Breaking News

ತಾಯಿಯೊಬ್ಬಳು ತನ್ನ ಮಗನನ್ನೇ ಕೊಂದ ಘಟನೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿತ್ತು. ಇದೀಗ ಅಪರಾಧಿಗೆ ಚಿಕ್ಕೋಡಿ ಕೋರ್ಟ್‌ ದಂಡಸಹಿತ ಜೈಲುಶಿಕ್ಷೆ ವಿಧಿಸಿದೆ.

ಚಿಕ್ಕೋಡಿ (ಬೆಳಗಾವಿ) : ತನ್ನ ಅನೈತಿಕ ಸಂಬಂಧ ಗೊತ್ತಾಯಿತು ಎಂದು ಮಗನನ್ನು ಬಾವಿಗೆ ತಳ್ಳಿ ಕೊಲೆಗೈದ ಮಹಿಳೆಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 7 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಸುಧಾ ಸುರೇಶ ಕರಿಗಾರ (31) ಶಿಕ್ಷೆಗೊಳಗಾದವರು. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (22/10/2019ರಲ್ಲಿ) ನಡೆದ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ …

Read More »

ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ.: ಸತೀಶ ಜಾರಕಿಹೊಳಿ

ಬೆಳಗಾವಿ: “ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ. ಅದಕ್ಕಿಂತಲೂ ಮೊದಲು 8 ಲಕ್ಷ ಮತದಾರರನ್ನು ಹೊಂದಿರುವ ಬೆಳಗಾವಿ ತಾಲೂಕು ರಚನೆಯಾಗಬೇಕಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಶೀಘ್ರವೇ ಹೊಸ ಬೆಳಗಾವಿ ತಾಲೂಕು ರಚನೆ ಆಗಬೇಕು ಎಂಬುದು ನಮ್ಮ ಬೇಡಿಕೆ. ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಯಾವುದಾದರೂ ಒಂದು …

Read More »

ಲಕ್ಷ್ಮಣ್ ಸವದಿ ಹಾಸ್ಯಾಸ್ಪದವಾಗಿ ಮಾತನಾಡಿದ್ದಾರೆ. ಅವರ ಹತ್ತಿರ ಯಾವುದೇ ಪೆನ್‌ಡ್ರೈವ್ ಇಲ್ಲ.

ಚಿಕ್ಕೋಡಿ: ”ಬಿಜೆಪಿಯಿಂದ ನಾವು ಯಾರೂ ಆಪರೇಷನ್ ಕಮಲ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಒಳಗೊಳಗೇ ಭಿನ್ನಮತ ಸ್ಪೋಟಗೊಂಡು ಸರ್ಕಾರವನ್ನು ಉರಳಿಸಿದರೂ ಉರುಳಿಸಬಹುದು” ಎಂದು ಸಂಸದ ಅಣ್ಣಾಸಾಬ್ ಜೊಲ್ಲೆ ಭವಿಷ್ಯ ನುಡಿದರು. ನಗರದಲ್ಲಿಂದು 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ”ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು ಯಾರ ಮಾತನ್ನೂ ಕೇಳುತ್ತಿಲ್ಲ. ಕ್ಷೇತ್ರಗಳಿಗೆ ಅನುದಾನ ಕೊರತೆಯಿಂದ ಶಾಸಕರು-ಸಚಿವರ ನಡುವೆ ವೈಮನಸ್ಸು ಉಂಟಾಗಿದ್ದು, ಸರ್ಕಾರ ಬಿದ್ರೂ ಬೀಳಬಹುದು” ಎಂದರು. …

Read More »

ಮಹಾನ್ ಪುರುಷರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಂತ ಶ್ರೇಷ್ಠ ಕನಕದಾಸ ಮತ್ತು ಶೂರ ಸಂಗೊಳ್ಳಿ ರಾಯಣ್ಣನಂತಹ ಅಪ್ರತಿಮ ಸಾಧಕರನ್ನು ಪಡೆದಿರುವುದು ಹಾಲುಮತ ಸಮಾಜದ ಸೌಭಾಗ್ಯವಾಗಿದೆ. ಆದರೂ ಇಂತಹ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೇ ಎಲ್ಲ ಸಮಾಜಗಳು ಇವರ ತತ್ವಾದರ್ಶಗಳನ್ನು ಪಾಲನೆ ಮಾಡಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಮಂಗಳವಾರದಂದು ಜರುಗಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಹಾಗೂ ವಿಶ್ವಜ್ಯೋತಿ ಕನಕದಾಸರ ನೂರೆಂಟು ನಾಮಾವಳಿಯ …

Read More »

ಆಕ್ಷೇಪಾರ್ಹ ಪದ ಬಳಕೆ ಆರೋಪ; ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್ ವಿರುದ್ಧ ದೂರು

ಬೆಂಗಳೂರು : ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ರಾಜ್ಯ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.   ದಿವಾಕರ್ ಎಂಬವರು ನೀಡಿದ ದೂರಿನ ಮೇರೆಗೆ ಸಚಿವರ ವಿರುದ್ಧ ಗಂಭೀರವಲ್ಲದ ಅಪರಾಧ ಪ್ರಕರಣ (ಎನ್‌ಸಿಆರ್) ದಾಖಲಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡುವಾಗ ಸಚಿವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸರಿಗೆ ನೀಡಲಾಗಿದೆ. ಸಚಿವರು ಮಾತನಾಡಿರುವ ಸ್ಥಳ …

Read More »

ವಿಮಲ್ ಫೌಂಡೇಶನ್ ದತ್ತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಿರುಪುಸ್ತಕ ಹಾಗೂ ತ್ರಿವರ್ಣ ಧ್ವಜಗಳನ್ನು ವಿತರಿಸಲಾಯಿತು.

ಬೆಳಗಾವಿಯ ಬಬನ್ ಬೋಬೆ ಮಿತ್ರ ಮಂಡಳದ ವತಿಯಿಂದ ವಿಮಲ್ ಫೌಂಡೇಶನ್ ದತ್ತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಿರುಪುಸ್ತಕ ಹಾಗೂ ತ್ರಿವರ್ಣ ಧ್ವಜಗಳನ್ನು ವಿತರಿಸಲಾಯಿತು. ವಿಮಲ್ ಫೌಂಡೇಶನ್ ಅಧ್ಯಕ್ಷ, ಸಕಲ ಮರಾಠಾ ಸಮಾಜದ ಮುಖಂಡ ಹಾಗೂ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಿರಣ ಜಾಧವ ಅವರು ವಿದ್ಯಾರ್ಥಿಗಳಿಗೆ ಕಿರುಪುಸ್ತಕ ಮತ್ತು ತ್ರಿವರ್ಣ ಧ್ವಜಗಳನ್ನು ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾವಂತರಾಗಿ, ಸಂಸ್ಕಾರವಂತರಾಗಿ ಭಾರತದ …

Read More »

ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನು ಬಾವಿಯಲ್ಲಿ ದೂಡಿ ಕೊಲೆ,ಜೀವಾವಧಿ ಶಿಕ್ಷೆ ಮತ್ತು ೭ ಸಾವಿರ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು

ಚಿಕ್ಕೋಡಿ: ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನು ಬಾವಿಯಲ್ಲಿ ದೂಡಿ ಕೊಲೆ ಮಾಡಿದ ಆರೋಪದ ಹಿನ್ನಲ್ಲೆಯಲ್ಲಿ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಶ್ರೀಮತಿ ಸುಧಾ ಸುರೇಶ ಕರಿಗಾರ(೩೧) ಇತಳಿಗೆ ಜೀವಾವಧಿ ಶಿಕ್ಷೆ ಮತ್ತು ೭ ಸಾವಿರ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ೨೨-೧೦-೨೦೧೯ರಲ್ಲಿ ನಡೆದ ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕೋಡಿ ಏಳನೆ ಹೆಚ್ಚುವರಿ …

Read More »

ದೆಹಲಿಯ ಕೆಂಪುಕೋಟೆಯಲ್ಲಿ 77ನೇ ಸ್ವಾತಂತ್ರೋತ್ಸವ ಸಂಭ್ರಮ, ಅಮರಜ್ಯೋತಿಗೆ ಪ್ರಧಾನಿ ಮೋದಿ ನಮನ

ಅಮರಜ್ಯೋತಿ, ಮಹಾತ್ಮ ಗಾಂಧಿ ಸಮಾಧಿಗೆ ಪ್ರಧಾನಿ ನರೇಂದ್ರ ಮೋದಿ ನಮನ ದೆಹಲಿಯಲ್ಲಿ 77ನೇ ಸ್ವಾತಂತ್ರೋತ್ಸವದ ಸಂಭ್ರಮ. 20 ಸಾವಿರ ಗಣ್ಯರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣಕ್ಕೆ ಸಜ್ಜು. ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

Read More »

ಆಗಸ್ಟ್​ 15ರಂದು ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಹಾವೇರಿಯ ಪುಷ್ಪಾವತಿ ಸೋಮಪ್ಪ ಹೊನ್ನತ್ತಿ ಭಾಗವಹಿಸಲಿದ್ದಾರೆ.

ಹಾವೇರಿ : ಆಗಸ್ಟ್​​ 15ರಂದು ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಪುಷ್ಪಾವತಿ ಸೋಮಪ್ಪ ಹೊನ್ನತ್ತಿ ಅವರು ಆಯ್ಕೆಯಾಗಿದ್ದಾರೆ. ಪುಷ್ಪಾವತಿ ಅವರು ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮ ಪಂಚಾಯತ್​ನಲ್ಲಿ ಮಹಿಳಾ ನೀರಗಂಟಿ (ವಾಟರ್​ ವುಮನ್​) ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ಪುಷ್ಪಾವತಿ ಅವರಿಗೆ ಅವಕಾಶ ಲಭಿಸಿದ್ದು, ಈ ಸಂಬಂಧ ಹರ್ಷ ವ್ಯಕ್ತಪಡಿಸಿದ್ದಾರೆ. ಜಲಜೀವನ್ ಮಿಷನ್ ಯೋಜನೆಯಡಿ ಹರ್ ಘರ್ …

Read More »

ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ ಕಾಂಗ್ರೆಸ್ ಸರ್ಕಾರ ಪತನ ಖಚಿತ: ಯತ್ನಾಳ್

ವಿಜಯಪುರ: ರಾಜ್ಯದಲ್ಲಿ ಆಡಳಿತ ಹಿಡಿದ ಕಾಂಗ್ರೆಸ್​ ಪಕ್ಷ ಮೂರು ತಿಂಗಳಿನ ಹಿಂದಿದ್ದ ಹಾಗೆ ಇಲ್ಲ. ಇನ್ನು ಆರು ತಿಂಗಳಲ್ಲಿ ಪಕ್ಷದ ಹಣೆಬರಹ ಏನಾಗಲಿದೆ ಎಂಬುದನ್ನು ನೀವೇ ನೋಡಿ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದರು. ನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್​​ ಅಧಿಕಾರಕ್ಕೆ ಬಂದಮೇಲೆ ಭ್ರಷ್ಟಾಚಾರ ವ್ಯಾಪಕವಾಗಿದೆ. ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಓರ್ವ ಗುತ್ತಿಗೆದಾರ ಡಿಸಿಎಂ ಡಿಕೆಶಿ ಅವರಿಗೆ ಸವಾಲು ಹಾಕಿದ್ದಾರೆ. ನೀವು ಎಲ್ಲ ಗುತ್ತಿಗೆದಾರರಲ್ಲಿ ಶೇ 15 …

Read More »