Breaking News

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ. ಗಣರಾಜ್ಯೋತ್ಸವ ಪ್ರಯುಕ್ತ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಗಣರಾಜ್ಯೋತ್ಸವದಂದು ನಮ್ಮ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ವಿಕಸಿತ ಭಾರತಕ್ಕಾಗಿ ಸಂಕಲ್ಪವು …

Read More »

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ  ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ನಂತರ ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿ, ಪರೇಡ್‌ ವೀಕ್ಷಿಸಿದ ರಾಜ್ಯಪಾಲರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ  ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಗಣರಾಜ್ಯೋತ್ಸವ ಹಿನ್ನೆಲೆ ಮಾಣೆಕ್‌ ಷಾ …

Read More »

ಪ್ರಯತ್ನ ಸಂಘಟನೆಯಿಂದ ನಿರ್ಗತಿಕರಿಗೆ ರಗ್ಗು – ಕಂಬಳಿ ವಿತರಣೆ

ಬೆಳಗಾವಿ : ಬೆಳಗಾವಿಯ ಪ್ರಯತ್ನ ಸಂಘಟನೆಯ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಲಗುವ ನಿರ್ಗತಿಕರಿಗೆ ರಗ್ಗು ಹಾಗೂ ಕಂಬಳಿಗಳನ್ನು ವಿತರಣೆ ಮಾಡಲಾಯಿತು. ರಾತ್ರಿ ವೇಳೆ ನಗರದ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಚಳಿಯಲ್ಲಿ ನಡುಗುತ್ತ ಮಲಗಿದ್ದ ಸುಮಾರು 20 ನಿರ್ಗತಿಕರಿಗೆ ಕಂಬಳಿಗಳನ್ನು ವಿತರಿಸಲಾಯಿತು. ವೃದ್ಧಾಶ್ರಮ, ಅನಾಥಾಶ್ರಮ, ಅಂಧ ಮಕ್ಕಳ ಶಾಲೆಗಳಿಗೆ ದೇಣಿಗೆ ಹಾಗೂ ಬಡ ಮಕ್ಕಳ ಶಾಲಾ ಶುಲ್ಕ ಭರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿರುವ ಪ್ರಯತ್ನ ಸಂಘಟನೆ ಈ …

Read More »

ಸುಳೇಬಾವಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆರಂಭ

ಬೆಳಗಾವಿ : ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸುಳೇಬಾವಿಯ ಮಹಾಲಕ್ಷ್ಮೀ ಮೈದಾನದಲ್ಲಿ ಭಾನುವಾರ ಆರಂಭವಾಗಿದ್ದು, 8 ತಂಡಗಳು ಭಾಗವಹಿಸಿವೆ. ಪ್ರಥಮ ಬಹುಮಾನ 50 ಸಾವಿರ ರೂ. ಇದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾಯೋಜಕತ್ವವಹಿಸಿದ್ದಾರೆ. ದ್ವಿತೀಯ ಬಹುಮಾನ 30 ಸಾವಿರ ರೂ. ಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ತೃತೀಯ ಬಹುಮಾನ 25 ಸಾವಿರ ರೂ.ಗಳನ್ನು ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಪ್ರಾಯೋಜಿಸಿದ್ದಾರೆ. ಪ್ರಥಮ ಹಾಗೂ ತೃತೀಯ ಟ್ರೋಫಿಯನ್ನು ಹನುಮಂತ …

Read More »

ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ಬೆಳಕಿಗೆ – ಚಲಾವಣೆ ಇಲ್ಲದ 400 ಕೋಟಿ ದರೋಡೆ

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ  ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನ ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ದರೋಡೆ ಪ್ರಕರಣ  ಅಂತಾರಾಜ್ಯ ಮಟ್ಟದ್ದಾಗಿದ್ದು, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ 3 ರಾಜ್ಯಗಳ ಪೊಲೀಸರು ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸುತ್ತಿದ್ದಾರೆ. ದರೋಡೆ ನಡೆದಿದ್ದು ಯಾವಾಗ? ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ …

Read More »

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿಂದ ರಾಜ್ಯದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ: ಗೋವಿಂದ ಕಾರಜೋಳ

ಚಿತ್ರದುರ್ಗ: ಸಿದ್ದರಾಮಯ್ಯ  ಸರ್ಕಾರ ಅಧಿಕಾರಕ್ಕೆ ಬಂದಾಗಿಂದ ರಾಜ್ಯದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ ಎಂದು ಸಂಸದ ಗೋವಿಂದ ಕಾರಜೋಳ  ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಮಾತ್ರ ಅಲ್ಲ ರಾಜ್ಯದೆಲ್ಲೆಡೆ ದ್ವೇಷದ ರಾಜಕಾರಣ ನಡೆಯುತ್ತಿದೆ. ರಾಜ್ಯದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ಹೆಚ್ಚಳವಾಗಿವೆ. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ಸಿಎಂ ರಾಜೀನಾಮೆ ನೀಡಲೆಂದು ಒತ್ತಾಯಿಸಿದರು. ಬಳ್ಳಾರಿ ಘಟನೆಯಲ್ಲಿ ಗುಂಡು ಹಾರಿಸಿದವರು ಗನ್‌ಮ್ಯಾನ್ ಅಲ್ಲ. ನನ್ನ ದೃಷ್ಟಿಯಲ್ಲಿ ಅವರು ಸುಪಾರಿ ಕಿಲ್ಲರ್ಸ್ …

Read More »

ಐತಿಹಾಸಿಕ ಲಕ್ಕುಂಡಿಯಲ್ಲಿ 7 ಹೆಡೆಯ ನಾಗರಕಲ್ಲಿನ ಮೂರ್ತಿ ಪತ್ತೆ

ಗದಗ: ಗದಗದ  ಐತಿಹಾಸಿಕ ಲಕ್ಕುಂಡಿಯಲ್ಲಿ  9ನೇ ದಿನದ ಉತ್ಖನನ ಕಾರ್ಯ ಮುಂದುವರಿದಿದೆ. ಬಗೆದಷ್ಟು ಪ್ರಾಚ್ಯಾವಶೇಷಗಳು ಬಯಲಾಗುತ್ತಲೇ ಇವೆ. ಕಳೆದ 8 ದಿನಗಳಿಂದಲೂ ಉತ್ಖನನ ವೇಳೆ ಒಂದಿಲ್ಲೊಂದು ಪುರಾತನ ವಸ್ತುಗಳು ಸಿಗುತ್ತಲೇ ಇವೆ. ಈ ನಡುವೆ ಇವತ್ತು ಮತ್ತೊಂದೆಡೆ ಅಪರೂಪದ 7 ಹೆಡೆಯ ನಾಗರಕಲ್ಲಿನ ಮೂರ್ತಿ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಇದರ ಜೊತೆ ಬಾವಿಯಲ್ಲಿ ಪುರಾತನ ಶಿಲೆಗಳು ಪತ್ತೆಯಾಗಿರೋದು ಅಚ್ಚರಿ ಮೂಡಿಸಿದೆ. ಲಕ್ಕುಂಡಿ ಗ್ರಾಮದ ಷಣ್ಮುಖಪ್ಪರವದಿ ಎಂಬುವರ ಜಮೀನಿನಲ್ಲಿ ಈ …

Read More »

ರೇವಣ್ಣ ಕುಟುಂಬ ಮುಗಿಸಲು ಬಳಸಿಕೊಂಡ ಎಸ್‌ಐಟಿಗೆ ಉಡುಗೊರೆ ಕೊಟ್ಟಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

ಹಾಸನ: ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ನಮ್ಮ ಎದುರಾಳಿಗಳು, ರೇವಣ್ಣ ಅವರ ಕುಟುಂಬ ಮುಗಿಸಲು ಯಾವ ಎಸ್‌ಐಟಿ  ಬಳಸಿಕೊಂಡಿದ್ದರೋ ಅವರಿಗೆ ಉಡುಗೊರೆ ಕೊಟ್ಟಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಾಸನದ  ಬೂವನಹಳ್ಳಿ ಬಳಿ ನಡೆದ ಜೆಡಿಎಸ್‌  ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ರೇವಣ್ಣ ಅವರ ಕುಟುಂಬವನ್ನು ಮುಗಿಸಲು ಎದುರಾಳಿಗಳು ಪ್ರಯತ್ನಪಟ್ಟರು. ಈ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ. ಜೆಡಿಎಸ್ ಮುಗಿಸಲು ಎರಡು ಬಾರಿ …

Read More »

ಮೂಡಲಗಿ ತಾಲೂಕಿನ ಸುಪ್ರಸಿದ್ಧ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ

ಮೂಡಲಗಿ ತಾಲೂಕಿನ ಸುಪ್ರಸಿದ್ಧ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪಾಲ್ಗೊಂಡು ದೇವರ ಆಶೀರ್ವಾದವನ್ನು ಪಡೆದರು. ಈ ಸಂದರ್ಭದಲ್ಲಿ ಕುಲಗೋಡ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಪಿಕೆಪಿಎಸ್ (PKPS) ಸದಸ್ಯರು ನನ್ನನ್ನು ಸತ್ಕರಿಸಿ ಮನವಿಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಲಗೋಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ದೇವರ್, ಹಿರಿಯ ನಾಯಕ ಶ್ರೀ ಅಶೋಕ್ ನಾಯಕ್, ಶ್ರೀ ಸುಭಾಷ್ ವಂಟಗೋಡಿ, ಶ್ರೀ ಸುನಿಲ್ …

Read More »

ರಾಜ್ಯದಲ್ಲಿರೋದು ಬ್ರೋಕರ್‌ಗಳ ಸರ್ಕಾರ – ಹೆಚ್‌ಡಿಕೆ ವಾಗ್ದಾಳಿ

ಹಾಸನ: ಈ ರಾಜ್ಯದ ಮುಖ್ಯಮಂತ್ರಿಗಳು ಅಹಿಂದ ಮುಂದಿಟ್ಟು ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ. ಈ ಸರ್ಕಾರ ಕೆಲವು ಬ್ರೋಕರ್‌ಗಳನ್ನು ಇಟ್ಟುಕೊಂಡಿದೆ. ಇದು ಬ್ರೋಕರ್‌ಗಳ ಸರ್ಕಾರ . ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಾಸನದ ಬೂವನಹಳ್ಳಿ ಬಳಿ ನಡೆದ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ಈ ರಾಜ್ಯದ ಮುಖ್ಯಮಂತ್ರಿಗಳು ಅಹಿಂದ ಮುಂದಿಟ್ಟುಕೊಂಡು ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ. ರಾಜ್ಯ ಸಂಪದ್ಭರಿತವಾಗಿದೆ ಆದರೆ ಬ್ರೋಕರ್‌ಗಳು, ಲೂಟಿಕೋರರ ಕೈ …

Read More »