ಡಬ್ಲಿನ್ (ಐರ್ಲೆಂಡ್): ಭಾರತ ಮತ್ತು ಐರ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಿದ್ದು, ಮೊದಲ ಪಂದ್ಯ ಡಬ್ಲಿನ್‌ನ ವಿಲೇಜ್ ಮೈದಾನದಲ್ಲಿ ನಡೆಯುತ್ತಿದೆ. ಪಂದ್ಯ ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಲು ಎರಡೂ ತಂಡಗಳು ತವಕಿಸುತ್ತಿವೆ. ಟಾಸ್ ಗೆದ್ದ ಬುಮ್ರಾ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿದೆ. ಐರ್ಲೆಂಡ್ ಪರ ಬ್ಯಾರಿ ಮೆಕಾರ್ಥಿ ಅರ್ಧಶತಕ …
Read More »ರಾಜ್ಯ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುತ್ತಿದೆ: ಬೊಮ್ಮಾಯಿ ವಾಗ್ದಾಳಿ
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆಯನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ. ಸರ್ಕಾರದ ವಿರುದ್ಧ ಸುದ್ದಿ ಮಾಡಿದ್ದಕ್ಕಾಗಿ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …
Read More »ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ
ಬೆಂಗಳೂರು : ನಗರದ ಮೆಜೆಸ್ಟಿಕ್ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ತಲುಪಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ರೈಲ್ವೆ ಇಂಜಿನ್ನಿಂದ ಹೊರ ಬಂದ ದಟ್ಟ ಹೊಗೆಯನ್ನು ಕಂಡ ಪ್ರಯಾಣಿಕರು ಕೆಲಕಾಲ ಆತಂಕಗೊಂಡಿದ್ದು, ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗ್ಗೆ 6ಕ್ಕೆ ಬೆಂಗಳೂರು ತಲುಪಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ಲಾಟ್ ಫಾರ್ಮ್ 3ರಲ್ಲಿ ನಿಂತಿತ್ತು. 7:10ರ …
Read More »ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಿಂದ ನಾನು ಹಿಂದೆ ಸರಿದಿಲ್ಲ: ವಿನಯ್ ಕುಲಕರ್ಣಿ
ಬೆಳಗಾವಿ : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವೇಳೆ ವೀರಶೈವ ಮಹಾಸಭೆಯಲ್ಲಿದ್ದ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಅದರಲ್ಲಿನ ಬಹಳಷ್ಟು ಜನ ನಮಗೆ ಬೆಂಬಲ ಕೂಡ ಕೊಟ್ಟಿದ್ದರು. ಈಗ ನಾವೆಲ್ಲಾ ಒಂದಾಗಿ ಮತ್ತೆ ಹೋರಾಟ ಪ್ರಾರಂಭ ಮಾಡೋಣ ಎಂದು ಮಾತನಾಡಿದ್ದೇವೆ ಅಂತಾ ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನನ್ನು ಯಾರೂ ಹೈಜಾಕ್ ಮಾಡಿಲ್ಲ, ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಎಂದು ರಾಜ್ಯದ ಮುಖಂಡರನ್ನು ಮೊನ್ನೆ …
Read More »ದಾವಣಗೆರೆಯಲ್ಲಿ 1920ರ ದಶಕದ ಕ್ಯಾಮೆರಾಗಳ ಪ್ರದರ್ಶನ
ದಾವಣಗೆರೆ: 184ನೇ ವಿಶ್ವ ಛಾಯಾಗ್ರಾಹಕರ ದಿನವನ್ನು (World Photography Day) ಜಿಲ್ಲೆಯ ಫೋಟೊಗ್ರಾಫರ್ಸ್ ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. 1920ರ ಕಾಲದಲ್ಲಿ ಬಳಕೆ ಮಾಡುತ್ತಿದ್ದ ಹಳೇ ಕ್ಯಾಮೆರಾಗಳನ್ನು ಪ್ರದರ್ಶನಕ್ಕಿಟ್ಟಿದ್ದು ಯುವಜನತೆಯನ್ನು ಆಕರ್ಷಿಸಿತು. ಪ್ರಸ್ತುತ ಮೊಬೈಲ್ ಜಮಾನದಲ್ಲಿ ಸುಲಭವಾಗಿ ಫೋಟೊ ತೆಗೆಯಬಹುದು. ಅದರೆ 1920ರ ಕಾಲದಲ್ಲಿ ಒಂದು ಫೋಟೊ ತೆಗೆಯಲು ಫೋಟೊಗ್ರಾಫರ್ಸ್ ಎಷ್ಟು ಕಷ್ಟಪಡುತ್ತಿದ್ದರು ಎಂಬುದನ್ನು ಈ ಹಳೇ ಕ್ಯಾಮೆರಾಗಳು, ಅದರ ಬಿಡಿಭಾಗಗಳನ್ನು ಪ್ರದರ್ಶನಕ್ಕಿಡುವ ಮೂಲಕ ತೋರಿಸಲಾಯಿತು. ಫೀಲ್ಡ್ ಕ್ಯಾಮರಾಫೋಟೋಗ್ರಾಫರ್ ಯೂತ್ ವೆಲ್ಫೇರ್ ಅಸೋಸಿಯೇಷನ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ನೇಣಿಗೇರಲು ಸಿದ್ದವಿದ್ದೇನೆ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಕೆ.ಗೋಪಾಲಯ್ಯ
ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ದವಿದ್ದೇನೆ ಎಂದು ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುತ್ತಾರೆ ಎನ್ನುವ ವದಂತಿ ಹರಡಿದೆ. ಹಾಗಾಗಿ ನನಗೆ ನಿನ್ನೆಯಿಂದ ಸ್ವೀಕರಿಸಲು ಸಾಧ್ಯವಾಗದಷ್ಟು ದೂರವಾಣಿ ಕರೆಗಳು ಬರುತ್ತಿದೆ. ಆದರೆ, ನಾನು ಯಾರನ್ನು ಭೇಟಿ ಆಗಿಲ್ಲ. ನಿನ್ನೆ ಸಂಜೆ (ಗುರುವಾರ) …
Read More »ಬೆಳಗಾವಿ: ಆಸ್ತಿಗಾಗಿ ಉಪ್ಪಿಟ್ಟಿನಲ್ಲಿ ಗಂಡನಿಗೆ ವಿಷ ಹಾಕಿದ ಪತ್ನಿ; ಪತಿ ಐಸಿಯುಗೆ, ನಾಯಿ-ಬೆಕ್ಕು ಸಾವು
ಬೆಳಗಾವಿ: ಎರಡು ಎಕರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬಳು, ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣ ಪತ್ತೆ ಹಚ್ಚುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಷಪೂರಿತ ಉಪ್ಪಿಟ್ಟು ಸೇವಿಸಿ ಅಸ್ವಸ್ಥರಾಗಿದ್ದ ಸವದತ್ತಿ ತಾಲೂಕಿನ ಗೋರಾಬಾಳ ಗ್ರಾಮದ ನಿಂಗಪ್ಪ ಫಕೀರಪ್ಪ ಹಮಾನಿ (35) ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಸಾವಕ್ಕ (32) ಹಾಗೂ ಇವರ ಸಹೋದರ ಫಕೀರಪ್ಪ ಲಕ್ಷ್ಮಣ ಸಿಂಧೋಗಿ (30) ಕೊಲೆಗೆ …
Read More »ಬಿಜೆಪಿಯಲ್ಲಿ ಕಿರುಕುಳ ಅನುಭವಿಸುವವರು ಕಾಂಗ್ರೆಸ್ಗೆ ಬರಬಹುದು: ಗೃಹ ಸಚಿವ
ಬೆಳಗಾವಿ: ನಮ್ಮಲ್ಲಿಂದ ಹೋಗಿರುವ ಶಾಸಕರಿಗೆ ಬಿಜೆಪಿಯಲ್ಲಿ ಕಿರುಕುಳ ಇರೋದು ಸತ್ಯವಾದರೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ನಾವು ಯಾರಿಗೂ ಬರಬೇಡಿ ಅಂತ ಹೇಳಿಲ್ಲ. ನಮ್ಮ ಸಿದ್ಧಾಂತ ಒಪ್ಪಿ ಬರೋದಾದರೆ ಬರಲಿ ಅವರನ್ನು ಸ್ವಾಗತ ಮಾಡುತ್ತೇವೆ. ಯಾವ ಶಾಸಕರು ಬರ್ತಾರೆ ಅಂತ ನನಗೆ ಗೊತ್ತಿಲ್ಲ. ಆದರೆ, ಬರ್ತಾರೆ ಎನ್ನುವ ಮಾತಿದೆ …
Read More »ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗದಿದ್ದರೆ ಉಗ್ರ ಪ್ರತಿಭಟನೆ:ಕಡಾಡಿ
ಬೆಳಗಾವಿ: ಲೋಡ್ ಶೆಡ್ಡಿಂಗ್ ಪರಿಣಾಮವಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುವ ಪರಿಸ್ಥಿತಿಗೆ ತಲುಪಿದ್ದು, ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೊಂದಿಗೆ ಸೇರಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐಪಿ ಸೆಟ್ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿದ್ದರೆ ಈಗ ಬಿತ್ತಿರುವ ಶೇ.80ರಷ್ಟು ಬೆಳೆಗಳು ಒಣಗಿ, ಜಿಲ್ಲೆಯಲ್ಲಿ ಆಹಾರ …
Read More »