ಚೆನ್ನೈ (ತಮಿಳುನಾಡು): ಡಿಎಂಕೆ ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ಮತ್ತು ಅವರ ಪುತ್ರ ಗೌತಮ ಚಿಕಾಮಣಿ ಒಡೆತನದ 7 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಈ ಶೋಧದ ಕೊನೆಯಲ್ಲಿ ಜಾರಿ ಇಲಾಖೆಯ ಅಧಿಕಾರಿಗಳು ಸಚಿವ ಪೊನ್ಮುಡಿ ಅವರನ್ನು ಕಚೇರಿಗೆ ಕರೆದೊಯ್ದು ವಶಪಡಿಸಿಕೊಂಡ ದಾಖಲೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಎರಡನೇ ದಿನವೂ ಸಚಿವ ಪೊನ್ಮುಡಿ ಹಾಗೂ ಅವರ ಪುತ್ರ ಗೌತಮ ಚಿಕಮಣಿ ಅವರನ್ನು ಜಾರಿ ಅಧಿಕಾರಿಗಳು 3 ಗಂಟೆಗಳ ಕಾಲ …
Read More »ಸ್ಪೀಕರ್ ಪೀಠದತ್ತ ಪೇಪರ್ ಎಸೆದು ಬಿಜೆಪಿ ಶಾಸಕರ ತೀವ್ರ ಪ್ರತಿಭಟನೆ
ಬೆಂಗಳೂರು: ಪ್ರತಿಪಕ್ಷ ಬಿಜೆಪಿ ಶಾಸಕರ ಪ್ರತಿಭಟನೆ ತೀವ್ರಗೊಂಡು ವಿಧೇಯಕಗಳ ಪ್ರತಿಗಳನ್ನು ಹರಿದು ಸ್ಪೀಕರ್ ಪೀಠದತ್ತ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ವಿಧಾನಸಭೆಯಲ್ಲಿ ಇಂದು ನಡೆಯಿತು. ರಾಜಕೀಯ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಗಣ್ಯರ ಆತಿಥ್ಯಕ್ಕೆ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರು. ಇದರ ಮಧ್ಯೆ ಸ್ಪೀಕರ್ ಯು ಟಿ ಖಾದರ್, ಪ್ರತಿಪಕ್ಷದ ಶಾಸಕರಿಗೆ ಕಲಾಪದಲ್ಲಿ ಭಾಗವಹಿಸುವಂತೆ ಮನವಿ …
Read More »ನಿರ್ಮಾಪಕ ಕುಮಾರ್ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಕಿಚ್ಚನ ಅಭಿಮಾನಿಗಳು
ಚಾಮರಾಜನಗರ: ಚಿತ್ರ ನಿರ್ಮಾಪಕ ಕುಮಾರ್ ಹಾಗೂ ಸುರೇಶ್ ವಿರುದ್ಧ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ದೂರು ಕೊಟ್ಟು ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ. ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ಮೂಲದ ನಿರ್ಮಾಪಕ ಎಂ ಎನ್ ಕುಮಾರ್ ಹಾಗೂ ಎಂ ಎನ್ ಸುರೇಶ್ ಎಂಬುವವರು ಸುಳ್ಳು ಸುದ್ದಿ ಹಾಗೂ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಸುದೀಪ್ ಅವರಿಗೆ ಮಾನಹಾನಿ ಮಾಡುತ್ತಿದ್ದಾರೆ. ಅಲ್ಲದೆ, …
Read More »ಬಿಜೆಪಿ 10 ಶಾಸಕರನ್ನು ಅಮಾನತು ಮಾಡಿ ಸ್ವೀಕರ್ ಆದೇಶ
ಬೆಂಗಳೂರು: ಬಿಜೆಪಿ 10 ಶಾಸಕರನ್ನು ಅಮಾನತು ಮಾಡಿ ಸ್ವೀಕರ್ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದ್ದಾರೆ. ಇದಕ್ಕೂ ಮೊದಲು, ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಲು ಪ್ರತಿಪಕ್ಷ ಮುಂದಾಗಿತ್ತು. ಅತ್ತ ಬಿಜೆಪಿ ಸದಸ್ಯರ ಅಮಾನತಿಗೆ ಆಡಳಿತ ಪಕ್ಷ ನಿಲುವಳಿ ಸೂಚನೆ ಮಂಡಿಸಿತ್ತು. ಸದ್ಯ 10 ಮಂದಿ ಬಿಜೆಪಿ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಅವಿಶ್ವಾಸ ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿದ್ದರು. ಭೋಜನ …
Read More »ರಾಯಚೂರು ಜಿಲ್ಲಾ ಪಂಚಾಯತಿಯಲ್ಲಿದೆ ಉದ್ಯೋಗ; 35 ಸಾವಿರ ರೂಪಾಯಿ ವೇತನ
ರಾಯಚೂರು ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈ ಹುದ್ದೆಗಳ ಭರ್ತಿ ನಡೆಯುತ್ತದೆ. ಹುದ್ದೆಗಳು ತಾತ್ಕಾಲಿಕವಾಗಿದ್ದು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ಹುದ್ದೆಗಳ ವಿವರ : ರಾಯಚೂರು ಜಿಲ್ಲಾ ಪಂಚಾಯತ್ನಿಂದ ಮನರೇಗಾ ಅಡಿಯಲ್ಲಿ ಬ್ಲಾಕ್ ಲೈವ್ಲಿಹುಡ್ ಎಕ್ಸ್ಪರ್ಟ್, ಬ್ಲಾಕ್ ಎನ್ಆರ್ಎಂ ಎಕ್ಸ್ಪರ್ಟ್ ಸೇರಿದಂತೆ ಒಟ್ಟು 8 ಹುದ್ದೆಗಳು. ವಿದ್ಯಾರ್ಹತೆ …
Read More »ಪ್ರತಿಪಕ್ಷಗಳ ಸಭೆಯಲ್ಲಿ IAS ಅಧಿಕಾರಿಗಳ ಬಳಕೆಗೆ ಆಕ್ಷೇಪ
ಬೆಂಗಳೂರು: ನಗರದಲ್ಲಿ ನಡೆದ ಮಹಾಘಟಬಂಧನ್ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಆತಿಥ್ಯಕ್ಕಾಗಿ ಐಎಎಸ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿ, ಆಡಳಿತ ಹಾಗೂ ಬಿಜೆಪಿ ಸದಸ್ಯರ ನಡುವೆ ಏರಿದ ದನಿಯಲ್ಲಿ ವಾಗ್ವಾದ ನಡೆಯಿತು. ಕಲಾಪವನ್ನು ಕೆಲಕಾಲ ಮುಂದೂಡಿದ ಪ್ರಸಂಗವೂ ನಡೆಯಿತು. ಬೆಳಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಬಿಜೆಪಿಯ ಹಿರಿಯ ಶಾಸಕ ಆರ್.ಅಶೋಕ್ ವಿಷಯ ಪ್ರಸ್ತಾಪಿಸಿದರು. ಈ ವಿಚಾರದ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿ ಸದನದಲ್ಲಿ …
Read More »ಬೆಂಗಳೂರಿನಲ್ಲಿ ಸೆರೆಯಾದ ಶಂಕಿತ ಉಗ್ರರ ಹಿಂದಿರುವ ಮಾಸ್ಟರ್‌ಮೈಂಡ್ ಯಾರು ಗೊತ್ತಾ?
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಗಂಭೀರ ಆರೋಪದಡಿ ಐವರು ಶಂಕಿತ ಉಗ್ರರನ್ನು ನಗರ ಪೊಲೀಸರು ಇಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ನಿಲ್ದಾಣ ಸೇರಿದಂತೆ ನಗರದ ಜನಸಂದಣಿ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲು ಹೊಂಚು ಹಾಕುತ್ತಿದ್ದ ಆರೋಪದಡಿ ಸುಹೇಲ್, ಉಮರ್, ಜಾಹಿದ್, ಮುದಾಸಿರ್ ಹಾಗೂ ಫೈಜರ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ 7 ಕಂಟ್ರಿಮೇಡ್ ಪಿಸ್ತೂಲ್ಗಳು, 45 ಜೀವಂತ ಗುಂಡುಗಳು, ವಾಕಿಟಾಕಿ ಸೆಟ್ಸ್, ಒಂದು ಡ್ರ್ಯಾಗರ್ ಹಾಗೂ 12 ಮೊಬೈಲ್ …
Read More »ಬೆಂಗಳೂರಿನಲ್ಲಿ ಸೆರೆ ಸಿಕ್ಕ ಐವರು ಶಂಕಿತ ಉಗ್ರರಿಗೆ 15 ದಿನ ಪೊಲೀಸ್ ಕಸ್ಟಡಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರುನಗರದಲ್ಲಿ ಭಾರಿ ಸ್ಫೋಟ ಎಸಗಲು ದೊಡ್ಡ ಮಟ್ಟದಲ್ಲಿ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇಶದ್ರೋಹ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತುರ್ತು ಮಾಧ್ಯಮಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. “ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ …
Read More »ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ : ಬೊಮ್ಮಾಯಿ
ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾಧ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ದೂರಿದರು. ಉಗ್ರರನ್ನು ಬಂಧಿಸಿದ ಸಿಸಿಬಿಗೆ ಅಭಿನಂದನೆ ಸಲ್ಲುಸುತ್ತೇನೆ. ಆದರೆ ಬಹಳಷ್ಟು ಕೇಸ್ಗಳು ಪೊಲೀಸ್ ಠಾಣೆಯಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, …
Read More »ಹಣದ ವಿಚಾರವಾಗಿ ಮಗನೇ ತಂದೆಯನ್ನು ಕೊಲೆ ಮಾಡಿ ಹೂತಿಟ್ಟ
ರಾಯಚೂರು: ಹಣದ ವಿಚಾರವಾಗಿ ಮಗನೇ ತಂದೆಯನ್ನು ಕೊಲೆ ಮಾಡಿ ಹೂತಿಟ್ಟಿರುವ ಆತಂಕಕಾರಿ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ತಾಲೂಕಿನ ವಡ್ಲೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಶಿವನಪ್ಪ(65) ಮಗನಿಂದ ಕೊಲೆಯಾಗಿರುವ ತಂದೆ ಎಂದು ತಿಳಿದುಬಂದಿದೆ. 35 ವರ್ಷದ ಮಗ ಈರಣ್ಣ ಕೊಲೆ ಮಾಡಿರುವ ಆರೋಪಿ. ಜುಲೈ 07ರಂದು ಕೊಲೆ ಮಾಡಿ, ವಡ್ಲೂರು ಕ್ರಾಸ್ನ ಹತ್ತಿರ ಹೊಸದಾಗಿ ನಿರ್ಮಾಣ ಮಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹೂತಿಟ್ಟಿದ್ದಾನೆ. ಬಳಿಕ ತಾನೇ …
Read More »