ಬೆಳಗಾವಿ: ದೀಪಾವಳಿ ಹಬ್ಬವನ್ನು ಒಂದೊಂದು ಭಾಗಗಳಲ್ಲಿ ಒಂದೊಂದು ರೀತಿ ಆಚರಿಸುತ್ತಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಕ್ಕಳು ಕೋಟೆ ಕಟ್ಟಿ ಸಂಭ್ರಮಿಸುತ್ತಾರೆ. ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಸಾಹಸ, ಪರಾಕ್ರಮವನ್ನು ಇಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಆ ಕುರಿತು ಈಟಿವಿ ಭಾರತದ ವಿಶೇಷ ವರದಿ ಇಲ್ಲಿದೆ. ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚಿ, ದೀಪ ಬೆಳಗಿಸಿ, ಸಿಹಿ ಹಂಚಿ ಸಂಭ್ರಮಿಸುವುದು ಸಾಮಾನ್ಯ. ಆದರೆ ಕುಂದಾನಗರಿಯ ಮಕ್ಕಳು ಮಾತ್ರ ಐತಿಹಾಸಿಕ ಕೋಟೆಗಳ ಮಾದರಿ ನಿರ್ಮಿಸಿ …
Read More »ಲಿಂಗಾಯತ ಮತ ಬ್ಯಾಂಕ್ಗೋಸ್ಕರ ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಲಿಂಗಾಯತ ಸಮುದಾಯದ ಮತ ಬ್ಯಾಂಕ್ ನೋಡಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಮಾಡಿದ್ದಾರೆ. ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಇಟ್ಟುಕೊಳ್ಳುವ ಅನಿವಾರ್ಯತೆ ಇದೆ. ಹೀಗಾಗಿ, ಅವರ ಆಯ್ಕೆ ಮಾಡಿರಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಲು ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು ಕೂಡ ಒಂದು ಕಾರಣ. ಇನ್ನು ಬಿಜೆಪಿಯಲ್ಲೂ ಮಕ್ಕಳಿಗೆ, ಮೊಮ್ಮಕ್ಕಳಿಗೆ ಸ್ಥಾನಮಾನ ನೀಡುವ …
Read More »ಕುಂದಾನಗರಿಯಲ್ಲಿ ಬೆಳಕಿನ ಹಬ್ಬದ ಸಂಭ್ರಮ ಹಸಿರು ಪಟಾಕಿ ಬಳಸುವಂತೆ ಡಿಸಿ ಮನವಿ
ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿಯನ್ನು ರಾಜ್ಯಾಧ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ದೀಪಾವಳಿ ವಿಶೇಷ ಎಂದರೆ ದೀಪ ಬೆಳಗಿಸುವುದು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಪಡುವ ಹಬ್ಬ. ಆದರೆ ಈ ಸಡಗರ ಮಧ್ಯೆ ಪಟಾಕಿ ಸಿಡಿಸಲು ಹೋಗಿ ಅದೆಷ್ಟೋ ಅವಘಡಗಳು ಸಂಭವಿಸಿ ಯುವಕರು, ಮಕ್ಕಳು ಕಣ್ಣು ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳು ಪ್ರತಿವರ್ಷವೂ ನಡೆಯುತ್ತಲೇ ಇವೆ. ಜತೆಗೆ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಮನಗಂಡ ಬೆಳಗಾವಿ ಜಿಲ್ಲಾಡಳಿತ ಪರಿಸರಕ್ಕೆ ಮಾರಕವಾಗಿರುವ ಪಟಾಕಿಗಳನ್ನು ಬ್ಯಾನ್ ಮಾಡಿ …
Read More »ಸಿದ್ದರಾಮಯ್ಯ ಡುಪ್ಲಿಕೇಟ್ ಸಿಎಂ: H.D.K.
ಬೆಂಗಳೂರು: ಮಾಜಿ ಸಿಎಂ ಮತ್ತು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ನಾಲ್ಕು ಗ್ಯಾರಂಟಿಗಳ ವೈಫಲ್ಯದ ಬಗ್ಗೆ ದಾಖಲೆಗಳ ಸಮೇತ ಮಾಜಿ ಸಿಎಂ ಮಾತನಾಡಿದರು. ತೆಲಂಗಾಣದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ನ ಭರವಸೆಗಳನ್ನು ನಂಬಬೇಡಿ, ಗ್ಯಾರಂಟಿಗಳಿಗೆ ಮರುಳಾಗಬೇಡಿ, ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಹೆಚ್ಡಿಕೆ ಆರೋಪಿಸಿದರು. …
Read More »ದೀಪಾವಳಿ ಹಬ್ಬ : ಮಣ್ಣಿನ ಹಣತೆಗಳ ಖರೀದಿಯಲ್ಲಿ ನಿರತರಾದ ಸಿಲಿಕಾನ್ ಸಿಟಿ ಮಂದಿ
ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಮೂರು ದಿನಗಳ ಕಾಲ ಸಾಲು ಸಾಲು ದೀಪಗಳನ್ನು ಹಚ್ಚಿ ಸಂಭ್ರಮಿಸುವುದು ಈ ಹಬ್ಬದ ಸಂಪ್ರದಾಯ. ಅಂಧಕಾರವ ಕಳೆದು ಬೆಳಕಿನೆಡೆಗೆ ಕರೆದುಕೊಂಡು ಹೋಗುವ ದೀಪಗಳ ಹಬ್ಬವನ್ನು ಸ್ವಾಗತಿಸಲು ನಗರದ ಮಾರುಕಟ್ಟೆಯಲ್ಲಿ ಬಗೆಬಗೆಯ ಹಣತೆಗಳು ಬಂದಿವೆ. ಮಣ್ಣಿನ ದೀಪಗಳು ದುಬಾರಿ ಎನಿಸಿದರೂ ಪರಿಸರ ಸ್ನೇಹಿ ದೀಪಗಳಾಗಿರುವುದರಿಂದ ಬೇಡಿಕೆ ಹೆಚ್ಚಿದೆ. ನಗರದಲ್ಲಿ ಜೇಡಿ ಮಣ್ಣಿನಿಂದ ಹೂವು, ಆನೆಯ ಮಾದರಿಯ ದೀಪ, ನವಿಲುಗರಿ ಮತ್ತು ಮಹಿಳಾ ಪ್ರತಿರೂಪದ …
Read More »ಭಾರತ vs ನೆದರ್ಲೆಂಡ್ಸ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸರಕು ಸಾಗಣೆ ವಾಹನಗಳಿಗೆ ನಿಷೇಧ
ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್‌ನ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ಪಂದ್ಯಕ್ಕೆ ನಾಳೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಮೈದಾನದ ಸುತ್ತಮುತ್ತ ಸರಕು ಹಾಗೂ ಸಾಗಣಿಕೆ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ. ವಿಶ್ವಕಪ್‌ನಲ್ಲಿ ಲೀಗ್ ಹಂತದ ಮತ್ತು ಭಾರತ ತಂಡದ ಕೊನೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಯಾವುದೇ ರೀತಿಯ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದೆ. ಕ್ಯಾಬ್ಗಳಿಗೆ ಪಿಕ್ ಅಪ್ ಅಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದೆ. ವಾರಾಂತ್ಯ …
Read More »ದೀಪಾವಳಿಯಲ್ಲಿ ಬದುಕು ಕತ್ತಲಾಗದಿರಲಿ: ಪಟಾಕಿ ಹೊಡೆಯುವಾಗ ಮುಂಜಾಗ್ರತೆ ವಹಿಸಲು ನೇತ್ರತಜ್ಞರ ಸಲಹೆ
ದಾವಣಗೆರೆ: ದೀಪಾವಳಿ ಬೆಳಕಿನ ಹಬ್ಬ. ಆದರೆ, ಈ ಬೆಳಕಿನ ಹಬ್ಬದಲ್ಲಿ ಸಾಕಷ್ಟು ಜನ ಪಟಾಕಿ ಹೊಡೆಯುವ ಸಾಹಸಕ್ಕೆ ಕೈ ಹಾಕಿ ತಮ್ಮ ಬದುಕು ಕತ್ತಲಾಗಿಸಿಕೊಂಡಿದ್ದಾರೆ. ಪಟಾಕಿ ಸಿಡಿದರೆ ಕಣ್ಣಿಗಾಗುವ ಹಾನಿ ಹಾಗೂ ಪಟಾಕಿ ಹೊಡೆಯುವ ಮುನ್ನ ಮುಖ್ಯವಾಗಿ ಮಕ್ಕಳು ಯುವಕರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಯಾವ ರೀತಿ ಮುಂಜಾಗ್ರತೆ ವಹಿಸಬೇಕು ಎಂದು ನೇತ್ರತಜ್ಞ ರವೀಂದ್ರನಾಥ್ ಮಾಹಿತಿ ಕೊಟ್ಟಿದ್ದಾರೆ. ದೀಪಗಳ ಹಬ್ಬ ದೀಪಾವಳಿ. ಬೆಳಕಿನ ಹಬ್ಬದಲ್ಲಿ ಪಟಾಕಿ ಹೊಡೆದು ಸಂಭ್ರಮಿಸುವುದು ಯಾವ ಹಬ್ಬಗಳಲ್ಲೂ …
Read More »ರಾಜ್ಯಾಧ್ಯಕ್ಷರ ಆಯ್ಕೆ ಮಾಡುವ ವಿಚಾರದಲ್ಲಿ ಬಿಜೆಪಿ ಫೇಲ್: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ”ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಅತ್ತು ಕರೆದು ಮಾಡಿರೋ ತರಹ ಕಾಣುತ್ತಿದೆ. ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಆದ್ರೆ, ಇವಗ್ಯಾಕೆ ಆಯ್ಕೆ ಮಾಡಿದ್ರು” ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಆದ್ರೆ ಬಿಜೆಪಿ ಈ ವಿಚಾರದಲ್ಲಿ ಸಂಪೂರ್ಣ ಫೇಲ್ ಆಗಿದೆ” ಎಂದರು. ಲಿಂಗಾಯತ ನಾಯಕರಿಗೆ ಮಣೆ ಹಾಕಿರುವ ವಿಚಾರಕ್ಕೆ …
Read More »ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರಗೆ ಪಟ್ಟ: ಎಂ.ಬಿ ಪಾಟೀಲ್
ಬೆಂಗಳೂರು : ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ನಾಯಕರು ನಾಟಕವಾಡ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಬಿ.ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ರಾಜ್ಯಾಧ್ಯಕ್ಷರು ಇದ್ದರು. ನಾವು ಕೇಳಿದ್ದು ವಿಪಕ್ಷ ನಾಯಕನನ್ನು. ಆದರೆ, ಹೊಸ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಅದು ಅವರ ಪಕ್ಷದ ಆಂತರಿಕ ವಿಚಾರ. ಈ ಹಿಂದೆ ಲಿಂಗಾಯತರೇ ರಾಜ್ಯದ ಸಿಎಂ …
Read More »ಡಿಕೆಶಿಯವರೊಂದಿಗೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದ ಜಾರಕಿಹೊಳಿ
ಬೆಳಗಾವಿ: ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ್ (D.K. Shivakumar) ಅವರೊಂದಿಗೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ (Sathish jarakiholi) ಹೇಳಿದರು. ಬೆಳಗಾವಿ (belagavi) ರಾಜಕಾರಣದಲ್ಲಿ ಬೇರೆಯವರ ಹಸ್ತಕ್ಷೇಪದ ಕುರಿತು ಮುನಿಸಿಕೊಂಡಿರುವ ಜಾರಕಿಹೊಳಿ ಬೆಳಗಾವಿಯಲ್ಲಿ ಮಾತನಾಡಿ, ಈ ಬಗ್ಗೆ ಪಕ್ಷದ ವತಿಯಿಂದ ಚರ್ಚೆ ನಡೆಯಬೇಕು. ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು. ಡಿ.ಕೆ. ಶಿವಕುಮಾರ್ ಅವರು ಹಲವು ಬಾರಿ …
Read More »
Laxmi News 24×7