ಬೆಂಗಳೂರು: “ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತ ದೇಶ, ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನ 2023 ಮತ್ತು 25ನೇ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗ ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986ರಲ್ಲಿ ಭಾರತದಲ್ಲಿ …
Read More »ರಿಸಲ್ಟ್ ಬಳಿಕ ತೆಲಂಗಾಣ ಕಾಂಗ್ರೆಸ್ ಶಾಸಕರು ಬೆಂಗ್ಳೂರಿಗೆ ಸ್ಥಳಾಂತರ ಸಾಧ್ಯತೆ! ಡಿಸಿಎಂ ಡಿಕೆಶಿ
ಹೈದರಾಬಾದ್: ತೆಲಂಗಾಣದಲ್ಲಿ ನಿನ್ನೆಯಷ್ಟೇ (ನ.30) ಮತದಾನ ಮುಕ್ತಾಯವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಸುಳಿವನ್ನು ವಿವಿಧ ಮತಗಟ್ಟೆಗಳ ಸಮೀಕ್ಷೆ ತಿಳಿಸಿವೆ. ಆಡಳಿತಾರೂಢ ಬಿಆರ್ಎಸ್ ಮತ್ತು ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ಇದ್ದು, ಕುದುರೆ ವ್ಯಾಪಾರ ಸಂಭವವನ್ನು ತಡೆಗಟ್ಟಲು ಡಿ.3ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ತೆಲಂಗಾಣದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವತ್ತ ಕಾಂಗ್ರೆಸ್ ಹೈಕಮಾಂಡ್ ಚಿಂತಿಸುತ್ತಿದೆ ಎಂದು ತಿಳಿದುಬಂದಿದೆ. ತೆಲಂಗಾಣ ಕಾಂಗ್ರೆಸ್ ಘಟಕದ ಮುಖ್ಯಸ್ಥ ರೇವಂತ್ ರೆಡ್ಡಿ …
Read More »2000 ರೂ. ನೋಟು ಹಿಂಪಡೆದ RBI: ಈವರೆಗೆ 97% ನೋಟುಗಳು ವಾಪಸ್, ಬಾಕಿ ಉಳಿದಿರುವ ಹಣವೆಷ್ಟು?
ನವದೆಹಲಿ: ಕಳೆದ ಮೇ 19ರಂದು 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಮಹತ್ವದ ಘೋಷಣೆ ಮಾಡಿದಾಗಿನಿಂದ ಈವರೆಗೂ ಶೇ. 97.26 ರಷ್ಟು ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಇಂದು (ಡಿ.01) ತಿಳಿಸಿದೆ. ಮೇ 19ರಂದು 2000 ರೂ. ನೋಟುಗಳ ಚಲಾವಣೆಯನ್ನು ಹಿಂಪಡೆದ ಸಂದರ್ಭದಲ್ಲಿ 2000 ರೂ. ಮುಖಬೆಲೆಯ 3.56 ಲಕ್ಷ ಕೋಟಿ ರೂ. ಚಾಲನೆಯಲ್ಲಿದ್ದವು. ಕೇವಲ 6 ತಿಂಗಳಲ್ಲಿ ತೀವ್ರ ಕುಸಿತಕೊಂಡಿದ್ದು, …
Read More »ಭ್ರೂಣ ಹತ್ಯೆ ಪ್ರಕರಣ; ತಪ್ಪಿತಸ್ಥರ ಮೇಲೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್
ಬೆಂಗಳೂರು:ಭ್ರೂಣ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭ್ರೂಣ ಹತ್ಯೆ ಪ್ರಕರಣದಲ್ಲಿ ಲೋಪಗಳು ಕಂಡು ಬಂದರೆ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದರು. ತಾಲೂಕು ಮತ್ತು ಜಿಲ್ಲೆಯಲ್ಲಿ ಗರ್ಭಿಣಿಯರ ಸಂಖ್ಯೆ ಎಷ್ಟು ಎನ್ನುವುದನ್ನು ಪ್ರತಿ ತಿಂಗಳೂ ಮಾಹಿತಿ ಸಂಗ್ರಹಿಸುವುದು ಕಡ್ಡಾಯ. ಅದರ ಜೊತೆಗೆ ಜನನವಾದ ಪ್ರಕರಣಗಳನ್ನು ತಾಳೆ ಹಾಕಲಾಗುವುದು. ಒಂದು …
Read More »ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ,ಮಂಗಗಳ ಉಪಟಳ ಹೆಚ್ಚಾಗಿದ್ದು, ರೋಗಿಗಳು ತಳಮಳಗೊಂಡಿದ್ದಾರೆ.
ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳು ಸಮರ್ಪಕವಾಗಿ ನೀಡುತ್ತಿಲ್ಲ, ಚಿಕಿತ್ಸೆ ಸರಿ ಇಲ್ಲವೆಂಬ ದೂರುಗಳು ಕೇಳಿಬರುವುದು ಸಾಮಾನ್ಯ. ಆದರೆ, ನಗರದ ಜಿಲ್ಲಾಸ್ಪತ್ರೆಯೊಳಗೆ ಕೆಲ ದಿನಗಳಿಂದ ಮಂಗಗಳ ಉಪಟಳ ಹೆಚ್ಚಾಗಿದ್ದು, ರೋಗಿಗಳು ತಳಮಳಗೊಂಡಿದ್ದಾರೆ. ಐತಿಹಾಸಿಕ ಕಲ್ಲಿನ ಕೋಟೆ, ನಲ್ಲಿಕಾಯಿ ಸಿದ್ದಪ್ಪನ ಬೆಟ್ಟ, ಚಂದ್ರವಳ್ಳಿ, ಆಡುಮಲ್ಲೇಶ್ವರ ಕಿರು ಮೃಗಾಲಯ ಆವರಣ ಸಾಮಾನ್ಯವಾಗಿ ಕೋತಿಗಳಿಗೆ ಆಶ್ರಯ ತಾಣಗಳಾಗಿವೆ. ಆಹಾರ, ನೀರು ಸಿಗದ ಸಂದರ್ಭ ಎದುರಾದಾಗ ನಗರ ಪ್ರವೇಶಿಸುತ್ತಿವೆ. ಈ …
Read More »ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ, ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚುತ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ …
Read More »ದ್ವಿತೀಯ ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದಲ್ಲಿ ಇಂದು ಪ್ರಕಟಿಸಲಾಗಿದೆ. 2024 ಮಾರ್ಚ್ 02ರಿಂದ ಮಾರ್ಚ್ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇನ್ನು ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಂಡಲಿ ಮೂರು ತಿಂಗಳ ಮುಂಚಿತವಾಗಿಯೇ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ. ಮಂಡಲಿಯಿಂದ …
Read More »ಸಿಲಿಂಡರ್ ಬೆಲೆಯಲ್ಲಿ 21 ರೂ.ಹೆಚ್ಚಳ
ನವದೆಹಲಿ : ಪಂಚ ರಾಜ್ಯಗಳ ಚುನಾವಣೆ ಮುಗಿದ ಕೂಡಲೇ ಎಲ್ಪಿಜಿ ವಾಣಿಜ್ಯ ಸಿಲಿಂಡರ್ಗಳು ದುಬಾರಿಯಾಗಿವೆ. ಡಿಸೆಂಬರ್ 1, 2023 ರಿಂದ 19 ಕೆಜಿ ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 21 ರೂ. ಹೆಚ್ಚಳ ಮಾಡಲಾಗಿದೆ. ಇಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯ ನ್ನು 21 ರೂ.ಗೆ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ, 19 ಕೆಜಿ ಎಲ್ಪಿಜಿ ಸಿಲಿಂಡರ್ 1775.50 ರೂ.ಗಳ ಬದಲು 1796.50 ರೂ.ಗೆ ಲಭ್ಯವಿದೆ. ಕೋಲ್ಕತ್ತಾದಲ್ಲಿ, ಇದು 1885.50 …
Read More »ಸುವರ್ಣ ವಿಧಾನಸೌಧದ ಅಂದ ಹೆಚ್ಚಿಸಲಿವೆ ಚನ್ನಮ್ಮ, ರಾಯಣ್ಣ, ಅಂಬೇಡ್ಕರ್ ಪ್ರತಿಮೆಗಳು!
ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಗಣನೆ ಶುರುವಾಗಿದ್ದು, ಸುವರ್ಣ ವಿಧಾನಸೌಧದ ಮುಂದೆ ತಲೆ ಎತ್ತಿರುವ ಮೂರು ಮಹನೀಯರ ಪ್ರತಿಮೆಗಳ ಸೌಂದರ್ಯೀಕರಣ ಕಾಮಗಾರಿ ಭರದಿಂದ ಸಾಗಿದೆ. ಹೌದು ವೀರರಾಣಿ ಕಿತ್ತೂರು ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಈ ಹಿಂದಿನ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ತರಾತುರಿಯಲ್ಲಿ ನಿಲ್ಲಿಸಿ ಲೋಕಾರ್ಪಣೆಗೊಳಿಸಿತ್ತು. ಪ್ರತಿಮೆಗಳ ಸುತ್ತಲೂ ಯಾವುದೇ ರೀತಿ ರಕ್ಷಣಾ ಗೋಡೆ, ಹುಲ್ಲುಹಾಸು, ಬೆಳಕಿನ ವ್ಯವಸ್ಥೆ …
Read More »ಧಾರವಾಡ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದ ಲೋಕಾಯುಕ್ತ ನ್ಯಾಯಮೂರ್ತಿ
ಧಾರವಾಡ : ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸದಲ್ಲಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು (ಗುರುವಾರ) ಧಾರವಾಡ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು. ಜಿಲ್ಲಾಸ್ಪತ್ರೆಯ ಔಷಧ ವಿತರಣಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿಗಳು ಔಷಧ ವಿತರಣಾ ವಿಭಾಗದಲ್ಲಿನ ದಾಖಲೆಗಳನ್ನು ಕೇಳಿದರು. ಯಾರಿಗೆ ಎಷ್ಟು ಔಷಧ, ಮಾತ್ರ ಕೊಟ್ಟಿದ್ದೀರಿ ಎಂಬ ಮಾಹಿತಿ ಇದೆಯಾ ಎಂದು ಲೋಕಾಯುಕ್ತರು ಕೇಳಿದಾಗ ಮ್ಯಾನುವಲ್ನಲ್ಲಿ ಮಾತ್ರ ದಾಖಲಿಸಿದ …
Read More »
Laxmi News 24×7