ನವದೆಹಲಿ: ಈ ವರ್ಷ ನಾಲ್ಕು ಸಾವಿರಕ್ಕೂ ಹೆಚ್ಚು ಮುಸ್ಲಿಂ ಮಹಿಳೆಯರು ಮೆಹ್ರಮ್ (ಪುರುಷರ ನೆರವಿಲ್ಲದೆ) ಇಲ್ಲದೆ ಹಜ್ ಯಾತ್ರೆ ಕೈಗೊಂಡಿರುವುದು ಅತಿ ದೊಡ್ಡ ಪರಿವರ್ತನೆಯಾಗಿದೆ. ಕಳೆದ ಕೆಲವು ವರ್ಷಗಳಿಂದ ತಮ್ಮ ಸರ್ಕಾರವು ಹಜ್ ನೀತಿಯಲ್ಲಿ ಮಾಡಿದ ಬದಲಾವಣೆಗಳಿಂದ ಹೆಚ್ಚು ಹೆಚ್ಚು ಜನರು ವಾರ್ಷಿಕ ಯಾತ್ರೆಗೆ ಹೋಗಲು ಅವಕಾಶವನ್ನು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ರೆಡಿಯೋದಲ್ಲಿ ಪ್ರಸಾರವಾದ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ, ಪುರುಷರ ನೆರವಿಲ್ಲದೆ …
Read More »ಲಂಚ: ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಸೇರಿ ನಾಲ್ವರ ಬಂಧಿಸಿದ ಸಿಬಿಐ
ನವದೆಹಲಿ: ಲಂಚ ಪಡೆದ ಗಂಭೀರ ಆರೋಪದಡಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಇಬ್ಬರು ಜಂಟಿ ನಿರ್ದೇಶಕ ಶ್ರೇಣಿಯ ಅಧಿಕಾರಿಗಳು, ಹಿರಿಯ ತಾಂತ್ರಿಕ ಸಹಾಯಕ ಮತ್ತು ಅಲೋಕ್ ಇಂಡಸ್ಟ್ರೀಸ್‌ನ ಸಹವರ್ತಿ ಸೇರಿದಂತೆ ಒಟ್ಟು ನಾಲ್ವರನ್ನು ಶನಿವಾರ ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ತನಿಖೆಯ ವೇಳೆ ಅಧಿಕಾರಿಗಳಿಂದ ಸುಮಾರು 59.80 ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಬಿಐ ಪ್ರಕಟಣೆ ತಿಳಿಸಿದೆ. ನವದೆಹಲಿಯಲ್ಲಿರುವ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಜಂಟಿ ನಿರ್ದೇಶಕ, ಹಿರಿಯ …
Read More »ಖಾನಾಪೂರ- ಗೋವಾ ರಾಜ್ಯ ಹೆದ್ದಾರಿಯ ರುಮೇವಾಡಿ ಕ್ರಾಸ್ ಬಳಿ ಈ ಸರ್ಕಸ್ ನಲ್ಲಿ ಇತ್ತೀಚೆಗೆ ಒಂದು ಜೀವಹಾನಿ ಕೂಡಾವಾಗಿದೆ.
ನೋಡಿ, ನೋಡಿ ಸರ್ಕಸ್ ನೋಡಿ ಅದು ಎಲ್ಲಿ ಅಂತೀರಾ ಅಲ್ಲೇ ರೀ ನಮ್ಮ ಖಾನಾಪೂರ- ಗೋವಾ ರಾಜ್ಯ ಹೆದ್ದಾರಿಯ ರುಮೇವಾಡಿ ಕ್ರಾಸ್ ಬಳಿ ಈ ಸರ್ಕಸ್ ನಲ್ಲಿ ಇತ್ತೀಚೆಗೆ ಒಂದು ಜೀವಹಾನಿ ಕೂಡಾವಾಗಿದೆ. ಗೋವಾ ದಿಂದ ಬೆಳಗಾವಿ, ಹಳಿಯಾಳ ದಿಂದ ಬೆಳಗಾವಿಗೆ ಸಂಪರ್ಕಿಸುವ ಈ ಮುಖ್ಯ ರಸ್ತೆ ಯು ಸುಮಾರು ಹತ್ತಾರು ಗ್ರಾಮಗಳಿಗೆ ಸಂಪರ್ಕದ ರಸ್ತೆ ಈ ರಸ್ತೆಯಲ್ಲಿ ಪ್ರತಿದಿನ, ಪ್ರತಿಕ್ಷಣವೂ ಸರ್ಕಸ್ ಮಾಡಿಯೇ ಮುಂದೆ ಹೋಗಬೇಕಾದ ಪರಿಸ್ಥಿತಿ. ಇದಕ್ಕೆ …
Read More »ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಕ್ರೂಡ್ರೈವರ್ನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಕ್ರೂಡ್ರೈವರ್ನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಓರ್ವ ಕೈದಿ ಸ್ಕ್ರೂಡ್ರೈವರ್ನಿಂದ ಮತ್ತೊಬ್ಬ ಕೈದಿಗೆ ಐದು ಬಾರಿ ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಶಂಕರ ಭಜಂತ್ರಿ ಕೊಲೆ ಮಾಡಲು ಯತ್ನಿಸಿದ ಕೈದಿ. ಮಂಡ್ಯ ಮೂಲದ ಸಾಯಿಕುಮಾರ್ ಗಾಯಗೊಂಡ ವಿಚಾರಣಾಧೀನ ಕೈದಿ. ಸಾಯಿಕುಮಾರ್ ಅವರಿಗೆ …
Read More »ಹಾಸ್ಟೆಲ್ ಅಥವಾ ಪಿಜಿ ಕೊಠಡಿಗಳಲ್ಲಿ ವಾಸಿಸುವ ಜನರ ಜೇಬಿಗೆ ಕತ್ತರಿ
ಹಾಸ್ಟೆಲ್ ಅಥವಾ ಪಿಜಿ ಕೊಠಡಿಗಳಲ್ಲಿ ವಾಸಿಸುವ ಜನರ ಜೇಬಿಗೆ ಕತ್ತರಿ ಬೀಳುತ್ತಿದೆ. ಏಕೆಂದರೆ, ಇನ್ನು ಮುಂದೆ ಹಾಸ್ಟೆಲ್-ಪಿಜಿ ಬಾಡಿಗೆಗೆ ಶೇ 12ರಷ್ಟು ಜಿಎಸ್‌ಟಿ ಅನ್ವಯಿಸಲಿದೆ. ಹೌದು. “ಪಾವತಿಸಿದ ಬಾಡಿಗೆಗೆ ಶೇ 12ರಷ್ಟು ಜಿಎಸ್‌ಟಿ ಅನ್ವಯವಾಗುವುದರಿಂದ ವಿದ್ಯಾರ್ಥಿಗಳು ಹಾಸ್ಟೆಲ್ ಸೌಕರ್ಯಕ್ಕಾಗಿ ಹೆಚ್ಚಿನ ಹಣ ಪಾವತಿಸಲೇಬೇಕಾಗುತ್ತದೆ. ಹಾಸ್ಟೆಲ್‌ಗಳು ವಸತಿ ಘಟಕಗಳಲ್ಲ, ಆದ್ದರಿಂದ ಸರಕು ಮತ್ತು ಸೇವಾ ತೆರಿಗೆಯಿಂದ (ಜಿಎಸ್‌ಟಿ) ವಿನಾಯಿತಿ ನೀಡುವುದಿಲ್ಲ” ಎಂದು ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಎರಡು ಪ್ರತ್ಯೇಕ ಪ್ರಕರಣಗಳಿಗೆ …
Read More »ಮಳೆ ಹೆಚ್ಚಿರುವ ಕಾರಣ ಇಂದಿನಿಂದ ಕೊಡಚಾದ್ರಿ ಬೆಟ್ಟಕ್ಕೆ ಪ್ರವೇಶ ನಿಷೇಧ
ಶಿವಮೊಗ್ಗ: ಮುಂಗಾರು ಮಳೆ ಹೆಚ್ಚಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಪ್ರಮುಖ ಜಲಪಾತ, ಸಫಾರಿ ಮತ್ತು ಚಾರಣ ತಾಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುದುರೆಮುಖದ ವನ್ಯಜೀವಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದ ಪ್ರಸಿದ್ಧ ಧಾರ್ಮಿಕ ಹಾಗೂ ಚಾರಣ ತಾಣವಾದ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಗಡಿಭಾಗವಾದ ಕೊಡಚಾದ್ರಿ ಬೆಟ್ಟಕ್ಕೂ ಪ್ರವೇಶ ನಿಷೇಧಿಸಲಾಗಿದೆ. ಮುಂಗಾರು ಮಳೆ ತೀವ್ರಗೊಂಡಿದ್ದು, ಜಲಪಾತಗಳ ವೀಕ್ಷಣೆಗೆ ಹೆಚ್ಚಿನ ಪ್ರವಾಸಿಗರು ಬರುವ ಸಾಧ್ಯತೆ ಇದೆ. ಪ್ರವಾಸಿಗರು …
Read More »ರಾಮತೀರ್ಥ ನಗರ ಕಾಲೋನಿಗೆಪಾಲಿಕೆ ಆಯುಕ್ತರ ಭೇಟಿ,
ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಅವರು ಇಂದು ವಾರ್ಡ್ ನಂ. 46ರಲ್ಲಿ ರಾಮತೀರ್ಥ ನಗರ ಕಾಲೋನಿಗೆ ಎಲ್ ಅಂಡ್ ಟಿ ಅಧಿಕಾರಿ ಹಾರ್ದಿಕ್ ದೇಸಾಯಿ ಹಾಗೂ ಕರ್ನಾಟಕ ನಾಗರಿಕ ನೀರು ಸರಬರಾಜು ಕಂಪನಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ರಾಮತೀರ್ಥ ನಗರದಲ್ಲಿ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ನೇತೃತ್ವದಲ್ಲಿ ಎಲ್ಲ ಇಲಾಖೆ ಸಿಬ್ಬಂದಿಯೊಂದಿಗೆ ಸಮೀಕ್ಷೆ ನಡೆಸಲಾಯಿತು. ಈ ಭಾಗದಲ್ಲಿ 24/7 ನೀರಿನ ಯೋಜನೆಗಾಗಿ ಎಲ್ ಆ್ಯಂಡ್ ಟಿ …
Read More »1,38,000 ಮೌಲ್ಯದ 12 ಕದ್ದ ಬ್ಯಾಟರಿಗಳನ್ನು ವಶಪಡಿಸಿಕೊಂಡ ಹಾರೂಗೇರಿ ಪೊಲೀಸರು
ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸರು ವಾಹನ ತಪಾಸಣೆ ನಡೆಸಿ 1,38,000 ಮೌಲ್ಯದ 12 ಕದ್ದ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸರು ಹಾರೂಗೇರಿ ಕ್ರಾಸನಲ್ಲಿ ಮಹಾರಾಷ್ಟ್ರದ ಟಾಟಾ ಎಸ್ ವಾಹನವನ್ನು (ಸಂಖ್ಯೆ ಎಂಎಚ್13ಎಎನ್ 5310) ಅಡ್ಡಗಟ್ಟಿ ಆ ವಾಹನದಲ್ಲಿ 12 ಬ್ಯಾಟರಿಗಳು ಪತ್ತೆಯಾಗಿವೆ. ವಾಹನದಲ್ಲಿದ್ದ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಇತರ ಮೂವರೊಂದಿಗೆ ಸೇರಿ ಬ್ಯಾಟರಿ ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರನ್ನು ಬಂಧಿಸಿ …
Read More »ಮುಂಬೈ ಛಾಬ್ರಾ ಹೌಸ್ ಮತ್ತೊಮ್ಮೆ ಉಗ್ರರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ
ಮುಂಬೈ(ಮಹಾರಾಷ್ಟ್ರ): ಮುಂಬೈನ ಕೊಲಾಬಾದಲ್ಲಿರುವ ಛಾಬ್ರಾ ಹೌಸ್ ಮತ್ತೊಮ್ಮೆ ಉಗ್ರರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಏಕೆಂದರೆ ತನಿಖಾಧಿಕಾರಿಗಳು ಪುಣೆಯಲ್ಲಿ ಬಂಧಿತ ಉಗ್ರರೊಂದಿಗೆ ಕೊಲಾಬಾದಲ್ಲಿರುವ ತಾಜ್ ಹೋಟೆಲ್ ಬಳಿಯ ಛಾಬ್ರಾ ಹೌಸ್ ಫೋಟೋಗಳನ್ನು ಪತ್ತೆ ಮಾಡಿದ್ದಾರೆ. ಬಂಧಿತ ಉಗ್ರರು ಮುಂಬೈಗೆ ಬಂದು ಛಾಬ್ರಾ ಹೌಸ್ ಮೇಲೆ ದಾಳಿ ನಡೆಸಬಹುದು ಎಂದು ಶಂಕಿಸಲಾಗಿದೆ. ಹೀಗಾಗಿ ಮುಂಬೈ ಪೊಲೀಸರು ಕೊಲಾಬಾದಲ್ಲಿರುವ ಛಾಬ್ರಾ ಹೌಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ದಳದ ನೆರವಿನೊಂದಿಗೆ ಭದ್ರತೆ ಹೆಚ್ಚಿಸಿದ್ದಾರೆ. ಛಾಬ್ರಾ …
Read More »ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು (ದಕ್ಷಿಣ ಕನ್ನಡ): ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮಿಯಾಪದವು, ಚಿಗುರುಪಾದೆಯ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ (61) ಮತ್ತು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆಯ ಯಶವಂತ್ ಕುಮಾರ್ (45) ಬಂಧಿತರು. ಪಿಸ್ತೂಲ್ ಹಿಡಿದುಕೊಂಡು ತಿರುಗಾಡುತ್ತಿದ್ದ ಆರೋಪಿಗಳು: ಈ ಇಬ್ಬರು ಆರೋಪಿಗಳು ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್ನಲ್ಲಿ ಯಾವುದೇ …
Read More »