Breaking News

ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್​ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ರೈತ ದಂಪತಿ ಮೃತಪಟ್ಟಿದ್ದಾರೆ.

ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಇಂದು ನಡೆದಿದೆ. ನಿಸ್ಸಾರ್ ಅಹಮ್ಮದ್ ಮಕ್ಬೂಲ್ ಸಾಬ್ ಸನದಿ(32), ಪತ್ನಿ ಲತಾ ನಿಸ್ಸಾರ್ ಅಹಮ್ಮದ್ ಸನದಿ(26) ಮೃತರು. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಕೆಳಗೆ ಬಿದ್ದಿದ್ದ ವಿದ್ಯುತ್​ ತಂತಿ ಸ್ಪರ್ಶಿಸಿ ಘಟನೆ ನಡೆದಿದೆ. “ಜಮೀನಿನಲ್ಲಿ ಹಾದು ಹೋಗಿರುವ 11 ಕೆವಿ ವಿದ್ಯುತ್ ತಂತಿಗಳು ಹಳೆಯದಾಗಿದ್ದು, ತುಕ್ಕು ಹಿಡಿದಿದ್ದವು. ಇವುಗಳನ್ನು ಬದಲಾಯಿಸುವಂತೆ ಅನೇಕ ಬಾರಿ ಗ್ರಾಮಸ್ಥರು ಒತ್ತಾಯಿಸಿದ್ದರು. ಆದರೆ …

Read More »

ರಾಜ್ಯ ಕಾಂಗ್ರೆಸ್​ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7 ರಂದು (ನಾಳೆ) ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ.   ಆಡಳಿತರೂಢ ಕಾಂಗ್ರೆಸ್ ಸರ್ಕಾರವೂ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಕೈ ಬಿಟ್ಟಿದ್ದು, ರಾಜ್ಯದ ಅನ್ನದಾತರ ವಿರುದ್ಧವಾಗಿ ನಡೆದುಕೊಂಡಿದೆ. ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ …

Read More »

ಮುಂಬೈ ಪೊಲೀಸರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. ರೈಲುಗಳಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ.

ಮುಂಬೈ(ಮಹಾರಾಷ್ಟ್ರ) : ಗೃಹ ಸಚಿವ ಅಮಿತ್​ ಶಾ ಅವರು ಮುಂಬೈ ಭೇಟಿ ನೀಡಿದ ಬೆನ್ನಲ್ಲೇ ಸ್ಥಳೀಯ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು, ಓರ್ವನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಅಶೋಕ್​ ಮುಖಿಯಾ ಎಂದು ಗುರುತಿಸಲಾಗಿದೆ. ಬೆದರಿಕೆ ಹಾಕಿದ್ದರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ ಆರೋಪಿ ಮುಂಬೈ ಪೊಲೀಸ್​ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಲೋಕಲ್​ ಟ್ರೈನ್​ಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದ. ಪೊಲೀಸರು …

Read More »

ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮದ್ಯದ ಅಮಲಿನಲ್ಲಿದ್ದ ಯುವತಿಯ ರಂಪಾಟ

ಬೆಂಗಳೂರು: ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮೆರೆಯುವ ಪ್ರಕರಣಗಳು ನಗರದಲ್ಲಿ ಆಗಾಗ ವರದಿಯಾಗುತ್ತಲೇ ಇರುತ್ತವೆ. ಅಂಥಹದ್ದೇ ಮತ್ತೊಂದು ಪ್ರಕರಣ ಶನಿವಾರ ತಡರಾತ್ರಿ ನಗರದ ಚರ್ಚ್ ಸ್ಟ್ರೀಟ್​ನಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಯುವತಿಯೊಬ್ಬಳು ತೂರಾಡುತ್ತ ಸಾರ್ವಜನಿಕರಿಗೆ ತಲೆ ನೋವಾದ ಘಟನೆ ನಡೆದಿದೆ. ಬುದ್ಧಿ ಹೇಳಲು ಹೋದವರ ಮೇಲೆಯೇ ಮುಗಿ ಬೀಳುತ್ತಿದ್ದ ಯುವತಿಯನ್ನು ಸಂಬಾಳಿಸುವಲ್ಲಿ ಪೊಲೀಸರೇ ಹೈರಾಣಾಗಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಪೊಲೀಸ್​ ಸಿಬ್ಬಂದಿ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಯತ್ನಿಸಿದ್ದಾರೆ. ಆದರೆ ಮಹಿಳಾ ಸಿಬ್ಬಂದಿಗಳಿಲ್ಲದ …

Read More »

ಹೈದರಾಬಾದ್​ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು ಮುಂದೆ ವರ್ಷಪೂರ್ತಿ ವಿದ್ಯುದ್ಧೀಪಗಳಿಂದ ಜಗಮಗಿಸಲಿದೆ.

ಹೈದರಾಬಾದ್ (ತೆಲಂಗಾಣ) : ಹೈದರಾಬಾದ್​ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು ಮುಂದೆ ವರ್ಷಪೂರ್ತಿ ವಿದ್ಯುದ್ಧೀಪಗಳಿಂದ ಜಗಮಗಿಸಲಿದೆ. ಪ್ರಸಿದ್ಧ ಸ್ಮಾರಕವಾಗಿರುವ ಚಾರ್ಮಿನಾರ್​ ಮುಂಭಾಗದ ವಿದ್ಯುದ್ದೀಪದ ವ್ಯವಸ್ಥೆಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಶನಿವಾರ ರಾತ್ರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಾರ್ಮಿನಾರ್ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಅದ್ಭುತವಾಗಿ ಬೆಳಗಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ರೆಡ್ಡಿ, “ಇನ್ನು ಮುಂದೆ ವರ್ಷವಿಡೀ ಪ್ರತಿದಿನ ಸಂಜೆ ಚಾರ್ಮಿನಾರ್ ಅನ್ನು ವಿದ್ಯುದ್ದೀಪಗಳಿಂದ …

Read More »

ಉದ್ಯಮಿಯೊಬ್ಬರು ಕಟ್ಟಡದ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮಂಗಳೂರು : ಉದ್ಯಮಿಯೊಬ್ಬರು ಕಟ್ಟಡದ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬೆಂದೂರುವೆಲ್​​ನ ಅಟ್ಲಾಂಟಿಕ್ ಅಪಾರ್ಟೆಂಟ್​​ನಲ್ಲಿ ಇಂದು ನಡೆದಿದೆ. ನಗರದಲ್ಲಿ ಕ್ವಾರೆ ಹಾಗೂ ಬಿಲ್ಡರ್ ಉದ್ಯಮದ ವ್ಯವಹಾರ ನಡೆಸುತ್ತಿದ್ದ ಮೋಹನ್ ಅಮೀನ್ (62) ಸಾವಿಗೀಡಾದವರು. ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಕೆಳಗೆ ಬಿದ್ದ ರಭಸಕ್ಕೆ ತಲೆ ಸಂಪೂರ್ಣ ಛಿದ್ರಗೊಂಡಿದೆ. ವಿಜಯವಾಹಿನಿ ಎಂಬ ಹೆಸರಿನ ಟಿಪ್ಪರ್, ಕ್ವಾರೆ, ಜಲ್ಲಿಕಲ್ಲು ಬಿಸ್ನೆಸ್ ಹೊಂದಿದ್ದ ಇವರು ಮಲ್ಲಿಕಟ್ಟೆಯಲ್ಲಿ ಕಚೇರಿ …

Read More »

ಬೆಳಗಾವಿ: ‘ಶಿಕ್ಷಣ, ಅವಕಾಶ ಹಾಗೂ ಯಶಸ್ಸಿನಿಂದ ಬಹು ದೂರ ಉಳಿದಿದ್ದ ಸಮುದಾಯಕ್ಕೂ ಅವಕಾಶ ಸಿಗುವಂತೆ ಮಾಡಿದ್ದು ಸಂವಿಧಾನ.

ಬೆಳಗಾವಿ: ‘ಶಿಕ್ಷಣ, ಅವಕಾಶ ಹಾಗೂ ಯಶಸ್ಸಿನಿಂದ ಬಹು ದೂರ ಉಳಿದಿದ್ದ ಸಮುದಾಯಕ್ಕೂ ಅವಕಾಶ ಸಿಗುವಂತೆ ಮಾಡಿದ್ದು ಸಂವಿಧಾನ. ಇಂಥ ಶ್ರೇಷ್ಠ ಸಂವಿಧಾನ ರಚನೆ ಮಾಡಿರುವ ಡಾ. ಬಿ ಆರ್ ಅಂಬೇಡ್ಕರ್ ಅವರು ವಂಚಿತರ ಪಾಲಿನ ಪ್ರಜ್ಞಾಸೂರ್ಯ ಎಂದು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಶ್ಲಾಘಿಸಿದರು. ನಗರದ ಕರ್ನಾಟಕ ಕಾನೂನು ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ಶನಿವಾರ ಸಂಜೆ ಹಿರಿಯ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದರು. …

Read More »

ಜಲ ಮೂಲ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸ್ವಯಂ ಸೇವಕರು, ಗ್ರಾಮೀಣ ಸಮುದಾಯದ ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಚಿಂತನೆ

ಬೆಂಗಳೂರು: ”ಜಲ ಮೂಲಗಳಾದ ನದಿ, ಕೆರೆ ಮತ್ತು ನಾಲೆಗಳ ಸಂರಕ್ಷಣೆಗೆ ಸ್ವಯಂ ಸೇವಕರು ಹಾಗೂ ಗ್ರಾಮೀಣ ಸಮುದಾಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ ಚಿಂತನೆ ನಡೆಸಿದೆ” ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಹೇಳಿದರು. ವಿಕಾಸಸೌಧದಲ್ಲಿ ಶನಿವಾರ ಸಚಿವರನ್ನು ಭೇಟಿ ಮಾಡಿದ ಆರ್ಟ್ ಆಫ್ ಲಿವಿಂಗ್ ರಿವರ್ ರಿಜ್ಯೂವಿನೇಷನ್ ಸಂಸ್ಥೆಯ ರಾಷ್ಟ್ರೀಯ ನಿರ್ದೇಶಕರಾದ ಡಾ. ಲಿಂಗರಾಜು ಯಾಲೆ ಅವರ ನೇತೃತ್ವದ ತಂಡದೊಂದಿಗೆ …

Read More »

ಒಣದ್ರಾಕ್ಷಿ ಬೆಲೆ ಕುಸಿತದಿಂದ ಬೆಳೆಗಾರರು ಅಕ್ಷರಶಃ ಕಂಗಾಲ

ಚಿಕ್ಕೋಡಿ (ಬೆಳಗಾವಿ) : ಒಣದ್ರಾಕ್ಷಿ ಬೆಲೆ ಕುಸಿತದಿಂದ ಬೆಳೆಗಾರರು ಅಕ್ಷರಶಃ ಕಂಗಾಲಾಗಿದ್ದು, ರಾಜ್ಯ ಸರ್ಕಾರ ತುರ್ತಾಗಿ ಬೆಳೆ ಖರೀದಿ ಮಾಡಿ ತಮ್ಮ ನೆರವಿಗೆ ಬರುವಂತೆ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಿಜಯಪುರ ಜಿಲ್ಲೆಯನ್ನು ಬಿಟ್ಟರೆ ಬೆಳಗಾವಿ ಜಿಲ್ಲೆಯ ರಾಯಬಾಗ, ಕಾಗವಾಡ, ಅಥಣಿ, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ಅತಿ ಹೆಚ್ಚು ದ್ರಾಕ್ಷಿ ಬೆಳೆಗಾರರನ್ನು ಹೊಂದಿರುವ ಪ್ರದೇಶ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಆದರೆ, ಈ ಬಾರಿ ಬೆಲೆ ಕುಸಿತದಿಂದ ಸಾವಿರಾರು ಟನ್ …

Read More »

ಟೊಮೆಟೊ ಬೆಳೆದು ಕೋಟ್ಯಾಧಿಪತಿಯಾದ ರೈತ

ಬೆಳಗಾವಿ :ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದ ರೈತ ಸಾಗರ ಗೋಪಾಲ ಮಗದುಮ್‌ ಎಂಬುವರು ಒಂಬತ್ತು ಎಕರೆ ಪ್ರದೇಶದಲ್ಲಿ ಟೊಮೆಟೊ ಬೆಳೆದು ಈಗ ಕೋಟ್ಯಾಧಿಪತಿ ಆಗಿದ್ದಾರೆ. ತಮ್ಮ ಸ್ವಂತ ಜಮೀನು ಎರಡು ಎಕರೆ ಹಾಗೂ ಪಕ್ಕದ ರೈತರ ಏಳು ಎಕರೆ ಜಮೀನನ್ನು ಗೇಣಿ ಪಡೆದು ಒಟ್ಟು 9 ಎಕರೆ ಪ್ರದೇಶದಲ್ಲಿ ಟೊಮೆಟೊ ಬೆಳೆದು ಜಿಲ್ಲೆಯ ಮಾದರಿ ರೈತನಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಮೂಲತಃ ಪಕ್ಕದ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಉಮನವಾಡಿಯ …

Read More »