ವಿಜಯಪುರ : ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಡಿಜೆ – ಕೆಜಿಹಳ್ಳಿ ಸೇರಿದಂತೆ ವಿವಿಧೆಡೆ ನಡೆದ ಗಲಭೆ ಪ್ರಕರಣವನ್ನು ಮರುಪರಿಶೀಲನೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವ ಪರಮೇಶ್ವರ್ ಅವರಿಗೆ ಬರೆದ ಪತ್ರ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಇದು ಸಹಜ ಪ್ರಕ್ರಿಯೆಯಾಗಿದೆ. ಈಗಾಗಲೇ ಗೃಹ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು. ವಿಜಯಪುರದಲ್ಲಿ ಕುಡಿಯುವ ನೀರಿನ ಕುರಿತು ಅಧಿಕಾರಿಗಳ ಸಭೆ ನಡೆಸಿ …
Read More »ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮೂಲಕ ಚಿನ್ನಾಭರಣ ಕಳ್ಳತನ
ಬೆಂಗಳೂರು: ಒಂದೂವರೆ ವರ್ಷಗಳ ಹಿಂದೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು ಮನೆ ಗೆಲಸ ಮಾಡುತ್ತಿದ್ದ ಆರೋಪಿತೆಯನ್ನ ಬಂಧಿಸಿದ್ದಾರೆ. ಹಲವು ಬಾರಿ ನೋಟೀಸ್ ನೀಡಿ ಸುಳ್ಳು ಪತ್ತೆ ಪರೀಕ್ಷೆಗೆ (ಪಾಲಿಗ್ರಪಿ) ಒಳಪಡಿಸಿದರೂ ಗುಟ್ಟು ಬಿಟ್ಟುಕೊಡದ ಕಿಲಾಡಿ ಮಹಿಳಾ ಆರೋಪಿ ಬ್ರೈನ್ ಮ್ಯಾಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾಳೆ. ಪರೀಕ್ಷೆ ವೇಳೆ ನೀಡಿದ ಸುಳಿವು ಆಧರಿಸಿ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ ಜಿಲ್ಲೆಯ ಜನತಾ ಕಾಲೊನಿಯ …
Read More »50 ದಿನಗಳ ಬಳಿಕ ಹೈದರಾಬಾದ್‌ಗೆ ಮರಳಿದ ಪ್ರಭಾಸ್
ಹೈದರಾಬಾದ್: ಆದಿಪುರುಷ್ ಬಿಡುಗಡೆ ಬಳಿಕ ವಿದೇಶಕ್ಕೆ ಹಾರಿದ್ದ ಡಾರ್ಲಿಂಗ್ ಪ್ರಭಾಸ್, ಇದೀಗ ಮತ್ತೆ ವಾಪಸ್ ಭಾರತಕ್ಕೆ ಬಂದಿದ್ದಾರೆ. ಅಮೆರಿಕದಲ್ಲಿ ಪ್ರತಿಷ್ಠಿತ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (SDCC) ಈವೆಂಟ್ನಲ್ಲಿ ಭಾಗವಹಿಸಿದ್ದ ಅವರು, ಇಂದು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅಂತಾರಾಷ್ಟ್ರೀಯ ಮಟ್ಟದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ ಸಮಾರಂಭದಲ್ಲಿ ಪ್ರಭಾಸ್ ಜೊತೆಗೆ ‘ಕಲ್ಕಿ 2898 AD’ ಚಿತ್ರ ತಂಡದ ಎಲ್ಲ ನಟ-ನಟಿಯರು ಕೂಡ ಭಾಗಿಯಾಗಿದ್ದರು. ಚಿತ್ರೀಕರಣ ವೇಳೆ ಪೆಟ್ಟು ಬಿದ್ದು ಸುರಿಸುಮಾರು 50 ದಿನಗಳನ್ನು …
Read More »100 ರೂಪಾಯಿಗಾಗಿ ಮಗನನ್ನೇ ಕೊಂದ ಕುಡುಕ ತಂದೆ!
ಬಿಹಾರದ ಸಮಸ್ತಿಪುರ ಜಿಲ್ಲೆಯಿಂದ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಕುಡಿದ ಅಮಲಿನಲ್ಲಿ ತಂದೆಯೊಬ್ಬ ತನ್ನ ಅಮಾಯಕ ಮಗನನ್ನೇ ಕತ್ತು ಸೀಳಿ ಕೊಂದಿದ್ದಾನೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮೊಹಿಯುದ್ದೀನ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾದಯ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಗನನ್ನು ಕೊಂದ ತಂದೆ : ಘಟನೆಗೆ ಸಂಬಂಧಿಸಿದಂತೆ ಭದಯ್ಯ ಗ್ರಾಮದಲ್ಲಿ ತಂದೆ ತನ್ನ ಮೂರು ವರ್ಷದ ಅಮಾಯಕ ಮಗನ ಕುತ್ತಿಗೆಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಮಗು ಗಂಭೀರವಾಗಿ …
Read More »ಬಿಎಸ್ಇ ಸೆನ್ಸೆಕ್ಸ್ ಮತ್ತು ನಿಫ್ಟಿ ಇಂದು ಏರಿಕೆಯಲ್ಲಿ ಕೊನೆಗೊಂಡಿವೆ.
ಮುಂಬೈ : ಮೂರು ದಿನಗಳಿಂದ ನಡೆದಿದ್ದ ದೇಶೀಯ ಷೇರುಪೇಟೆಯಲ್ಲಿನ ಕುಸಿತದ ಪ್ರಕ್ರಿಯೆ ಬುಧವಾರ ಅಂತ್ಯಗೊಂಡಿದೆ. ಸೆನ್ಸೆಕ್ಸ್, ನಿಫ್ಟಿ ಇಂದು ಏರಿಕೆಯೊಂದಿಗೆ ಮುಕ್ತಾಯಗೊಂಡವು. ಬಿಎಸ್‌ಇಯ 30-ಷೇರುಗಳ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 351.49 ಪಾಯಿಂಟ್‌ಗಳು ಅಥವಾ ಶೇಕಡಾ 0.53 ರಷ್ಟು ಏರಿಕೆಯೊಂದಿಗೆ 66,707.20 ಪಾಯಿಂಟ್‌ಗಳಿಗೆ ಕೊನೆಗೊಂಡಿತು. ಎನ್‌ಎಸ್‌ಇ ನಿಫ್ಟಿ 97.70 ಪಾಯಿಂಟ್‌ಗಳು ಅಥವಾ ಶೇಕಡಾ 0.5 ರಷ್ಟು ಏರಿಕೆಯೊಂದಿಗೆ 19,778.30 ಪಾಯಿಂಟ್‌ಗಳ ಮಟ್ಟದಲ್ಲಿ ಕೊನೆಗೊಂಡಿತು. ಟೆಲಿಕಾಂ ಕಂಪನಿ ವೊಡಾಫೋನ್ ಐಡಿಯಾ ಶೇರುಗಳು ಗರಿಷ್ಠ ಶೇ …
Read More »ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ಎಗ್ಗಿಲ್ಲದ ವರ್ಗಾವಣೆ ದಂಧೆ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಸರ್ಕಾರದ ಮಂತ್ರಿ ಮಹೋದಯಗಳ ವರ್ಗಾವಣೆ ದಂಧೆ ನಿಜ ಎಂಬುದು ಅವರದೇ ಪಕ್ಷದ ಹಿರಿಯ ಶಾಸಕ ಬಿ. ಆರ್. ಪಾಟೀಲರ ಪತ್ರದಿಂದ ಸಾಬೀತಾಗುತ್ತಿದೆ. ಸರ್ಕಾರವು ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ನವರಿಗೆ ಕೇವಲ …
Read More »ಕೊಳಚೆ ನೀರಿನೊಂದಿಗೆ ಮನೆಗೆ ಬಂದ ಹಾವು
ಹೈದರಾಬಾದ್: ಕಳೆದೊಂದು ವಾರದಿಂದ ಹೈದರಾಬಾದ್ ನಗರದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಈ ಮಳೆಯಿಂದಾಗಿ ರಸ್ತೆಗಳು, ಕಾಲೋನಿಗಳು ಮುಳುಗಡೆಯಾಗುತ್ತಿವೆ. ಕೆಲವೆಡೆ ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ. ಕೊಳಚೆ ನೀರಿನ ಜತೆಗೆ ಕ್ರಿಮಿ, ಹಾವುಗಳೂ ಮನೆಗಳಿಗೆ ಬರುತ್ತಿವೆ. ಇತ್ತೀಚೆಗಷ್ಟೇ ಸಿಕಂದರಾಬಾದ್‌ನ ಅಲ್ವಾಲ್ ಪ್ರದೇಶದಲ್ಲಿ ಸಂಪತ್ ಎಂಬ ವ್ಯಕ್ತಿಯ ಮನೆಗೆ ಕೊಳಚೆ ನೀರಿನೊಂದಿಗೆ ಹಾವು ಬಂದಿದ್ದರಿಂದ ಕುಟುಂಬದ ಸದಸ್ಯರು ಭಯಭೀತರಾಗಿದ್ದರು. ಅಧಿಕಾರಿಯೊಬ್ಬರ ಮೇಜಿನ ಮೇಲೆ ಹಾವನ್ನು ಬಿಟ್ಟ ನಿವಾಸಿ: ಹಾವು ಮನೆಗೆ ಬಂದದ್ದನ್ನು …
Read More »ರಸ್ತೆ ಬದಿಯಲ್ಲಿ ಸಿಕ್ಕ 2 ಸಾವಿರ ಮುಖ ಬೆಲೆಯ ಗರಿ ಗರಿ ನೋಟುಗಳು?
ಬೆಂಗಳೂರು: ನಗರದ ಹೊರವಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ಕನಕಪುರ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಎರಡು ಬಾಕ್ಸ್ಗಳಲ್ಲಿ ಎರಡು ಸಾವಿರ ಮುಖಬೆಲೆಯ ನಕಲಿ ನೋಟುಗಳು ಸಿಕ್ಕಿವೆ. ಕನಕಪುರ ರಸ್ತೆಯೊಂದರ ಪಕ್ಕದಲ್ಲಿ ಖಾಲಿ ಜಾಗದಲ್ಲಿ ಪ್ಯಾಕಿಂಗ್ ಮಾಡಿದ ಸ್ಥಿತಿಯಲ್ಲಿ ಎರಡು ಬಾಕ್ಸ್ ಗಳನ್ನ ಕಂಡ ಸ್ಥಳೀಯರು ಅನುಮಾನಗೊಂಡ ಸಮೀಪದಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೂಡಲೇ ತಲಘಟ್ಟಪುರ ಕಾನೂನು ಸುವ್ಯವಸ್ಥೆ ವಿಭಾಗದ …
Read More »ಗೋಡೆ ಕುಸಿದು ಬಿದ್ದು ಹೆಣ್ಣು ಮಗು ಸಾವು 5 ಲಕ್ಷ ಪರಿಹಾರ ನೀಡಿದ D.C.
ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮೃತಪಟ್ಟ ಮಗುವಿನ ಮನೆಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿದ್ದಾರೆ. ಅಲ್ಲದೇ ಈ ಮೂಲಕ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡಿದ್ದಾರೆ. ಅವಘಡ ಸಂಭವಿಸಿದ ಮನೆಗೆ ಆಗಮಿಸಿದ ಡಿಸಿ ಶಿವಾನಂದ ಕಾಪಶಿಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಬೀಳುತ್ತಿರುವ ಬೆನ್ನಲ್ಲೇ ಇಂದು ಬೆಳಗಿನ ಜಾವ ಈ ಘಟನೆ ನಡೆದಿತ್ತು. ಘಟನೆಯಲ್ಲಿ ಸ್ಪೂರ್ತಿ (01) ಸಾವನಪ್ಪಿ ತಂದೆ ಕೆಂಚಪ್ಪ (32) ಗಾಯಗೊಂಡಿದ್ದರು. …
Read More »ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ನಾಳೆ ( ಜು. 26 ) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ. …
Read More »