ಚಿತ್ರದುರ್ಗ : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಡಿ. ಸುಧಾಕರ್ ‘ಹೊಸ ಬಾಟಲಿಯಲ್ಲಿ ಹಳೆ ವೈನ್’ ಎಂದು ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ವಿಚಾರದಲ್ಲಿ ನಾವು ಮೂಗು ತೋರಿಸುವುದಿಲ್ಲ. ಕಾಂಗ್ರೆಸ್‌ನ ಸಿದ್ಧಾಂತವೇ ಬೇರೆ ಬಿಜೆಪಿಯ ಸಿದ್ಧಾಂತವೇ ಬೇರೆ. ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ. ಯಾರೇ ಬಂದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಂದರು.
Read More »ಇದು ಕುಟುಂಬ ರಾಜಕಾರಣವಲ್ಲ-ಯುವ ನಾಯಕತ್ವಕ್ಕೆ ಸಿಕ್ಕ ಆದ್ಯತೆ: ಬಿ.ವೈ. ವಿಜಯೇಂದ್ರ
ಬೆಂಗಳೂರು:ಕುಟುಂಬ ರಾಜಕಾರಣ ನನ್ನ ಆಯ್ಕೆಯಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ವರಿಷ್ಠರು ನನಗೆ ಅವಕಾಶವನ್ನು ನೀಡಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದ ಅವರು, ಕುಟುಂಬ ರಾಜಕಾರಣದ ಆಧಾರದಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡುವುದಿದ್ದರೆ ಕಳೆದ ಮೂರು ತಿಂಗಳ ಹಿಂದೆಯೇ ವರಿಷ್ಠರು ಮಾಡುತ್ತಿದ್ದರು. ಇದು ಬಿಜೆಪಿ ರಾಜಕಾರಣವಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ನನಗೆ ಅವಕಾಶವನ್ನು ನೀಡಿದ್ದಾರೆ …
Read More »2A ಮೀಸಲು ಹೋರಾಟ; ಇಷ್ಟಲಿಂಗ ಪೂಜೆ ನೆರವೇರಿಸಿ ಹೆದ್ದಾರಿಯಲ್ಲಿ ಪ್ರತಿಭಟಿಸಿದ ಬಸವ ಜಯಮೃತ್ಯುಂಜಯ ಶ್ರೀ
ದಾವಣಗೆರೆ: ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಹಾಗೂ ಸಮಾಜದ ಎಲ್ಲ ಉಪಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕೆಂದು ಆಗ್ರಹಿಸಿ ಇಂದಿನಿಂದ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಏಳನೇ ಹಂತದ ಹೋರಾಟವನ್ನು ದಾವಣಗೆರೆಯಲ್ಲಿ ನಡೆಸಿದರು. ನಗರದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕೂತು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಹಾಗೂ ಭಕ್ತರು ಕೈಯಲ್ಲಿ ಲಿಂಗ ಹಿಡಿದು ಇಷ್ಟಲಿಂಗ ಪೂಜೆ ನೆರವೇರಿಸುವ …
Read More »2 ಸಾವಿರ ಎಕರೆಯಲ್ಲಿ ವಿಶ್ವ ದರ್ಜೆಯ ಕೆಹೆಚ್‌ಐಆರ್ ಸಿಟಿ ನಿರ್ಮಾಣ, 1 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಎಂ ಬಿ ಪಾಟೀಲ್
ಬೆಂಗಳೂರು: ರಾಜಧಾನಿಯಿಂದ 60-80 ಕಿ.ಮೀ. ದೂರದಲ್ಲಿ ಜಾಗತಿಕ ದರ್ಜೆಯ ‘ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರ’ (ಕೆಹೆಚ್‌ಐಆರ್)ವನ್ನು ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆ ಆಗಲಿದ್ದು, 80 ಸಾವಿರದಿಂದ 1 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಉದ್ದೇಶಿತ ಕೆಹೆಚ್‌ಐಆರ್ ಸಿಟಿ ಬಗ್ಗೆ ಗಣ್ಯ ಉದ್ಯಮಿಗಳು, ವೈದ್ಯರು, ಶಿಕ್ಷಣ ತಜ್ಞರು ಮತ್ತು ಸಂಶೋಧಕರ ಸಲಹೆ, …
Read More »ಬೆಂಗಳೂರಲ್ಲಿ ಇಸ್ಟೀಟ್ ಜೂಜು ಅಡ್ಡೆ ಮೇಲೆ ದಾಳಿ; 150ಕ್ಕೂ ಹೆಚ್ಚು ಜೂಜುಕೋರರು ಪೊಲೀಸ್ ವಶಕ್ಕೆ
ಬೆಂಗಳೂರು: ಅಕ್ರಮವಾಗಿ ನಡೆಯುತ್ತಿದ್ದ ಇಸ್ಟೀಟ್ ಅಡ್ಡೆ ಮೇಲೆ ಏಕಾಏಕಿ ದಾಳಿ ನಡೆಸಿದ ನಗರ ಪಶ್ಚಿಮ ವಿಭಾಗದ ಪೊಲೀಸರು 150ಕ್ಕೂ ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ ಕ್ಲಬ್ನಲ್ಲಿ ಅಕ್ರಮ ಚಟುವಟಿಕೆ ಕುರಿತು ಖಚಿತ ಮಾಹಿತಿ ಮೇರೆಗೆ ಬಸವೇಶ್ವರ ನಗರ ಹಾಗೂ ಗೋವಿಂದರಾಜ ನಗರ ಪೊಲೀಸರು ದಾಳಿ ನಡೆಸಿದ್ದಾರೆ. ಕ್ಲಬ್ನಲ್ಲಿ 150ಕ್ಕೂ ಹೆಚ್ಚು ಮಂದಿ ಇಸ್ಟೀಟ್ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು. ಎಲ್ಲರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ದಾಳಿ ಲಕ್ಷಾಂತರ ರೂಪಾಯಿ …
Read More »ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಈಗೇನಾದ್ರು ಮಾತನಾಡಿದ್ರೆ ನಮಗೇ ತಿರುಗುಬಾಣವಾಗುತ್ತೆ; ಸಿ ಟಿ ರವಿ
ಬೆಂಗಳೂರು: ಬಹುದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರ ಇದೀಗ ಪೂರ್ಣಗೊಂಡಿದೆ. ಬಿಜೆಪಿ ಹೈಕಮಾಂಡ್ ಕೊನೆಗೂ ಅಳೆದು ತೂಗಿ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನು ನೀಡಿದೆ. ಇನ್ನು ರಾಜ್ಯಾಧ್ಯಕ್ಷರ ರೇಸ್ನಲ್ಲಿ ಸಿ ಟಿ ರವಿ ಸೇರಿದಂತೆ ಹಲವು ನಾಯಕರ ಹೆಸರು ಮುಂಚೂಣಿಯಲ್ಲಿದ್ದವು. ಈ ಬಗ್ಗೆ ಸ್ವತಃ ಬಿಜೆಪಿ ನಾಯಕ ಸಿ ಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಧ್ಯಪ್ರದೇಶದಿಂದ ಬೆಂಗಳೂರಿಗೆ ಆಗಮಿಸಿದ ಸಿ ಟಿ ರವಿ ಅವರು ಈ …
Read More »ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮ
ಮೈಸೂರು : ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. ಇಲ್ಲಿನ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ ಸೌತ್ ಇಂಡಿಯಾ ಪೇಪರ್ ಮಿಲ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುದ್ದಿ ತಿಳಿದಾಕ್ಷಣ ಅಗ್ನಿಶಾಮಕ ದಳದವರು ತಕ್ಷಣ ಘಡನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ನಂಜನಗೂಡು ಬಳಿಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಸೌತ್ ಇಂಡಿಯಾ ಪೇಪರ್ ಮಿಲ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಬುದ್ನಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …
Read More »ಹಬ್ಬಗಳ ಸೀಸನ್: ರಾಜ್ಯವಾರು ಬ್ಯಾಂಕ್ ರಜಾ ದಿನಗಳ ಮಾಹಿತಿ
ಹೈದರಾಬಾದ್(ತೆಲಂಗಾಣ): ಭಾರತದಲ್ಲಿ ಪ್ರಸ್ತುತ ಹಬ್ಬದ ಸೀಸನ್ ನಡೆಯುತ್ತಿದೆ. ದೀಪಾವಳಿ, ಭಯ್ಯಾ ದೂಜ್ ಮತ್ತು ಛತ್‌ನಂತಹ ಹಬ್ಬಗಳು ಮುಂದಿನ ವಾರ ಬರಲಿವೆ. ನವೆಂಬರ್ 10ರಿಂದ ಸತತ 6 ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಿರುತ್ತವೆ. ದೀಪಾವಳಿಯ ಜೊತೆಗೆ ಗೋವರ್ಧನ ಪೂಜೆ, ಬಲಿ ಪ್ರತಿಪದ ಮತ್ತು ಭಾಯಿ ದೂಜ್ ಸಂದರ್ಭದಲ್ಲಿ ದೇಶದ ಅನೇಕ ನಗರಗಳಲ್ಲಿ ನವೆಂಬರ್ 10ರಿಂದ 15ರವರೆಗೆ ಬ್ಯಾಂಕುಗಳಿಗೆ ರಜೆ ಇರಲಿದೆ. ನವೆಂಬರ್ ತಿಂಗಳಲ್ಲಿ ಒಟ್ಟು 15 ದಿನಗಳವರೆಗೆ ಬ್ಯಾಂಕುಗಳು ಮುಚ್ಚಿರುತ್ತವೆ. ಈ …
Read More »ಮಂಡ್ಯ: ಸಹಪಾಠಿಗಳಿಂದಲೇ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್!
ಮಂಡ್ಯ: 17 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಹಪಾಠಿಗಳೇ ಪುಸಲಾಯಿಸಿ ಕರೆತಂದು ಬಾಲಕಿ ಮೇಲೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮದ್ದೂರಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಆರೋಪಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕೃತ್ಯದ ವಿಡಿಯೋ ಮಾಡಿದ್ದಾರೆ. ಬಳಿಕ ಸಂತ್ರಸ್ತೆಯ ಮೊಬೈಲ್‌ಗೆ ವಿಡಿಯೋ ಕಳುಹಿಸಿ ಬೆದರಿಕೆ ಹಾಕಿದ್ದಲ್ಲದೇ ಕರೆದಾಗ ಬರುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಇದಾದ ನಂತರ …
Read More »
Laxmi News 24×7