ಬೆಂಗಳೂರು: ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ ಯೋಜನೆಯಡಿ ನಾಲ್ಕನೇ ರೈಲು ಜುಲೈ 29ರಂದು ಬೆಂಗಳೂರಿನಿಂದ ಹೊರಡಲಿದೆ. ಕಾಶಿ ದರ್ಶನ ಮಾಡಲಿಚ್ಛಿಸಿರುವ ಯಾತ್ರಾತ್ರಿಗಳು ಆನ್ ಲೈನ್ ಮೂಲಕ ತಮ್ಮ ಟಿಕೆಟ್ಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. 2022-23ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್‌ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್ ರೂಪಿಸಿ “ಕರ್ನಾಟಕ …
Read More »2024ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಾಲೀಮು ಆರಂಭ
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಾಲೀಮು ಆರಂಭಿಸಿವೆ. ಈಗಾಗಲೇ 65 ಪಕ್ಷಗಳು ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದ ಒಕ್ಕೂಟವನ್ನು ಸೇರುವ ಮೂಲಕ ಚುನಾವಣಾ ಅಖಾಡಕ್ಕೆ ಸಜ್ಜುಗೊಳ್ಳುತ್ತಿವೆ. ಆದರೆ, ಸಂಸತ್ತಿನಲ್ಲಿ ಒಟ್ಟು 91 ಸದಸ್ಯರನ್ನು ಹೊಂದಿರುವ ಕನಿಷ್ಠ 11 ಪಕ್ಷಗಳು ತಟಸ್ಥ ಸ್ಥಿತಿಗೆ ಜಾರಿವೆ. ಇದರಲ್ಲಿ ಮೂರು ಪಕ್ಷಗಳು ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಒಡಿಶಾದಂತಹ ಮೂರು ದೊಡ್ಡ ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಒಟ್ಟಾಗಿ 63 ಸದಸ್ಯರನ್ನು ಲೋಕಸಭೆಗೆ …
Read More »ಇಬ್ಬರು ಮಹಿಳೆಯರ ಅಂಗಾಂಗ ದಾನ ಮಾಡಿದ್ದರಿಂದ ಹತ್ತು ಮಂದಿ ಜೀವನಕ್ಕೆ ಆಸರೆ
ಮೈಸೂರು: ಅಪಘಾತಕ್ಕೆ ಒಳಗಾಗಿದ್ದ ಇಬ್ಬರು ಮಹಿಳೆಯರ ಮೆದುಳು ನಿಷ್ಕ್ರಿಯವಾಗಿತ್ತು. ಅವರ ಕುಟುಂಬಸ್ಥರು ಒಪ್ಪಿಗೆ ಮೇರೆಗೆ ಈ ಮಹಿಳೆಯರ ಅಂಗಾಂಗಳನ್ನು ದಾನ ಮಾಡಲಾಯಿತು. ಇಬ್ಬರು ಮಹಿಳೆಯರ ಅಂಗಾಂಗ ದಾನ ಮಾಡಿದ್ದರಿಂದ ಹತ್ತು ಮಂದಿ ಜೀವನಕ್ಕೆ ಆಸರೆಯಾಗಿದೆ. ನಗರದ ಬೆಲ್ಲವತ್ತ ಬಳಿ ಸಂಭವಿಸಿದ ರಸ್ತೆ ಅಪಘಾತ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಧಾ (48) ಎಂಬುವವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಆಸ್ಪತ್ರೆಯ ವೈದ್ಯರು ಘೋಷಿಸಿದ ಬಳಿಕ, ಅಂಗಾಂಗ ದಾನಕ್ಕೆ …
Read More »ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು : ಕೊನೆಗೂ ಬಹುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ಕೊಟ್ಟರು. ಈ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆಯು ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ ವರ್ಷಕ್ಕೆ 24 ಸಾವಿರ ರೂ. ಗಳನ್ನು ಪಡೆಯಲಿದ್ದಾರೆ. 1.28 ಕೋಟಿ ಮಹಿಳೆಯರ ಕುಟುಂಬಕ್ಕೆ ಇದರ ಪ್ರಯೋಜನ ದೊರೆಯಲಿದೆ. ಆ.16ರಿಂದ ಯಜಮಾನಿಯ ಖಾತೆಗೆ 2,000 ರೂ. ಜಮೆಯಾಗಲಿದೆ. ‘₹30 ಸಾವಿರ ಕೋಟಿಯ …
Read More »ರಾಜ್ಯ ಸರ್ಕಾರ ಸರ್ವಾಧಿಕಾರಿ, ಹಿಟ್ಲರ್ ರೀತಿ ವರ್ತಿಸುತ್ತಿದ್ದುಆಕ್ರೋಶ ವ್ಯಕ್ತಪಡಿಸಿದ ಬೊಮ್ಮಾಯಿ
ಬೆಂಗಳೂರು : ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ, ಆರ್. ಅಶೋಕ್, ಹಿರಿಯ ಶಾಸಕರಾದ ಸುರೇಶ್ ಕುಮಾರ್, ವಿ. ಸುನೀಲ್ ಕುಮಾರ್, ಮುನಿರತ್ನ, ಆರ್. ಅಶೋಕ್, ಅರವಿಂದ್ ಬೆಲ್ಲದ್, ಮಹೇಶ್ ಟೆಂಕಿನಕಾಯಿ, ಧೀರಜ್ ಮುನಿರಾಜು, ಚನ್ನಬಸಪ್ಪ, ಜ್ಯೋತಿ ಗಣೇಶ್, ಸಿ. ಕೆ ರಾಮಮೂರ್ತಿ ಸೇರಿದಂತೆ ಹಲವರು ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದ …
Read More »ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೆಲಸ ಮಾಡುತ್ತಿದ್ದು, ಜನ ನಮಗೆ ಅಧಿಕಾರ ನೀಡಿರುವ ಕಾರಣ ನಾವು ಇಲ್ಲಿ ಕುಳಿತ್ತಿದ್ದೇವೆ. ಬಿಜೆಪಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ನಡೆ ಖಂಡಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಸಂದರ್ಭ, ಕಳೆದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನಾವು ಹಾಗೂ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರ ಮಾಡಿದ್ದೆವು. ಆಗಲೂ …
Read More »ಮಾನಸಿಕ ಅಸ್ವಸ್ಥ ಮಗನನ್ನು ಕೊಲೆ ಮಾಡಿದ ತಂದೆ
ಬೆಳಗಾವಿ: ಕಳೆದ ಮೇ 31ರಂದು ಖಾನಾಪುರ ಪಟ್ಟಣದ ಹೊರವಲಯದ ಮಲಪ್ರಭಾ ನದಿ ತೀರದಲ್ಲಿ ಪತ್ತೆಯಾದ ಅಪರಿಚಿತ ಯುವಕನ ಅಸಹಜ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ವತಃ ತಂದೆಯೇ ತನ್ನ ಮಾನಸಿಕ ಅಸ್ವಸ್ಥ ಮಗನನ್ನು ಕೊಲೆ ಮಾಡಿರುವ ಸಂಗತಿ ಪೊಲೀಸರ ತನಿಖೆಯಿಂದ ಬಯಲಾಗಿದ್ದು, ಆರೋಪಿ ತಂದೆಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಪರಿಚಿತ ಶವದ ಮರಣೋತ್ತರ ತನಿಖೆ ನಡೆಸಿದ್ದ ಪೊಲೀಸರಿಗೆ ಮೃತ ವ್ಯಕ್ತಿ ವಿಷ ಸೇವಿಸಿರುವುದು ಮತ್ತು ಆತನ ತಲೆಗೆ ಬಲವಾಗಿ …
Read More »ಕುಸಿದು ಬಿದ್ದ ಯತ್ನಾಳ್
ಬೆಂಗಳೂರು: ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಇನ್ನು ಈ ವೇಳೆ ಪ್ರತಿಭಟನಾ ನಿರತ ಬಿಜೆಪಿ ಸದಸ್ಯರನ್ನು ಮಾರ್ಷಲ್ಗಳು ಹೊತ್ತೊಯ್ದಿದ್ದಾರೆ. ಮತ್ತೊಂದು ಕಡೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥಗೊಂಡು ಕುಸಿದು ಬಿದ್ದ ಪ್ರಕರಣವೂ ನಡೆಯಿತು. ಅಸ್ವಸ್ಥಗೊಂಡ ಅವರನ್ನು ತಕ್ಷಣ ಸ್ಟ್ರೆಚರ್ನಲ್ಲಿ ಮಾರ್ಷಲ್ಗಳು ಹೊತ್ತು ಕೊಂಡು ಹೋಗಿ, ಆಸ್ಪತ್ರೆಗೆ ರವಾನಿಸಿದರು. ಸುದ್ದಿ ತಿಳಿದಾಕ್ಷಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ …
Read More »ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ಕಾಂಗ್ರೆಸ್ ವರ್ತಿಸಿದೆ : H.D.K.
ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ನಂತರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು. ಪ್ರತಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು, ಇವತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. …
Read More »ಜೈನಮುನಿ ಹತ್ಯೆ ಪ್ರಕರಣ.. ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಚಿಕ್ಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಬಿಜೆಪಿ, ಜೆಡಿಎಸ್ ಸದಸ್ಯರ ಧರಣಿ, ಗದ್ದಲದ ನಡುವೆ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡಿದ ಸಿಎಂ, ಜೈನಮುನಿ ಅವರು ಕಾಣೆಯಾಗಿರುವ ಬಗ್ಗೆ ಜುಲೈ 7 ರಂದು ದೂರು ಬಂದಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು. ನಾರಾಯಣಪ್ಪ ಬಸಪ್ಪ ಮಾಳಗಿ ಅವರ ಜಮೀನಿನ ಕೊಳವೆ ಬಾವಿಯಲ್ಲಿ …
Read More »