Breaking News

ಮೈಸೂರು ದಸರಾ: 135 ಕಿ.ಮೀ ವಿದ್ಯುತ್ ದೀಪಾಲಂಕಾರದಲ್ಲಿ ಮಿನುಗಲಿದೆ ಸಾಂಸ್ಕೃತಿಕ ನಗರಿ

ಮೈಸೂರು : ಈ ಬಾರಿ ನಾಡಹಬ್ಬ ದಸರಾವನ್ನು ಸಾಂಪ್ರದಾಯಕವಾಗಿ ಆಚರಿಸಲು ನಿರ್ಧಾರಿಸಲಾಗಿದೆ. ಜೊತೆಗೆ ದಸರಾ ಸಂದರ್ಭದಲ್ಲಿ ನಗರದ 135 ಕಿ. ಮೀ ವ್ಯಾಪ್ತಿಯ ಪ್ರಮುಖ ವೃತ್ತಗಳು, ರಸ್ತೆಗಳು ಹಾಗೂ ಸರ್ಕಾರಿ ಪಾರಂಪರಿಕ ಕಟ್ಟಡಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ. ಈ ವೇಳೆ ಪ್ರತಿ ವೃತ್ತದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು, ಸೋಮನಾಥೇಶ್ವರ ದೇವಾಲಯ ಹಾಗೂ ಚಂದ್ರಯಾನ 3 ಮಾದರಿಗಳು ದೀಪಾಲಂಕಾರದಲ್ಲಿ ಮಿಂಚಲಿವೆ. ಈ ಬಾರಿಯ ದಸರಾ ದೀಪಾಲಂಕಾರ ಎಲ್ಲೆಲ್ಲಿ ಇರಲಿದೆ, ಎಷ್ಟು ಖರ್ಚಾಗಲಿದೆ ಎಂಬ ಮಾಹಿತಿ …

Read More »

5 ಗ್ಯಾರಂಟಿ ಸೇರಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: “ರಾಜ್ಯ ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಸೇರಿದಂತೆ ಯಾವುದೇ ನಿಯಮಿತ ಅಭಿವೃದ್ಧಿ ಕಾಮಗಾರಿ ಹಾಗೂ ಕಾರ್ಯಕ್ರಮಕ್ಕೆ ಹಣದ ಕೊರತೆ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗಳು ಕುಂಠಿತಗೊಂಡಿವೆ ಅನ್ನೋದು ಸುಳ್ಳು. ಬಿಜೆಪಿ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದ್ದೇ ಅವರು.​ ನಾವು ಈ ಹಿಂದೆ ಆಡಳಿತ ನಡೆಸಿದ್ದೆವು. ಯಾವತ್ತೂ ಇಷ್ಟು ಪ್ರಮಾಣದ …

Read More »

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ

ಮಂಗಳೂರು (ದಕ್ಷಿಣ ಕನ್ನಡ): ಮೂರು ವರ್ಷದ ಬಳಿಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಮತ್ತು ನಿರ್ವಹಣೆ ಅಕ್ಟೋಬರ್​ 31ರಿಂದ ದೇಶದ ಪ್ರತಿಷ್ಠಿತ ಉದ್ದಿಮೆ ಕಂಪನಿ ಅದಾನಿ ಗ್ರೂಪ್ ತೆಕ್ಕೆಗೆ ಸೇರಲಿದೆ. ಇನ್ನು ಮುಂದೆ ಈ ಏರ್​ಪೋರ್ಟ್​ನ ಆಗುಹೋಗುಗಳು ಅದಾನಿ ಸಮೂಹದಿಂದಲೇ ನಡೆಯಲಿದೆ. 2020ರ ಅಕ್ಟೋಬರ್​ 31ರಂದು ಮಂಗಳೂರು ಸೇರಿದಂತೆ ಅಹಮದಾಬಾದ್, ಲಕ್ನೋ, ಜೈಪುರ, ಗುವಾಹಟಿ ಹಾಗೂ ತ್ರಿವೆಂಡ್ರಂ ವಿಮಾನ ನಿಲ್ದಾಣಗಳ ಆಡಳಿತವನ್ನು ಅದಾನಿ ಗ್ರೂಪ್ ತನ್ನ ವಶಕ್ಕೆ ಪಡೆದುಕೊಂಡಿತ್ತು. …

Read More »

ಕಾಂಗ್ರೆಸ್​ಗೆ ಲಿಂಗಾಯತ ಮತ ಬಂದಿದ್ದು ಕೇವಲ ಶೇ.20, ಆದರೂ 7 ಮಂತ್ರಿಗಿರಿ ನೀಡಲಾಗಿದೆ: ಪ್ರಕಾಶ್ ರಾಠೋಡ್

ಬೆಂಗಳೂರು: “ಲಿಂಗಾಯತರ ಕಡೆಯಿಂದ ಕಾಂಗ್ರೆಸ್‌ಗೆ ಬಂದಿರುವ ಮತಗಳು ಕೇವಲ ಶೇ.20ರಷ್ಟು ಮಾತ್ರ. ಹೀಗಿದ್ದರೂ ರಾಜ್ಯ ಸಂಪುಟದಲ್ಲಿ ಲಿಂಗಾಯತರಿಗೆ 7 ಸ್ಥಾನ ನೀಡಲಾಗಿದೆ” ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ್​ ಹೇಳಿದ್ದಾರೆ. ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಶಾಮನೂರು ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, “ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕರ್ನಾಟಕದ ಪಾಲಿಗೆ ಪಕ್ಷದ ಆಸ್ತಿಯೂ ಆಗಿರುವ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪನವರ ಹೇಳಿಕೆ …

Read More »

ಆರ್​​ಟಿಐ ಅರ್ಜಿದಾರರ ಮಾಹಿತಿ ಒದಗಿಸುವಂತೆ ಕೋರಿದ್ದ ಸುತ್ತೋಲೆ ಹಿಂಪಡೆದ ಸರ್ಕಾರ

ಬೆಂಗಳೂರು: ಮಾಹಿತಿ ಹಕ್ಕಿನ ಅಡಿಯಲ್ಲಿ ಹೆಚ್ಚು ಬಾರಿ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜೂನ್ 6 ರಂದು ಹೊರಡಿಸಿದ್ದ ನಿರ್ದೇಶನವನ್ನು ಇದೀಗ ಹಿಂಪಡೆದುಕೊಂಡಿದೆ.   ಜೂನ್ 6ರಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಮಾಹಿತಿ ಹಕ್ಕಿನ ಅಡಿ ಹೆಚ್ಚು ಬಾರಿ ಅರ್ಜಿಸಲ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸುವಂತೆ ಸೂಚನೆ ನೀಡಿತ್ತು. ಆ ಮೂಲಕ ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರ ಅಧಿಕಾರವನ್ನು …

Read More »

ದಸರಾ ‘ಯುವ ಸಂಭ್ರಮ’ಕ್ಕೆ ಸಚಿವ ಹೆಚ್.ಸಿ ಮಹದೇವಪ್ಪ ಚಾಲನೆ: ಸಮಾರಂಭಕ್ಕೆ ಸಿಂಹಪ್ರಿಯಾ ಸಾಕ್ಷಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಿಸುವ ‘ಯುವ ಸಂಭ್ರಮ’ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಉದ್ಘಾಟಿಸಿದರು. ಮೈಸೂರು ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಶುಕ್ರವಾರ ಸಂಜೆ ಗಣ್ಯರು ಹಾಗೂ ಅತಿಥಿಗಳು ನಗಾರಿ, ಕಂಸಾಳೆ, ಡೊಳ್ಳು ಬಾರಿಸುವ ಮೂಲಕ ‘ಯುವ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ನೀಡಿದರು. ಸಮಾರಂಭದ …

Read More »

ಬೈಲಹೊಂಗಲ, ಸವದತ್ತಿ, ಯರಗಟ್ಟಿ, ರಾಮದುರ್ಗ ತಾಲೂಕುಗಳಲ್ಲಿ ಕೇಂದ್ರದ ಅಧಿಕಾರಿಗಳ ತಂಡ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಅಧ್ಯಯನ ನಡೆಸಿತು.

ಬೆಳಗಾವಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಐವರು ಅಧಿಕಾರಿಗಳ ತಂಡ ಇಂದು ಪರಿಶೀಲಿಸಿತು. ಇದಕ್ಕೂ ಮುನ್ನ ನಗರದ ಪ್ರವಾಸಿಮಂದಿರದಲ್ಲಿ ಬೆಳಗ್ಗೆ ಅಜಿತ್ ಕುಮಾರ್ ಸಾಹು ತಂಡ ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿತು. ನಂತರ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತು. ಮೊದಲಿಗೆ ಬೈಲಹೊಂಗಲ ತಾಲೂಕಿನ ನೇಸರಗಿ ಬಳಿಯ ನಾಗಪ್ಪ …

Read More »

ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ: ಭೈರತಿ ಸುರೇಶ್​

ಬೆಳಗಾವಿ : ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್​ ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಇಂದಿರಾ ಕ್ಯಾಂಟೀನ್​ ತುಂಬಾ ಸಂಕಷ್ಟದಲ್ಲಿವೆ ಎಂಬ ಪ್ರಶ್ನೆಗೆ, “ಹಿಂದಿನ ಬಿಜೆಪಿ ಸರ್ಕಾರ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಗೆ ಕೆಟ್ಟ ಹೆಸರು ತರಲು ಸರಿಯಾಗಿ ನಿರ್ವಹಣೆ ಮಾಡದೇ ಕ್ಯಾಂಟೀನ್​ಗಳನ್ನು ಮುಚ್ಚುವ …

Read More »

*ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಮೇಶ್ವರ ಏತ ನೀರಾವರಿ ಯೋಜನೆಯ ವೆಂಕಟಾಪೂರ ಮುಖ್ಯ ಕಾಲುವೆಯನ್ನು ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಾಮೇಶ್ವರ ಏತ ನೀರಾವರಿ ಯೋಜನೆಯಡಿ ಇದುವರೆಗೂ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಭಾಗದ ರೈತರಿಗೆ ತಮ್ಮ ಜಮೀನುಗಳಿಗೆ ನೀರು ಪೂರೈಸಲು ಹೊಸ ಚೇಂಬರ್ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು …

Read More »

ಹಸಿರು, ಬರದ ಬಗ್ಗೆ ವಿಶೇಷ ಗಮನ ಹರಿಸಿ, ರೈತರ ಹಿತ ಕಾಪಾಡಿ: ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಿಎಂ ಮನವಿ

ಬೆಂಗಳೂರು: ಕೇಂದ್ರ ಬರ ಅಧ್ಯಯನ ತಂಡದ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ, ಹಸಿರು ಹಾಗೂ ಬರದ ಬಗ್ಗೆ ಆಳವಾದ ಅಧ್ಯಯನ‌ ನಡೆಸುವಂತೆ ಮನವಿ ಮಾಡಿದ್ದಾರೆ. ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ ಅಗಮಿಸಿದ್ದು, ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿವೆ. ಕೇಂದ್ರ ತಂಡ ಹತ್ತು ಸದಸ್ಯರನ್ನೊಳಗೊಂಡಿದ್ದು, ರಾಜ್ಯದ ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ. ಕೇಂದ್ರ ಬರ …

Read More »