ಧರ್ಮಶಾಲಾ(ಹಿಮಾಚಲ ಪ್ರದೇಶ): ಕಾಂಗ್ರಾ ಜಿಲ್ಲೆಯ ಗ್ಲೋಬಲ್ ಸಿಟಿ ಎಂದು ಕರೆಯಲ್ಪಡುವ ಮೆಕ್ಲಿಯೋಡ್‌ಗಂಜ್‌ನಲ್ಲಿ ಮಾನ್ಯವಾದ ವೀಸಾ ಮತ್ತು ಪಾಸ್‌ಪೋರ್ಟ್ ಹೊಂದಿರದ ವಿದೇಶಿ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ ಈ ವಿದೇಶಿ ಪ್ರಜೆ 2021 ರಿಂದ ಮೆಕ್ಲಿಯೋಡ್‌ಗಂಜ್‌ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಕಾಂಗ್ರಾ ಪೊಲೀಸರು ವೀಸಾ ಮತ್ತು ಪಾಸ್‌ಪೋರ್ಟ್ ಕೇಳಿದಾಗ ಈ ವಿದೇಶಿ ಪ್ರಜೆಯ ಬಳಿ ಮಾನ್ಯವಾಗಿರುವ ವೀಸಾ ಅಥವಾ ಪಾಸ್‌ಪೋರ್ಟ್ ಇರಲಿಲ್ಲ. ಧರ್ಮಶಾಲಾದ ಮೆಕ್ಲಿಯೋಡ್‌ಗಂಜ್‌ನಲ್ಲಿ ವೀಸಾ ಅಥವಾ ಪಾಸ್‌ಪೋರ್ಟ್ ಇಲ್ಲದೇ ಈ ವಿದೇಶಿ …
Read More »ಭಯೋತ್ಪಾದಕ ನಂಟು ಇರುವ ಕಾರಣ ಎನ್ಐಎ ಈ ಪ್ರಕರಣವನ್ನು ತನ್ನ ಸುಪರ್ದಿಗೆ ನೀಡುವಂತೆ ಕೇಳಿದೆ.
ನಾಗ್ಪುರ (ಮಹಾರಾಷ್ಟ್ರ): ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಎರಡು ಬಾರಿ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ನಾಗ್ಪುರದಿಂದ ಮುಂಬೈಗೆ ವರ್ಗಾವಣೆ ಮಾಡುವಂತೆ ಕೋರಿ ಮುಂಬೈ ಹೈಕೋರ್ಟ್ಗೆ ಎನ್ಐಎ ಮನವಿ ಸಲ್ಲಿಸಿದೆ. ಈ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಮುಂಬೈ ಹೈಕೋರ್ಟ್ನ ನಾಗ್ಪುರ ಪೀಠದಲ್ಲಿ ಎನ್ಐಎ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯ ಸರ್ಕಾರ ಹಾಗೂ ಪ್ರಮುಖ ಆರೋಪಿ …
Read More »ಅರ್ಬಾಜ್ ಖಾನ್ ಬರ್ತ್ಡೇ ಪಾರ್ಟಿಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹೊಸ ಲುಕ್
ನಟ ಹಾಗೂ ನಿರ್ಮಾಪಕ ಅರ್ಬಾಜ್ ಖಾನ್ ಬರ್ತ್ಡೇ ಪಾರ್ಟಿಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಭಾಗವಹಿಸಿ ಗಮನ ಸೆಳೆದರು. ಬಾಲಿವುಡ್ ನಟ ಹಾಗೂ ನಿರ್ಮಾಪಕ ಅರ್ಬಾಜ್ ಖಾನ್ ನಿನ್ನೆಯಷ್ಟೇ ತಮ್ಮ 56ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರು ತಮ್ಮ ಆತ್ಮೀಯರಿಗಾಗಿ ಗ್ರ್ಯಾಂಡ್ ಪಾರ್ಟಿಯನ್ನು ಆಯೋಜಿಸಿದ್ದರು. ಅರ್ಬಾಜ್ ಖಾನ್ ಹಿರಿಯ ಸಹೋದರ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಈ ಪಾರ್ಟಿಯಲ್ಲಿ ಭಾಗವಹಿಸಿ ಗಮನ ಸೆಳೆದರು. …
Read More »ನಾನು ಹಿಟ್ ಅಂಡ್ ರನ್ ವ್ಯಕ್ತಿಯಲ್ಲ,:HDK
ಬೆಂಗಳೂರು: ನಾನು ಹಿಟ್ ಅಂಡ್ ರನ್ ವ್ಯಕ್ತಿಯಲ್ಲ, ಯಾವತ್ತೂ ಕೂಡ ನಾನು ಆ ರೀತಿ ಮಾಡಿದವನಲ್ಲ. ಕಾಂಗ್ರೆಸ್ನವರು ನನ್ನ ಹೆಸರೇಳಿ ಹಿಟ್ ಅಂಡ್ ರನ್ ಅಂತಾರೆ. ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಹಿಂದೆ ಪೇ ಸಿಎಂ ಅಂತಾ ಪೋಸ್ಟರ್ ಬೇರೆ ಅಂಟಿಸಿದ್ದರು. ಎಲ್ಲದಕ್ಕೂ ದಾಖಲೆ ಕೊಡ ಅಂತಾ ಹೇಳುತ್ತಿದ್ದರು. ಆದರೆ ಅವರೀಗ ಮಾಡ್ತಿರೋದು ಏನು?. ಅವರ ಯಾವುದೇ ಆರೋಪಗಳಿಗೆ ದಾಖಲೆಗಳಿವೆಯಾ? ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಮಾಜಿ ಸಿಎಂ ಹೆಚ್.ಡಿ …
Read More »ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಪ್ರವೀಣ್ ಸೂದ್ರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ರಾಜ್ಯ ಸರ್ಕಾರ ಮೇ 21ರಂದು ನೇಮಕಗೊಳಿಸಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿಯಾಗಿದ್ದ ಅಲೋಕ್ ಮೋಹನ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ಹೊತ್ತಿದ್ದರು. …
Read More »ಜೈನ ಮುನಿ ಹತ್ಯೆ ಪ್ರಕರಣ ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ
ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಸಿಐಡಿ ಡಿಜಿಪಿ ಡಾ ಎಂ ಎ ಸಲೀಂ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಇವತ್ತು ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ.ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವು ಕಾಲ ಸ್ಥಳಿಯರ ಜೊತೆ …
Read More »ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಪ್ರತಿಭಟನೆ
ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾಲಯಗಳಿಗೆ ಸರ್ಕಾರ ಅನುದಾನ ಬಂದ್ ಮಾಡಿರುವುದರಿಂದ ವಿದ್ಯಾರ್ಥಿಗಳು ಜ್ವಲಂತ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಬೇಕಾಗುವ ಅನುದಾನ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಚಿವರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳಿಗೆ …
Read More »ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ಸೂಚನೆ ನೀಡಿದ್ದಾರೆ :ಸತೀಶ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಆದ್ದರಿಂದ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕೆಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ …
Read More »ಗೃಹಜ್ಯೋತಿ ಯೋಜನೆಗಾಗಿ ಬೆಳಗಾವಿ ಜಿಲ್ಲೆಗೆ ಪ್ರತಿವರ್ಷಕ್ಕೆ 516 ಕೋಟಿ ರೂಪಾಯಿಗಳನ್ನು ಸರಕಾರವು ನೀ ಡಲಿದೆ.:ಸತೀಶ್ ಜಾರಕಿಹೊಳಿ
ಗೃಹಜ್ಯೋತಿ ಯೋಜನೆಗಾಗಿ ಬೆಳಗಾವಿ ಜಿಲ್ಲೆಗೆ ಪ್ರತಿವರ್ಷಕ್ಕೆ 516 ಕೋಟಿ ರೂಪಾಯಿಗಳನ್ನು ಸರಕಾರವು ನೀಡಲಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂಪಾಯಿ ಖರ್ಚು ಮಾಡಲಿದೆ. ಇದು ಮಕ್ಕಳ ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆಗೆ ಬಳಕೆಯಾಗಬೇಕು. ಅಂದಾಗ ಮಾತ್ರ ಸರಕಾರದ ಗ್ಯಾರಂಟಿ ಯೋಜನೆಗಳು ಸಾರ್ಥಕವಾಗಲಿವೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ …
Read More »ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿ ಭೀಕರವಾಗಿ ಹತ್ಯೆ
ಓರ್ವನನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿಕೊಂಡು ತೆಗೆದುಕೊಂಡು ಹೋದ ಘಟನೆ ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ಘಟನೆ ನಡೆದಿದೆ. ಹತ್ಯೆಯಾಗಿರುವ ದುರ್ದೈವಿ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಕಲ್ಲಿನಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ. ಅಲ್ಲದೇ, ಮುಖದ ಚಹರೆ ಸಿಗದಂತೆ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »