ಮಂಗಳೂರು (ದಕ್ಷಿಣ ಕನ್ನಡ): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಶೀರ್ ಬಂಧಿತ ಆರೋಪಿ. ಜುಲೈ 26ರಂದು ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣವೇನು? : 2000ರ ಡಿಸೆಂಬರ್ 17ರಂದು ರಾತ್ರಿ 8:45ರ ಹೊತ್ತಿಗೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುಸೇನ್ ಯಾನೆ …
Read More »ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ.
ಬೆಂಗಳೂರು: ಅನುತ್ತೀರ್ಣರಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದ್ದು, ಇಂದು ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಗಸ್ಟ್ 21ರಿಂದ ಸೆಪ್ಟೆಂಬರ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು …
Read More »ತ್ಯಾಂಶ ನೋಡಿ ಕಾನೂನಾತ್ಮಕ ಅವಕಾಶಗಳಿದ್ದರೆ ಕೇಸ್ ವಾಪಸ್: ಜಿ.ಪರಮೇಶ್ವರ್
ಬೆಂಗಳೂರು : ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಪ್ರಕರಣದಲ್ಲಿ ಆರೋಪಿಗಳ ಕೇಸ್ ವಾಪಸ್ ವಿಚಾರವಾಗಿ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ.ಪರಮೇಶ್ವರ್, ಬಹಳ ಜನ ಶಾಸಕರು ಬೇರೆ ಬೇರೆ ಸಂಸ್ಥೆಗಳ ಕೇಸ್ಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಪತ್ರ ಕೊಡ್ತಿದ್ದಾರೆ. ಕೇಸ್ ವಾಪಸ್ ತಗೊಳ್ಳಿ ಅಂದಾಕ್ಷಣ ವಾಪಸ್ ತೆಗೆದುಕೊಳ್ಳಲು ಆಗುವುದಿಲ್ಲ. ಅದಕ್ಕೊಂದು ಪದ್ದತಿ ಇದೆ. ಕ್ಯಾಬಿನೆಟ್ ಸಬ್ ಕಮಿಟಿ ಮುಂದೆ ವಿಷಯ ಮಂಡಿಸಬೇಕಾಗುತ್ತದೆ. ಸಬ್ ಕಮಿಟಿ ಸಾಧಕ-ಬಾಧಕದ ಬಗ್ಗೆ ಚರ್ಚಿಸಿ …
Read More »ಧಾರವಾಡದಲ್ಲಿ ನಿರಂತರ ಮಳೆ; 198 ಮನೆಗಳಿಗೆ ಹಾನಿ
ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯಿಂದ 27ರ ಬೆಳಿಗ್ಗೆ 8 ಗಂಟೆಯವರೆಗೆ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ. 8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, ಅಳ್ನಾವರ …
Read More »ಮಹಾ ಸಿಎಂ ಶಿಂಧೆ ಉಸ್ತುವಾರಿ ಜಿಲ್ಲೆಯಲ್ಲಿ ಹಳ್ಳಿಗರ ಬದುಕು ದುಸ್ತರ: ಪ್ರಾಣವನ್ನೇ ಪಣಕ್ಕಿಡುವ ಪರಿಸ್ಥಿತಿ
ಥಾಣೆ (ಮಹಾರಾಷ್ಟ್ರ): ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಕಳೆದ ಏಳೂವರೆ ವರ್ಷಗಳಿಂದ ಥಾಣೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹಾಗೂ ಒಂದು ವರ್ಷದಿಂದ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಇಲ್ಲಿನ ಲೋಖಂಡೇವಾಡಿಯ ವಿದ್ಯಾರ್ಥಿಗಳು, ರೋಗಿಗಳು ಸೇರಿ ಇಡೀ ಗ್ರಾಮಸ್ಥರು ಮಳೆಗಾಲದಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಸಂಚರಿಸುತ್ತಿರುವ ಪರಿಸ್ಥಿತಿ ಇದೆ. ಮಹಾ ಸಿಎಂ ಶಿಂಧೆ ಉಸ್ತುವಾರಿ ಜಿಲ್ಲೆಯಲ್ಲಿ ಹಳ್ಳಿಗರ ಬದುಕು ದುಸ್ತರ: ಪ್ರಾಣವನ್ನೇ ಪಣಕ್ಕಿಡುವ ಪರಿಸ್ಥಿತಿಮೂರು ವರ್ಷಗಳ ಹಿಂದೆ ಏಕನಾಥ್ ಶಿಂಧೆ ಅವರ ಲೋಕೋಪಯೋಗಿ …
Read More »ಸೋರುತಿಹುದು ಹುಬ್ಬಳ್ಳಿ ಕೇಂದ್ರಿಯ ಬಸ್ ನಿಲ್ದಾಣ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ನಿತ್ಯ ಸುರಿಯುತ್ತಿರುವ ಮಳೆ ಅಬ್ಬರಕ್ಕೆ ನಗರದ ಬಹುತೇಕ ಬಹುತೇಕ ಸರ್ಕಾರಿ ಸ್ವಾಮ್ಯದ ಕಟ್ಟಡಗಳು ಸೋರುತ್ತಿವೆ. ಹುಬ್ಬಳ್ಳಿಯ ಕೇಂದ್ರಿಯ ಬಸ್ ನಿಲ್ದಾಣ ಕೂಡ ಇದರಿಂದ ಹೊರತಾಗಿಲ್ಲ. ಹುಬ್ಬಳ್ಳಿಯಿಂದ ಬೆಂಗಳೂರು, ವಿಜಯಪುರ,ಬಳ್ಳಾರಿ, ಚೆನೈ, ಹೈದರಬಾದ್,ಮುಂಬೈ, ಪುಣೆ, ಶಿರಡಿ ಸಾಂಗಲಿ ಮೀರಜ್ ಸೇರಿ ಹಲವಾರು ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ಹೊಸ ಬಸ್ ನಿಲ್ದಾಣದ ಕಟ್ಟಡ ಚಾವಣಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಿಬ್ಬಂದಿ ವಿಶ್ರಾಂತಿ …
Read More »ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಮಹಾರಾಷ್ಟ ಸೇರಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಬೀಳುತ್ತಿರುವ ಹಿನ್ನೆಲೆ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿರುವ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಬಸವಸಾಗರ ಜಲಾಶಯದಿಂದ 1 ಮೀಟರ್ ಎತ್ತರದಲ್ಲಿ 21 ಕ್ರಸ್ಟ್ ಗೇಟ್ ಗಳ ಮೂಲಕ 1.50 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ. ಬಸವಸಾಗರ ಜಲಾಶಯವು ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 33.31 ಟಿ ಎಂ ಸಿ ಇದ್ದು, ಅದರಲ್ಲಿ 26.42 ಟಿಎಂಸಿ …
Read More »ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಒಪ್ಪಿಗೆ
ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ನಂದಿನಿ ಹಾಲಿಗೆ 3 ರೂ. ಹೆಚ್ಚಳಕ್ಕೆ ಸಂಪುಟ ಸಭೆ ತೀರ್ಮಾನಿಸಿದೆ. ಕಳೆದ ವಾರ ಕೆಎಂಎಫ್ ಜೊತೆ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಾಲಿನ ದರ 3 ರೂ. ಹೆಚ್ಚಿಸಲು ನಿರ್ಧರಿಸಲಾಗಿತ್ತು. ಈ ಸಂಬಂಧ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಇದೀಗ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆಗೆ ತೀರ್ಮಾನಿಸಲಾಗಿದೆ. ಆ ಮೂಲಕ …
Read More »ವಡೋದರಾದಲ್ಲಿ ಪ್ರತಿದಿನ 2 ಸಾವಿರ ಕಾಂಜಂಕ್ಟಿವಿಟಿಸ್ ಸೋಂಕು ಪ್ರಕರಣ
ವಡೋದರ (ಗುಜರಾತ್): ದೇಶದ ಹಲವೆಡೆ ಕಾಂಜಂಕ್ಟಿವಿಟಿಸ್ ಸೋಂಕು ಪ್ರಕರಣಗಳು ಹೆಚ್ಚಾಗಿವೆ. ಗುಜರಾತ್ನ ವಡೋದರಾದಲ್ಲಿ ಪ್ರತಿದಿನ 2 ಸಾವಿರ ಜನರಿಗೆ ಹೆಚ್ಚು ಕಾಂಜಂಕ್ಟಿವಿಟಿಸ್ ಸೋಂಕು ಪತ್ತೆಯಾಗುತ್ತಿದೆ. ಇದರಿಂದ ಕಳೆದ 15 ದಿನಗಳಿಂದ ಐ ಡ್ರಾಪ್ ಬಾಟಲ್ ಸೇರಿದಂತೆ ಔಷಧಗಳ ಮಾರಾಟದಲ್ಲಿ ಹೆಚ್ಚಳವಾಗಿದೆ. ನಿರಂತರ ಮಳೆಯಿಂದ ಕಾಂಜಂಕ್ಟಿವಿಟಿಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಮಕ್ಕಳಲ್ಲಿ ಈ ಸಮಸ್ಯೆ ಅತಿಯಾಗಿ ಕಾಡುತ್ತಿದೆ. ಕಣ್ಣಿನ ಹೊರಗಿನ ಚರ್ಮದ ಸೋಂಕಿನಿಂದ ಕಣ್ಣಿನ ಸೋಂಕು ಉಂಟಾಗುತ್ತದೆ. ಅದಕ್ಕಾಗಿಯೇ ಕಾಂಜಂಕ್ಟಿವಿಟಿಸ್ ಸೋಂಕು ಎಂದು …
Read More »ಬೆಳಗಾವಿ ಹಿಂಡಲಗಾ ಜೈಲು.. ರಾಜ್ಯದಲ್ಲಿ ಕೈದಿಗಳನ್ನು ನೇಣಿಗೇರಿಸುವ ಏಕೈಕ ಕಾರಾಗೃಹವಿದು..!
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿಡಲು 1923ರಲ್ಲಿ ಬ್ರಿಟಿಷರಿಂದ ಸ್ಥಾಪಿತವಾದ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹವು ಶತಮಾನದ ಸಂಭ್ರಮದಲ್ಲಿದೆ. ದೇಶದ ಎರಡನೇ ಅತೀ ದೊಡ್ಡ ಜೈಲು ಮತ್ತು ಕೈದಿಗಳನ್ನು ಗಲ್ಲಿಗೇರಿಸುವ ರಾಜ್ಯದ ಏಕೈಕ ಕಾರಾಗೃಹ ಎಂಬ ಹೆಗ್ಗಳಿಕೆ ಹಿಂಡಲಗಾ ಜೈಲಿನದ್ದು. ಹೀಗೆ ಹಲವು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ. ಹೌದು.. ಬೆಳಗಾವಿಯಿಂದ ಕೇವಲ 6 ಕಿ ಮೀಟರ್ ದೂರದ ಹಿಂಡಲಗಾ ಎಂಬ ಗ್ರಾಮದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಕಾರಾಗೃಹ ನಿರ್ಮಿಸಲಾಗಿದೆ. 24 …
Read More »