ನವದೆಹಲಿ : ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆಯ (ಎಫ್‌ಎಒ) ಎಲ್ಲಾ ಅಕ್ಕಿ ಬೆಲೆ ಸೂಚ್ಯಂಕವು (All Rice Price Index) ತಿಂಗಳಲ್ಲಿ ಶೇಕಡಾ 2.8 ರಷ್ಟು ಹೆಚ್ಚಾಗಿ ಶೇ 19.7ಕ್ಕೆ ತಲುಪಿದೆ. ಸೆಪ್ಟೆಂಬರ್ 2011 ರ ನಂತರ ಆಲ್ ರೈಸ್ ಪ್ರೈಸ್ ಇಂಡೆಕ್ಸ್ನ ಅತ್ಯಧಿಕ ಮಟ್ಟ ಇದಾಗಿದೆ. ಜುಲೈ 20ರಂದು ಭಾರತವು ಸ್ಟೀಮ್ ಮಾಡದ ಭಾರತೀಯ ಅಕ್ಕಿಯ ರಫ್ತನ್ನು ನಿಷೇಧಿಸಿದ್ದರಿಂದ ಇತರ ಮಾದರಿಯ ಅಕ್ಕಿಯ ಬೆಲೆಗಳು ಹೆಚ್ಚಾಗಬಹುದು ಎಂಬ ನಿರೀಕ್ಷೆಯಿಂದ …
Read More »ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಮದ್ಯದ ಅಮಲಿನಲ್ಲಿದ್ದ ಯುವತಿಯ ರಂಪಾಟ.
ಬೆಂಗಳೂರು: ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮೆರೆಯುವ ಪ್ರಕರಣಗಳು ನಗರದಲ್ಲಿ ಆಗಾಗ ವರದಿಯಾಗುತ್ತಲೇ ಇರುತ್ತವೆ. ಅಂಥಹದ್ದೇ ಮತ್ತೊಂದು ಪ್ರಕರಣ ಶನಿವಾರ ತಡರಾತ್ರಿ ನಗರದ ಚರ್ಚ್ ಸ್ಟ್ರೀಟ್ನಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಯುವತಿಯೊಬ್ಬಳು ತೂರಾಡುತ್ತ ಸಾರ್ವಜನಿಕರಿಗೆ ತಲೆ ನೋವಾದ ಘಟನೆ ನಡೆದಿದೆ. ಬುದ್ಧಿ ಹೇಳಲು ಹೋದವರ ಮೇಲೆಯೇ ಮುಗಿ ಬೀಳುತ್ತಿದ್ದ ಯುವತಿಯನ್ನು ಸಂಬಾಳಿಸುವಲ್ಲಿ ಪೊಲೀಸರೇ ಹೈರಾಣಾಗಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಯತ್ನಿಸಿದ್ದಾರೆ. ಆದರೆ ಮಹಿಳಾ ಸಿಬ್ಬಂದಿಗಳಿಲ್ಲದ …
Read More »ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದಲ್ಲಿ ಮತ್ತೊಂದು ಸಜೀವ ನಾಡಬಾಂಬ್ ಪತ್ತೆ
ಕಾರವಾರ (ಉತ್ತರಕನ್ನಡ): ನಾಡಿನ ಜನರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದ ಹಂದಿಯೊಂದನ್ನು ನಾಡಬಾಂಬ್ ಇಟ್ಟು ಹತ್ಯೆಗೈದಿರುವ ಘಟನೆ ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದಲ್ಲಿ ನಡೆದಿತ್ತು. ಇದೀಗ ಅದೇ ಪ್ರದೇಶದಲ್ಲಿ ಪೊಲೀಸರು ಸಜೀವ ಬಾಂಬ್ ಪತ್ತೆ ಮಾಡಿದ್ದು, ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಪರಿಶೀಲನೆ ನಡೆಸಿದೆ. ತಾಲೂಕಿನ ಚೆಂಡಿಯಾದ ಸ್ಮಶಾನದ ಬಳಿ ಆಗಸ್ಟ್ 4 ರಂದು ನಾಡಬಾಂಬ್ ಸ್ಫೋಟವಾಗಿ ಹಂದಿಯೊಂದು ಸಾವನ್ನಪ್ಪಿತ್ತು. ಈ ಹಂದಿ ಗ್ರಾಮಸ್ಥರೊಂದಿಗೆ ಒಡನಾಟ ಹೊಂದಿತ್ತು. ಅದರ ಸಾವಿನಿಂದ ಇಲ್ಲಿನ …
Read More »ನೈಸ್ ಹಗರಣದ ದಾಖಲೆಗಳನ್ನು ಪ್ರಧಾನಿ ಮೋದಿಗೆ ಕೊಡುತ್ತೇನೆ,:H.D.K
ಬೆಂಗಳೂರು : ನೈಸ್ ರಸ್ತೆ ಮಾಡುವ ಸಂದರ್ಭದಲ್ಲಿ ರೈತರ ಜಮೀನನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದೊಂದು ದೊಡ್ಡ ಹಗರಣವಾಗಿದ್ದು, ಈ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದೇನೆ. ನೈಸ್ ಹಗರಣದ ದಾಖಲೆಗಳನ್ನು ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರೈತರ ಹೆಸರಿನಲ್ಲಿ ಕೋಟಿ, ಕೋಟಿ ಹಣ ಲೂಟಿಯಾಗಿದೆ. ನೈಸ್ ಸಂಸ್ಥೆ ವಿರುದ್ಧ ದೂರು ನೀಡಲು ಪ್ರಧಾನಿ ನರೇಂದ್ರ ಮೋದಿ …
Read More »ಆರಗ ಜ್ಞಾನೇಂದ್ರರಿಗೆ ಬುದ್ಧಿ ಭ್ರಮಣೆಯಾಗಿದೆ:ಶಿವರಾಜ ತಂಗಡಗಿ
ಕೊಪ್ಪಳ: ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಬುದ್ಧಿ ಭ್ರಮಣೆ ಆಗಿದ್ದು, ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಅವರು ಮಲ್ಲಿಕಾರ್ಜುನ ಖರ್ಗೆ ಕುರಿತು ಆರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆ ವಿರುದ್ಧ ಗುಡುಗಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೋದಿ ಉಪನಾಮ ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಲಾಯಿತು. ಆದರೆ ಈಗ ಆರಗ ಜ್ಞಾನೇಂದ್ರ ಅವರು ಖರ್ಗೆ ಅವರಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ …
Read More »ಅಗ್ನಿಪಥ್ ಯೋಜನೆಯಡಿ ಬೆಂಗಳೂರಿನ ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್ನಲ್ಲಿ(ಉತ್ತರ) ಮೊದಲ ಬ್ಯಾಚಿನ 113 ಅಗ್ನಿವೀರರು ತರಬೇತಿ ಪೂರ್ಣಗೊಳಿಸಿದ್ದಾರೆ.
ಬೆಂಗಳೂರು: ಅಗ್ನಿಪಥ್ ಯೋಜನೆಯಡಿ ಬೆಂಗಳೂರಿನ ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್ನಲ್ಲಿ(ಉತ್ತರ) ಮೊದಲ ಬ್ಯಾಚಿನ 113 ಅಗ್ನಿವೀರರು ತರಬೇತಿ ಪೂರ್ಣಗೊಳಿಸಿದ್ದಾರೆ. ಕೇಂದ್ರ ಸಶಸ್ತ್ರ ಪಡೆಗಳ ಮೂರು ಸೇವೆಗಳಿಗೆ ಸೈನಿಕರ ನೇಮಕಾತಿಗಾಗಿ 2022ರ ಜೂನ್ 16ರಂದು ಭಾರತ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಅನುಮೋದನೆಗೊಳಿಸಿತ್ತು. ಯೋಜನೆಯ ಭಾಗವಾಗಿ ಇದೇ ವರ್ಷ ಜನವರಿ 2023 ರಿಂದ ಪ್ರಾರಂಭವಾದ ತರಬೇತಿಯಲ್ಲಿ ಆಗಸ್ಟ್ 5 ರ ವರೆಗೆ 85 ಅಗ್ನಿವೀರರು (ಎಂಟಿ) ಉತ್ತೀರ್ಣರಾಗಿ ಹೊರಹೊಮ್ಮಿದ್ದಾರೆ. ಬೆಂಗಳೂರಿನಲ್ಲಿರುವ ಆರ್ಮಿ ಸರ್ವಿಸ್ ಕಾರ್ಪ್ಸ್ …
Read More »ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಚಂದ್ರಯಾನ -3 ಪ್ರವೇಶ – ಇಸ್ರೋ
ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ- 3 ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಸಂಜೆ ತಿಳಿಸಿದೆ. ಇದು ಚಂದ್ರಯಾನ-3. ನಾನು ಚಂದ್ರನ ಗುರುತ್ವಾಕರ್ಷಣೆಯನ್ನು ಅನುಭವಿಸುತ್ತಿದ್ದೇನೆ. ಚಂದ್ರಯಾನ-3 ಅನ್ನು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರಿಸಲಾಗಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ. ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಕಡಿತ 2023ರ ಆಗಸ್ಟ್ 6ರ ರಾತ್ರಿ 11 ಗಂಟೆ ಸುಮಾರಿಗೆ ಗದಿಪಡಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ. …
Read More »ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು ನಾವು ಯಾರೂ ಅಲ್ಲ:
ಕಲಬುರಗಿ: ಐದು ಗ್ಯಾರಂಟಿ ಕೊಟ್ಟರೆ ಕರ್ನಾಟಕ ದಿವಾಳಿ ಆಗುತ್ತೆ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಆದರೆ ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು ನಾವು ಯಾರೂ ಅಲ್ಲ. ಈಗಾಗಲೇ ಉಚಿತ ಅಕ್ಕಿ, ಶಕ್ತಿ ಯೋಜನೆ, ಇಂದು ಗೃಹಜ್ಯೋತಿ ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಿ ಮಾದರಿಯಾಗುತ್ತೇವೆ. ಬಿಜೆಪಿಯವರೇ ತಾಕತ್ತಿದ್ದರೆ ನಮ್ಮ ಗ್ಯಾರಂಟಿಗಳನ್ನು ದೇಶದ …
Read More »ಆಸ್ತಿಗಾಗಿ ಪತ್ನಿಯೊಂದಿಗೆ ಸೇರಿ ಹೆತ್ತಮ್ಮನನ್ನೇ ಕೊಂದ ಪುತ್ರ
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಆಸ್ತಿಗಾಗಿ ಹೆತ್ತ ತಾಯಿಯನ್ನು ಮಗ ಕೊಲೆ ಮಾಡಿರುವ ಪ್ರಕರಣ ದೇವನಹಳ್ಳಿ ತಾಲೂಕಿನ ಉದಯಗಿರಿ ಸಮೀಪ ನಡೆದಿದೆ. ಚಿನ್ನಮ್ಮ ಕೊಲೆಗೀಡಾದ ಮಹಿಳೆ. ಚಿನ್ನಮ್ಮನಿಗೆ ಇಬ್ಬರು ಗಂಡು ಮಕ್ಕಳು. ಮೊದಲನೇ ಮಗ ರಾಘವೇಂದ್ರ ಮತ್ತು ಎರಡನೇ ಮಗ ರಾಜೇಶ್. ಮೊದಲ ಮಗ ರಾಘವೇಂದ್ರನಿಗೆ ಸುಧಾ ಎಂಬುವವಳೊಂದಿಗೆ ಮದುವೆ ಆಗಿದೆ. ಕಳೆದ ಒಂದು ವರ್ಷದ ಹಿಂದೆ ಚಿನ್ನಮ್ಮ ತನ್ನ ಗಂಡನನ್ನು ಕಳೆದುಕೊಂಡಿದ್ದರು. ಇರೋ ಜಮೀನನ್ನು ಮಾರಿ ಇಬ್ಬರು ಮಕ್ಕಳಿಗೆ ಸಮನಾಗಿ ಹಂಚುವ …
Read More »ರಾಜ್ಯದಾದ್ಯಂತ 6 ಕೆಲಸದ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಮೂರು ಸುತ್ತುಗಳಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕೆ ಕಾರ್ಯಕ್ರಮ
ಬೆಂಗಳೂರು: ಮಿಷನ್ ಇಂದ್ರಧನುಷ್ 5.0 (IMI 5,0) ಕಾರ್ಯಕ್ರಮದಡಿ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆ ಅಭಿಯಾನವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಸೌಧದಲ್ಲಿ ಶನಿವಾರ ಸಂಜೆ ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ರಾಯಚೂರಿನಲ್ಲಿ ಆಗಸ್ಟ್ 7 ರಂದು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿನ ಎಲ್ಲಾ ಲಸಿಕೆಗಳನ್ನು ನೀಡಿ …
Read More »