ಎರ್ನಾಕುಲಂ (ಕೇರಳ): ಮೆದುಳು ನಿಷ್ಕ್ರಿಯಗೊಂಡು ಸಾವಿಗೀಡಾದ ತಮಿಳುನಾಡಿನ ಶುಶ್ರೂಷಕರೊಬ್ಬರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರ ಬಾಳಿಗೆ ಹೊಸ ಬೆಳಕು ನೀಡಲಿದ್ದಾರೆ. ಇದರಲ್ಲಿ ಕೊಚ್ಚಿಯ ವ್ಯಕ್ತಿಯೊಬ್ಬರಿಗೆ ಹೃದಯ ಕಸಿ ಮಾಡಲಾಗಿದೆ. ಇನ್ನೂ ಐವರಿಗೆ ವಿವಿಧ ಅಂಗಗಳನ್ನು ವೈದ್ಯರು ಜೋಡಿಸಲಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಶುಶ್ರೂಷಕ ಆಗಿದ್ದ ಸೆಲ್ವಿನ್ ಶೇಖರ್ (36) ಮೆದುಳು ನಿಷ್ಕ್ರಿಯದಿಂದ ಸಾವಿಗೀಡಾದವರು. ಪತ್ನಿಯೂ ನರ್ಸ್ ಆಗಿದ್ದು, ಪತಿಯ ಅಂಗಾಂಗ ದಾನ ಮಾಡಲು …
Read More »ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ರೈತರಿಂದ ಮನವಿ: ಕಳಸಾ ಬಂಡೂರಿ, ಮಹದಾಯಿ ಯೋಜನೆ ಜಾರಿ ಮಾಡಿ
ಹುಬ್ಬಳ್ಳಿ: ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಯ ಕಾಮಗಾರಿಯನ್ನು ಕೂಡಲೇ ಪ್ರಾರಂಭ ಮಾಡಬೇಕು. ಅಲ್ಲದೇ ರೈತರ ಸಮಸ್ಯೆಗೆ ಸರ್ಕಾರ ಕೂಡಲೇ ಸ್ಪಂದಿಸುವಂತೆ ಆಗ್ರಹಿಸಿ ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟಗಾರರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, “ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಭೂಪೇಂದ್ರ ಯಾದವ ಅವರ ಜೊತೆ ಮಾತನಾಡಿದ್ದೇನೆ. ಅರಣ್ಯ ಇಲಾಖೆ ಕ್ಲಿಯರನ್ಸ್ ಸೇರಿದಂತೆ ಮೂರು ವಿಷಯ ಇರುವುದರಿಂದ ಕೂಲಂಕಷವಾಗಿ …
Read More »ಕುಟುಂಬ ಪಿಂಚಣಿ ಪಡೆಯಲು ಎರಡನೇ ಪತ್ನಿ ಅರ್ಹರಲ್ಲ: ಹೈಕೋರ್ಟ್
ಬೆಂಗಳೂರು: ಕುಟುಂಬ ಪಿಂಚಣಿಯಂತ ಸೌಲಭ್ಯಗಳನ್ನು ನೀಡುವ ಸಂದರ್ಭದಲ್ಲಿ ಎರಡನೇ ಪತ್ನಿಯ ಸಂಬಂಧವನ್ನು ಗುರುತಿಸುವುದು ಸಾರ್ವಜನಿಕ ಹಿತಾಸಕ್ತಿಗೆ ಹಾನಿಕಾರಕ. ಈ ಪ್ರಕ್ರಿಯೆ ಸರ್ಕಾರಿ ಉದ್ಯೋಗಿಗಳಿಗೆ ಎರಡನೇ ಮದುವೆಗೆ ಒಪ್ಪಿಗೆ ನೀಡಿದಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್, ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಪಡೆಯುವ ಅಧಿಕಾರ ಹೊಂದಿದೆ ಎಂದು ತಿಳಿಸಿದೆ. ಪತಿಯ ಕುಟುಂಬ ಪಿಂಚಣಿ ನೀಡಲು ನಿರಾಕರಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎರಡನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು …
Read More »ರಾಜಸ್ಥಾನದಲ್ಲಿ ಝಣ ಝಣ ಕಾಂಚಾಣ: 690 ಕೋಟಿ ರೂಪಾಯಿ ನಗದು, ಮದ್ಯ, ಡ್ರಗ್ಸ್ ವಶ
ನವದೆಹಲಿ: ತೀವ್ರ ಬಿರುಸಿನಿಂದ ಕೂಡಿದ ರಾಜಸ್ಥಾನ ವಿಧಾನಸಭೆ ಚುನಾವಣೆ ಮುಗಿದಿದ್ದು, ರಾಜ್ಯಾದ್ಯಂತ ಶೇಕಡಾ 68 ರಷ್ಟು ಮತದಾನವಾಗಿದೆ. ಬಿಜೆಪಿ- ಕಾಂಗ್ರೆಸ್ ನಡುವಿನ ನೇರ ಹಣಾಹಣಿಯಲ್ಲಿ ಕುರುಡು ಕಾಂಚಾಣ ಸದ್ದು ಮಾಡಿದೆ. ಮತದಾನದ ಕೊನೆಯ ದಿನ ಸೇರಿದಂತೆ ರಾಜ್ಯದಲ್ಲಿ 690 ಕೋಟಿ ರೂಪಾಯಿ ನಗದು, ಮದ್ಯ, ಡ್ರಗ್ಸ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ಮತದಾನ ಮುಗಿದ ನಂತರ ಚುನಾವಣಾ ಆಯೋಗವು ಹಂಚಿಕೊಂಡ ಅಂಕಿ – ಅಂಶಗಳ ಪ್ರಕಾರ, ವಿವಿಧ ಜಾರಿ ಸಂಸ್ಥೆಗಳಿಂದ …
Read More »ಹಾವೇರಿಯಲ್ಲಿ ಸಕ್ಕರೆ ಗೊಂಬೆ ತಯಾರಿ
ಹಾವೇರಿ: ಗೌರಿ ಹುಣ್ಣಿಮೆ ಬಂದರೆ ಸಾಕು ಉತ್ತರ ಕರ್ನಾಟಕದಲ್ಲಿ ಸಂಭ್ರಮ ಮನೆಮಾಡುತ್ತದೆ. ಅದರಲ್ಲೂ ಹೆಂಗಳೆಯರಂತೂ ಈ ಹಬ್ಬದ ಆಚರಣೆಗೆ ತುದಿಗಾಲಲ್ಲಿ ನಿಂತಿರುತ್ತಾರೆ. ಗೌರಿ ಹುಣ್ಣಿಮೆಯೆಂದರೆ ಸಕ್ಕರೆ ಗೊಂಬೆಗಳು ಇರಲೇಬೇಕು. ಹಿಂದೂಗಳು ಆಚರಿಸುವ ಈ ಹಬ್ಬಕ್ಕೆ ಹಾವೇರಿಯ ಹಲವು ಮುಸ್ಲಿಂ ಕುಟುಂಬಗಳೂ ಕೂಡಾ ಸಕ್ಕರೆ ಗೊಂಬೆಗಳನ್ನು ತಯಾರಿಸುತ್ತವೆ. ಕಳೆದ ಮೂವತ್ತು ವರ್ಷಗಳಿಂದ ಇಲ್ಲಿನ ಹಲವು ಕುಟುಂಬಗಳು ಸಕ್ಕರೆ ಗೊಂಬೆಗಳನ್ನು ತಯಾರಿಸುತ್ತಿದ್ದಾರೆ. ಇಂತಹ ಕುಟುಂಬಗಳಲ್ಲಿ ಬಾಬಣ್ಣ ವೀರಾಪುರ ಕುಟುಂಬವೂ ಒಂದು. ಇವರು ಗೌರಿ ಹುಣ್ಣಿಮೆ …
Read More »ಡಾ.ರಾಜ್ ಕಪ್ ಕ್ರಿಕೆಟ್ ಸೀಸನ್ 6ಕ್ಕೆ ಮುಹೂರ್ತ ಫಿಕ್ಸ್
ಬೆಂಗಳೂರು: ಡಾ.ರಾಜ್ ಕಪ್ ಕ್ರಿಕೆಟ್ ಸೀಸನ್ 6ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಚಂದನವನದ ತಾರೆಯರು ತಯಾರಿ ಆರಂಭಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಸ್ಮಾರಣಾರ್ಥವಾಗಿ ಟೂರ್ನಿ ಆಯೋಜಿಸಲಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜರ್ಸಿ ಬಿಡುಗಡೆಗೊಳಿಸಿದರು. ಡಾ.ರಾಜ್ ಕಪ್ ಸೀಸನ್ 6ಆಯೋಜಕರಾದ ರಾಜೇಶ್ ಬ್ರಹ್ಮಾವರ ಮಾತನಾಡಿ, “ರಾಜ್ ಕಪ್ ಆರನೇ ಸೀಸನ್ ಅನ್ನು ವಿದೇಶದಲ್ಲಿ ಮಾಡುತ್ತಿರುವುದು ಕಷ್ಟವಾಗುತ್ತಿಲ್ಲ. ನನಗೆ ಚಿನ್ನದಂತಹ ನಾಯಕರು, ಮಾಲಕರು ಹಾಗೂ …
Read More »ಕಸ್ತೂರಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ. ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು- ಶಾಸಕ ಬಾಲಚಂದ್ರ ಜಾರಕಿಹೊಳಿ
ಕನ್ನಡದ ವೈಭವ, ಸಂಭ್ರಮಕ್ಕೆ ಸಾಕ್ಷಿಯಾದ ಮೂಡಲಗಿಯ ಸುವರ್ಣ ಕನ್ನಡ ರಾಜ್ಯೋತ್ಸವ ಕಸ್ತೂರಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ. ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿಂದು ಅದ್ದೂರಿಯಾಗಿ ನಡೆದ ಸುವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಮೂಡಲಗಿ: ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗಾಗಿ ಎಲ್ಲ ಕನ್ನಡ ಪರ ಸಂಘಟನೆಗಳು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಬೇಕು, ಈ ಮೂಲಕ ನಮ್ಮ ಕಸ್ತೂರಿ ಕನ್ನಡ ಭಾಷೆಯನ್ನು …
Read More »ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.4ರಿಂದ ನಡೆಯುವ ಚಳಿಗಾಲದ ಅಧಿವೇಶನಕ್ಕಾಗಿ ಭರದ ಸಿದ್ಧತೆ
ಬೆಳಗಾವಿ: ಡಿ.4 ರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಸೌಧದ ಸ್ವಚ್ಛತೆ ಸೇರಿ ಇನ್ನಿತರ ಕಾರ್ಯಗಳಲ್ಲಿ ಸಿಬ್ಬಂದಿ ಮಗ್ನರಾಗಿದ್ದಾರೆ. ಹೌದು, ಹತ್ತು ದಿನಗಳ ಚಳಿಗಾಲ ಅಧಿವೇಶನಕ್ಕೆ ಸುವರ್ಣ ವಿಧಾನಸೌಧ ಸರ್ವ ರೀತಿಯಲ್ಲೂ ಸನ್ನದ್ಧವಾಗುತ್ತಿದೆ. ಬೆಳಗಾವಿಯ ಸುವರ್ಣ ವಿಧಾನಸೌಧಅಧಿವೇಶನದ ಹಿನ್ನೆಲೆ ಸುವರ್ಣ ಸೌಧ ಮದುವಣಗಿತ್ತಿಯಂತೆ ಶೃಂಗಾರಗೊಳ್ಳುತ್ತಿದೆ. ಸೌಧದ ಪ್ರವೇಶ ದ್ವಾರಗಳ ಕಂಬಗಳು ಮತ್ತು ಒಳ ಛಾವಣಿಗೆ ಬಣ್ಣವನ್ನೂ ಬಳಿಯಲಾಗುತ್ತಿದೆ. ಇನ್ನು ವಿಧಾನಸಭೆ ಮತ್ತು ವಿಧಾನ …
Read More »ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ಧಾರವಾಡ, ನ.25: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ (Electric shock) ತಗುಲಿ ಬಾಲಕ ಮೃತಪಟ್ಟ (Death) ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟಿದ್ದಾನೆ. ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ (Cricket) ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕ್ಯಾಚ್ ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ ತಗುಲಿ ಶ್ರೇಯಸ್ ಅಸ್ವಸ್ಥಗೊಂಡಿದ್ದ. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ …
Read More »ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ, : ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಟೀಕಿಸಿದ ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ರಾಹುಲ್ ಗಾಂಧಿಯ ಇಂತಹ ಹೇಳಿಕೆಗಳ ಕಾರಣದಿಂದಲೇ ಕಾಂಗ್ರೆಸ್ ಪಕ್ಷವು ಕಳೆದ ಎರಡೂ ಲೋಕಸಭಾ ಚುನಾವಣೆಗಳಲ್ಲೂ ಅಧಿಕೃತ ವಿರೋಧ ಪಕ್ಷದ ಮಾನ್ಯತೆಯನ್ನೂ ಪಡೆಯಲಾಗದಷ್ಟು ಹೀನಾಯವಾಗಿ ಸೋತಿದೆ ಎಂದರು. ನರೇಂದ್ರ ಮೋದಿಯವರನ್ನು ಭಾರತ ದೇಶವಷ್ಟೇ ಅಲ್ಲ, …
Read More »
Laxmi News 24×7