನಕ್ಕೇರಿವೆ. ಇಸ್ರೋದ ಚಂದ್ರಯಾನ-3 ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ನಿರ್ಧರಿಸಿರುವುದರಿಂದ ದೇಶಾದ್ಯಂತ ತಾರಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ವಿವಿಧ ಸಂಸ್ಥೆಗಳು ಇಂದು ದೊಡ್ಡ ಕ್ಷಣಕ್ಕಾಗಿ ತಯಾರಿ ನಡೆಸುತ್ತಿವೆ. ಶಾಲಾ-ಕಾಲೇಜುಗಳಲ್ಲಿ ಐತಿಹಾಸಿಕ ಕ್ಷಣದ ನೇರ ಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಜ್ಞಾನಿಗಳು ಮತ್ತು …

Read More »

ಅಶುದ್ಧ ನೀರು ಸೇವನೆಯಿಂದ ಸಾವು ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಎಚ್ಚರಿಕೆ

ಬೆಂಗಳೂರು: ಅಶುದ್ಧ ನೀರು ಕುಡಿದು ಸಾವನ್ನಪ್ಪುವ ಪ್ರಕರಣಗಳು ಭವಿಷ್ಯದಲ್ಲಿ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೇ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ …

Read More »

ಚಂದ್ರಯಾನ 3 ಯಶಸ್ವಿಯಾಗಲೆಂದು ದೇಶ, ವಿದೇಶಗಳಲ್ಲಿ ಪ್ರಾರ್ಥನೆ: ಹೋಮ, ಹವನ, ಪೂಜೆ ನಡೆಸುತ್ತಿರುವ ಭಕ್ತರು

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ದೇಶ ಮಾತ್ರವಲ್ಲದೇ ಜಗತ್ತಿನಾದ್ಯಂತ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲೆಂದು ಪ್ರಪಂಚಾದ್ಯಂತ ವಿವಿಧ ಧಾರ್ಮಿಕ ಸಮುದಾಯಗಳಿಂದ ಹೋಮ, ಹವನ, ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ.     ಚಂದ್ರಯಾನ 3 ಮಿಷನ್‌ ಯಶಸ್ಸಿಯಾಗಲಿ ಎಂದು ಭಾರತಾದ್ಯಂತ ವಿವಿಧ …

Read More »

ದಕ್ಷಿಣ ಆಫ್ರಿಕಾದಿಂದ ‘Chandrayaan 3’ ಲ್ಯಾಂಡಿಂಗ್ ವರ್ಚುಯಲ್ ಆಗಿ ವೀಕ್ಷಿಸಲಿರುವ ಪ್ರಧಾನಿ

ಜೋಹಾನ್ಸ್‌ಬರ್ಗ್(ದಕ್ಷಿಣ ಆಫ್ರಿಕಾ): 15ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾದಿಂದಲೇ ಮೋದಿ ವರ್ಚುಯಲ್ ಆಗಿ ಐತಿಹಾಸಿಕ ವಿಕ್ರಮ್‌ ಲ್ಯಾಂಡರ್ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ 3 ಚಂದ್ರನ ಅಜ್ಞಾತ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ ಎಂದು ಹೇಳಿದೆ. ದೇಶಾದ್ಯಂತ ಪೂಜೆ ಪ್ರಾರ್ಥನೆ: ಇಂದು ಸಂಜೆ 6.04ಕ್ಕೆ ಸಾಫ್ಟ್ ಲ್ಯಾಂಡಿಂಗ್ ಸಮಯ ನಿಗದಿಪಡಿಸಲಾಗಿದೆ. …

Read More »

ಕಾವೇರಿ ನದಿ ನೀರು ಹಂಚಿಕೆ ವಿವಾದ: ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಆರಂಭ

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.   ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ …

Read More »

ನಗರದಾದ್ಯಂತ ಕಳೆದ 24 ಗಂಟೆಯಲ್ಲಿ 15 ರಸ್ತೆ ಅಪಘಾತ, ಐವರ ಸಾವು

ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸಂಭವಿಸಿದ್ದು, ಹದಿನೈದು ಅಪಘಾತಗಳ ಪ್ರಕರಣಗಳು ಸಂಭವಿಸಿವೆ. ಈ ವೇಳೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ‌. ಹೆಬ್ಬಾಳದಲ್ಲಿ – 1, ರಾಜಾಜಿನಗರ – 2, ಹೆಣ್ಣೂರು – 2, ಬಸವನಗುಡಿ – 2, ಕೆ.ಆರ್ ಪುರಂ – 1 ವೈಟ್ ಫೀಲ್ಡ್ – 2 ಹುಳಿಮಾವು – 2 ಹಾಗೂ ಸದಾಶಿವನಗರ – 1 ಮೈಕೊ ಲೇಔಟ್ – 1, ಎಲೆಕ್ಟ್ರಾನಿಕ್- 1 …

Read More »

ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯಲ್ಲಿ ಮಹಿಳಾ ಶಕ್ತಿ: 39 ಸದಸ್ಯರ ಪೈಕಿ 15 ಮಂದಿಗೆ ಸ್ಥಾನ

ನವದೆಹಲಿ : ಈ ವರ್ಷಾಂತ್ಯದ ಪಂಚರಾಜ್ಯಗಳ ವಿಧಾನಸಭೆ ಮತ್ತು ಮುಂದಿನ ವರ್ಷದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ​, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನೇತೃತ್ವದಲ್ಲಿ 84 ಜನರ ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯನ್ನು ಹೊಸದಾಗಿ ರಚಿಸಿದೆ. ಅದರಲ್ಲಿ ಪಕ್ಷದ ವಿರುದ್ಧ ಬಹಿರಂಗವಾಗಿ ಬಂಡಾಯವೇಳುತ್ತಿದ್ದ ನಾಯಕರೂ ಸೇರಿದಂತೆ 15 ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಪಕ್ಷದ ಅತ್ಯುನ್ನತ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಸಂಸ್ಥೆಯಾದ ಸಿಡಬ್ಲ್ಯೂಸಿಗೆ ಇಷ್ಟು ಪ್ರಮಾಣದಲ್ಲಿ ಮಹಿಳೆಯರಿಗೆ ಅವಕಾಶ ನೀಡಿದ್ದು, …

Read More »

ರಾಜ್ಯ ಕಾಂಗ್ರೆಸ್​ನಲ್ಲಿ ಮೂರ್ನಾಲ್ಕು ಗುಂಪುಗಳಿವೆ.

ಹಾವೇರಿ : ರಾಜ್ಯ ಕಾಂಗ್ರೆಸ್​ನಲ್ಲಿ ಮೂರ್ನಾಲ್ಕು ಗುಂಪುಗಳಿವೆ. ಈ ಗುಂಪುಗಳ ಬಗ್ಗೆ ಮತದಾರರಿಗೆ ಗೊತ್ತಾದರೆ, ಲೋಕಸಭೆ ಚುನಾವಣೆಯಲ್ಲಿ ಹಿನ್ನೆಡೆಯಾಗಲಿದೆ. ಹೀಗಾಗಿ, ಕಾಂಗ್ರೆಸ್‌ನವರು ಘರ್​ ವಾಪ್ಸಿ ವದಂತಿ ಹಬ್ಬಿಸಿದ್ದಾರೆ ಎಂದು ಮಾಜಿ ಸಚಿವ ಬಿ. ಸಿ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಸ್ ಟಿ ಸೋಮಶೇಖರ್​ ಬಿಜೆಪಿಯ ಸಭೆಯಲ್ಲಿ ಭಾಗವಹಿಸಿದ್ದಾರೆ. ಅವರ ಜೊತೆ ನಾನು ಮಾತನಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಒಳ್ಳೆಯ ಮಾತನಾಡಿದ್ದಕ್ಕೆ ಈ ರೀತಿ ಪ್ರಚಾರ …

Read More »

ಸಾಹಿತಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಪತ್ರ ಬರುತ್ತಿರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಇಬ್ಬರಿಗೆ ರಕ್ಷಣೆ ಕೊಟ್ಟಿದ್ದೆವು. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡ ಮಾಡುತ್ತೇವೆ. ಹಿರಿಯ ಅಧಿಕಾರಿಗಳೇ ಈ ಬಗ್ಗೆ ತನಿಖೆ ನಡೆಸುತ್ತಾರೆ. ಸಾಹಿತಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌ ಒಂದು ವರ್ಗದ ಜನ ವಿರೋಧಿಸುವ ಕೆಲಸ ಮಾಡ್ತಿದ್ದಾರೆ. …

Read More »

ಬಗರ್​ ಹುಕುಂ ಭೂಮಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್​ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಶಿವಮೊಗ್ಗ: ಬಗರ್ ಹುಕುಂ ಭೂಮಿ ಖಾತೆ ವಿಷಯವಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮದ ನಾಡ ಕಚೇರಿಯ ಉಪ ತಹಶೀಲ್ದಾರ್ ಪರಮೇಶ್ ನಾಯ್ಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.   ಎರಡು ಎಕರೆ ಬಗರ್ ಹುಕುಂ ಭೂಮಿ ಖಾತೆಗೆ ಸೇರಿಸಲು ಶಿವರಾಜ್​ ಎಂಬುವರಿಂದ 40 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಡಿವೈಎಸ್ಪಿ ಈಶ್ವರ ನಾಯಕ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. …

Read More »