Breaking News

ಲೋಕಸಭೆ ಅಧಿವೇಶನದ ನಂತರ ರಾಜ್ಯಾಧ್ಯಕ್ಷ ಪ್ರತಿಪಕ್ಷ ನಾಯಕರ ಆಯ್ಕೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ಆಗಸ್ಟ್ 15 ರ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಮತ್ತು ಉಭಯ ಸದನಗಳ ಪ್ರತಿಪಕ್ಷಗಳ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸುವುದಾಗಿ ಹೈಕಮಾಂಡ್ ನಾಯಕರು ಭರವಸೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.   ಮೂರು ದಿನಗಳ ನವದೆಹಲಿ ಪ್ರವಾಸ ಮುಗಿಸಿ ವಾಪಸಾದ ನಂತರ ಆರ್.ಟಿ ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸಂಸದರು ಅಧಿವೇಶನ ನಡೆಯುವಾಗ ಬರುವಂತೆ ಮನವಿ ಮಾಡಿದ್ದರು. ಅದಕ್ಕಾಗಿ ದೆಹಲಿಗೆ …

Read More »

ಕೌಟುಂಬಿಕ ಕಲಹ.. ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ರಾಯಚೂರು : ಕೌಟುಂಬಿಕ ಕಲಹದಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಮ್ಯಾಗಳಪೇಟೆಯಲ್ಲಿ ನಡೆದಿದೆ. ಮೃತರನ್ನು ಚೌಡಮ್ಮ(26), 4 ಹಾಗೂ 2 ವರ್ಷದ ಕಂದಮ್ಮಗಳು ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಮುದಗಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತಿ ಹುಲಿಗೆಪ್ಪ ಹಾಗೂ ಪತ್ನಿ ಚೌಡಮ್ಮ ಇಬ್ಬರ ಮಧ್ಯೆ ಮನೆಯಲ್ಲಿ ಜಗಳ ನಡೆದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

Read More »

ಬೆಂಗಳೂರಲ್ಲಿ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪುತ್ರ ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಯ್ಯ ಎಂಬುವವರ ಪುತ್ರ ಗೌತಮ (29) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಗೌತಮ್ ಮನೆಯಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.‌ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಚಂದ್ರಾಲೇಔಟ್ ಪೊಲೀಸರು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗೌತಮ್​​ಗೆ‌ ಮದುವೆ ಮಾಡಲು ಇತ್ತೀಚೆಗೆ ಪೋಷಕರು ಕನ್ಯೆ ಹುಡುಕುತ್ತಿದ್ದರು. ಇವರ ತಂದೆ ದೊಡ್ಡಯ್ಯ ಕಾಂಗ್ರೆಸ್​​ನಲ್ಲಿ ಗುರುತಿಸಿಕೊಂಡಿದ್ದು, ಅತ್ತಿಗುಪ್ಪೆ ವಾರ್ಡ್​​ನ ಮಾಜಿ ಕಾರ್ಪೋರೇಟರ್ ಆಗಿದ್ದಾರೆ. ಗೌತಮ್ ತಂದೆ ದೊಡ್ಡಣ್ಣ …

Read More »

ವೃತ್ತಿಪರ ಕೋರ್ಸ್​ ಪ್ರವೇಶಕ್ಕೆ 62 ಲಕ್ಷ ಆಪ್ಷನ್ ಎಂಟ್ರಿ: ಪರಿಷ್ಕರಣೆಗೆ ನಾಳೆಯಿಂದ ಅವಕಾಶ

ಬೆಂಗಳೂರು : ನಾನಾ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ರಾಜ್ಯದಲ್ಲಿ ಈಗಾಗಲೇ ಕರ್ನಾಟಕ ಸಾಮಾನ್ಯ ಪರೀಕ್ಷೆ (ಸಿಇಟಿ) ಬರೆದಿರುವ ವಿದ್ಯಾರ್ಥಿಗಳಿಗೆ ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಭರ್ತಿ ಮಾಡಿಕೊಳ್ಳಲು ನೀಡಿದ್ದ ಅವಕಾಶ ಮುಕ್ತಾಯವಾಗಿದೆ. ಈವರೆಗೆ 62 ಲಕ್ಷ ಸಂಯೋಜಿತವಾಗಿ ಐಚ್ಛಿಕಗಳನ್ನು ದಾಖಲಿಸಲಾಗಿದೆ. ಆಗಸ್ಟ್ 5ರ ಸಂಜೆಯಿಂದ ಆಗಸ್ಟ್ 8ರವರೆಗೆ ನೀಡಲಾಗಿದ್ದ ಸಂಯೋಜಿತ ಐಚ್ಛಿಕ ದಾಖಲೆ (ಕಂಬೈನ್ಡ್ ಆಪ್ಷನ್ ಎಂಟ್ರಿ) ಮೂಲಕ 1.2 ಲಕ್ಷ ಆಕಾಂಕ್ಷಿಗಳಿಂದ 62 ಲಕ್ಷ ಎಂಟ್ರಿ ದಾಖಲಿಸಿದೆ. ಇದರಲ್ಲಿ …

Read More »

ಕ ಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ನೇಮಕ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ಅವರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿನಿಯಮ 2013ರ ನಿಯಮಿತ ಅನ್ವಯ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 11 ಸದಸ್ಯರನ್ನೊಳಗೊಂಡಂತೆ ಮಂಡಳಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ತೀವ್ರ ಅಸಮಾಧಾನಗೊಂಡಿದ್ದರು. ಈ ಸಂಬಂಧ ಕೆಲ ದಿನಗಳಿಂದ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದರು. …

Read More »

ರಾಜ್ಯಾದ್ಯಂತ ಆಗಸ್ಟ್ 27ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹ ಲಕ್ಷ್ಮೀ ಯೋಜನೆಗೆ ಆಗಸ್ಟ್​ 27ರಂದು ಚಾಲನೆ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …

Read More »

ನಿರ್ಮಾಪಕರ ವಿರುದ್ಧ ಮಾನಹಾನಿ ಆರೋಪ ಕೇಸ್; ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ ನಟ ಸುದೀಪ್

ಬೆಂಗಳೂರು : ಚಿತ್ರ ನಿರ್ಮಾಪಕ ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರ ವಿರುದ್ಧ ಮಾನಹಾನಿ ದಾವೆ ದಾಖಲಿಸಬೇಕು ಹಾಗೂ 10 ಸಾವಿರ ರೂಪಾಯಿ ದಂಡ ಪಾವತಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರಿನ ಸಂಬಂಧ ನಟ ಸುದೀಪ್ ಅವರ ಪ್ರಮಾಣೀಕೃತ ಹೇಳಿಕೆಯನ್ನು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯ ಇಂದು ದಾಖಲಿಸಿಕೊಂಡಿದೆ.   ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರು ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ಮತ್ತು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸುದೀಪ್ …

Read More »

ಮಗಳನ್ನು ಮದುವೆ ಮಾಡಿಕೊಡದ್ದಕ್ಕೆ 850 ಅಡಿಕೆ ಗಿಡ ಕಡಿದು ಹಾಕಿದ ಯುವಕ’- ಪೊಲೀಸರಿಗೆ ದೂರು ನೀಡಿದ ವ್ಯಕ್ತಿ

ಮೈಸೂರು: ಮಗಳನ್ನು ಮದುವೆ ಮಾಡಿಕೊಡಲು ಒಪ್ಪದ ತಂದೆಯ ನಿರ್ಧಾರದಿಂದ ಕೋಪಗೊಂಡ ಯುವಕನೊಬ್ಬ, ಯುವತಿಯ ತಂದೆಗೆ ಸೇರಿದ ಫಸಲಿಗೆ ಬಂದಿದ್ದ 850ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಮನಬಂದಂತೆ ಕತ್ತರಿಸಿ ಹಾಕಿರುವ ಆರೋಪ ಪ್ರಕರಣ ಹುಣಸೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಈ ಸಂಬಂಧ ಯುವತಿಯ ತಂದೆ ಆರೋಪಿಯ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಹುಣಸೂರು ತಾಲೂಕಿನ ಕಡೆಮನುಗನಹಳ್ಳಿ ಎಂಬ ಗ್ರಾಮದಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ. ಕಡೆಮನುಗನಹಳ್ಳಿ …

Read More »

ವಿಶೇಷ ಬಸ್​ಗಳ ವ್ಯವಸ್ಥೆ: ಬೆಳಗಾವಿಯಿಂದ ಒಂದು ದಿನದ ಟೂರ್ ಪ್ಯಾಕೇಜ್; ಶಕ್ತಿ ಯೋಜನೆಗಿಲ್ಲ ಅವಕಾಶ

ಹುಬ್ಬಳ್ಳಿ : ಮಳೆಗಾಲದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಆರಂಭಿಸಲಾದ ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್​ಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.   ಈ ವ್ಯವಸ್ಥೆಯನ್ನು ಬೇರೆ ಸ್ಥಳಗಳಿಗೂ ವಿಸ್ತರಿಸುವಂತೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಮತ್ತಷ್ಟು ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗುತ್ತಿದೆ. ವಿಶೇಷ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ …

Read More »

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಬಂಧಿಸಿರುವುದಾಗಿ ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಸಂತೋಷ ಬಾಬು ತಿಳಿಸಿದ್ದಾರೆ.

ಹುಬ್ಬಳ್ಳಿ : ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ಬಿಂಬಿಸುವಂತಹ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಈ ಸಂಬಂಧ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಸಂತೋಷ ಬಾಬು ಮಾಹಿತಿ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತನ ಇ-ಮೇಲ್ ಐಡಿ ಮತ್ತು ಸಾಮಾಜಿಕ ಜಾಲತಾಣಗಳ ವಿವರಗಳನ್ನು ವಿಧಿ …

Read More »