Breaking News

ಕಪಿಲೇಶ್ವರ ಮಂದಿರದ ಆವರಣದ ಹೊಂಡದಲ್ಲಿ ಜೋಡಿ ಶವಗಳು ಪತ್ತೆ

ಬೆಳಗಾವಿ: ಇಲ್ಲಿನ ಕಪಿಲೇಶ್ವರ ಮಂದಿರದ ಆವರಣದ ಹೊಂಡದಲ್ಲಿ ಬೆಳ್ಳಂ ಬೆಳಗ್ಗೆ ಅಪರಿಚಿತ ಜೋಡಿ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಘಟನೆಯಿಂದ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಒಂದು ಪುರುಷ ಶವವಾಗಿದ್ದು, ಮತ್ತೊಂದು ಮಹಿಳೆಯದ್ದಾಗಿದೆ. ಬೆಳಗ್ಗೆ ಇಲ್ಲಿ ವಾಕಿಂಗ್ ಮಾಡುತ್ತಿದ್ದ ಸ್ಥಳೀಯರು ಹೊಂಡದಲ್ಲಿ ಎರಡು ಹೆಣಗಳು ತೇಲುತ್ತಿರುವುದನ್ನು ಗಮನಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವಗಳು ಗುರುತು ಇನ್ನೂ ಪತ್ತೆಯಾಗಿಲ್ಲ. ಸಾವಿನ ಸುತ್ತ ಅನುಮಾನದ ಹುತ್ತ: ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಶವಗಳನ್ನು ಹೊಂಡದಿಂದ …

Read More »

ಮಹಾರಾಷ್ಟ್ರದ ಕೊಲ್ಲಾಪುರ ಸೇರಿ ಮೂರು ಜಿಲ್ಲೆಯಲ್ಲಿ 3.4 ತೀವ್ರತೆ ಭೂಕಂಪ

ಕೊಲ್ಲಾಪುರ (ಮಹಾರಾಷ್ಟ್ರ): ಕೊಲ್ಲಾಪುರ ಸೇರಿದಂತೆ ಸಾಂಗ್ಲಿ, ಸತಾರಾ ಜಿಲ್ಲೆಯಲ್ಲಿ ಇಂದು (ಬುಧವಾರ) ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ಸತಾರಾ ಜಿಲ್ಲೆಯ ಕೊಯ್ನಾ ಅಣೆಕಟ್ಟಿನಿಂದ ಕೇವಲ ಇಪ್ಪತ್ತು ಕಿಲೋ ಮೀಟರ್ ದೂರದಲ್ಲಿದೆ. ನಾಗರಿಕರು ಭಯಭೀತರಾಗಿದ್ದಾರೆ. ಭೂಕಂಪ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.4 ದಾಖಲಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರ ಬಿಂದು ನೆಲದಿಂದ 5 ಕಿಮೀ ಆಳದಲ್ಲಿ ಇದೆ. ಕೊಲ್ಹಾಪುರದಿಂದ 76 ಕಿಮೀ ದೂರದಲ್ಲಿರುವ ಚಂದೋಲಿ ಅಭಯಾರಣ್ಯ ಪ್ರದೇಶದಲ್ಲಿ …

Read More »

ರೈತರೊಂದಿಗೆ ಭತ್ತ ನಾಟಿ ಮಾಡಿದ ಐಎಎಸ್ ಅಧಿಕಾರಿ

ಗಂಗಾವತಿ (ಕೊಪ್ಪಳ) : ‘ರೈತರೊಂದಿಗೆ ಒಂದು ದಿನ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿರುವ ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ರಾಹುಲ್​ ರತ್ನಂ ಪಾಂಡೆ ಅವರಿಂದು ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ತಾಲೂಕಿನ ಮರಳಿ ಹೋಬಳಿಯ ಕೋಟಯ್ಯ ಕ್ಯಾಂಪಿನಲ್ಲಿ ರೈತರೊಂದಿಗೆ ಭತ್ತದ ಗದ್ದೆಗಿಳಿದು, ಸಸಿಗಳನ್ನು ನಾಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಬಿಳಿ ಪಂಚೆ, ಟಿ ಶರ್ಟ್‌ ಧರಿಸಿದ್ದರು. ಬಳಿಕ ಹೊಲದಲ್ಲೇ ಕುಳಿತು ಮಧ್ಯಾಹ್ನದ ಭೋಜನ ಸವಿದರು. ಜನರೊಂದಿಗೆ ಮಧ್ಯಾಹ್ನದ ಭೋಜನ …

Read More »

ವಿಧಾನ ಪರಿಷತ್ ಸದಸ್ಯ ಸ್ಥಾನದ ನಾಮನಿರ್ದೇಶನಕ್ಕೆ ಎಂ.ಆರ್.ಸೀತಾರಾಮ್, ಸುಧಾಂ ದಾಸ್, ಉಮಾಶ್ರೀ ಹೆಸರು ಶಿಫಾರಸು ಮಾಡಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಪರಿಷತ್ ಸ್ಥಾನದ ನಾಮನಿರ್ದೇಶನಕ್ಕೆ ಎಂ.ಆರ್. ಸೀತಾರಾಮ್, ಸುಧಾಂ ದಾಸ್ ಹಾಗೂ ಉಮಾಶ್ರೀ ಹೆಸರನ್ನು ಶಿಫಾರಸು ಮಾಡಲು ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರ ನಾಳೆ ರಾಜ್ಯಪಾಲರಿಗೆ ಈ ಮೂವರ ಹೆಸರನ್ನು ನಾಮನಿರ್ದೇಶನಕ್ಕಾಗಿ ಶಿಫಾರಸು ಮಾಡುವ ಸಾಧ್ಯತೆ ಇದೆ. ಎಐಸಿಸಿಯಿಂದ ಮೂವರ ಹೆಸರನ್ನು ಅಂತಿಮಗೊಳಿಸಿದೆ.‌ ಈ ಮುಂಚೆ ಕೇಳಲ್ಪಟ್ಟಿದ್ದ ಮನ್ಸೂರ್ ಖಾನ್ ಹೆಸರು ಕೈ ಬಿಡಲಾಗಿದೆ. ಇದೀಗ ಮೂವರ ಹೆಸರನ್ನು ನಾಮನಿರ್ದೇಶನಕ್ಕೆ ಶಿಫಾರಸು ಮಾಡಲು ನಿರ್ಧರಿಸಿರುವುದು ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆ ಗೋಚರಿಸಿದೆ.‌ …

Read More »

ಖರ್ಜೂರ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳು ಗೊತ್ತೇ?

ಖರ್ಜೂರ ರುಚಿಕರ ಒಣ ಹಣ್ಣುಗಳ ಪೈಕಿ ಒಂದು. ತಾಜಾ ಹಣ್ಣುಗಳಿಗಿಂತ ಹೆಚ್ಚಿನ ಪೋಷಕಾಂಶಗಳನ್ನು ಇದು ಒಳಗೊಂಡಿದೆ. ಪ್ರೊಟೀನ್​​, ಕಾರ್ಬೋಹೈಡ್ರೇಟ್​​, ಅಗತ್ಯ ವಿಟಮಿನ್ಸ್​, ಮಿನರಲ್ಸ್ ಹಾಗು ಫೈಬರ್​​ನಂತಹ ಅತ್ಯಗತ್ಯ ಅಂಶಗಳು ಇದರಲ್ಲಿವೆ. ಆರೋಗ್ಯಕರ ಜೀವನ ಶೈಲಿಗೆ ಬೇಕಾದ ಎಲ್ಲ ಅಂಶಗಳನ್ನೂ ಒಣ ಹಣ್ಣು ಖರ್ಜೂರ ಸೇವಿಸುವ ಮೂಲಕ ಪಡೆಯಬಹುದು. ಒಣ ಖರ್ಜೂರಗಳಲ್ಲಿ ದೇಹಕ್ಕೆ ಅಗತ್ಯವಿರುವ ಕಾರ್ಬೋಹೈಡ್ರೇಟ್​ ಅಧಿಕವಿದೆ. 100 ಗ್ರಾಂ ಖರ್ಜೂರ 75 ಗ್ರಾಂನಷ್ಟು ಕಾರ್ಬೋಹೈಡ್ರೇಟ್​ ಹೊಂದಿರುತ್ತದೆ. ಉಳಿದಂತೆ, 7 ಗ್ರಾಂ …

Read More »

ವೃದ್ಧರನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಬೆಂಗಳೂರಲ್ಲಿ ಕಿಲಾಡಿ ಮಹಿಳೆಯರ ಬಂಧನ

ಬೆಂಗಳೂರು: ವಯೋವೃದ್ಧರನ್ನು ಗುರಿಯಾಗಿಸಿ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಹಣ ಸುಲಿಗೆ ಮಾಡುತ್ತಿದ್ದ ದಂಪತಿ ಸೇರಿ ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಸರ್ಕಾರಿ ನೌಕರನಾಗಿರುವ ಸುಧೀಂದ್ರ ಎಂಬುವರು ನೀಡಿದ ದೂರಿನ ಮೇರೆಗೆ ಅಣ್ಣಮ್ಮ, ಲೋಕೇಶ್ ಹಾಗೂ ಸ್ನೇಹ ಎಂಬುವರನ್ನ ಬಂಧಿಸಲಾಗಿದೆ. ಬಂಧಿತರೆಲ್ಲರೂ ಮೂಲತಃ ಕೊಡಗಿನವರಾಗಿದ್ದು, ಬೊಮ್ಮನಹಳ್ಳಿಯಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಪ್ರಮುಖ ಆರೋಪಿ ಅಣ್ಣಮ್ಮ ತನ್ನ ಮಗುವಿಗೆ ಹುಷಾರಿಲ್ಲ, ಹಣಕಾಸಿನ ನೆರವು ನೀಡುವಂತೆ ಪರಿಚಯಸ್ಥರಾಗಿದ್ದ ಸುಧೀಂದ್ರ …

Read More »

ನ.2ರಿಂದ 15ರವರೆಗೆ ಹಾಸನಂಬಾ ಜಾತ್ರಾ ಮಹೋತ್ಸವ: ಡಿಸಿ ಸಿ.ಸತ್ಯಭಾಮ

ಹಾಸನ: ”ಹಾಸನದ ಅಧಿ ದೇವತೆ ಹಾಸನಾಂಬೆ ದೇವಿ ದರ್ಶನವು ಈ ವರ್ಷ ನವೆಂಬರ್ 2 ರಿಂದ 15ರ ವರೆಗೆ ತೆರೆಯಲಾಗುವುದು” ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾಹಿತಿ ನೀಡಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ”ಈ ಬಾರಿ ನ. 2 ರಿಂದ 15ನೇ ದಿನಾಂಕದವರೆಗೆ ಅಂದರೆ, 14 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಬಾಗಿಲು ತೆರೆಯಲಾಗುವುದು. ಅದರಲ್ಲಿ ಮೊದಲ ದಿವಸ ಮತ್ತು ಕೊನೆಯ ದಿನ ಸಾರ್ವಜನಿಕರ ದರ್ಶನಕ್ಕೆ …

Read More »

ರಾಜ್ಯಾದ್ಯಂತ ವಿದ್ಯುತ್ ಲೋಡ್ ಶೆಡ್ಡಿಂಗ್​; ಸಚಿವ ಕೆ ಜೆ ಜಾರ್ಜ್ ಹೇಳಿದ್ದೇನು?

ಚಿಕ್ಕಮಗಳೂರು : ಸಾಮಾನ್ಯವಾಗಿ ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್​ಗಳನ್ನು ಕಡಿಮೆ ಸರ್ವೀಸ್ ಮಾಡುತ್ತಿದ್ದೆವು. ಆದರೇ ಈ ಬಾರಿ ಮಳೆ ಕಡಿಮೆಯಾದ ಕಾರಣ ಥರ್ಮಲ್ ಪವರ್ ಪ್ಲಾಂಟ್ ಜನರೇಟರ್ ಮಾಡೋದು ಆರಂಭವಾಗಿದೆ. ಹೀಗಾಗಿ ಥರ್ಮಲ್ ಪ್ಲಾಂಟ್ ಜಾಸ್ತಿ ಮಾಡಲು ಆದೇಶ ಮಾಡಿದ್ದು, ವಿದ್ಯುತ್ ಲೋಡ್ ಶೆಡ್ಡಿಂಗ್​ ಆಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು. ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಕುರಿತು ಇಂಧನ ಸಚಿವ ಜಾರ್ಜ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ …

Read More »

ಆಕಸ್ಮಿಕವಾಗಿ ಸ್ವಚ್ಛತಾ ಕಾರ್ಮಿಕನಿಗೆ ಕಾರು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ನಟಿ‌ ರಚಿತಾ ರಾಮ್ ಕ್ಷಮೆ ಯಾಚಿಸಿದ್ದಾರೆ

ಬೆಂಗಳೂರು: ಕಾರು ಚಾಲಕನಿಂದಾದ ಆಕಸ್ಮಿಕ ತಪ್ಪಿನಿಂದ ನಿನ್ನೆ (ಸೋಮವಾರ) ಸ್ಯಾಂಡಲ್​ವುಡ್​ ನಟಿ​ ರಚಿತಾ ರಾಮ್ ಅವರು ಮುಜುಗರಕ್ಕೆ ಒಳಗಾಗಿದ್ದರು. ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಹೋಗುವ ಸಂದರ್ಭದಲ್ಲಿ ರಚಿತಾ ರಾಮ್‌ ಅವರಿದ್ದ ಕಾರು ಸ್ವಚ್ಛತಾ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದಿತ್ತು. ಈ ಸಂದರ್ಭದಲ್ಲಿ ನಟಿ ಕಾರ್ಮಿಕನ ಬಳಿ ಕ್ಷಮೆಯಾಚಿಸದೇ ಸ್ಥಳದಿಂದ ಹೊರಟು ಹೋಗಿದ್ದರು ಎಂದು ಆರೋಪಿಸಲಾಗಿತ್ತು. ಸಾಮಾಜಿಕ ಜಾಲತಾಣ ಸೇರಿದಂತೆ ಕಾರ್ಮಿಕರ ಒಕ್ಕೂಟಗಳಿಂದಲೂ ವಿರೋಧ ವ್ಯಕ್ತವಾಗಿತ್ತು.   ಈ‌ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ …

Read More »

ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ; ₹4 ಕೋಟಿಗೂ ಹೆಚ್ಚು ಹಣ ಸಂಗ್ರಹ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾದ ಲಾಲ್‌ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿ ತೆರೆಬಿದ್ದಿದ್ದು, ಕೊನೆಯ ದಿನವಾದ ಇಂದು (ಮಂಗಳವಾರ) ಪ್ರದರ್ಶನ ವೀಕ್ಷಿಸಲು ಸಸ್ಯಕಾಶಿಗೆ ಜನಸಾಗರವೇ ಹರಿದುಬಂದಿತ್ತು. ಆಗಸ್ಟ್ 4ರಿಂದ 15ರವರೆಗೆ ಒಟ್ಟಾರೆ 5 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದು, 4 ಕೋಟಿ ರೂ.ಗೂ ಅಧಿಕ ಹಣ ಸಂಗ್ರಹವಾಗುವ ಮೂಲಕ ದಾಖಲೆ ನಿರ್ಮಾಣವಾಗಿದೆ. ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಸ್ವಾತಂತ್ರ್ಯೋತ್ಸವದ ದಿನವಾದ ಇಂದು ಜನಜಂಗುಳಿ ನೆರೆದಿತ್ತು. ಫ್ಲವರ್ ಶೋಗೆ 2.45 ಲಕ್ಷಕ್ಕೂ ಹೆಚ್ಚು …

Read More »