Breaking News

ಬೇಧಭಾವ ಹೊಡೆದು ಹಾಕಿ ಮುಸ್ಲಿಂ ಮಹಿಳೆಯಿಂದ ಗಣೇಶ ತಯಾರಿ

ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.‌ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದುಗಾಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ ಎಂದರೆ ಹೇಗ ವಿಘ್ನ ನಿವಾರಕನನ್ನ ತಯಾರು ಮಾಡಿ ಹಿಂದು ಮುಸ್ಲಿಮ್ ಬೇಧಭಾವ ಹೊಡೆದು ಹಾಕಿದ ಮುಸ್ಲಿಂ ಸಮುದಾಯದ ಮಹಿಳೆಯ …

Read More »

ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರ ವರ್ಚಸ್ಸಿನ ಮೇಲೆ ನಡೆಯುತ್ತದೆ.ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ

ಕಾಂಗ್ರೆಸ್ ಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಅವರಲ್ಲಿನ ಶಾಸಕರ ಅಸಮಾಧಾನದ ಪತ್ರ ಬರೆದವರಿಗೆ ಹೆಸರಿಸಲು ಆಪರೇಷನ್ ಎನ್ನುವ ತಂತ್ರ ಅನುಸರಿಸುತ್ತಾರೆ ಎಂದು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಸರಕಾರದಲ್ಲಿನ ಶಾಸಕರ ಅಸಮಾಧನ ಪತ್ರದ ವಿರುದ್ಧವಾಗಿ ಅವರನ್ನು ಹೆದರಿಸಲು ಬಿಜೆಪಿ ಶಾಸಕರ ಆಪರೇಷನ್ ಮಾಡುವ ತಂತ್ರ ಅನುಸರಿಸುತ್ತಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ ಎಂದರು. ಬೆಳಗಾವಿ ಜಿಲ್ಲಾ ವಿಭಜನೆಯಾಗಬೇಕು. ಮೊದಲು ಬೆಳಗಾವಿ ಜಿಲ್ಲಾ ಒಡೆಯಬಾರದು …

Read More »

ಐಪಿಎಸ್​ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು.

ಬೆಂಗಳೂರು : ಐಪಿಎಸ್​ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು. ಇದರಿಂದಾಗಿ ಡಿ.ರೂಪಾ ಅವರಿಗೆ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಡಿ.ರೂಪಾ ಮೌದ್ಗಿಲ್​ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದಂ ​ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಪ್ರಕರಣ ರದ್ದುಗೊಳಿಸಲು ನಿರಾಕರಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಹೈಕೋರ್ಟ್​ ಆದೇಶದಿಂದಾಗಿ ರೂಪಾ ಮೌದ್ಗಿಲ್​ ಪ್ರಕರಣದ ವಿಚಾರಣೆ ಎದುರಿಸಬೇಕಾದ …

Read More »

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಸೇರಿದಂತೆ ಸಭೆಯಲ್ಲಿ ಮಹತ್ವದ ವಿಷಯಗಳ ಚರ್ಚೆ

ಬೆಂಗಳೂರು : ಲೋಕಸಭೆ ಚುನಾವಣೆ ಹಾಗೂ ಪಕ್ಷದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸುವ ಸಂಬಂಧ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ …

Read More »

ಶಿವಮೊಗ್ಗ ಗಾಂಧಿ ಪ್ರತಿಮೆ ಧ್ವಂಸ ಕೇಸ್: ಕಾನೂನು ಪ್ರಕಾರ ಕಠಿಣ ಶಿಕ್ಷೆ- ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ವೃತ್ತದಲ್ಲಿ 18 ವರ್ಷಗಳಿಂದ ಇದ್ದ ಗಾಂಧಿ ಪ್ರತಿಮೆಯನ್ನು ನಿನ್ನೆ (ಸೋಮವಾರ) ತಡರಾತ್ರಿ 2 ಗಂಟೆಯ ಸುಮಾರಿಗೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಈ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ದುಷ್ಕೃತ್ಯ ಎಸಗಿದವರನ್ನು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಂದು ತಿಳಿಸಿದ್ದಾರೆ.     ಸ್ಥಳಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಪೊಲೀಸ್ ವರಿಷ್ಟಧಿಕಾರಿ‌ ಮಿಥುನ್ ಕುಮಾರ್ ಜಿ.ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ತಡೆದು ವೃತ್ತದ …

Read More »

ಚುನಾವಣೆ ಮುಹೂರ್ತಕ್ಕೂ ಮುನ್ನವೇ ಅಭ್ಯರ್ಥಿಗಳನ್ನು ಘೋಷಿಸಿದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್​ರಾವ್​!

ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆಗೂ ಮೊದಲೇ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ರಾವ್​ ಅವರು ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಎಲ್ಲ 118 ಹುರಿಯಾಳುಗಳನ್ನು ಇಂದು (ಸೋಮವಾರ) ಘೋಷಿಸಿದರು. ಸ್ವತಃ ಅವರು ಗಜ್ವೆಲ್ ಮತ್ತು ಕಾಮರೆಡ್ಡಿಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದರೆ, ಪುತ್ರ, ಸಚಿವ ಕೆ.ಟಿ.ರಾಮರಾವ್​ ಸಿರ್ಸಿಲ್ಲಾದಿಂದ ಕಣಕ್ಕಿಳಿಯಲಿದ್ದಾರೆ. ಬಿಆರ್​ಎಸ್​ ಪಕ್ಷದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆಗೆ ಪೂರ್ವ ಸಿದ್ಧತೆ …

Read More »

ಪ್ರತಿ ವರ್ಷ ಮನೆಯಲ್ಲಿ ಜೀವಂತ ನಾಗರನಿಗೆ ಪೂಜೆ!

ಶಿರಸಿ (ಉತ್ತರಕನ್ನಡ) : ಇಂದು ನಾಗರ ಪಂಚಮಿ ಹಬ್ಬ. ಶಿರಸಿಯ ಉರಗ ಪ್ರೇಮಿಯೊಬ್ಬರು ಜೀವಂತ ನಾಗರಹಾವಿನ ಮರಿಗೆ ಹಾಲೆರೆದು ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ಉರಗ ಲೋಕದ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಶಾಂತ್ ಹುಲೇಕಲ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ನಿಜ ನಾಗರಹಾವಿಗೆ ಹಾಲೆರೆದು ನಾಗರ ಪಂಚಮಿ ಆಚರಿಸಿದರು. ಪ್ರತಿ ವರ್ಷ ನಾಗರ ಪಂಚಮಿ …

Read More »

N.E.P. ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: “ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯ. ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. “ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ …

Read More »

ನಮಗೆ ಒಟ್ಟು 124 ಟಿಎಂಸಿ ನೀರು ಬೇಕು; ಈಗ ಇರುವುದು 55 ಟಿಎಂಸಿ ಮಾತ್ರ: ಡಿ.ಕೆ.ಶಿವಕುಮಾರ್

ಬೆಂಗಳೂರು: “ನಾವು ಮತ್ತು ತಮಿಳುನಾಡಿನವರು ಅಣ್ಣ-ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದಕ್ಕಿಂತ, ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂಬುದು ನನ್ನ ಆಶಯ. ತಮಿಳುನಾಡು ಮತ್ತು ಕರ್ನಾಟಕದ ಜನ ಪರಸ್ಪರ ಎರಡೂ ಕಡೆ ಜೀವನ ಮಾಡುತ್ತಿದ್ದಾರೆ. ಹೀಗಿದ್ದಾಗ ಜಗಳ ಮಾಡುವುದು ಸರಿಯೇ? …

Read More »

ವರಮಹಾಲಕ್ಷ್ಮಿ ಹಬ್ಬ: ಸರ್ಕಾರದಿಂದ ಮಹಿಳೆಯರಿಗೆ ಅರಿಶಿನ, ಕುಂಕುಮ, ಬಳೆ ಉಡುಗೊರೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ರಾಜ್ಯದ ಮಹಿಳೆಯರಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆಗಸ್ಟ್ 25 ರಂದು ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅನುಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆಗಳನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರದ ಸುತ್ತೋಲೆಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿನ, ಕುಂಕುಮ ಮತ್ತು ಹಸಿರು ಬಳೆಗಳನ್ನು …

Read More »