Breaking News

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸುವ ಚಿಂತನೆ ಇದೆ: ರಾಹುಲ್ ಗಾಂಧಿ

ಮೈಸೂರು : “ಮಹಿಳೆಯರ ಆರ್ಥಿಕ ಹೊರೆ ಇಳಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಕರ್ನಾಟಕದಲ್ಲಿ ಜಾರಿಗೊಳಿಸಿರುವ ಈ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸುವ ಚಿಂತನೆ ಇದೆ. ಇವು ಇಡೀ ದೇಶಕ್ಕೆ ದಿಕ್ಸೂಚಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿಂದು ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಭರವಸೆ ನೀಡಿತ್ತು. ಅಧಿಕಾರಕ್ಕೆ ಬಂದ …

Read More »

ಕಾಂಗ್ರೆಸ್ ಸರ್ಕಾರದ ನೂರು ದಿನದ ಸಾಧನೆ ಅಂದ್ರೆ ಅದು ವರ್ಗಾವಣೆ ಮಾತ್ರ:ಯತ್ನಾಳ್

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ನೂರು ದಿನದ ಸಾಧನೆ ಅಂದರೆ ಅದು ವರ್ಗಾವಣೆ ಮಾತ್ರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಎಲ್ಲಾ ಸ್ಥಗಿತ ಆಗಿದೆ. ನಮ್ಮ ಅಧಿಕಾರಾವಧಿಯಲ್ಲಿನ ಕೆಲಸಗಳನ್ನೆಲ್ಲಾ ಸ್ಥಗಿತ ಮಾಡಿದ್ದಾರೆ. ಎಲ್ಲರಿಗೂ ಉಚಿತ ಖಚಿತ ಅಂದ್ರು. ಆದರೆ ಈಗ ನೂರಾರು ಷರತ್ತುಗಳನ್ನು ಹಾಕಿದ್ದಾರೆ. ಯಾವುದೇ ಯೋಜನೆ ಪೂರ್ಣ ಪ್ರಮಾಣದಲ್ಲಿ ಜನರಿಗೆ ಸಿಗುವುದಿಲ್ಲ …

Read More »

9 ಅಡಿ ಉದ್ದದ ಅತಿ ದೊಡ್ಡ ಬಿಳಿ ಹೆಬ್ಬಾವು ಕುಮಟಾದಲ್ಲಿ ಪತ್ತೆ!

ಕಾರವಾರ (ಉತ್ತರ ಕನ್ನಡ) : ಸಾಮಾನ್ಯವಾಗಿ ಕಂದು ಬಣ್ಣದ ಹೆಬ್ಬಾವುಗಳು ಎಲ್ಲೆಂದರಲ್ಲಿ ಕಾಣಸಿಗುತ್ತವೆ. ಆದರೆ ಕುಮಟಾದಲ್ಲಿ 2ನೇ ಬಾರಿಗೆ ಬಿಳಿ ಹೆಬ್ಬಾವು ಪ್ರತ್ಯಕ್ಷವಾಗಿದೆ. ಭಾರತದಲ್ಲಿ ಈವರೆಗೆ ಸಿಕ್ಕ ಬಿಳಿ ಹೆಬ್ಬಾವಿನ ಪೈಕಿ ಇದು ಅತಿ ದೊಡ್ಡದೆಂದು ಉರಗ ತಜ್ಞರು ಹೇಳುತ್ತಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಹೆಗಡೆ ಗ್ರಾಮದ ಗಾಂಧಿ ನಗರದ ದೇವಿ ನಾರಾಯಣ ಮುಕ್ರಿ ಎಂಬವರ ಮನೆಯ ಅಂಗಳದಲ್ಲಿ ಮಂಗಳವಾರ ಈ ಬಿಳಿ ಹೆಬ್ಬಾವು ಕಾಣಿಸಿಕೊಂಡಿದೆ. ಇದೇ ಮೊದಲ ಬಾರಿ‌ಗೆ ಶುಭ್ರ …

Read More »

ಅದ್ಧೂರಿಯಾಗಿ ಗೃಹಲಕ್ಷ್ಮಿ ಯೋಜನೆ ಉದ್ಘಾಟಿಸಿ ‘ಕೈ’ ಪಕ್ಷಕ್ಕೆ ಮತ್ತಷ್ಟು ಹತ್ತಿರವಾದ ಎಸ್‌.ಟಿ.ಸೋಮಶೇಖರ್

ಬೆಂಗಳೂರು : ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರಿಂದು ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆ ಗೃಹಲಕ್ಷ್ಮಿ ಜಾರಿಗೆ ಅದ್ಧೂರಿ ಕಾರ್ಯಕ್ರಮ ಮಾಡಿದರು. “ಗೃಹಲಕ್ಷ್ಮಿ ಯೋಜನೆ ಜಾರಿಗೆ ನನ್ನದೂ ಕೂಡಾ ಒಂದು ಅಳಿಲು ಸೇವೆ. ನನ್ನ ಕ್ಷೇತ್ರದಲ್ಲಿ ಯೋಜನೆ ಬಗ್ಗೆ ಮಾಹಿತಿ ನೀಡಲು ಏನೆಲ್ಲ ಕ್ರಮ ವಹಿಸಬಹುದೋ ಅದನ್ನು ಮಾಡುತ್ತಿದ್ದೇನೆ ಅಷ್ಟೇ” ಎಂದು ಸಮರ್ಥನೆ ನೀಡಿದರು. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮೋಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ …

Read More »

ಸೆ.3 ರಿಂದ ಲಿಂಗಾಯತ ಪಂಚಮಸಾಲಿ ಮೀಸಲಾತಿಗೆ ಹೋರಾಟ ಮತ್ತೆ ಪ್ರಾರಂಭ: ಜಯಮೃತ್ಯುಂಜಯ ಸ್ವಾಮೀಜಿ

ಚಿಕ್ಕೋಡಿ (ಬೆಳಗಾವಿ) : ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರೂ ಸಹ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಸೆ.3 ರಂದು ನಿಪ್ಪಾಣಿಯ ರೈತ ಹುತಾತ್ಮ ವೃತ್ತದಲ್ಲಿ ಲಿಂಗ ಪೂಜೆ ಸಲ್ಲಿಸುವ ಮುಖಾಂತರ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ‌ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಹೋರಾಟದ …

Read More »

ದಶಕದಿಂದ ಪಡತರವಾಡಿ ಗ್ರಾಮಕ್ಕಿಲ್ಲ ಬಸ್​ ಸಂಪರ್ಕ.. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ, ಗ್ರಾಮಸ್ಥರಿಗೂ ತೊಂದರೆ

ಚಿಕ್ಕೋಡಿ: ಅಥಣಿ ತಾಲೂಕಿನ ಪಡತರವಾಡಿ ಗ್ರಾಮಕ್ಕೆ ಸರಿಯಾದ ಬಸ್​ ಸಂಪರ್ಕವಿಲ್ಲದೆ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಮತ್ತು ಜನರು ಸಂಕಷ್ಟ ಎದುರಿಸುವಂತಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಈ ಗ್ರಾಮಕ್ಕೆ ಕಳೆದ 15 ವರ್ಷಗಳಿಂದ ಬಸ್​ ಸಂಚಾರ ಸ್ಥಗಿತಗೊಂಡಿದ್ದು ಗ್ರಾಮದ ಜನರು, ವಿದ್ಯಾರ್ಥಿಗಳು, ವಯೋವೃದ್ಧರು, ಮಹಿಳೆಯರಿಗೆ ತೊಂದರೆಯಾಗಿದೆ. ಒಂದೂವರೆ ಕಿಲೋಮೀಟರ್ ದೂರದ ಐಗಳಿ-ತೆಲಸಂಗ್ ರಸ್ತೆಗೆ ಸಂಚಾರ ಮಾಡಿ ಬಳಿಕ ಅಲ್ಲಿಂದ ಬೇರೊಂದು ಬಸ್ ಮೂಲಕ ಊರುಗಳಿಗೆ ಸಂಚರಿಸಬೇಕಾಗಿದೆ​. ಮಳೆಗಾಲ ಹಾಗೂ ರಾತ್ರಿ ಸಮಯದಲ್ಲಿ …

Read More »

ಕಳ್ಳರೆಂದು ಬಾವಿಸಿ ಮೂವರು ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ಬೆಳಗಾವಿ: ಶೈಕ್ಷಣಿಕ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಆದರೆ ಕಳ್ಳರೆಂದು ತಪ್ಪಾಗಿ ಭಾವಿಸಿ ಮೂರು ಜನ ಯುವಕರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಕಳ್ಳರೆಂದು ಭಾವಿಸಿ ಮೂವರು ಯುವಕರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಜೋಡಕುರಳಿ ಗ್ರಾಮಕ್ಕೆ ನಾಲ್ವರು ಯುವಕರು ಬಂದಿದ್ದರು. ಈ ವೇಳೆ ಯುವಕರನ್ನು ಯಾರು ಎಂದು ವಿಚಾರಿಸುತ್ತಿದ್ದಾಗ ಸರಿಯಾಗಿ ಮಾಹಿತಿ ನೀಡಿದೇ ಯುವಕನೊಬ್ಬ …

Read More »

ಬೆಳಗಾವಿ ಹಾಲು ಉತ್ಪಾದಕರ ಸಂಘದಲ್ಲಿದೆ ವಿವಿಧ ಉದ್ಯೋಗ; 46 ಹುದ್ದೆ ನೇಮಕಾತಿ

ಬೆಮುಲ್​ನ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಲು ಉತ್ಪಾದಕರ ಸಂಘದಿಂದ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಮುಲ್​ನ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟೆಂಟ್​ ಮ್ಯಾನೇಜರ್​, ಟೆಕ್ನಿಕಲ್​ ಆಫೀಸರ್​ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳು ಆನ್​ಲೈನ್​ ಮೂಲಕ …

Read More »

ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ : ನಿಖಿಲ್ ಸ್ಪಷ್ಟನೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್​ ಕುಮಾರಸ್ವಾಮಿ ಅವರ ರಾಜಕೀಯ ಜೀವನದ ಬಗ್ಗೆ ಚರ್ಚೆ ಏರ್ಪಟ್ಟಿದ್ದು, ಈ ಬಗ್ಗೆ ಖುದ್ದು ಅವರೇ ಟ್ವೀಟ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ. ”ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ” ಎಂದು ಜೆಡಿಎಸ್​ …

Read More »

ಗುದ್ದಲಿಯಿಂದ ಹೊಡೆದು ಅಣ್ಣ, ಅತ್ತಿಗೆಯನ್ನೇ ಕೊಂದು ಪೊಲೀಸ್​ ಠಾಣೆಗೆ ಬಂದ ತಮ್ಮ

ಮೈಸೂರು : ಗೋಮಾಳದ ಜಾಗದಲ್ಲಿ ತನಗೂ ಪಾಲು ಬೇಕು ಎಂದು ಜಗಳ ತೆಗೆದು, ಸಹೋದರನೊಬ್ಬ ಜಮೀನಿನಲ್ಲೇ ಅಣ್ಣ, ಅತ್ತಿಗೆಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಟಿ ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿ. ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದ ಸಮೀಪದ ಜೀನುಗುಡ್ಡ ಬಳಿ ಸುಮಾರು 170 ಎಕರೆ ಗೋಮಾಳವಿದೆ. …

Read More »