ಬೆಂಗಳೂರು : ನಗರದ ಜನನಿಬಿಡ ಪ್ರದೇಶಗಳಲ್ಲಿ ಶಂಕಿತ ಭಯೋತ್ಪಾದಕರು ಉಗ್ರ ಕೃತ್ಯವೆಸಗಲು ಸಂಗ್ರಹಿಸಿ ಬಚ್ಚಿಟ್ಟಿದ್ದ ನಾಲ್ಕು ಜೀವಂತ ಹ್ಯಾಂಡ್ ಗ್ರೆನೇಡ್ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಗಿದೆ. ಹೀಗಾಗಿ, ಇಲ್ಲಿನ ಸ್ಥಳೀಯರಲ್ಲಿ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ. ಪ್ರಕರಣದ ಐದನೇ ಆರೋಪಿ ಜಾಯೇದ್ ತಬ್ರೆಸ್ನ ಕೊಡಿಗೆಹಳ್ಳಿಯ ಮನೆಯ ಅಲ್ಮೇರಾದಲ್ಲಿ ಬಚ್ಚಿಟ್ಟಿದ್ದ ನಾಲ್ಕು ಹ್ಯಾಂಡ್ ಗ್ರೆನೇಡ್ಗಳನ್ನ ಸಿಸಿಬಿ ವಶಪಡಿಸಿಕೊಂಡಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವುದು ತಿಳಿದುಬಂದಿದೆ. 2021 ರಲ್ಲಿ ಉಪ್ಪಿನಂಗಡಿ …
Read More »ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿ
ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿಗಳು ನಿನ್ನೆ ದಿನ ಚಾರ್ ಕೊಟ್ಟಿಗೆ ಬಾರಿನ ವಿಶ್ವನಾಥ ಪೂಜಾರಿ ರಾತ್ರಿ ಸರಿ ಸುಮಾರು 2 ಗಂಟೆ ಹೊತ್ತಿಗೆ ಬಾರಿನ ತನ್ನೆಲ್ಲ ಲೆಕ್ಕಾಚಾರವನ್ನು ಪೂರೈಸಿಕೊಂಡು ಸಿಬ್ಬಂದಿಗಳೊಂದಿಗೆ ಮನೆಗೆ ತೆರಳುತ್ತಿರುವಾಗ ದಬ್ಬೆಕಟ್ಟೆ ತೆಕ್ಕಟ್ಟೆ ರೋಡಿನಲ್ಲಿ ಆರು ವರ್ಷದ ಹೆಣ್ಣು ಮಗು ಒಂದು ಬಟ್ಟೆ ಇಲ್ಲದೆ ಸ್ವಾಮಿ …
Read More »ಭಾರತದಲ್ಲಿ ಆದ ಮದುವೆ, ಆಸ್ಟ್ರೇಲಿಯಾದಲ್ಲಿ ವಿಚ್ಛೇದನ
ಚೆನ್ನೈ, ತಮಿಳುನಾಡು: ಆಸ್ಟ್ರೇಲಿಯಾದಲ್ಲಿ ಓದುತ್ತಿದ್ದಾಗ ಕರ್ನಾಟಕದ ಹುಡುಗ ಮತ್ತು ತಮಿಳುನಾಡಿನ ಹುಡುಗಿ ಭೇಟಿಯಾಗಿದ್ದರು. ಬಳಿಕ ಇವರ ಮಧ್ಯೆ ಪರಿಚಯ ಬೆಳೆಯಿತು. ಇವರ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರೂ ಅಕ್ಟೋಬರ್ 2006 ರಲ್ಲಿ ಚೆನ್ನೈನ ಕ್ರಿಶ್ಚಿಯನ್ ಚರ್ಚ್‌ನಲ್ಲಿ ವಿವಾಹವಾದರು. ಈ ಅಂತರ್ಧರ್ಮೀಯ ದಂಪತಿಗೆ ಮುದ್ದಾದ ಗಂಡು ಮಗುವೂ ಸಹ ಜನಿಸಿದೆ. ಇನ್ನು ಈ ದಂಪತಿ ತಮ್ಮ ಕುಟುಂಬದೊಂದಿಗೆ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದರು. ಕುಟುಂಬ ಸಮೇತ ಆಸ್ಟ್ರೇಲಿಯದಲ್ಲಿ ವಾಸವಿದ್ದ ಸಂದರ್ಭದಲ್ಲಿ ಗಂಡನ ಕುಟುಂಬಕ್ಕೆ ಪತ್ನಿಯ ಧರ್ಮ, …
Read More »B.J.P.&J.D.S. ಸದಸ್ಯರ ಗೈರಿನ ನಡುವೆಯೇ ವಿಧಾನ ಪರಿಷತ್ನಲ್ಲಿ 5 ವಿಧೇಯಕಗಳಿಗೆ ಅಂಗೀಕಾರ
ಬೆಂಗಳೂರು : ಕಾಂಗ್ರೆಸ್ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಹೊರ ರಾಜ್ಯದ ರಾಜಕಾರಣಿಗಳ ಸ್ವಾಗತಕ್ಕೆ ರಾಜ್ಯದ ಐಎಎಸ್ ಅಧಿಕಾರಿಗಳ ನಿಯುಕ್ತಿ ಮಾಡಿದ್ದು ಹಾಗು ಬಿಜೆಪಿಯ 10 ಶಾಸಕರನ್ನು ಪ್ರಸಕ್ತ ಅಧಿವೇಶನದಿಂದ ಅಮಾನತು ಮಾಡಿದ ಸ್ಪೀಕರ್ ಕ್ರಮ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಗೈರಿನ ನಡುವೆ ವಿಧಾನ ಪರಿಷತ್ ಕಲಾಪವನ್ನು ನಡೆಸಲಾಯಿತು. ಈ ವೇಳೆ 5 ಪ್ರಮುಖ ವಿಧೇಯಕಗಳನ್ನು ಪ್ರತಿಪಕ್ಷ ಸದಸ್ಯರ ಗೈರಿನಲ್ಲಿ ಅಂಗೀಕರಿಸಲಾಯಿತು. ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, …
Read More »ಬೆಳಗಾವಿ ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಳ
ಚಿಕ್ಕೋಡಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿದ ಧಾರಾಕಾರ ಮಳೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ಕೆಳ ಹಂತದ ಸೇತುವೆಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ ಕೃಷ್ಣಾನದಿಗೆ 49,500 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ, ಮೈದುಂಬಿ ಹರಿಯುತ್ತಿದೆ. ಮತ್ತೊಂದು ಕಡೆ ವೇದಗಂಗಾ ನದಿಯಲ್ಲಿ ಒಳಹರಿವು ನೀರಿನ ಮಟ್ಟ ಹೆಚ್ಚಳವಾದ ಪರಿಣಾಮವಾಗಿ ನಿಪ್ಪಾಣಿ ತಾಲೂಕಿನ ಜತ್ರಾಟ- ಭೀವಶಿ ಸೇತುವೆ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಪ್ಪಾಣಿ ಪೊಲೀಸರು …
Read More »10 ಶಾಸಕರ ಅಮಾನತು ಖಂಡಿಸಿ ಬಿಜೆಪಿ ಸದಸ್ಯರ ಪ್ರತಿಭಟನೆ
ಬೆಂಗಳೂರು: 10 ಜಿಜೆಪಿ ಶಾಸಕರನ್ನು ಸದನ ಮುಗಿಯುವವರೆಗೆ ಸ್ಪೀಕರ್ ಅಮನಾತು ಮಾಡಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಮಾನತಾದ ಬಿಜೆಪಿ ಶಾಸಕರು ಸೇರಿ ಇತರೆ ಬಿಜೆಪಿ ಶಾಸಕರು ಹಾಗೂ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ, ಮುನಿರತ್ನ, ಸುರೇಶ್ ಕುಮಾರ್, ಬೈರತಿ ಬಸವರಾಜ್, ಸುನೀಲ್ ಕುಮಾರ್, ಗೋಪಾಲಯ್ಯ ಸೇರಿ ಹಲವು ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾದ್ದಾರೆ. ಬಿಜೆಪಿ ಶಾಸಕರು …
Read More »ಬಿಜೆಪಿ ಶಾಸಕರ ಅಮಾನತು ಖಂಡಿಸಿ, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಲಾಪವನ್ನು ಬಹಿಷ್ಕರಿಸಿದ್ದಾರೆ.
ಬೆಂಗಳೂರು: ನಿನ್ನೆ 10 ಮಂದಿ ಬಿಜೆಪಿ ಶಾಸಕರ ಅಮಾನತು ಖಂಡಿಸಿ, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಲಾಪವನ್ನು ಬಹಿಷ್ಕರಿಸಿದ್ದಾರೆ. ವಿರೋಧ ಪಕ್ಷಗಳ ಗೈರುಹಾಜರಿ ನಡುವೆಯೇ ವಿಧಾನಮಂಡಲದ ಕಲಾಪ ಇಂದು ಆರಂಭಗೊಳ್ಳುವ ಮೂಲಕ ಮತ್ತೊಂದು ಅನಪೇಕ್ಷಣೀಯ ವಿದ್ಯಮಾನ ನಡೆದಿದೆ. ವಿಧಾನಮಂಡಲದ 30 ವರ್ಷಗಳ ಇತಿಹಾಸದಲ್ಲಿ ಪ್ರತಿಪಕ್ಷಗಳು ಸಂಪೂರ್ಣ ಬಹಿಷ್ಕಾರ ಹಾಕಿ ಅದರ ಬಳಿಕವೂ ಕಲಾಪ ನಡೆದ ಉದಾಹರಣೆ ಇಲ್ಲ. ಪ್ರಜಾಸತ್ತಾತ್ಮಕ ವಿಷಯಗಳಿಗಾಗಿ ಹಲವಾರು ಬಾರಿ ಪ್ರತಿಭಟನೆಗಳಾಗಿವೆ. ಆ ವೇಳೆ ಸಭಾತ್ಯಾಗ ಮಾಡಿರುವ ಉದಾಹರಣೆಗಳು …
Read More »ಕನ್ಯಾ ಭಾಗ್ಯ ಯೋಜನೆ ತರುವಂತೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ರೈತರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ
ಹಾವೇರಿ : ಜಿಲ್ಲೆಯ ಯುವ ರೈತರು ಇದೀಗ ಹೊಸ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಯುವಕರಿಗೆ ಇದೀಗ ಮದುವೆಯಾಗಲು ಕನ್ಯೆ ಸಿಗುತ್ತಿಲ್ಲ. ಹೀಗಾಗಿ ಜಿಲ್ಲೆಯ ಯುವಕರು ವಿವಿಧೆಡೆ ಕನ್ಯೆ ನೋಡಿ ಬರುತ್ತಾರೆ. ಆದರೆ ಹುಡುಗಿಯ ಕಡೆಯವರು ಕೃಷಿಕರಿಗೆ ಕನ್ಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಸಂಬಂಧ ಹಲವು ಭಾಗ್ಯಗಳನ್ನು ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಕನ್ಯಾಭಾಗ್ಯ ಯೋಜನೆಯನ್ನು ಆರಂಭಿಸುವಂತೆ ಜಿಲ್ಲೆಯ ರೈತರು ಪತ್ರ ಬರೆಯುವ ಮೂಲಕ ಹೊಸ ಅಭಿಯಾನ ಆರಂಭಿಸಿದ್ದಾರೆ. ಜಿಲ್ಲೆಯ ಬ್ಯಾಡಗಿ …
Read More »ಕೇಂದ್ರದ ನಾಯಕ ಓಲೈಕೆಗಾಗಿ ರಾಜ್ಯದ ಬಿಜೆಪಿ ನಾಯಕರು ಈ ರೀತಿಯ ಸಾಹಸಗಳನ್ನು ಮಾಡುತ್ತಿದ್ದಾರೆ ಎಂದು ಡಿಕೆಶಿ
ಬೆಂಗಳೂರು: ದೆಹಲಿ ನಾಯಕರು ನೋಡಲಿ ಅಂತ ಬಿಜೆಪಿ ನಾಯಕರು ರೇಸ್ನಲ್ಲಿ ಇದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆಶಿ ಟಾಂಗ್ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹತಾಶೆಯಿಂದ ಗೂಂಡಾ ವರ್ತನೆ ತೋರುತ್ತಿದ್ದಾರೆ. ಯಾರು ಹೆಚ್ಚಿಗೆ ಮಾತನಾಡುತ್ತಾರೆ, ಯಾರು ಹೆಚ್ಚು ಫೋಟೋಗೆ ಬರುತ್ತಾರೆ ಎಂದು ದೆಹಲಿ ನಾಯಕರು ನೋಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಮಹಾಭಾರತದಲ್ಲಿ ನಡೆಯುವಂತೆ ನಾಟಕ ತೋರಿಸುತ್ತಿದ್ದಾರೆ. ಅವರಿಗೆ ಹಕ್ಕಿದೆ, ಏನು ಬೇಕಾದರು ಮಾಡಲಿ. ನಾವು ನಮ್ಮ ಕೆಲಸ ಮಾಡುತ್ತೇವೆ. ದಲಿತ ಸಭಾದ್ಯಕ್ಷರ …
Read More »ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸೆಪ್ಟೆಂಬರ್ 2ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ಮುಖಾಮುಖಿ
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸೆಪ್ಟೆಂಬರ್ 2ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಬುಧವಾರ ಪ್ರಕಟಿಸಿದೆ. ಸೆಪ್ಟೆಂಬರ್ 2ರಂದು ಕ್ಯಾಂಡಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಏಷ್ಯಾಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಸೆ.10ರಂದು ಕೊಲಂಬೊದಲ್ಲಿ ಸೂಪರ್ 4 ಪಂದ್ಯದಲ್ಲಿ ಮತ್ತೊಮ್ಮೆ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿವೆ. ಈ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆರು ತಂಡಗಳು ಪಾಲ್ಗೊಳ್ಳಲಿವೆ. …
Read More »