ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಅಕ್ಟೋಬರ್ 10 ರಂದು ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ಮತ್ತು ಅತ್ತಿಬೆಲೆ ಬಳಿಯ ತಮಿಳುನಾಡು – ಕರ್ನಾಟಕ ಗಡಿ ಬಂದ್ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅಕ್ಟೋಬರ್ 5ರಂದು ಕೆಆರ್ಎಸ್ಗೆ ಮೆರವಣಿಗೆ ನಡೆಸಲಿದ್ದೇವೆ. ಅಕ್ಟೋಬರ್ 10ಕ್ಕೆ ಎಲ್ಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಿದ್ದೇವೆ. ಅಂದು ಬೆಳಗ್ಗೆ 11 ಗಂಟೆಗೆ ಅತ್ತಿಬೆಲೆಯ ತಮಿಳುನಾಡು ಗಡಿ ಬಂದ್ …
Read More »ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ: ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ತಿರಸ್ಕರಿಸಿದ ಕೋರ್ಟ್
ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ನುಡಿಯಲು ಬೆದರಿಕೆ ಹಾಕಿದ ಪ್ರಕರಣದಲ್ಲಿ ತನಿಖಾಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತಿರಸ್ಕರಿಸಿತು. ಯೋಗೀಶ್ ಸಹೋದರ ಗುರುನಾಥ್ ಗೌಡ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಲು ನ್ಯಾಯಾಧೀಶರಾದ ಜೆ.ಪ್ರೀತ್ ಅವರು ಪುರಸ್ಕರಿಸಿದ್ದು, ಹುಬ್ಬಳ್ಳಿ-ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಬಿ ವರದಿಯನ್ನು ತಿರಸ್ಕರಿಸಿ ಆದೇಶಿಸಿದರು. ತನಿಖಾಧಿಕಾರಿಯು ದೂರುದಾರನನ್ನು ವಿಚಾರಣೆಗೆ …
Read More »ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆ ಮಂಗಳವಾರ ಸ್ಥಳ ಪರಿಶೀಲನೆ
ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ನನ್ನ ಸಹಕಾರವಿದೆ. ಆದರೆ ಸುತ್ತಲಿನ ಹಳ್ಳಿಗಳಿಗೆ ಮತ್ತು ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ ನಂತರ ನಡೆದ ಉನ್ನತಾಧಿಕಾರ ಮಟ್ಟದ ಸಭೆಯಲ್ಲಿ …
Read More »ನಮ್ಮ ಸರ್ಕಾರದ ಅವಧಿಯಲ್ಲಿ ಜಾತಿ ಗಣತಿ ವರದಿ ಪೂರ್ಣವಾಗಿರಲಿಲ್ಲ.:C.M.
ಬೆಳಗಾವಿ: ”ನಮ್ಮ ಸರ್ಕಾರದ ಅವಧಿಯಲ್ಲಿ ಜಾತಿ ಗಣತಿ ವರದಿ ಪೂರ್ಣವಾಗಿರಲಿಲ್ಲ. ಹಾಗಾಗಿ, ಬಿಡುಗಡೆಗೊಳಿಸಲು ಆಗಲಿಲ್ಲ. ಈಗ ವರದಿ ಕೇಳಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಹಿಂದುಳಿದ ವರ್ಗಗಳ ಆಯೋಗವು ಜಾತಿ ಗಣತಿ ವರದಿಯನ್ನು ಇನ್ನೂ ನಮಗೆ ನೀಡಿಲ್ಲ. ಜಾತಿ ಗಣತಿ ಹಾಗೂ ಸಾಮಾಜಿಕ, ಆರ್ಥಿಕ ಸರ್ವೆಗೆ ಕಾಂತರಾಜು ಅಧ್ಯಕ್ಷತೆಯಲ್ಲಿ ನಾನೇ ಆದೇಶ ನೀಡಿದ್ದೆ. ವರದಿ ಪೂರ್ಣಗೊಳ್ಳುವ ಮುನ್ನ ನಮ್ಮ ಸರ್ಕಾರದ ಅವಧಿ ಮುಗಿಯಿತು. ನಂತರ …
Read More »ಬಿಹಾರ ಸರ್ಕಾರ ಜಾತಿ ಗಣತಿ ವರದಿ ಜಾರಿ ಮಾಡಿದ್ದನ್ನು ಸ್ವಾಗತಿಸುತ್ತೇವೆ. ಅದೇ ರೀತಿ ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಿದರೆ ಒಳ್ಳೆಯದು
ಬೆಳಗಾವಿ: ಬಿಹಾರ ಸರ್ಕಾರ ಜಾತಿ ಗಣತಿ ವರದಿ ಜಾರಿ ಮಾಡಿದ್ದನ್ನು ಸ್ವಾಗತಿಸುತ್ತೇವೆ. ಅದೇ ರೀತಿ ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಿದರೆ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮದು ಸುಮಾರು ವರ್ಷಗಳ ಹಿಂದೆ ತಯಾರಾಗಿದೆ. ಸರ್ಕಾರ ಮತ್ತು ಸಿಎಂ ನಿರ್ಧಾರ ಮಾಡಬೇಕು. ಜಾತಿ ಗಣತಿ ವರದಿ ಜಾರಿ ಮಾಡುವುದು ಒಳ್ಳೆಯದು. ಯಾವ ಸಮುದಾಯಕ್ಕೆ …
Read More »*ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ* : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರನ್ನುದ್ಧೇಶಿಸಿ ಮಾತನಾಡಿದ ಅವರು, ನಿಮ್ಮೆಲ್ಲ ಹೋರಾಟಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು. ಕಳೆದ 2 ವರ್ಷಗಳಿಂದ …
Read More »ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಬಗ್ಗೆ ಶಾಮನೂರು ಹೇಳಿಕೆ ತಪ್ಪು: ಶಾಸಕ ಬಸವರಾಜ ರಾಯರೆಡ್ಡಿ
ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ ಎಂಬ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ತಪ್ಪು. ಇದು ಆಡಳಿತದ ಮೇಲೆ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದರು. ವಿಧಾನಸೌಧದ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪನವರು ಮಾಹಿತಿ ಕೊರತೆಯಿಂದ ಈ ರೀತಿ ಹೇಳಿಕೆ ನೀಡಿರಬಹುದು ಎಂದರು. ಅಧಿಕಾರಿಗಳನ್ನು ಸರ್ಕಾರದಲ್ಲಿ ಕಡೆಗಣಿಸಲಾಗಿದೆ. ಲಿಂಗಾಯತ ಅಧಿಕಾರಿಗಳಿಗೆ ಮಹತ್ವವಿಲ್ಲ ಎಂಬ …
Read More »ಖರ್ಚಿಗೆ ಹಣವಿಲ್ಲವೆಂದು ಮೊಬೈಲ್ ಶಾಪ್ ದೋಚಿದ್ದ ಯುವಕ
ಬೆಂಗಳೂರು : ಖರ್ಚಿಗೆ ಕಾಸಿಲ್ಲವೆಂದು ಮೊಬೈಲ್ ಶಾಪ್ ದೋಚಿದ್ದ ಯುವಕರನ್ನು ಸಂಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರಭು (21), ಮೌಲೇಶ್ (19) ಹಾಗೂ ಅಜಯ್ (21) ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 50 ಲಕ್ಷ ಮೌಲ್ಯದ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್ಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಎಚ್‌ಎಸ್‌ಆರ್ ಲೇಔಟ್ನ ನಿವಾಸಿಗಳಾಗಿರುವ ಆರೋಪಿಗಳು ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ಆರೋಪಿಗಳ ಪೈಕಿ ಪ್ರಭು, ಇತ್ತೀಚಿಗೆ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಗ್ಯಾಜೆಟ್ಸ್ ಕ್ಲಬ್ ಮೊಬೈಲ್ ಅಂಗಡಿಯಲ್ಲಿ …
Read More »ರಾಯಚೂರಿನಲ್ಲಿ ಬಿಎಡ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ರಾಯಚೂರು, ಅಕ್ಟೋಬರ್ 3: ರಾಯಚೂರು ನಗರದ ರೈಲ್ವೆ ನಿಲ್ದಾಣದ ಬಳಿ ಬಿಎಡ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ. ಹನುಮಂತ (23) ಎಂಬ ವಿದ್ಯಾರ್ಥಿ ರೈಲ್ವೆ ಟ್ರಾಕ್ ಮಧ್ಯೆ ಹೆಣವಾಗಿ ಪತ್ತೆಯಾಗಿದ್ದಾನೆ. ಮೃತ ಹನುಮಂತ, ಮಾನ್ವಿ ತಾಲೂಕಿನ ಬೈಲ್ ಮರ್ಚಡ್ ಗ್ರಾಮದ ನಿವಾಸಿ. ಈತ ನಗರದ ಖಾಸಗಿ ಕಾಲೇಜಿನಲ್ಲಿ ಬಿಎಡ್ ಓದುತ್ತಿದ್ದ ಯುವಕ. ಹಾಸ್ಟೆಲ್ ನಲ್ಲಿ ಉಳಿದುಕೊಂಡು ಬಿಎಡ್ ಎರಡನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡ್ತಿದ್ದ. ಹನುಮಂತ, ನಿನ್ನೆ ಸೋಮವಾರ ತಡ ರಾತ್ರಿ …
Read More »ಕುರುಬ ಸಮುದಾಯಕ್ಕೆ 5 ಸಾವಿರ ಕೋಟಿ ಅನುದಾನದ ಗ್ಯಾರಂಟಿ ಕೊಡಿ: ಬಂಡೆಪ್ಪ ಕಾಶಂಪುರ
ಬೆಳಗಾವಿ, ಅ.3: ಕುರುಬ ಸಮುದಾಯಕ್ಕೆ ಐದು ಸಾವಿರ ಕೋಟಿ ಕುರಿಗಾರರಿಗೆ ಅನುದಾನದ ಗ್ಯಾರಂಟಿ ಕೊಡಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ (Bandeppa Kashempur) ಅವರು ಸರ್ಕಾರದ ಮುಂದೆ ಬೇಡಿಕೆ ಮುಂದಿಟ್ಟಿದ್ದಾರೆ. ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ ಸಂಘಟನೆ ವತಿಯಿಂದ ನಡೆದ ಕುರುಬ ಸಮುದಾಯದ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ಎರಡು ವರ್ಷದಲ್ಲಿ ಐದರಿಂದ ಹತ್ತು ಪಟ್ಟು ಸರ್ಕಾರಕ್ಕೆ ಕೊಡುವ ಶಕ್ತಿ ನಮ್ಮ ಸಮಾಜಕ್ಕಿದೆ ಎಂದರು. ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಕೊಟ್ಟಿದ್ದು ಸ್ವಾಗತ. ಈ ವೇಳೆ ಕುರುಬ …
Read More »
Laxmi News 24×7