ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ ಮಹಾನ್ …
Read More »ಲಂಚ ಪಡೆಯುತ್ತಿದ್ದ ಫುಡ್ ಇನ್ಸ್ಪೆಕ್ಟರ್ನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು
ಬೆಂಗಳೂರು : ಆಹಾರೋತ್ಪನ್ನಗಳ ವ್ಯಾಪಾರ ಪರವಾನಗಿ ಪರಿಶೀಲನೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆಹಾರ ನಿರೀಕ್ಷಕ (ಫುಡ್ ಇನ್ಸ್‌ಪೆಕ್ಟರ್)ನನ್ನು ವಶಕ್ಕೆ ಬಂಧಿಸಿದ್ದಾರೆ. ಒಂದು ಲಕ್ಷ ರೂಪಾಯಿಗೆ ಲಂಚಕ್ಕೆ ಬೇಡಿಕೆಯಿಟ್ಟು 43 ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದಾಗ ಫುಡ್ ಇನ್ಸ್‌ಪೆಕ್ಟರ್ ಮಹಾಂತೇಗೌಡ ಬಿ ಕಡಬಾಳುನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆಹಾರೋತ್ಪನ್ನಗಳ ಮಾರಾಟ ಪರವಾನಗಿ ನೀಡಲು ರಂಗಧಾಮಯ್ಯ ಎಂಬುವರಿಂದ ₹ 1 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಾಂತೇಗೌಡ, ಮುಂಗಡವಾಗಿ 10 ಸಾವಿರ …
Read More »ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ: ಸಚಿವ ಹೆಚ್ ಕೆ ಪಾಟೀಲ್
ದಾವಣಗೆರೆ: ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠಕ್ಕೆ ಭೇಟಿ ನೀಡಿ ಪ್ರಸನ್ನಾನಂದ ಪುರಿ ಶ್ರೀಯವರನ್ನು ಭೇಟಿಯಾದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ಕಾನೂನು ತರುತ್ತಿದ್ದೇವೆ. ಬಡವರ ಪ್ರಕರಣಗಳು ಕೋರ್ಟ್ನಲ್ಲಿ ವಿಳಂಭವಾಗುತ್ತಿವೆ. ಈ ಕೇಸ್ಗಳು ಅದಷ್ಟು ಬೇಗ ಇತ್ಯರ್ಥವಾಗಬೇಕು. ಹೀಗಾಗಿ ಅದರ ಬಗ್ಗೆ ಕಾನೂನು ತರಲು ಮುಂದಾಗಿದ್ದೇವೆ …
Read More »ಜು. 19 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಫಲಾನುಭವಿಗಳ ನೋಂದಣಿಗೆ ಕಾರ್ಯ ಜು.19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಮಾಸಿಕ 2 …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಐದು ಭಾಗ್ಯಗಳ ವಿವರ ನೀಡುವ ಬದಲು ಮೋದಿ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದು ವಿಪರ್ಯಾಸ: ಕೋಟಾ ಶ್ರೀನಿವಾಸ್ ಪೂಜಾರಿ
ಬೆಂಗಳೂರು: ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಐದು ಭಾಗ್ಯಗಳ ಕುರಿತು ವಿವರಣೆ ನೀಡುವ ಬದಲು ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಸಮಯವನ್ನು ಬಳಸಿಕೊಂಡಿದ್ದು ವಿಪರ್ಯಾಸ ಎಂದು ವಿಧಾನ ಪರಿಷತ್ ಬಿಜೆಪಿ ಹಿರಿಯ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. ವಿಧಾನ ಪರಿಷತ್ನಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಂದರ್ಭ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾರೆ ಎಂದು ಆರೋಪಿಸಿ ಸಭಾತ್ಯಾಗ ಮಾಡಿದ ಬಳಿಕ …
Read More »‘ಚಂದ್ರನ ಅನ್ವೇಷಣೆಯಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ”: ಶುಭಕೋರಿದ ಸಿಎಂ
ಬೆಂಗಳೂರು: ”ಚಂದ್ರಯಾನ-3ರ ಇಂದಿನ ಯಶಸ್ವಿ ಉಡಾವಣೆಯ ಮೂಲಕ ಚಂದ್ರನ ಅನ್ವೇಷಣೆಯಲ್ಲಿ ವಿಶ್ವದಲ್ಲೇ ಮತ್ತೊಂದು ವಿಶಿಷ್ಟ ಮೈಲಿಗಲ್ಲನ್ನು ಇಸ್ರೋ ಸಾಧಿಸಿದೆ” ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಹರ್ಷ ವ್ಯಕ್ತಪಡಿಸಿದರು. ಚಂದ್ರಯಾನ-3ರ ಉಡಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ”ನಿರಂತರ ಹೊಸ ಆವಿಷ್ಕಾರಗಳು ಮತ್ತು ಸಂಶೋಧನೆಯ ಮೂಲಕ ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತ ದೇಶ ವಿಶ್ವದಲ್ಲೇ ಮುಂಚೂಣಿ ಸ್ಥಾನ ಹೊಂದುವಲ್ಲಿ ಇಸ್ರೋ ಕೊಡುಗೆ ಅಪಾರ. ಚಂದ್ರಯಾನ …
Read More »ಭೀಮಾತೀರದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ
ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ರೌಡಿಶೀಟರ್ವೋರ್ವನ ಬರ್ಬರ ಹತ್ಯೆ ನಡೆದಿದೆ. ಮಂಗಳವಾರ ಹಾಡಹಗಲೇ ನಡುರಸ್ತೆಯಲ್ಲಿ ಈ ಘಟನೆ ನಡೆದಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಜಿಲ್ಲೆಯ ಆಲಮೇಲ ಸಮೀಪದ ದೇವರನಾವದಗಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಕೊಲೆಯಾದ ರೌಡಿಶೀಟರ್ನನ್ನು ಮಾಳಪ್ಪ ಯಮನಪ್ಪ ಮೇತ್ರಿ (40) ಎಂದು ಗುರುತಿಸಲಾಗಿದೆ. ಈತನನ್ನು ದುರ್ಷ್ಕಮಿಗಳು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಯಾದ ಮಾಳಪ್ಪ ಮೇತ್ರಿ ಮೇಲೆ ಶಸ್ತ್ರಾಸ್ತ್ರ ಕಾಯ್ದೆ, ಕಂಟ್ರಿ …
Read More »ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ
ವಿಜಯಪುರ: ಖಾಲಿ ಖಾಲಿಯಾಗಿ ಕಾಣುತ್ತಿದ್ದ ಜಿಲ್ಲೆಯ ಜೀವಜಲ ಆಲಮಟ್ಟಿ ಜಲಾಶಯಕ್ಕೆ ಕೊನೆಗೂ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿ ಪ್ರಮಾಣದ ಒಳಹರಿವು ಆರಂಭವಾಗಿದೆ. ಡ್ಯಾಂನಲ್ಲಿ ನೀರಿಲ್ಲದಿರುವುದಕ್ಕೆ ಜನರು ಆತಂಕಗೊಂಡಿದ್ದರು. ಅದರಲ್ಲೂ ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ಮಳೆಯಾಗದ ಹಿನ್ನೆಲೆಯಲ್ಲಿ ನದಿತೀರದ ಜನರು ಬರದ ಭೀತಿಯಲ್ಲಿದ್ದರು. ಆದ್ರೆ ಇದೀಗ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾದ್ದರಿಂದ ಕೃಷ್ಣಾ ನದಿಗೆ ನೀರು ಹರಿದುಬರುತ್ತಿದೆ. ನದಿತೀರದ ಜನರ ಮುಖದಲ್ಲಿಯೂ ಮಂದಹಾಸ …
Read More »ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿಗಳಾದ ಪಿ.ವಿ.ಸ್ನೇಹಾ, ಶೇಖರ ಟಕ್ಕೆಣ್ಣವರ ಸ್ವಾಗತಿಸಿದರು
Read More »