ಬೆಂಗಳೂರು: ನ್ಯಾಯಾಲಯಗಳಲ್ಲಿ ದೀರ್ಘಕಾಲಿಕ ವ್ಯಾಜ್ಯವನ್ನು ಎದುರಿಸಲು ಸುಸ್ಥಿರ ಸಾಮರ್ಥ್ಯ ಹೊಂದಿರದ ವ್ಯಕ್ತಿಗಳನ್ನು ಒಳಗೊಂಡಿರುವ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ 2023ನೇ ಸಾಲಿನ ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು. ರೈತರು, ಬಡವರಿಗೆ ತ್ವರಿತ ನ್ಯಾಯದಾನ ಕಲ್ಪಿಸಿಕೊಡುವ ಹಾಗೂ ಸರ್ಕಾರಿ ವ್ಯಾಜ್ಯಗಳಲ್ಲಿ ಪರಾಜಯ ತಪ್ಪಿಸಲು ಪೂರಕವಾಗಲಿರುವ ಎರಡು ಹೊಸ ಕಾನೂನುಗಳು ಜಾರಿಗೆ ಬರಲಿವೆ. ಸಣ್ಣ, ಅತೀ ಸಣ್ಣ …
Read More »ಚಲಿಸುತ್ತಿದ್ದ ಬಸ್ ಮುಂದೆ ಮಹಿಳೆ ಆತ್ಮಹತ್ಯೆ.. ಮಗನ ಕಾಲೇಜು ಶುಲ್ಕಕ್ಕಾಗಿ ಹೆತ್ತಮ್ಮಳ ದಾರುಣ ಅಂತ್ಯ!
ಸೇಲಂ (ತಮಿಳುನಾಡು): ಮಕ್ಕಳಿಗಾಗಿ ಹೆತ್ತವರು ಎಂತಹ ತ್ಯಾಗಕ್ಕೂ ಸಿದ್ಧರಾಗಿರುತ್ತಾರೆ. ತಮ್ಮ ಆಸೆ, ನಿರೀಕ್ಷೆಗಳನ್ನೆಲ್ಲ ಬಚ್ಚಿಟ್ಟುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಮಹಾ ತಾಯಿ ಮಗನ ಕಾಲೇಜು ಶುಲ್ಕ ಕಟ್ಟುವ ಹಣ ಹೊಂದಿಸಲು ಪರಿಹಾರ ಸಿಗುತ್ತದೆ ಎಂದು ಚಲಿಸುತ್ತಿರುವ ಬಸ್ ಎದುರು ಬಂದು ಪ್ರಾಣ ತ್ಯಾಗ ಮಾಡಿದ್ದಾರೆ.ತನ್ನ ಮಗನ ಭವಿಷ್ಯ ಉಜ್ವಲಗೊಳಿಸುವ ಆಸೆಯಿಂದ ತಾಯಿ ತನ್ನ ಪ್ರಾಣವನ್ನೇ ಬಲಿ ಕೊಟ್ಟ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.ಪಾಪತಿ (46) ಮೃತ ಮಹಿಳೆ. ಕಳೆದ ಜೂ.28ರಂದು ಬೆಳಗ್ಗೆ …
Read More »ನಕಲಿ ಜಾತಿ ಪ್ರಮಾಣಪತ್ರಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಎಸ್ಸಿ/ಎಸ್ಟಿ ಯುವಕರಿಂದ ನಗ್ನ ಪ್ರತಿಭಟನಾ ಮೆರವಣಿಗೆ
ರಾಯಪುರ (ಚತ್ತೀಸ್ಗಢ): ನಕಲಿ ಜಾತಿ ಪ್ರಮಾಣಪತ್ರಗಳ ಮೇಲೆ ಸರ್ಕಾರಿ ಉದ್ಯೋಗ ಪಡೆದು ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್ಸಿ-ಎಸ್ಟಿ)ದ ಸುಮಾರು 50 ಯುವಕರು ನಗ್ನ ಪ್ರತಿಭಟನಾ ಮೆರವಣಿಗೆ ನಡೆಸಿರುವ ಘಟನೆ ಛತ್ತೀಸ್ಗಢದ ರಾಜಧಾನಿ ರಾಯಪುರದಲ್ಲಿ ಮಂಗಳವಾರ ನಡೆದಿದೆ. ಸಂಪೂರ್ಣ ಬೆತ್ತಲಾಗಿ ರಸ್ತೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ಯುವಕರು ಹೊರ ಹಾಕಿದ್ದಾರೆ. ಜಾತಿ ಪ್ರಮಾಣ ಪತ್ರ ನೀಡಿಕೆ ಕುರಿತು ಘೋಷಣಾ ಫಲಕಗಳನ್ನು ಹಿಡಿದುಕೊಂಡು ಯುವಕರು ಮುಖ್ಯ …
Read More »ಎಪಿಎಂಸಿ ತಿದ್ದುಪಡಿ ವಿಧೇಯಕ ಸೆಲೆಕ್ಟ್ ಕಮಿಟಿಗೆ ವಹಿಸುವ ನಿರ್ಣಯ ಅಂಗೀಕರಿಸಿದ ಪರಿಷತ್: ಸರ್ಕಾರಕ್ಕೆ ಹಿನ್ನಡೆ..!
ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ಮತದಾನದ ಮೂಲಕ ಸೆಲೆಕ್ಟ್ ಕಮಿಟಿಗೆ ವಹಿಸುವ ಪ್ರಸ್ತಾವವನ್ನು ವಿಧಾನ ಪರಿಷತ್ ಅಂಗೀಕರಿಸಿದ್ದು, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ ವಿಧೇಯಕ ಮಂಡಿಸಿ ಮಾತನಾಡಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ”ಎಪಿಎಂಸಿ ಕಾಯ್ದೆ ಕೇಂದ್ರ ವಾಪಸ್ ಪಡೆದರೂ ಕರ್ನಾಟಕ ವಾಪಸ್ ಪಡೆದಿಲ್ಲ. ಹಿಂದೆ ಕಾಯ್ದೆ ತಿದ್ದುಪಡಿ …
Read More »ವಿಜಯಪುರ ಜಿಲ್ಲೆಯಲ್ಲಿ ಇಂದು ಕೊನೆಗೂ ಮುಂಗಾರು ಆರಂಭ
ವಿಜಯಪುರ: ಕೊನೆಗೂ ಒಂದೂವರೆ ತಿಂಗಳ ನಂತರ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದೆ. ಸೋಮವಾರ ರಾತ್ರಿಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ಮಂಗಳವಾರ ದಿನವಿಡಿ ಜಿಟಿ ಜಿಟಿ ಮಳೆಯಾಗಿದೆ. ಸದ್ಯ ಹವಾಮಾನ ಇಲಾಖೆಯ ಮಾಹಿತಿಯಂತೆ ಇಂದು ಮಂಗಳವಾರ ಬೆಳಗ್ಗೆ 8-30ರಿಂದ ಸಂಜೆ 5-30ರವರೆಗೆ 5.2 ಮಿ,ಮೀ ಮಳೆ ದಾಖಲಾಗಿದೆ. ಇನ್ನೂ ಐದು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ. ಭಾರತದ ಹವಾಮಾನ ವಿಭಾಗದ ಮಾಹಿತಿಜು.19 ರಿಂದ 23ರವರೆಗೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದೆ. ವಿಜಯಪುರ …
Read More »ವಿಶ್ವಕಪ್ನಲ್ಲಿ ಬುಮ್ರಾ.. ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ.
ನವದೆಹಲಿ: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ದೀರ್ಘಕಾಲದವರೆಗೆ ಕ್ರಿಕೆಟ್‌ನಿಂದ ದೂರವಿದ್ದಾರೆ. ಅವರು ಈ ವರ್ಷ ನ್ಯೂಜಿಲ್ಯಾಂಡ್ಗೆ ಹೋಗಿ ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದರ ನಂತರ, ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಚೇತರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಈಗಾಗಲೇ ಸಾಕಷ್ಟು ಚೇತರಿಸಿಕೊಂಡಿರುವಂತೆ ತೋರುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ಮತ್ತೆ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ. ನ್ಯೂಜಿಲ್ಯಾಂಡ್ನಲ್ಲಿ ಜಸ್ಪ್ರಿತ್ ಬುಮ್ರಾಗೆ ಸರ್ಜರಿ: ಈ ಕ್ರಮದಲ್ಲಿ ಟೀಂ ಇಂಡಿಯಾಗೆ ಶೀಘ್ರದಲ್ಲೇ …
Read More »ಹಿರೆಕೋಡಿ ಗ್ರಾಮದ ಜೈನ ಮುನಿ ಹತ್ಯೆ ಹಿಂದೆ ಆಯಂಟಿ ನ್ಯಾಷನಲ್ ಟೆರರಿಸ್ಟ್ ಸಂಘಟನೆ ಕೆಲಸ ಮಾಡುತ್ತಿದೆ.
ಚಿಕ್ಕೋಡಿ(ಬೆಳಗಾವಿ): ಹಿರೆಕೋಡಿ ಗ್ರಾಮದ ಜೈನ ಮುನಿ ಹತ್ಯೆ ಹಿಂದೆ ಆಯಂಟಿ ನ್ಯಾಷನಲ್ ಟೆರರಿಸ್ಟ್ ಸಂಘಟನೆ ಕೆಲಸ ಮಾಡುತ್ತಿದೆ. ಈ ಪ್ರಕರಣದ ಸತ್ಯಾಸತ್ಯತೆ ಹೊರ ಬರಬೇಕು ಎಂದರೆ ಸಿಬಿಐ ತನಿಖೆ ಆಗಲೇಬೇಕು ಎಂದು ಅಖಿಲ ಭಾರತ ಸಂತ ಸಮಿತಿ ಅಧ್ಯಕ್ಷ ಹಾಗೂ ಮಂಗಳೂರಿನ ಓಂ ಶ್ರೀ ಮಠದ ಸ್ವಾಮೀಜಿಯಾದ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಗ್ರಹಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಜಿನ್ಯಕ್ಯ ಕಾಮಕುಮಾರ ನಂದಿ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ …
Read More »ದೇಶದ ಎಲ್ಲ ಪ್ರತಿಪಕ್ಷಗಳ ನಾಯಕರು ಭಾರತವನ್ನು ರಕ್ಷಣೆ ಮಾಡುವ ತೀರ್ಮಾನ ಮಾಡಿದ್ದಾರೆ ಎಂದ ಡಿ.ಸಿ.ಎಂ .ಡಿ.ಕೆ. ಶಿ.:
ಬೆಂಗಳೂರು: ದೇಶ ನಿರೀಕ್ಷೆ ಮಾಡಿದಂತೆ ಇಂದಿನ ಪ್ರತಿ ಪಕ್ಷಗಳ ಸಭೆ ಯಶಸ್ವಿಯಾಗಿ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಈ ಸಭೆ ಭಾರತದ ಧ್ವನಿಯಾಗಿತ್ತು. ದೇಶದ ಎಲ್ಲ ಪ್ರತಿಪಕ್ಷಗಳ ನಾಯಕರು ಭಾರತವನ್ನು ರಕ್ಷಣೆ ಮಾಡುವ ತೀರ್ಮಾನ ಮಾಡಿದ್ದಾರೆ ಎಂದಿದ್ದಾರೆ. ಮೈತ್ರಿಕೂಟದ ನಾಯಕರ ಜೊತೆ ಡಿಕೆ ಶಿವಕುಮಾರ್ಇದಕ್ಕೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, “ಇಂದಿನ ಸಭೆಯು ಭಾರತದ ಧ್ವನಿಯಾಗಿದೆ.. ಅದರಲ್ಲಿ ಸಾಕಷ್ಟು …
Read More »ಶಿಷ್ಟಾಚಾರದ ಪ್ರಕಾರವೇ ಗಣ್ಯರ ಸ್ವಾಗತಕ್ಕೆ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗಿತ್ತೇ ಹೊರತು ರಾಜಕೀಯ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ಬಳಸಿಕೊಂಡಿರಲಿಲ್ಲ ಎಂದ ಸಿಎಂ
ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎನ್ನುವ ಪ್ರತಿ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ಆಗಮಿಸಿದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ರಾಜ್ಯದ ಅತಿಥಿಗಳಾಗಿದ್ದರು. …
Read More »ಏಕಾಂಗಿಯಾಗಿ ಉಳಿದ J.D.S.ಕಾಂಗ್ರೆಸ್ ಕರೆಯಲಿಲ್ಲ.. ಬಿಜೆಪಿಯೂ ಬನ್ನಿ ಎನ್ನಲಿಲ್ಲ:H,D.K
ಬೆಂಗಳೂರು: ಎನ್ಡಿಎ ಕೂಟ ಹಾಗೂ ವಿಪಕ್ಷ ಒಕ್ಕೂಟದ ಮಧ್ಯೆ ಜೆಡಿಎಸ್ ಎಲ್ಲೂ ಸಲ್ಲದಂತಾಗಿದೆ. ಎರಡು ಒಕ್ಕೂಟಗಳಿಂದ ಆಹ್ವಾನ ಬಾರದೇ ಜೆಡಿಎಸ್ ಅತಂತ್ರವಾಗಿ ಉಳಿದಿದೆ. ಎರಡೂ ಮೈತ್ರಿ ಒಕ್ಕೂಟದಿಂದ ನಿರ್ಲಕ್ಷ್ಯಕ್ಕೊಳಗಾದ ಜೆಡಿಎಸ್ ಯಾರಿಗೂ ಬೇಡವಾಯಿತಾ ಎಂಬ ಅನುಮಾನ ಮೂಡುತ್ತಿದೆ. ಒಂದೆಡೆ ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಎನ್ಡಿಎ ಮೈತ್ರಿಕೂಟವನ್ನು ಬಲ ಪಡಿಸುತ್ತಿದ್ದರೆ. ಇನ್ನೊಂದೆಡೆ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷ ಕೂಟದ ಶಕ್ತಿ ವರ್ಧನೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎನ್ಡಿಎ ಮೈತ್ರಿ …
Read More »