ಬೆಂಗಳೂರು: ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು, ಮಧ್ಯವರ್ತಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ್ ಎಚ್ಚರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಸಚಿವರು, “ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ …
Read More »ಬಾಲಗಂಗಾಧರ ತಿಲಕ್ ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಜನರನ್ನು ಒಗ್ಗೂಡಿಸಿ ಸ್ವಾತಂತ್ರ್ಯವನ್ನು ತಂದು ಕೊಟ್ಟಿದ್ದಾರೆ ಎಂದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಜನರನ್ನು ಒಟ್ಟು ಸೇರಿಸಿ, ಶ್ರಮಪಟ್ಟು ನಮಗೆ ಸ್ವಾತಂತ್ರ್ಯ ತಂದು ಕೊಟ್ಟವರು ಬಾಲಗಂಗಾಧರ ತಿಲಕ್ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ವೀರ ಸಾವರ್ಕರ್ ಯುವಬಳಗದ ವತಿಯಿಂದ ಭಾನುವಾರ ಸಂಜೆ ನಗರದ ತಿಲಕ್ ನಗರದಲ್ಲಿ ಆಯೋಜಿಸಿದ್ದ ಬಾಲಗಂಗಾಧರ ತಿಲಕರ 167ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಲೋಕ ಮಾನ್ಯ ಬಾಲಗಂಗಾಧರ ತಿಲಕರ 167ನೇ ಜಯಂತ್ಯುತ್ಸವವನ್ನು ತಿಲಕ್ ನಗರದಲ್ಲಿ ಆಚರಿಸುತ್ತಿರುವುದು …
Read More »ತುಂಗಭದ್ರಾ ಜಲಾಶಯಕ್ಕೆ ಹರಿದು ಬಂದ 18 ಟಿಎಂಸಿ ನೀರು, ರೈತರಿಗೆ ಸಂತಸ
ಬಳ್ಳಾರಿ, ರಾಯಚೂರು ರೈತರಲ್ಲಿ ಕೊಂಚ ಆಶಾಭಾವನೆ ಮೂಡಿದೆ. 10 ದಿನದಲ್ಲಿ 18 ಟಿಎಂಸಿ ನೀರು ಜಲಾಶಯಕ್ಕೆ ಬಂದಿದ್ದು, ರೈತರು ಮೊದಲ ಬೆಳೆ ಭತ್ತದ ನಾಟಿ ಶುರು ಮಾಡಿದ್ದಾರೆ. ತುಂಗಭದ್ರಾ ಜಲಾಶಯ ವಿಜಯನಗರ: ತ್ರಿವಳಿ ರಾಜ್ಯಗಳಿಗೆ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯದ ಒಳಹರಿವಿನ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಭರವಸೆ ಮೂಡಿದೆ. ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದ್ದಂತೆ ಇತ್ತ ರೈತರು ಮೊದಲನೆ ಬೆಳೆ …
Read More »ಕೃಷ್ಣಾ ನದಿ ತೀರದ ಪ್ರದೇಶವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವೀಕ್ಷಣೆ ಮಾಡಿದರು
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ನದಿಗಳಿಂದ ಪ್ರವಾಹ ಪರಿಸ್ಥಿತಿ ಉಂಟಾಗಿಲ್ಲ. ಆದ್ರೆ ಇನ್ನೂ ನಾಲ್ಕು ದಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 27ರ ವರೆಗೆ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದ್ದಾರೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿ ತೀರದ ಹಲವು ಗ್ರಾಮಗಳಿಗೆ ಹಾಗೂ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ …
Read More »ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳ
ವಿಜಯಪುರ : ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮೂರು ಮನೆಗಳು ಕುಸಿತಗೊಂಡಿವೆ. ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ವಿಜಯಪುರದಲ್ಲಿ 16.6 ಮಿ.ಮೀಟರ್, ತಿಕೋಟಾ 4.2ಮಿ.ಮೀಟರ್, ಬಬಲೇಶ್ವರದಲ್ಲಿ 3.8 ಮೀ. ಮೀಟರ್ ಮಳೆಯಾಗಿರುವ ಬಗ್ಗೆ ವರದಿ ಆಗಿದೆ. ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಉತ್ತಮ ಮಳೆಗೆ ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮುಂಗಾರು ಹಂಗಾಮಿನ ಮಳೆಯಾಗುತ್ತಿರುವುದರಿಂದ …
Read More »ಆನ್ಲೈನ್ ಗೇಮ್ನಲ್ಲಿ ₹58 ಕೋಟಿ ಕಳೆದುಕೊಂಡ ಉದ್ಯಮಿ: ಆರೋಪಿ ಮನೆಯಿಂದ ₹17 ಕೋಟಿ ಹಣ, ಚಿನ್ನದ ಬಿಸ್ಕೆಟ್ ವಶ
ನಾಗಪುರ (ಮಹಾರಾಷ್ಟ್ರ) : ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಗೇಮ್‌ಗಳನ್ನು ಆಡಿ ಹಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಆರೋಪಿಗಳು ಅಮಾಯಕರಿಗೆ ಮೋಸ ಮಾಡಿ ಹಣ ಗಳಿಸುತ್ತಿದ್ದಾರೆ. ಹೆಚ್ಚು ಹಣ ಮಾಡುವ ಆಸೆಗೆ ಬಿದ್ದು, ಇದ್ದ ಹಣವನ್ನು ಕಳೆದುಕೊಂಡು ಜನರು ಬೀದಿಗೆ ಬೀಳುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಖ್ಯಾತ ಉದ್ಯಮಿಯೊಬ್ಬರು ಆನ್ಲೈನ್ ಗೇಮಿನ ಗೀಳಿಗೆ ಬಿದ್ದು 58 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ …
Read More »ಕೇಂದ್ರದ ಸೆಕ್ರೆಟರಿ ಮತ್ತು ಅದಕ್ಕಿಂತಲೂ ಮೇಲ್ತ್ಸರದ ಅಧಿಕಾರಿಗಳಿಗೆ ಸರ್ಕಾರ ಬಂಪರ್ ಆಫರ್
ನವದೆಹಲಿ: ಕೇಂದ್ರದ ಸೆಕ್ರೆಟರಿ ಮತ್ತು ಅದಕ್ಕಿಂತಲೂ ಮೇಲ್ತ್ಸರದ ಅಧಿಕಾರಿಗಳಿಗೆ ಸರ್ಕಾರ ಬಂಪರ್ ಆಫರ್ ನೀಡಿದೆ. 1.3 ಲಕ್ಷ ರೂ. ವರೆಗಿನ ಮೊಬೈಲ್, ಲ್ಯಾಪ್‌ಟಾಪ್ ಅಥವಾ ಅದಕ್ಕೆ ಸಮನಾದ ಯಾವುದೇ ಸಾಧನಗಳನ್ನು ಬಳಸಲು 4 ವರ್ಷಗಳ ಅವಧಿಗೆ ನೀಡಲಿದೆ. ಇದಾದ ಬಳಿಕ ಅವರು ಬಯಸಿದಲ್ಲಿ ಅದನ್ನು ವೈಯಕ್ತಿಕ ಬಳಕೆಗಾಗಿ ತಮ್ಮಲ್ಲಿಯೇ ಇಟ್ಟುಕೊಳ್ಳುವ ಅವಕಾಶವನ್ನೂ ನೀಡಿದೆ. ಹಣಕಾಸು ಸಚಿವಾಲಯದ ವೆಚ್ಚ ವಿಭಾಗ ಇಂತಹ ಆದೇಶ ಹೊರಡಿಸಿದೆ. ಸರ್ಕಾರದ ಅಧಿಕೃತ ಕೆಲಸಕ್ಕಾಗಿ ಅರ್ಹ ಅಧಿಕಾರಿಗಳಿಗೆ …
Read More »ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 22 ಎಂಎಂ ಮಳೆಯಾಗಿದೆ.
ಶಿವಮೊಗ್ಗ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ, ಅಕ್ಕಪಕ್ಕದ ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆಯಾಗುತ್ತಿದೆ. ಮಳೆ ಎಡಬಿಡದೇ ಸುರಿದ ಪರಿಣಾಮ, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಅದರಂತೆ, ತುಂಗಾ ಜಲಾನಯದ ಪ್ರದೇಶಗಳಾದ ಶೃಂಗೇರಿ, ಕೊಪ್ಪ, ಆಗುಂಬೆ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ತುಂಗಾ ಡ್ಯಾಂ ಸಂಪೂರ್ಣವಾಗಿ ತುಂಬಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಕೋರ್ಪಳಯ್ಯನ ಛತ್ರದ ಬಳಿಯ ಮಂಟಪ ಮುಳುಗುವ ಹಂತ …
Read More »ಮದ್ಯಕ್ಕೆ ಹಣ ಹೊಂದಿಸಲು ಆರು ತಿಂಗಳ ಮಗು ಮಾರಾಟ..
ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮದ್ಯ ಸೇವಿಸಲು ಹಣ ಹೊಂದಿಸುವ ಉದ್ದೇಶದಿಂದ ಆರು ತಿಂಗಳ ಮಗುವನ್ನು ಮಾರಾಟ ಮಾಡಿದ ಆರೋಪದ ಮೇಲೆ ಮೂವರನ್ನು ಭಾನುವಾರ ಬಂಧಿಸಲಾಗಿದೆ. ಈ ಬಂಧಿತ ಆರೋಪಿಗಳು ಮಗುವಿನ ಅಪ್ಪ, ಅಮ್ಮ ಹಾಗೂ ಅಜ್ಜನೇ ಆಗಿದ್ದಾರೆ. ಬಂಧಿತರನ್ನು ಜೈದೇಬ್ ಚೌಧರಿ (ತಂದೆ), ಸತಿ ಚೌಧರಿ (ತಾಯಿ) ಮತ್ತು ಕನೈ ಚೌಧರಿ (ಅಜ್ಜ) ಎಂದು ಗುರುತಿಸಲಾಗಿದೆ. ಈ …
Read More »BJP ಕಚೇರಿಗೆ ಕುಮಾರಸ್ವಾಮಿ ಹೋಗಿದ್ದಾರೆ. ಅಂದ್ರೆ ದೇವೇಗೌಡರ ಮಾತಿಗೆ ಕಿಮ್ಮತ್ತಿಲ್ಲ ಎಂದು ಅರ್ಥ:ಚಲುವರಾಯಸ್ವಾಮಿ
ಮಂಡ್ಯ: ಬಿಜೆಪಿಯವರ ಕಚೇರಿಗೆ ಕುಮಾರಸ್ವಾಮಿ ಹೋಗಿದ್ದಾರೆ. ಅಂದ್ರೆ ದೇವೇಗೌಡರ ಮಾತಿಗೆ ಕಿಮ್ಮತ್ತಿಲ್ಲ ಎಂದು ಅರ್ಥ. ಹೊಂದಾಣಿಕೆ ಸಂಬಂಧ ದೇವೇಗೌಡರು ಹಾಗೂ ಕುಮಾರಸ್ವಾಮಿ ದ್ವಂದ್ವ ನಿಲುವಿನ ವಿಚಾರದ ಬಗ್ಗೆ ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ. ”ಜೆಡಿಎಸ್ ಪಕ್ಷದಲ್ಲಿ ದೇವೇಗೌಡರ ಮಾತಿಗೆ ಕಿಮ್ಮತ್ತಿಲ್ಲ. ದೇವೇಗೌಡರು ಈವರೆಗೂ ಪಕ್ಷವನ್ನ ಇನ್ನೊಂದು ಪಕ್ಷದೊಂದಿಗೆ ವಿಲೀನ ಮಾಡುವ ನಿರ್ಧಾರ ತಗೆದುಕೊಂಡಿಲ್ಲ. ಎಷ್ಟೇ ಸ್ಥಾನಗಳನ್ನ ಗೆಲ್ಲಲಿ ಹೋರಾಟ ಮಾಡ್ಕೊಂಡು ಬಂದಿದ್ದಾರೆ. ಇವತ್ತು ದೇವೇಗೌಡರು ಕಟ್ಟಿಬೆಳೆಸಿದ ಪಕ್ಷವನ್ನು ಬೇರೆ ಪಕ್ಷದೊಂದಿಗೆ …
Read More »