Breaking News

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಪಿಎಚ್‌ಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ಆದಿ ಮಂಜುನಾಥ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕ ಸದಸ್ಯಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹಲವು ಕೇಂದ್ರಗಳಲ್ಲಿ …

Read More »

ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ, ಬಿಜೆಪಿಯಲ್ಲಿ ಹೊಸ ಚರ್ಚೆ ಆರಂಭ

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬಂದಿದ್ದ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೆಸರು ನಿಧಾನಕ್ಕೆ ಮರೆಯಾಗುತ್ತಿದ್ದು, ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೆಸರು ಈಗ ಮುನ್ನಲೆಗೆ ಬಂದಿದೆ. ಬಿಎಸ್​ವೈ ಜೊತೆ ಉತ್ತಮ ಒಡನಾಟ ಹಾಗೂ ದಲಿತರಿಗೆ ಅವಕಾಶ ಎನ್ನುವ ಕಾರಣದಿಂದಾಗಿ ಲಿಂಬಾವಳಿ ಹೆಸರು ಕೇಳಿಬಂದಿದೆ. ಒಂದು ಪಕ್ಷ ನಡೆಸುವ ತಾಕತ್ತು ದಲಿತರಿಗೆ ಇದ್ದರೆ ಯಾಕೆ ಅವಕಾಶ ಕೊಡಬಾರದು? ದಲಿತರೂ ರಾಜ್ಯಾಧ್ಯಕ್ಷ ಆಗಬಹುದು ಎಂದು …

Read More »

ಟೊಮೆಟೊ ಮಾರಾಟ ಮಾಡಿ ಒಂದೇ ದಿನದಲ್ಲಿ 4 ಲಕ್ಷ ರೂ. ಗಳಿಸಿದ ರೈತ

ತಿರುಪುರ್ (ತಮಿಳುನಾಡು) : ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆಯು ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿದ್ದು, ತರಕಾರಿ ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಆದರೆ, ಈ ಮಧ್ಯೆಯೇ ರೈತರು ಉತ್ತಮ ಆದಾಯ ಗಳಿಸುತ್ತಿದ್ದಾರೆ. ಇದೀಗ ತಮಿಳುನಾಡಿನ ರೈತರೊಬ್ಬರು ಒಂದೇ ದಿನದಲ್ಲಿ 4 ಲಕ್ಷ ರೂ. ಟೊಮೆಟೊ ಮಾರಾಟ ಮಾಡಿ ಅಧಿಕ ಲಾಭ ಗಳಿಸಿದ್ದಾರೆ. ಇಲ್ಲಿನ ಗುಂಡಂ ಸಮೀಪದ ಜ್ಯೋತಿಯಂಪಟ್ಟಿಯ 27 ವರ್ಷದ ರೈತ ವೆಂಕಟೇಶ್ ಅವರು ಕೃಷಿಯಲ್ಲಿ ಗಮನಾರ್ಹ ಸಾಧನೆ ಮಾಡುವ …

Read More »

ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳ ಹರಡುವಿಕೆಯನ್ನು ತಡೆಯುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುತಿಸಿದೆ.

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರದ ವಿಡಿಯೋಗಳನ್ನು ಹರಡುವುದನ್ನು ನಿಯಂತ್ರಿಸಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ್ದ ತಜ್ಞರ ಸಮಿತಿ ನೀಡಿದ ವರದಿಯನ್ನು ನ್ಯಾಯಾಲಯ ಪರಿಶೀಲಿಸಿದೆ. ತಜ್ಞರ ವರದಿ ಪರಿಶೀಲಿಸಿದ ಬಳಿಕ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್​ ತನ್ನ ಆದೇಶದಲ್ಲಿ ತಿಳಿಸಿದೆ. 2015 ರಲ್ಲಿ, ವಾಟ್ಸ್​ಆಯಪ್​ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಕ್ಕಳ …

Read More »

ರಾತ್ರಿ ವೇಳೆ ಬೈಕ್​ ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ದರೋಡೆಕೋರರ ಬಂಧನ

ಬೆಂಗಳೂರು: ಹೊಟ್ಟೆಪಾಡಿಗಾಗಿ ಕೆಲಸ ಮಾಡುವ ಡೆಲಿವರಿಬಾಯ್​​​ಗಳನ್ನು ಗುರಿಯಾಗಿಸಿಕೊಂಡು ರಾತ್ರಿವೇಳೆ ಅವರ ಎಲೆಕ್ಟ್ರಿಕಲ್ ಬೈಕ್​​ ಗಳನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಸುಲಿಗೆಕೋರರನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.   ಅಸ್ಸೋಂ ಮೂಲದ ರಾಕೇಶ್ ಹಾಗೂ ಮಲ್ಲಿಕ್ ಬಂಧಿತ ಆರೋಪಿಗಳು. ಈ ಹಿಂದೆ ಸೆಕ್ಯೂರಿಟಿಗಾರ್ಡ್​ಗಳಾಗಿ ಕೆಲಸ ಮಾಡುತ್ತಿದ್ದರು. ಹಣದ ಆಸೆಗಾಗಿ ಅಪರಾಧ ಎಸಗಲು ನಿರ್ಧರಿಸಿದ್ದ ಆರೋಪಿಗಳು, ಎಲೆಕ್ಟ್ರಿಕ್ ಬೈಕ್ ಗಳಲ್ಲಿ ಫುಡ್​ ಡೆಲಿವರಿ ಮಾಡುವ ಯುವಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆಗೆ ಇಳಿದಿದ್ದರು‌. …

Read More »

ಕಳೆದ ಎರಡು ತಿಂಗಳಿನಿಂದ ಗೌರವ ವೇತನ ಇಲ್ಲದೇ ಅತಿಥಿ ಉಪನ್ಯಾಸಕರು ಸಮಸ್ಯೆ ಎದುರಿಸುವಂತಾಗಿದ್ದು, ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂದು ಮಾಜಿ ಸಚಿವ ಸುರೇಶ್​ ಕುಮಾರ್​ ಪತ್ರ ಬರೆದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಎರಡೂವರೆ ತಿಂಗಳಿನಿಂದ ಗೌರವ ವೇತನ ಬಿಡುಗಡೆಯಾಗದೇ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬಾಕಿ ಉಳಿಸಿಕೊಂಡಿರುವ ಗೌರವ ವೇತನ ಬಿಡುಗಡೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್​ಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.   ಮಾಜಿ ಸಚಿವರು ಬರೆದ ಪತ್ರರಾಜ್ಯದ 436 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. …

Read More »

ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಸಮಿತಿ ರಚನೆ ಅಗತ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚನೆ ಮಾಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ‘ಸಮನ್ವಯ ಸಮಿತಿ ರಚನೆ ಅಗತ್ಯ ಇಲ್ಲ.‌ ಇಂದು ದೆಹಲಿಯಲ್ಲಿ ವರಿಷ್ಠರ ಜೊತೆಗೆ ಬೇರೆ ಏನು ಚರ್ಚೆ ಆಗುತ್ತೋ, ಇಲ್ವೋ ಗೊತ್ತಿಲ್ಲ’ ಎಂದರು. ಕೆಲವು ಸಚಿವರಿಗೆ …

Read More »

ಕ್ಯಾಬ್​​ ಚಾಲಕನೊಬ್ಬ ಮಹಿಳೆಗೆ ನಂಬಿಸಿ ಬಳಿಕ ಸುಲಿಗೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ನೀವು ಕ್ಯಾಬ್​ನಲ್ಲಿ ಪ್ರಯಾಣ ಮಾಡುತ್ತ ಮೊಬೈಲ್ ಕರೆಯಲ್ಲಿ ಪರ್ಸನಲ್ ವಿಚಾರ ಮಾತನಾಡುವಾಗ ಎಚ್ಚರವಹಿಸಿ. ಕೊಂಚ ಯಾಮಾರಿದರೂ ನಿಮ್ಮ ವೀಕ್​ನೆಸ್​​ನ್ನೇ ಬಂಡವಾಳ ಮಾಡಿಕೊಂಡು ಹಣ ಸುಲಿಗೆ ಮಾಡಬಹುದು. ಚಾಲಕನೊಬ್ಬ ಮಹಿಳೆಯಿಂದ ಲಕ್ಷಾಂತರ ರೂ. ಹಣ ಹಾಗೂ ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣವೊಂದು ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸ್ನೇಹಿತನ ಸೋಗಿನಲ್ಲಿ ಕರೆ ಮಾಡಿ ಮಹಿಳೆಗೆ 22 ಲಕ್ಷ ರೂಪಾಯಿ ಹಾಕಿಸಿಕೊಂಡು ವಂಚಿಸಿದ್ದ ಕ್ಯಾಬ್ ಚಾಲಕನನ್ನು ಬೆಂಗಳೂರಿನ ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. …

Read More »

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಇಂದಿನಿಂದ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಪ್ರಾರಂಭ

ಮೈಸೂರು: ಉದ್ಯೋಗಿಕಾಂಕ್ಷಿಗಳಿಗೆ ಭಾರತೀಯ ಸೇನಾ ಇಲಾಖೆ ಸಿಹಿ ಸುದ್ದಿ ನೀಡಿದೆ. ಇಲ್ಲಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅಗ್ನಿವೀರ್ ಯೋಜನೆಯಡಿ ಸೇನಾ ನೇಮಕಾತಿ ರ‍್ಯಾಲಿ ಇಂದಿನಿಂದ ಆರಂಭವಾಗಿದೆ. ನಾಲ್ಕು ದಿನಗಳ ಕಾಲ ಈ ನೇಮಕಾತಿ ರ‍್ಯಾಲಿ ನಡೆಯಲಿದೆ. ಸೇನಾ ನೇಮಕಾತಿ ರ‍್ಯಾಲಿಯ ಮೊದಲನೇ ದಿನವಾದ ಇಂದು 559 ಮಂದಿಗೆ ದೈಹಿಕ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ ಆಯ್ಕೆಯಾದ 492 ಮಂದಿ ಮುಂದಿನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಇವರನ್ನು 5 ಬ್ಯಾಚ್​ಗಳಾಗಿ ವಿಂಗಡಣೆ ಮಾಡಿ ಪ್ರತಿ ಬ್ಯಾಚ್​ನಿಂದ …

Read More »

ಸಾರ್ವಜನಿಕರು ಜಿಲ್ಲಾಧಿಕಾರಿಯನ್ನು ಭೇಟಿಯಾಗಲು ಕಾಯುವಷ್ಟು ಸಮಯ ವ್ಯರ್ಥವಾಗದಂತೆ, ಓದಲು ನೂರಾರು ಪುಸ್ತಕಗಳನ್ನು ಜೋಡಿಸಲಾಗಿದೆ.

ಬೆಳಗಾವಿ: ಜಿಲ್ಲೆಯ‌ ವಿವಿಧೆಡೆಯಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನರಿಗೆ ಸಮಸ್ಯೆ ನಿವಾರಣೆ ಜೊತೆಗೆ ಜ್ಞಾನ ಭಂಡಾರವನ್ನು ಉಣಬಡಿಸುವ ಕೆಲಸವನ್ನು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾ ಪಂಚಾಯಿತಿ ಮಾಡುತ್ತಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.   ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುಸ್ತಕಗಳನ್ನು ಓದುತ್ತಿರುವುದುಒಂದೆಡೆ ಶಿಸ್ತಿನಿಂದ ಆಸನಗಳಲ್ಲಿ ಕುಳಿತುಕೊಂಡು ಪುಸ್ತಕ ಓದುತ್ತಿರುವ ಜನ, ಮತ್ತೊಂದೆಡೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ ಭಾವಚಿತ್ರಗಳು ಎಲ್ಲರ ಗಮನ ಸೆಳೆಯುತ್ತಿರುವುದು. ಹೌದು ಜಿಲ್ಲಾಧಿಕಾರಿ ಕಚೇರಿಗೆ ನಿತ್ಯ ವಿವಿಧ ಕೆಲಸದ ನಿಮಿತ್ತ …

Read More »