ಚಿಕ್ಕಮಗಳೂರು: ರಾಜ್ಯದ ಪ್ರವಾಸಿಗರ ಸ್ವರ್ಗವೆಂದೇ ಹೇಳಲಾಗುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಬಂದು ಹೋಗಲಷ್ಟೇ ಸ್ವರ್ಗವೆನಿಸುತ್ತದೆ. ಆದರೆ, ಇಲ್ಲಿ ನೆಲೆಗೊಂಡು ಜೀವನ ಮಾಡುವವರಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗತೊಡಗಿದೆ. ಮೂಡಿಗೆರೆಯ ಒಂದೇ ಕಾಫಿ ಎಸ್ಟೇಟ್‌ನಲ್ಲಿ 16 ಕಾಡಾನೆಗಳು ಒಂದು ವಾರದಿಂದ ಬೀಡು ಬಿಟ್ಟಿದ್ದು, ಎಲಿಫ್ಯಾಂಟ್ ಟಾಸ್ಕ್ ಫೋರ್ಸ್‌ನ ಆನೆ ಓಡಿಸುವ ಪ್ರಯತ್ನ ಸಂಪೂರ್ಣ ವ್ಯರ್ಥವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳು ಹಾಗೂ ಮಾನವನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕಾಡಾನೆಗಳು ಪದೇ ಪದೆ ದಾಳಿ …
Read More »2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಡುತ್ತಾರೆ ಎಂಬ ಭರವಸೆ ನಮಗಿದೆ ಎಂದು ಖರ್ಗೆ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಹೈಕಮಾಂಡ್ ಕರೆದ ಸಭೆಯಲ್ಲಿ ರಾಜ್ಯದ ಹಲವು ನಾಯಕರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, …
Read More »ರಾಜ್ಯ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಫಲಶೃತಿಯಿಂದ ಸಾರಿಗೆ ನೌಕರರಿಗೆ ಅರ್ಧ ಸಂಬಳ ಮಾತ್ರ ದೊರೆತಿದೆ” ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ”ರಾಜ್ಯ ಸರ್ಕಾರದ ಗ್ಯಾರೆಂಟೆ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಫಲಶೃತಿಯಿಂದ ಸಾರಿಗೆ ನೌಕರರಿಗೆ ಅರ್ಧ ಸಂಬಳ ಮಾತ್ರ ಗ್ಯಾರಂಟಿ ಲಭಿಸಿದೆ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ”ಶಕ್ತಿ ಯೋಜನೆ ಜಾರಿಯಾದ ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಗ್ಯಾರೆಂಟಿ ಯೋಜನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ” …
Read More »ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20-24 ಸ್ಥಾನಗಳಲ್ಲಿ ಜಯಗಳಿಸುವ ಭರವಸೆ:C .M.
ನವದೆಹಲಿ/ಬೆಂಗಳೂರು: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು, ಕಾಂಗ್ರೆಸ್ 20-24 ಸ್ಥಾನಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಹೈಕಮಾಂಡ್ ಬುಧವಾರ ಮಹತ್ವದ ಸಭೆ ನಡೆಯಿತು. ಈ ಸಭೆ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಮ್ಮ …
Read More »ಖಾಸಗಿ ಕಂಪೆನಿಯ ಕ್ರಿಮಿನಾಶಕ ಸಿಂಪಡಣೆಯಿಂದ ರೈತರೊಬ್ಬರ ಟೊಮೆಟೊ ಬೆಳೆ ಸಂಪೂರ್ಣ ನಾಶ
ದೊಡ್ಡಬಳ್ಳಾಪುರ : ಟೊಮೆಟೊಗೆ ಇವತ್ತು ಚಿನ್ನದ ಬೆಲೆ. ಉತ್ತಮ ಬೆಲೆ ಸಿಗುವ ಸಮಯಕ್ಕೆ ಟೊಮೆಟೊ ಬೆಳೆಯ ಭರ್ಜರಿ ಫಸಲು ಬಂದಿತ್ತು. ಆದರೆ, ಕಂಪನಿಯೊಂದರ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡಿದ್ದರಿಂದ ತಾಲೂಕಿನಲ್ಲಿ ಇಡೀ ಟೊಮೆಟೊ ಬೆಳೆ ಒಣಗಿನಿಂತಿದೆ ಎಂದು ರೈತರು ಆರೋಪಿಸಿದ್ದಾರೆ. ರೈತನ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಅಡುಗೆ ಮನೆಯ ರಾಣಿ, ಕೆಂಪು ಸುಂದರಿ ಎಂದೇ ಟೊಮೆಟೊ ಪ್ರಸಿದ್ಧಿ ಪಡೆದಿದೆ. ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆಗೆ ಬಂಗಾರದ ಬೆಲೆ ಇದೆ. ಇವತ್ತು …
Read More »ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಅಪರಾಧಿಗೆ ಸೂರತ್ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿ
ಸೂರತ್(ಗುಜರಾತ್) : ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಅಪರಾಧಿಗೆ ಗುಜರಾತ್ನ ಸೂರತ್ ನ್ಯಾಯಾಲಯವು ಮರಣ ದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ 23 ವರ್ಷದ ಅಪರಾಧಿಯು ಪುಟ್ಟ ಮಗುವನ್ನು ಅತ್ಯಾಚಾರ ಎಸಗಿ ಹತ್ಯೆಗೈದಿದ್ದ. ಈ ಬಗ್ಗೆ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯವು ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಿದೆ. ಅಪರಾಧಿಯನ್ನು ಸೂರತ್ನ ಸಚಿನ್ ಪ್ರದೇಶದ ನಿವಾಸಿ ಇಸ್ಮಾಯಿಲ್ ಯೂಸುಫ್(23) ಎಂದು ಗುರುತಿಸಲಾಗಿದೆ. ಅತ್ಯಾಚಾರ ಆರೋಪಿಗೆ …
Read More »ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನಿಖೆಗೆ ಆದೇಶಿಸಿದ್ದಾರೆ.
ಬೆಂಗಳೂರು: ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ ಕೊಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಘಟನೆಗೆ ಯಾರೇ ಕಾರಣರಾಗಿದ್ದರೂ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಿಂದ …
Read More »ಸ್ವಿಚ್ ಬೋರ್ಡ್ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವಯರ್ನ್ನು ಬಾಯಿ ಹಾಕಿದ ಪರಿಣಾಮ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದ
ಕಾರವಾರ(ಉತ್ತರಕನ್ನಡ):ಸ್ವಿಚ್ ಬೋರ್ಡ್ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವಯರ್ನ್ನು ಬಾಯಿ ಹಾಕಿದ ಪರಿಣಾಮ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಸಿದ್ದರದಲ್ಲಿ ಇಂದು ನಡೆದಿದೆ. ಸಿದ್ದರದ ಸಂತೋಷ ಕಲ್ಗುಟಕರ್, ಸಂಜನಾ ಕಲ್ಗುಟಕರ್ ದಂಪತಿಗೆ ಸೇರಿದ 8 ತಿಂಗಳ ಹೆಣ್ಣು ಮಗು ಸಾನಿಧ್ಯ ಕಲ್ಗುಟಕರ್ ಮೃತಪಟ್ಟಿದೆ. 14 ವರ್ಷದ ಬಳಿಕ ದಂಪತಿಗೆ ಈ ಮಗು ಜನಿಸಿತ್ತು. ಕರುಳ ಕುಡಿ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗ್ಗೆ …
Read More »ಬಿಸಿಲಿನ ತಾಪಕ್ಕೆ ಹೆಸರುವಾಸಿಯಾದ ಕಲಬುರಗಿ ಜಿಲ್ಲೆ ಈಗ ಅಕ್ಷರಶಃ ಮಲೆನಾಡಿನ ವಾತಾವರಣದಂತೆ
ಕಲಬುರಗಿ: ಬಿಸಿಲಿನ ತಾಪಕ್ಕೆ ಹೆಸರುವಾಸಿಯಾದ ಕಲಬುರಗಿ ಜಿಲ್ಲೆ ಈಗ ಅಕ್ಷರಶಃ ಮಲೆನಾಡಿನ ವಾತಾವರಣದಂತೆ ಭಾಸವಾಗುತ್ತಿದೆ. ಕಳೆದೊಂದು ವಾರದಿಂದ ಅಬ್ಬರದ ಮಳೆಯಾಗಿದೆ. ಜೊತೆಗೆ ಮಹಾರಾಷ್ಟ್ರ, ತೆಲಂಗಾಣದಲ್ಲಿ ಸುರಿದಿದ್ದ ಭಾರಿ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ತಂಪಿನ ವಾತಾವರಣ ಕಂಡುಬರುತ್ತಿದೆ. ಚಿಂಚೋಳಿ ತಾಲೂಕಿನ ಎತ್ತಿಪೋತಾ ಜಲಪಾತ ಮೈದುಂಬಿ ಹರಿಯುತ್ತಿದೆ. ಜಲಪಾತದ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೆರಳೆಣಿಕೆಯಷ್ಟು ಚಿಕ್ಕಪುಟ್ಟ ಜಲಪಾತಗಳು ಇವೆ. ಬೆಸಿಗೆಯಲ್ಲಿ ಇವು ಸೊರಗಿ ಹೋಗುತ್ತವೆ. …
Read More »15 ತಿಂಗಳಿನಿಂದ ಅಂಗನವಾಡಿ ಕೇಂದ್ರಗಳ ಇಲಾಖೆಯಿಂದ ಬಾಡಿಗೆ ಹಣ ಬಂದಿಲ್ಲ.
ಬೆಳಗಾವಿ: 15 ತಿಂಗಳಿನಿಂದ ಬಾಕಿಯಿರುವ ಅಂಗನವಾಡಿ ಕೇಂದ್ರಗಳ ಬಾಡಿಗೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. 1975ರಲ್ಲಿ ಪ್ರಾರಂಭವಾದ ICDS ಯೋಜನೆಯಡಿ ಸುಮಾರು 30 ರಿಂದ 40 ವರ್ಷಗಳಿಂದ ಗೌರವಧನದ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ನೌಕರರ ಜೀವನ ಕಷ್ಟಕರವಾಗಿದೆ. ಗರ್ಭಿಣಿ, ಬಾಣಂತಿಯರ ಆರೈಕೆ, 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವುದು, ಪೌಷ್ಟಿಕ ಆಹಾರ ನೀಡುವುದಕ್ಕಾಗಿ …
Read More »