Breaking News

ವಿವಿ ಸಹಾಯಕ ಪ್ರಾಧ್ಯಾಪಕಿಯ ನಿಗೂಢ ಹತ್ಯೆ

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ  ಸಹಾಯಕ ಪ್ರಾಧ್ಯಾಪಕಿಯೊಬ್ಬರ ನಿಗೂಢ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶಿವಾಜಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೇವಸ್ಮಿತಾ ಪೌಲ್‌  ಕೊಲೆಯಾದ ದುರ್ದೈವಿ. ಇವರು ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನ  ಸತ್ಯಂ ಅಪಾರ್ಟ್ಮೆಂಟ್‌ನಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಇವರ ಪತಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ. ಗುರುವಾರ ಮಧ್ಯಾಹ್ನ 2:25 ರ ಸುಮಾರಿಗೆ ದೇವಸ್ಮಿತಾ ಪೌಲ್‌ ಸಹೋದರಿ ದೇವಾರತಿ ನ್ಯೂ ಅಶೋಕ್ ನಗರ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆಯ …

Read More »

ಅಣ್ಣಾಮಲೈ ರಾಜೀನಾಮೆ ಅಂಗೀಕಾರ – 6 ವರ್ಷಗಳ ಬಿಜೆಪಿ ಸಂಬಂಧ ಕೊನೆಗೊಳಿಸಿದ ಮಾಜಿ ಐಪಿಎಸ್‌

ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ  ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ. ಜೂನ್‌ 2 ರಂದು ಅಣ್ಣಾಮಲೈ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಸಲ್ಲಿಕೆಯಾದ ಬಳಿಕ ಅವರು ಬೆಜೆಪಿಯಲ್ಲೇ ಇರುತ್ತಾರೆ. ರಾಜ್ಯಸಭೆಗೆ ಹೋಗುತ್ತಾರೆ ಎಂಬ …

Read More »

ಆಹಾರ ಸಾಕು, ಬೇರೆ ಖಾತೆ ಬೇಕು – ರಾಮಲಿಂಗಾರೆಡ್ಡಿ ಆಯ್ತು, ಈಗ ಮುನಿಯಪ್ಪ ಸರದಿ

ಬೆಂಗಳೂರು: ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ  ಅವರು ಬಹಿರಂಗವಾಗಿಯೇ ಅಸಮಾಧಾನದ ಬಾಂಬ್ ಸಿಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, ಈ ತಾರತಮ್ಯ ಹೀಗೆಯೇ ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ಭಾರಿ ಕಷ್ಟವಾಗಲಿದೆ” ಎಂದು ಸ್ಫೋಟಕ ಎಚ್ಚರಿಕೆ ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಆಹಾರ ಇಲಾಖೆಯನ್ನು ನಿಭಾಯಿಸಿರುವ ತಮಗೆ ಮತ್ತೆ …

Read More »

ಭಾರತಕ್ಕೆ Su-57 ಸ್ಟೆಲ್ತ್ ಫೈಟರ್ ಜೆಟ್ ಆಫರ್‌ ನೀಡಿದ ಪುಟಿನ್‌

ನವದೆಹಲಿ: ಭಾರತೀಯ ವಾಯುಪಡೆಗೆ (IAF) ‘ತೇಜಸ್‌’ ಲಘು ಯುದ್ಧ ವಿಮಾನಗಳ ಸೇರ್ಪಡೆಯ ಯಶಸ್ಸಿನ ನಂತರ, ಕೇಂದ್ರ ಸರ್ಕಾರ ಸಾವಿರ ಕೋಟಿ ವೆಚ್ಚದಲ್ಲಿ 5ನೇ ತಲೆಮಾರಿನ ಯುದ್ಧ ವಿಮಾನಗಳನ್ನ ದೇಶೀಯವಾಗಿ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿದೆ. ಈ ಹೊತ್ತಿನಲ್ಲೇ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭಾರತಕ್ಕೆ ಬಿಗ್‌ ಆಫರ್‌ವೊಂದನ್ನ ನೀಡಿದ್ದಾರೆ. ಸುಖೋಯ್ Su-57 5ನೇ ತಲೆಮಾರಿನ ಸ್ಟೆಲ್ತ್‌ ಯುದ್ಧವಿಮಾನಕ್ಕೆ  ಸಂಬಂಧಿಸಿದಂತೆ ಭರ್ಜರಿ ಆಫರ್‌ವೊಂದನ್ನ ನೀಡಿದ್ದಾರೆ. ಒಂದು ದಿನದ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪುಟಿನ್‌, …

Read More »

ಯಾವ್ ಟ್ರಬಲ್ ಶೂಟರ್ ರೀ – ಸಿಎಂ ಡಿಕೆಶಿಗೆ ಕೆ.ಎನ್‌ ರಾಜಣ್ಣ ಕೌಂಟರ್‌

ತುಮಕೂರು: ಯಾವ್ ಟ್ರಬಲ್ ಶೂಟರ್ ರೀ… ನೀವೇ ಟ್ರಬಲ್ ಶೂಟರ್ ಮಾಡಿರೋದು. ಹಾಗಿದ್ದ ಮೇಲೆ ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದರು. ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡುವ ವಿಚಾರ ಹಾಗೂ ಖಾತೆ ಹಂಚಿಕೆ ಕುರಿತು ಕೆ.ಎನ್. ರಾಜಣ್ಣ ಅವರು ಪ್ರತಿಕ್ರಿಯಿಸಿದರು. ಮಧುಗಿರಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಮಲಿಂಗಾ ರೆಡ್ಡಿ …

Read More »

ರಾಜ್ಯಸಭಾ ಚುನಾವಣೆ – ನಾಮಪತ್ರ ಸಲ್ಲಿಸಿದ ಖರ್ಗೆ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ತೆರಳಿದ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ದಾಖಲೆಗಳನ್ನು ಹಸ್ತಾಂತರಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸುವ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಉಪಸ್ಥಿತರಿದ್ದರು. …

Read More »

ದೆಹಲಿ ರೆಸ್ಟೋರೆಂಟ್‌ ದುರಂತ – 2025ರಲ್ಲೂ ಜೈಲು ಸೇರಿದ್ದ ಹೋಟೆಲ್‌ ಮಾಲೀಕ

ನವದೆಹಲಿ: ಇತ್ತೀಚೆಗೆ ದೆಹಲಿಯ ರೆಸ್ಟೋರೆಂಟ್‌ ಒಂದರಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ 21 ಜನ ಸಾವನ್ನಪ್ಪಿದ್ದರು. ಈ ಅವಘಡದ ಬೆನ್ನಲ್ಲೇ ರೆಸ್ಟೋರೆಂಟ್‌ ಮಾಲೀಕನ ಕರಾಳ ಮುಖ ಒಂದೊಂದಾಗಿ ಹೊರಬರುತ್ತಿದೆ. ಈತ 2025ರಲ್ಲಿ ತಿಹಾರ್‌ ಜೈಲಿನಲ್ಲಿ 15 ದಿನ ಕಳೆದಿದ್ದ ಎಂದು ತಿಳಿದು ಬಂದಿದೆ. ರೆಸ್ಟೋರೆಂಟ್‌ ಮಾಲೀಕ ಲವಕೇಶ್ ಬಜಾಜ್ (60) ಬಾಂಗ್ಲಾದೇಶಿ ಪ್ರಜೆಗಳಿಗೆ ನಕಲಿ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯ ಮಾಡಿ 2025ರಲ್ಲಿ ಜೈಲು ಸೇರಿದ್ದ. ಹಣಕ್ಕಾಗಿ ತನ್ನ ನಿವಾಸದ ವಿಳಾಸದಲ್ಲಿ …

Read More »

ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಅಣ್ಣಾಮಲೈ

ಚೆನ್ನೈ: ತಮಿಳುನಾಡು  ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈಅವರು, ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪ್ರಾದೇಶಿಕ ರಾಜಕೀಯ ಪಕ್ಷದ ಸ್ಥಾಪನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಬಿಜೆಪಿ ತೊರೆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಲೈವ್‌ಗೆ ಬಂದ ಅವರು, ತಮ್ಮ ಮುಂಬರುವ ರಾಜಕೀಯ ನಡೆ ಹಾಗೂ ಹೊಸ ಆಂದೋಲನದ ನೀಲನಕ್ಷೆಯನ್ನು ಹಂಚಿಕೊಂಡಿದ್ದಾರೆ. ತಮ್ಮ ಹೊಸ ರಾಜಕೀಯ ಆಂದೋಲನಕ್ಕೆ …

Read More »

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ

ಚಿತ್ರದುರ್ಗ: ಅದು ಗ್ರಾಮೋದ್ಯೋಗ ಕನಸಿನನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘ. ಅನೇಕರ ಸೇವೆಯಿಂದ ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿಯಿದೆ. ಆದರೆ ಇದೀಗ ಸುಮಾರು 4 ಕೋಟಿ ರೂ ಮೌಲ್ಯದ ಸಂಘದ ಆಸ್ತಿ ಭೂಗಳ್ಳರ ಪಾಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸಂಘದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ. ಮಹಾತ್ಮ ಗಾಂಧೀಜಿ ಅವರ ಗ್ರಾಮ ಭಾರತದ ಕನಸಿನೊಂದಿಗೆ ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ ಪರಸ್ಪರ …

Read More »

ವಾಹನ ಸವಾರರಿಗೆ ಗುಡ್‌ನ್ಯೂಸ್: ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ 50 ವಿನಾಯಿತಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಗೆ ಮತ್ತೆ ಶೇ 50% ವಿನಾಯಿತಿಗೆ ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ  ಗುಡ್​ನ್ಯೂಸ್ ನೀಡಲಾಗಿದೆ. ಜೂನ್ 21ರಿಂದ ಜುಲೈ 10ರವರೆಗೆ ಅಂದರೆ 20 ದಿನಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಲಾಗದೆ ಪರದಾಡುತ್ತಿದ್ದ ಸವಾರರ ಹಿತದೃಷ್ಟಿಯಿಂದ, ಬಾಕಿ ಇರುವ ದಂಡದ ಮೊತ್ತದಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆ ಮತ್ತೆ ಶೇಕಡಾ 50ರಷ್ಟು …

Read More »