ವಿಜಯಪುರ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಮುಂದೆ ಅಳಲು ತೋಡಿಕೊಂಡು ಬಂದ ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ಡಿಸಿ ಮಾನವೀಯತೆ ಮೆರೆದಿದ್ದಾರೆ. ಬಡತನ ರೇಖೆಗಿಂತ (ಬಿಪಿಎಲ್) ಕೆಳಗಡೆ ಇರುವ ಮತ್ತು 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಈ ಯೋಜನೆಯಡಿ ಮಾಸಾಶನ ನೀಡಲಾಗುತ್ತದೆ. ನಗರದ ಗ್ಯಾಂಗಬಾವಡಿಯ ನಿವಾಸಿಗಳಾದ ಸೂರ್ಯಕಾಂತ ರಾಮದುರ್ಗಕರ ಹಾಗೂ ಅವರ ಪತ್ನಿ ಸುರೇಖಾ ರಾಮದುರ್ಗಕರ ಗುರುವಾರ ನಗರದ ಜಿಲ್ಲಾಧಿಕಾರಿಗಳ …
Read More »ಕೇರಳ ಪೊಲೀಸ್ ವಶದಲ್ಲಿರುವವರು ಕರ್ನಾಟಕ ಸೈಬರ್ ಪೊಲೀಸ್ ವಿಭಾಗದ ಸಿಬ್ಬಂದಿ
ಕೊಚ್ಚಿ: ಆನ್ಲೈನ್ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಆರೋಪಿಗಳಿಂದ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಕರ್ನಾಟಕದ ಓರ್ವ ಇನ್ಸ್ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೊಚ್ಚಿಯಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸ್ನಲ್ಲಿ ಹೆಸರನ್ನು ಕೈಬಿಡಲು ಆರೋಪಿಗಳಿಂದ ಲಂಚ ಪಡೆದಿದ್ದರೆಂದು ಆರೋಪಿಸಲಾಗಿದೆ. ಹಣ ಪಡೆದು ಸಹ ಆರೋಪಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದಾಗ ಅವರ ಸಂಬಂಧಿಯೊಬ್ಬರು ಕೊಚ್ಚಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ತನಿಖೆಗಿಳಿದ ಕಲಮಶ್ಶೇರಿ ಪೊಲೀಸರು ವಾಹನ ತಡೆದು, …
Read More »ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ
ಬೆಂಗಳೂರು: ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ತೋಟಗಾರಿಕಾ ಇಲಾಖೆಯಿಂದ ಆಯೋಜನೆಯಾಗಿರುವ ಹನ್ನೆರಡು ದಿನಗಳ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಸುಮಾರು ಎಂಟರಿಂದ ಹತ್ತು ಲಕ್ಷ ಜನರ ಆಗಮನದ ನಿರೀಕ್ಷೆಯಿದ್ದು, ಸಂಚಾರ ದಟ್ಟಣೆಯಾಗದಂತೆ ಕೆಲ ಮಾರ್ಪಾಡುಗಳನ್ನು ಮಾಡಲಾಗಿದೆ. ವಾಹನಗಳ ನಿಲುಗಡೆಗೆ ಅವಕಾಶ, ಮತ್ತು ನಿಷೇಧದ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ವಾಹನ ನಿಲುಗಡೆಗೆ ಅವಕಾಶವಿರುವ ಸ್ಥಳಗಳು: ಡಾ.ಮರೀಗೌಡ ರಸ್ತೆಯ ಅಲ್ ಅಮೀನ್ ಕಾಲೇಜು ಅವರಣದಲ್ಲಿ ದ್ವಿಚಕ್ರ ವಾಹನಗಳಿಗೆ, …
Read More »ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ನಿಷೇಧವಿದ್ದರೂ, ಬೆಳಗಾವಿಯಲ್ಲಿ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ತರಹೇವಾರಿ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ
ಬೆಳಗಾವಿ: ಪರಿಸರಕ್ಕೆ ಮಾರಕವಾಗಿರುವ ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ನಿಷೇಧವಿದ್ದರೂ, ಬೆಳಗಾವಿಯಲ್ಲಿ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ತರಹೇವಾರಿ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಹಲವಾರು ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಮಾತ್ರ ಅನುಮತಿ ನೀಡಬೇಕೆಂದು ಜಿಲ್ಲೆಯ ಪರಿಸರ ಪ್ರೇಮಿಗಳು ಆಗ್ರಹಿಸುತ್ತಿದ್ದಾರೆ. ಹೌದು, ಗಣೇಶೋತ್ಸವಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇರುವಾಗ ಬೆಳಗಾವಿಯಲ್ಲಿ ಗಣೇಶ ಮೂರ್ತಿಗಳ ತಯಾರಿಕೆ ಭರದಿಂದ ಸಾಗಿದೆ. ಪರಿಸರ ಸ್ನೇಹಿ ಮೂರ್ತಿ ತಯಾರಕರು, ಮಾರಾಟಗಾರರು …
Read More »ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ ಪಿಎಲ್‍ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಬಡನಿಂಗಗೋಳ, ಉಪಾಧ್ಯಕ್ಷರಾಗಿ ಬೈರುಗೋಳ ಪುನರಾಯ್ಕೆ
ಗೋಕಾಕ : ದಿ.ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಜಾರಕಿಹೊಳಿ ಸಹೋದರರ ನೇತೃತ್ವದ ಗುಂಪಿನ ಮಸಗುಪ್ಪಿಯ ಅಪ್ಪಯ್ಯಾ ನಿಂಗಪ್ಪ ಬಡನಿಂಗಗೋಳ ಮತ್ತು ಉಪಾಧ್ಯಕ್ಷರಾಗಿ ರಾಜಾಪೂರದ ರಾಜು ಸತ್ತೆಪ್ಪ ಬೈರುಗೋಳ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಗುರುವಾರದಂದು ಇಲ್ಲಿನ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಈ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು …
Read More »ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್ನಲ್ಲಿ ಹೆಂಡತಿ ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಒಂದೇ ಕುಟುಂಬದ ನಾಲ್ವರು ದುರಂತ ಅಂತ್ಯ ಕಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೆಹಳ್ಳಿಯ ಸಾಯಿಗಾರ್ಡನ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಆಂಧ್ರ ಮೂಲದ ವಿರಾರ್ಜುನ (31), ಪತ್ನಿ ಹೇಮಾವತಿ (29), ಒಂದೂವರೆ ವರ್ಷದ ಹಾಗೂ 8 ತಿಂಗಳ ಮಕ್ಕಳು …
Read More »ಹೈಕಮಾಂಡ್ ಮುಂದೆ ತಲೆಬಾಗುವ ಮೂಲಕ ಸಿಎಂ ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ: ಬೊಮ್ಮಾಯಿ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಆಡಳಿತ ಸಂಪೂರ್ಣವಾಗಿ ದೆಹಲಿಯಿಂದ ನಡೆಯುತ್ತಿದೆ. ಇಡೀ ಸಚಿವ ಸಂಪುಟವೇ ಎಐಸಿಸಿ ಕಚೇರಿ ಸಭೆಯಲ್ಲಿ ಭಾಗಿಯಾಗಿರುವುದೇ ಇದಕ್ಕೆ ನಿದರ್ಶನ. ರಾಜ್ಯದಲ್ಲಿ ಸಚಿವ ಸಂಪುಟವೇ ಸುಪ್ರೀಂ, ಅಂತಹ ಸಂಪುಟವನ್ನೇ ಎಐಸಿಸಿ ಅಡಿಯಾಳಾಗಿಸಿ ರಾಜ್ಯದ ಜನತೆಗೆ ಸಿದ್ದರಾಮಯ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಆರ್.ಟಿ ನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಆಡಳಿತಾರೂಢ ಪಕ್ಷವೊಂದು ಇಡೀ …
Read More »ನೇಣು ಬಿಗಿದುಕೊಂಡು ಕಲಾ ನಿರ್ದೇಶಕ ದೇಸಾಯಿ ಆತ್ಮಹತ್ಯೆ
ರಾಯಗಡ(ಮಹಾರಾಷ್ಟ್ರ) : ಸೂಪರ್ಹಿಟ್ ಚಿತ್ರಗಳನ್ನು ನೀಡಿದ್ದ ಕಲಾ ನಿರ್ದೇಶಕ ನಿತಿನ್ ಚಂದ್ರಕಾಂತ್ ದೇಸಾಯಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲಿಸರು, ನೇಣು ಬಿಗಿದುಕೊಂಡಿದ್ದೇ ಕಾರಣ ಎಂದಿದ್ದಾರೆ. ಇತ್ತ ಅವರ ಕುಟುಂಬಸ್ಥರು ದೇಸಾಯಿ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಟುಡಿಯೋದಲ್ಲೇ ಅಂತ್ಯಕ್ರಿಯೆ ನಡೆಸುವುದಾಗಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಖ್ಯಾತ ಕಲಾ ನಿರ್ದೇಶಕ ದೇಸಾಯಿ ಅವರು ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅವರು ಆಗಸ್ಟ್ 2 ರಂದು ಬುಧವಾರ ಬೆಳಗಿನ ಜಾವ …
Read More »ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಉಗ್ರಪ್ಪ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿಯಿಂದ ಖಂಡನೆ
ಬೆಂಗಳೂರು: ”ಇಡೀ ಜಗತ್ತೇ ಒಪ್ಪಿರುವ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕೆಪಿಸಿಸಿ ವಕ್ತಾರ ವಿ ಎಸ್ ಉಗ್ರಪ್ಪ ಆಡಿರುವ ಮಾತು ಆ ಪಕ್ಷದ ಗುಣ ಮತ್ತು ಅವರ ಚಾರಿತ್ರ್ಯದ ಮೇಲೆ ಬೆಳಕು ಚೆಲ್ಲಲಿದೆ” ಎಂದು ಬಿಜೆಪಿ ವಕ್ತಾರ ಎಂ ಜಿ ಮಹೇಶ್ ತಿರುಗೇಟು ನೀಡಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ”ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೆಪಿಸಿಸಿ ವಕ್ತಾರ ವಿ ಎಸ್ …
Read More »ಕಲಚೇತನರ ಸಿಟ್ಟಿಂಗ್ ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ, ಪುರುಷ ತಂಡಗಳ ಗೆಲುವು
ಹಾವೇರಿ : ಮಲೇಶಿಯಾದ ಕ್ವಾಲಾಲಂಪುರದಲ್ಲಿ ಜುಲೈ 29 ಮತ್ತು 30 ರಂದು ನಡೆದ ವಿಕಲಚೇತನರ ಸಿಟ್ಟಿಂಗ್ ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ಮತ್ತು ಪುರುಷ ತಂಡಗಳು ಗೆಲ್ಲುವ ಮೂಲಕ ಚಿನ್ನದ ಪದಕ ಬೇಟೆಯಾಡಿದ್ದಾರೆ. ಈ ಇಬ್ಬರು ಆಟಗಾರರು ಹಾವೇರಿ ಜಿಲ್ಲೆಯವರಾಗಿದ್ದು, ಮಹಿಳಾ ತಂಡವನ್ನು ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿ ತಾಂಡಾದ ಮಂಜುಳಾ ಲಮಾಣಿ ಹಾಗು ಪುರುಷ ತಂಡವನ್ನು ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಹರೀಶ್ ಶಿವಣ್ಣನವರ್ ಮುನ್ನಡಿಸಿದ್ದರು. ಮುಂಬರುವ ಪ್ಯಾರಾ ಏಷ್ಯನ್ ಗೇಮ್ಸ್ …
Read More »