Breaking News

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ.ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.   ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಅರ್ಜಿಯಲ್ಲಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್, ಸುನೀಲ್ ಕನಗೋಲು ಹಾಗೂ ಕೆ.ವಿ.ಪ್ರಭಾಕರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. …

Read More »

ದೂದ್ ಸಾಗರ್​ನಲ್ಲಿ ಅಡ್ಡಾದಿಡ್ಡಿ ಓಡಾಡಿದ್ರೆ ಎಚ್ಚರಿಕೆ : ರೈಲ್ವೆ ಇಲಾಖೆ

ಕಾರವಾರ: ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ಪ್ರಸಿದ್ಧ ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಅದರಲ್ಲಿಯೂ ಈಗ ಮಳೆ ಬರುತ್ತಿರುವುದರಿಂದ ಅದರ ಸೊಬಗು ಮತ್ತಷ್ಟು ಹೆಚ್ಚಾಗಿದೆ. ಆದರೆ ಪ್ರವಾಸಕ್ಕೆಂದು ಬರುವ ಜನರು ಅಲ್ಲಿ ಮೋಜು ಮಸ್ತಿ ಮಾಡಿ ಪ್ರಕೃತಿಯನ್ನು ಹಾಳು ಮಾಡುವುದರಲ್ಲಿ ಹಿಂಜರಿಯುವುದಿಲ್ಲ. ಹೀಗಾಗಿ ಈ ಸಂಭ್ರಮಕ್ಕೆ ಕಡಿವಾಣ ಬೀಳಲಿದೆ. ಇನ್ಮುಂದೆ ಪ್ರವಾಸಿಗರು ದೂದ್ ಸಾಗರ್​ನಲ್ಲಿ ಅಡ್ಡಾದಿಡ್ಡಿ ಓಡಾಡುವಂತಿಲ್ಲ. ಈ ಬಗ್ಗೆ ರೈಲ್ವೆ ಇಲಾಖೆ ಎಚ್ಚರಿಕೆ ನೀಡಿದೆ. ನೈಋತ್ಯ ರೈಲ್ವೆಯು, …

Read More »

ಹಾಸನದಲ್ಲಿ ಹಫ್ತಾ ವಸೂಲಿ ದಂಧೆ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಹೆಚ್ಚಿನ ಹಫ್ತಾ ಹಣ ಕೊಡಲಿಲ್ಲ ಅಂತ ಪುಡಿರೌಡಿಯೊಬ್ಬ ಅಂಗಡಿ ಮಾಲೀಕನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಹಾಸನದ ಸಿದ್ದಯ್ಯ ನಗರದಲ್ಲಿ ನಡೆದಿದೆ. ಸೂರ್ಯಪ್ರಭ (54) ಹಲ್ಲೆಗೊಳಗಾದ ಪ್ರಭಾ ಆಟೋಮೋಟಿವ್​ ಶಾಪ್ ಮಾಲೀಕ. ಸಿದ್ದಯ್ಯ ನಗರದ ವಿಕ್ಕಿ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಹಲ್ಲೆಗೊಳಗಾದ ಸೂರ್ಯಪ್ರಭ ಆರೋಪಿಸಿದ್ದಾರೆ. ಭಾನುವಾರ ಸಂಜೆ ಅಂಗಡಿಗೆ ಬಂದ ಆರೋಪಿ ವಿಕ್ಕಿ ಹಫ್ತಾ ಕೊಡುವಂತೆ ಬೆದರಿಕೆ ಹಾಕಿದ್ದಾನೆ. ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದರಿಂದ ಮಾಲೀಕ ಸ್ವಲ್ಪ …

Read More »

13 ಸಾವಿರ ಕ್ರೇಟ್​ ಟೊಮೆಟೊ ಬೆಳೆದು ಕೋಟಿ ರೂಪಾಯಿ ಗಳಿಸಿದ ರೈತ

ಪುಣೆ(ಮಹಾರಾಷ್ಟ್ರ): ಲಾಟರಿ ತಾಕಿ ಲಕ್ಷಾಧಿಪತಿಯಾದ್ರು ಅನ್ನೋ ಮಾತುಗಳನ್ನು ನಾವು ಕೇಳಿರ್ತೀವಿ. ಬೆಳೆ ಬೆಳೆದು ರೈತ ಕೋಟಿ ರೂಪಾಯಿ ಗಳಿಸಿದ ಅಂತ ಕೇಳಿರೋಕೆ ಸಾಧ್ಯವೇ ಇಲ್ಲವೇನೋ. ಆದರೆ, ಗಗನಕ್ಕೇರಿರುವ ಟೊಮೆಟೊ ದರ ಇಂಥದ್ದೊಂದು ಚಮತ್ಕಾರ ಮಾಡಿದೆ. ಮಹಾರಾಷ್ಟ್ರದ ರೈತರೊಬ್ಬರು 12 ಎಕರೆ ಜಮೀನಿನಲ್ಲಿ ಟೊಮೆಟೊ ಬಂಪರ್​ ಬೆಳೆ ತೆಗೆದು ಒಂದೇ ತಿಂಗಳಿನಲ್ಲಿ ಮಿಲಿಯೇನರ್​ ಆಗಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ತುಕಾರಾಂ ಭಾಗೋಜಿ ಗಾಯಕರ್ ಬೇಸಾಯದಲ್ಲಿ ಕೋಟಿ ಗಳಿಸಿದ ರೈತ. ಅವರಿಗೆ 18 ಎಕರೆ …

Read More »

ಟಿಪ್ಪರ್ ನ ಡಂಪರ್ ಗೆ ಸಿಲುಕಿದ ಸ್ಯಾಂಟ್ರೋ ಕಾರ್

ಟಿಪ್ಪರ್ ನ ಡಂಪರ್ ಗೆ ಸಿಲುಕಿದ ಸ್ಯಾಂಟ್ರೋ ಕಾರ್ , ಕಿಲೋಮೀಟರ್ ದೂರ ಸ್ಯಾಂಟ್ರೋ ಕಾರನ್ನು ಎಳೆದೊಯ್ದ ಟಿಪ್ಪರ್ ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್, ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್   ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್, ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದು ಬೈದು ನಿಲ್ಲಿಸಿದ ಸಾರ್ವಜನಿಕರು ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯ, ಟಿಪ್ಪರನ್ನು ವಶಕ್ಕೆ ಪಡೆದ ಪಡುಬಿದ್ರಿ …

Read More »

ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ 42 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರವಾಗಿ ಗಮನಹರಿಸುವುದು ಬಿಟ್ಟು ಕಾಂಗ್ರೆಸ್ ಮಹಾಘಟಬಂಧನ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅವರು ನಮ್ಮ ಪಕ್ಷವನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇವತ್ತಿನ ಮಹಾಘಟಬಂಧನ್​ನ ವ್ಯವಸ್ಥಾಪಕರು ಜೆಡಿಎಸ್ ಸಂತತಿ ಮುಗಿದಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ವಿಚಾರಕ್ಕೆ …

Read More »

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಪೋಸ್ಟ್​ ಎರಡು ಗುಂಪಗಳ ನಡುವೆ ಗಲಾಟೆ

ರಾಯಚೂರು: ಸಿಂಧನೂರು ತಾಲೂಕಿನ ಬೆಂಗಾಲಿ ಕ್ಯಾಂಪ್-2ರಲ್ಲಿ‌ ಭಾನುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಪೋಸ್ಟ್ ವಿಚಾರವಾಗಿ ಎರಡು‌ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಗುಂಪು ಧಾರ್ಮಿಕ ವಿಚಾರವಾಗಿ ಪೋಸ್ಟ್ ಮಾಡಿತ್ತು. ಮತ್ತೊಂದು ಕೋಮಿನವರು ಪ್ರಶ್ನಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ಉಂಟಾಗಿ ಗಲಾಟೆಯಾಗಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ‌ಸಿಂಧನೂರು ಗ್ರಾಮೀಣ ಪೊಲೀಸರು ದೌಡಾಯಿಸಿ …

Read More »

ವಿವಿಗಳ ಆರ್ಥಿಕ ಸಮಸ್ಯೆ ಬಗ್ಗೆ ಚರ್ಚಿಸಲು ಅಧಿವೇಶನದ ಬಳಿಕ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ

ಬೆಂಗಳೂರು: ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸರ್ಕಾರದ ಬಾಕಿ ಪಾವತಿ ಸೇರಿದಂತೆ ಎಲ್ಲ ವಿವಿಗಳ ಆರ್ಥಿಕ ಸಮಸ್ಯೆ ಕುರಿತು ಅಧಿವೇಶನ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ವಿವಿ ಕುಲಪತಿಗಳು ಹಾಗು ಆರ್ಥಿಕ ಇಲಾಖೆ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಪರಿಹರಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯ ಎಸ್ ವಿ ಸಂಕನೂರು ಕುರಿತು ನಿಯಮ 72ರ ಅಡಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಕಳೆದ ಮೂರ್ನಾಲ್ಕು …

Read More »

ಚಪ್ಪಲಿ ಕಳೆದು ಹೋಗಿದೆ ಎಂದು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿ

ಬೆಂಗಳೂರು : ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಅನ್ನಬೇಕೋ, ಅಥವಾ ಪೊಲೀಸ್ ಸಿಬ್ಬಂದಿಯ ಅಸಹಾಯಕತೆ ಅನ್ನಬೇಕೋ ಗೊತ್ತಿಲ್ಲ. ಸಂಕಷ್ಟದಲ್ಲಿರುವವರಿಗೆ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಲು ಅನುಕೂಲವಾಗಲಿ‌ ಎಂದು ಚಾಲ್ತಿಯಲ್ಲಿರುವ 112 ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಚಪ್ಪಲಿ ಕಳೆದು ಹೋಗಿದೆ. ಹುಡುಕಿಕೊಡಿ ಎಂದು ದೂರು ನೀಡಿರುವ ವಿಚಿತ್ರ ಘಟನೆ ತಡರಾತ್ರಿ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತಾನು ‘ಕಾರ್ …

Read More »

ಸಚಿವರು ಸದನಕ್ಕೆ ಸರಿಯಾದ ಸಮಯಕ್ಕೆ ಆಗಮಿಸಬೇಕು

ಬೆಂಗಳೂರು : ಸಕಾಲಕ್ಕೆ ಸರಿಯಾಗಿ ಸದನಕ್ಕೆ ಸಚಿವರು ಆಗಮಿಸಬೇಕು ಎಂದು ಸಭಾಧ್ಯಕ್ಷ ಯು ಟಿ ಖಾದರ್ ವಿಧಾನಸಭೆಯಲ್ಲಿ ಸೂಚಿಸಿದ್ದಾರೆ. ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಬಿಜೆಪಿ ಸದಸ್ಯರು, ಸಚಿವರ ಹಾಜರಾತಿ ಇಲ್ಲ ಎಂದು ಆಕ್ಷೇಪಿಸಿದ ವೇಳೆ ಮಾತನಾಡಿದ ಸ್ಪೀಕರ್​, ಪ್ರತಿ ದಿನವೂ ತಡ ಮಾಡುವುದು ಸರಿಯಲ್ಲ ಎಂದು ಸರ್ಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರಿಗೆ ಖಡಕ್ ಸೂಚನೆ ನೀಡಿದರು. ನೂತನ ಶಾಸಕರು 11 ಗಂಟೆಗೆ ಬಂದಿದ್ದರು. ಅದಕ್ಕೆ ಅವರನ್ನು ಅಭಿನಂದಿಸುವುದಾಗಿ …

Read More »