Breaking News

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ನೂಕುನುಗ್ಗಲು: ಮಹಿಳೆ ಸೇರಿ 11 ಸಾವು, ಹಲವರಿಗೆ ಗಾಯ

ಬೆಂಗಳೂರು: ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಪಾಲ್ಗೊಳ್ಳಲು ನಗರದ ಚಿನ್ನಸ್ವಾಮಿ ಸ್ಟೇಡಿಯಂನೊಳಗೆ ಹೋಗುವ ಆತುರದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ಧಾರೆ. ತಮ್ಮ ನೆಚ್ಚಿನ ಆಟಗಾರರನ್ನು ಸನಿಹದಿಂದ ಕಣ್ತುಂಬಿಕೊಳ್ಳಲು ಸ್ಟೇಡಿಯಂಗೆ ಜನಸಾಗರವೇ ಹರಿದು ಬಂದಿತ್ತು. ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾಯಿತು. ಗಾಯಗೊಂಡವರನ್ನು ಕೂಡಲೇ ಸಮೀಪದ ಬೌರಿಂಗ್​ ಮತ್ತು ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 19 ಗಾಯಾಳುಗಳ ಪೈಕಿ 7 ಜನ ಮೃತಪಟ್ಟರೆ, ವೈದೇಹಿ …

Read More »

ಗೃಹಲಕ್ಷ್ಮೀ ಏಪ್ರಿಲ್ ತಿಂಗಳ ಹಣ ಇಷ್ಟರಲ್ಲೇ ಜಮೆ

ಬೆಳಗಾವಿ: ಗೃಹ ಲಕ್ಷ್ಮಿ ಯೋಜನೆಯ 19 ಕಂತು ಈಗಾಗಲೆ ಹಾಕಲಾಗಿದೆ. ಶೀಘ್ರವೇ 20ನೇ ಕಂತನ್ನೂ ಹಾಕುತ್ತೇವೆ. ಮಾರ್ಚ್ ತಿಂಗಳದ್ದು ಸ್ವಲ್ಪ ತಾಂತ್ರಿಕ ಸಮಸ್ಯೆಯಾಗಿದೆ, ಏಪ್ರಿಲ್ ಹಣ ಇಷ್ಟರಲ್ಲೇ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಜನರ ಜೀವನದಲ್ಲಿ ಒಳ್ಳೆಯದಾಗಲಿ, ಜನರಿಗೆ ಅನುಕೂಲವಾಗಲಿ ಎನ್ನುವ ನೀತಿ, …

Read More »

ಆದಷ್ಟು ಬೇಗನೆ ಯತ್ನಾಳ್​​​​ಗೆ ಸಿಹಿ ಸುದ್ದಿ;ರಮೇಶ್​ ಜಾರಕಿಹೊಳಿ

ಚಿಕ್ಕೋಡಿ, ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಪಕ್ಷದಿಂದ ಆದಷ್ಟು ಬೇಗನೆ ಸಿಹಿ ಸುದ್ದಿ ಬರುತ್ತದೆ. ಒಂದು ಸ್ಥಾನ ಮಾನವೂ ಸಿಗುತ್ತದೆ ಎಂದು ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಚಾಟನೆ ಆಗಿರುವ ಯತ್ನಾಳ್​​​ಗೆ ಬಿಜೆಪಿ ಪಕ್ಷ ಸಂತೋಷದ ಸುದ್ದಿ ನೀಡುತ್ತದೆ. ಶಾಸಕ ಯತ್ನಾಳ ಅವರು ಕೂಡ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳಬೇಕು ಎಂದು ಮಾದ್ಯಮಗಳ ಮುಖಾಂತರ ಮನವಿ …

Read More »

ಚನ್ನಮ್ಮ ವೃತ್ತದ ಬಳಿ ಮಂಗಳವಾರ ಮಧ್ಯ ರಾತ್ರಿಯ ನಂತರ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್

ಬೆಳಗಾವಿ: ಇಲ್ಲಿಯ ಚನ್ನಮ್ಮ ವೃತ್ತದ ಬಳಿ ಮಂಗಳವಾರ ಮಧ್ಯ ರಾತ್ರಿಯ ನಂತರ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆರ್ ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆಗೆ ಸೇರಿದ್ದ ಸಹಸ್ರಾರು ಜನರು ಒಂದು ಗಂಟೆಯಾದರೂ ಸ್ಥಳದಿಂದ ಕದಲದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರದ ಮೂಲಕ ಎದುರಿಸಬೇಕಾಯಿತು. ಈ ವೇಳೆ ಹಲವರು ಕೆಳಕ್ಕೆ ಬಿದ್ದಿದ್ದು, ಕೆಲವರು ಓಡಿ ಲಾಠಿ ಏಟು ತಪ್ಪಿಸಿಕೊಂಡಿದ್ದಾರೆ. ಚನ್ನಮ್ಮ ವೃತ್ತದ ಬಳಿ ಹಾಕಲಾಗಿದ್ದ ಬಿಗ್ ಸ್ಕ್ರೀನ್ ನಲ್ಲಿ …

Read More »

ಬೆಳಗಾವಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮುಜಮ್ಮಿಲ್ ಡೋಣಿ ರಾಜಿನಾಮೆ

ಬೆಳಗಾವಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮುಜಮ್ಮಿಲ್ ಡೋಣಿ ರಾಜಿನಾಮೆ ಬೆಳಗಾವಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಪಾಲಿಕೆ ಸದಸ್ಯ ಮುಜಮ್ಮಿಲ್ ಡೋಣಿ ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಆಯ್ಕೆಗೆ ಸಹಕರಿಸಿದ್ದ ಶಾಸಕ ಆಶೀಫ್ ಸೇಠ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ ಮುಂದಿನ ವಿರೋಧ ಪಕ್ಷದ ನಾಯಕರು ಯಾರು ಎಂಬುದನ್ನು ಕಾದು ನೋಡೋಣ

Read More »

4 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಚೆಕ್‌ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು*

4 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಚೆಕ್‌ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು *ಬೆಳಗಾವಿ:* ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ 4 ಗ್ರಾಮಗಳ ದೇವಸ್ಥಾನಗಳ ಟ್ರಸ್ಟ್ ಕಮಿಟಿಯವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಚೆಕ್ ಗಳನ್ನು ಹಸ್ತಾಂತರಿಸಿದರು. ಕುಕಡೊಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ 13.33 ಲಕ್ಷ ರೂಪಾಯಿ, ವಾಘವಾಡೆ ಗ್ರಾಮದ ಶ್ರೀ ರವಳನಾಥ್ ಮಂದಿರಕ್ಕೆ …

Read More »

39 ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳಿಗಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾದ ರೂ. 9.65 ಕೋಟಿ

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ 39 ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳಿಗಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾದ ರೂ. 9.65 ಕೋಟಿ ಆದೇಶ ಪತ್ರಗಳನ್ನು ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕ‌ ನಗರದ ಗೃಹಕಚೇರಿಯಲ್ಲಿ ವಿತರಿಸಿದರು

Read More »

ಫೈನಲ್‌ನಲ್ಲಿ ಆರ್‌ಸಿಬಿಯೇ ಗೆಲ್ಲಲಿ ಎಂದು ಬಯಸುತ್ತೇನೆ: ಅನಿಲ್ ಕುಂಬ್ಳೆ

ಬೆಂಗಳೂರು: ಐಪಿಎಲ್‌ ಫೈನಲ್‌ನಲ್ಲಿ ಈ ಬಾರಿ ಯಾರೇ ಗೆದ್ದರೂ, ಹೊಸಬರೇ ಚಾಂಪಿಯನ್ ಆಗುತ್ತಾರೆ‌. ಆದರೂ ಆರ್‌ಸಿಬಿ ತಂಡವೇ ಗೆಲ್ಲಲಿ ಎಂದು ಬಯಸುತ್ತೇನೆ ಎಂದು ಆರ್‌ಸಿಬಿ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಹೇಳಿದ್ದಾರೆ. ಕರ್ನಾಟಕ ಅರಣ್ಯ‌ ಮತ್ತು ವನ್ಯಜೀವಿ ಇಲಾಖೆಯ ರಾಯಭಾರಿಯೂ ಆಗಿರುವ ಅನಿಲ್ ಕುಂಬ್ಳೆ ಅವರು ಇಂದು ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಬಳಿಕ ಮಾತನಾಡಿದರು. “ಐಪಿಎಲ್‌ನಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ಎರಡೂ ತಂಡಗಳಲ್ಲಿಯೂ ನಾನು ಇದ್ದೆ. ಈ …

Read More »

53 ಕೋಟಿ‌ ಬಂಗಾರ ಕಳ್ಳತನ ಬಯಲು: ಚಾಲೆಂಜ್ ಆಗಿ ತೆಗೆದುಕೊಂಡ ಪೊಲೀಸರು

53 ಕೋಟಿ‌ ಬಂಗಾರ ಕಳ್ಳತನ ಬಯಲು: ಚಾಲೆಂಜ್ ಆಗಿ ತೆಗೆದುಕೊಂಡ ಪೊಲೀಸರು ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿ ನೀಡಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ 53 ಕೋಟಿ ಬೆಲೆಯ ಚಿನ್ನ ಕದ್ದು ಖದೀಮರು ಎಸ್ಕೇಪ್ ಆಗಿದ್ದಾರೆ. ತನಿಖೆಗೆಗಾಗಿ ಎಂಟು ವಿಶೇಷ ತಂಡ ರಚನೆ ಮಾಡಲಾಗಿದೆ. ಕಳೆದ ಮೇ 25 ರಂದು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ …

Read More »

ಧಾರವಾಡದಲ್ಲಿ ಬೀದಿಗೆ ಇಳಿದ ನರೇಗಾ ಗುತ್ತಿಗೆ ನೌಕರರು… ಸೇವಾ ಭದ್ರತೆ ಜತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ.

ಧಾರವಾಡದಲ್ಲಿ ಬೀದಿಗೆ ಇಳಿದ ನರೇಗಾ ಗುತ್ತಿಗೆ ನೌಕರರು… ಸೇವಾ ಭದ್ರತೆ ಜತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ. ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನರೇಗಾ ನೌಕರರಿಗೆ ಸೇವಾ ಭದ್ರತೆ, ಆರೋಗ್ಯ ವಿಮೆ, ಸಕಾಲಕ್ಕೆ ವೇತನ‌ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ನರೇಗಾ ಗುತ್ತಿಗೆ ನೌಕರರು ಧರಣಿ ಸತ್ಯಾಗ್ರಹ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು.‌ ಕರ್ನಾಟಕ ರಾಜ್ಯ ಮಹಾತ್ಮಾ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ …

Read More »