ದೇವನಹಳ್ಳಿ(ಬೆಂಗಳೂರು): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದಿದ್ದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು, ಸ್ಮಗ್ಲರ್ಸ್ ಮೊದಲೇ …
Read More »ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದೆ.
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ವಿವಾದಿತ ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆ ಮಧ್ಯೆ ವಿಧಾನಸಭೆಯಲ್ಲಿ 2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿತು. ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧೇಯಕವನ್ನು ಮಂಡಿಸಿದರು. ಈ ಬಿಲ್‌ಅನ್ನು ತರಾತುರಿಯಲ್ಲಿ ತಂದಿಲ್ಲ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಈ …
Read More »”ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭ: C.M.
ಬೆಂಗಳೂರು: ”ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ವಿಧಾನಸೌಧದಲ್ಲಿ ಇಂದು ಸೋಮವಾರ ಸಂಜೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ”ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮೋದಿಯವರು 28 ಕಡೆ ಪ್ರವಾಸ ಕೈಗೊಂಡಿದ್ದು, ಅವರು ಬಂದ ಕಡೆಗಳೆಲ್ಲಾ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಸಮರ್ಥವಾಗಿ ಎದುರಿಸಲೇ ಇಲ್ಲ. …
Read More »ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ …
Read More »ಜಿಲ್ಲೆಯಲ್ಲಿ ಡ್ರಗ್ಸ್ ಮಾರಾಟಗಾರರು ಹೆಚ್ಚಾಗಿದ್ದು, ಮಾರಾಟಕ್ಕೆ ಬ್ರೇಕ್ ಹಾಕಲು ಪೋಲಿಸ್ ಇಲಾಖೆ ಸಜ್ಜಾ
ಕೊಡಗು: ಜಿಲ್ಲೆಯಲ್ಲಿ ಡ್ರಗ್ಸ್ ಮಾರಾಟಗಾರರು ಹೆಚ್ಚಾಗಿದ್ದು, ಮಾರಾಟಕ್ಕೆ ಬ್ರೇಕ್ ಹಾಕಲು ಪೋಲಿಸ್ ಇಲಾಖೆ ಸಜ್ಜಾಗಿದೆ. ಈ ಒಂದು ಕ್ರಮದಲ್ಲಿ ಪೊಲೀಸರು, ಮಾರಾಟಗಾರರು ಮತ್ತು ಸೇವನೆ ಮಾಡುತ್ತಿದ್ದ ವ್ಯಕ್ತಿಗಳನ್ನು ಸೇರಿ ಜಿಲ್ಲೆಯಲ್ಲಿ 25 ಮಂದಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಆರೋಪಿಗಳ ಬಳಿ ಇದ್ದ ಗಾಂಜಾ , ಎಲ್ಎಸ್ಡಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಬಂಧಿತರಲ್ಲಿ 14 ಜನ ಪ್ರವಾಸಿಗರಿದ್ದು, ಇವರು ಹೋಂ ಸ್ಟೇಯೊಂದರಲ್ಲಿ ಮಾದಕವಸ್ತು ಸೇವಿಸುತ್ತಿದ್ದರು. ಅಲೀಂ ಅಹ್ಮದ್, ಮೋಸಿನ್, ಸಾಗರ್, ರೆಹಮಾನ್, ಚೇತನ್, …
Read More »ಜೈಲಿನಲ್ಲಿರುವ ಕೈದಿಗಳಿಗೆ ತಮ್ಮ ಮಕ್ಕಳನ್ನು ನೋಡಲು ಮತ್ತು ಭೇಟಿಯಾಗುವ ಅವಕಾಶ ಮುತ್ತಿಕ್ಕಿ ಬಾವುಕರಾದ ಕೈದಿಗಳು!
ಛಿಂದ್ವಾರಾ, ಮಧ್ಯಪ್ರದೇಶ: ಕೆಲವರು ತಮ್ಮ ಮಕ್ಕಳನ್ನು ಮೊದಲ ಬಾರಿಗೆ ತಬ್ಬಿಕೊಂಡರೆ, ಕೆಲವರು ಅನೇಕ ವರ್ಷಗಳ ನಂತರ ತಮ್ಮ ಕುಡಿಗಳನ್ನು ನೋಡಿ ಸಂತಸದಿಂದ ಕಣ್ಣೀರು ಸುರಿಸುತ್ತಿರುವ ಪ್ರಸಂಗವೊಂದು ಜೈಲಿನಲ್ಲಿ ಕಂಡು ಬಂದಿತು. ಇನ್ನು ಚಿಕ್ಕ ಮಕ್ಕಳು ತಮ್ಮ ತಂದೆಯ ಮಡಿಲಲ್ಲಿ ಕುಳಿತು ನಿರಾಳವಾಗಿದ್ದರು. ಈ ಮನಕಲುಕುವ ಕ್ಷಣಗಳು ಛಿಂದ್ವಾರಾ ಜಿಲ್ಲಾ ಕಾರಾಗೃಹದೊಳಗೆ ಕಂಡುಬಂದಿತು. ಛಿಂದ್ವಾರಾ ಜಿಲ್ಲಾ ಕಾರಾಗೃಹದ ಆಡಳಿತವು ಕೈದಿಗಳಿಗೆ ತಮ್ಮ ಮಕ್ಕಳನ್ನು ಭೇಟಿ ಮಾಡಲು ಕಾರ್ಯಕ್ರಮ ಆಯೋಜಿಸಿತ್ತು, ಅದಕ್ಕೆ ಸ್ಪರ್ಶ್ ಮೀಟ್ …
Read More »ದೇಶವನ್ನು ಲೂಟಿ ಮಾಡಿದ ದರೋಡೆಕೋರರು ಒಟ್ಟಾಗಿದ್ದಾರೆ.: ಯತ್ನಾಳ್
ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೇಶವನ್ನು ಲೂಟಿ ಮಾಡಿದ ದರೋಡೆಕೋರರು ಒಟ್ಟಾಗಿದ್ದಾರೆ. ಇದು ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರ ಒಕ್ಕೂಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ತಿಂಗಳಾಗಿದೆ. ಬರಗಾಲದ ಛಾಯೆ ಎದುರಾಗಿದೆ. ರೈತರ ಆತ್ಮಹತ್ಯೆ ಹೆಚ್ಚಿದೆ. ಆತಂಕದ ಛಾಯೆ ಹೆಚ್ಚಾಗಿದೆ ಎಂದು ಕಿಡಿ ಕಾರಿದರು. ಹಿಂದೂ ಕಾರ್ಯಕರ್ತರ ಹಾಗೂ ಜೋಡಿ …
Read More »ಖಾಸಗಿ ಶಾಲೆಯಲ್ಲಿ ಕಲುಷಿತ ನೀರು ತುಂಬಿದ್ದ ಡ್ರಮ್ನಲ್ಲಿ ಬಿದ್ದು ಬಾಲಕನ ಆರೋಗ್ಯದಲ್ಲಿ ಏರುಪೇರ: ಈಗ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮನ ಕಲುಕುವ ಘಟನೆ ನಡೆದಿದೆ. ಸಾಗರದ ಖಾಸಗಿ ಶಾಲೆಯಲ್ಲಿ ಒಂದನೇ ತರಗತಿಯ ವಿದ್ಯಾರ್ಥಿ ಕಲು ಷಿತ ನೀರು ಇರುವ ಪ್ಲಾಸ್ಟಿಕ್ ಡ್ರಮ್ನಲ್ಲಿ ಬಿದ್ದು ಈಗ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಶಾಲೆಯ ಶಿಕ್ಷಕರ ನಿರ್ಲಕ್ಷ್ಯ ಈ ಘಟನೆ ನಡೆದಿದೆ ಎಂದು ಬಾಲಕನ ಪೋಷಕರು ಆರೋಪಿಸುತ್ತಿದ್ದಾರೆ. ಈಗ ಬಾಲಕನನ್ನು ಮಣಿಪಾಲದ ಕಸ್ತೂರ್ ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಹಿನ್ನಲೆ: ಜೂ.26 …
Read More »ಜೈನ ಮುನಿ ಆರೋಪಿಗಳನ್ನು ಮತ್ತೆ ಚಿಕ್ಕೋಡಿ ನ್ಯಾಯಾಲಯ ಐದು ದಿನಗಳವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯ ಪ್ರಮುಖ ಆರೋಪಿಗಳನ್ನು ಮತ್ತೆ ಚಿಕ್ಕೋಡಿ ನ್ಯಾಯಾಲಯ ಐದು ದಿನಗಳವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕಳೆದ ವಾರದ ಹಿಂದೆ ಚಿಕ್ಕೋಡಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಏಳು ದಿನಗಳವರಿಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಆ ಕಾಲಾವಕಾಶ ಮುಗಿಯುತ್ತಿದ್ದಂತೆ ಇಂದು ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶ ಚಿದಾನಂದ ಬಡಿಗೇರ ಅವರು ವಿಚಾರಣೆ ನಡೆಸಿ ಮತ್ತೆ 5 ದಿನಗಳವರೆಗೆ …
Read More »ಜಾತ್ಯತೀತ ಶಕ್ತಿಗಳಿಂದ ಸಂವಿಧಾನ ಉಳಿಸಲು ಸಭೆ :ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಜಾತ್ಯತೀತ ಶಕ್ತಿಗಳಿಂದ ಸಂವಿಧಾನ ಉಳಿಸಲು ಸಭೆ ನಡೆಯುತ್ತಿದೆ. ದೇಶದ ಸಂವಿಧಾನವನ್ನ ಉಳಿಸಲು ಎಲ್ಲರೂ ಒಟ್ಟಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಹಾ ಘಟಬಂಧನ್ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ ವಿವಿಧ ರಾಜ್ಯಗಳ ಮುಖಂಡರನ್ನು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹಿರಿಯ ಸಚಿವ ಎಂ.ಬಿ ಪಾಟೀಲ್ ಜೊತೆ ಬರಮಾಡಿಕೊಂಡ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆಯುವ ಈ ದೇಶದ ಹಿತಾಸಕ್ತಿ ದೃಷ್ಟಿಯಿಂದ …
Read More »