Breaking News

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಬಂಡಾಯ ಸುಪ್ರೀಂಕೋರ್ಟ್ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ತ್ವರಿತ ನಿರ್ಧಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಶಿವಸೇನೆ (ಯುಬಿಟಿ) ಶಾಸಕ ಸುನೀಲ್ ಪ್ರಭು ಅವರು ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂಕೋರ್ಟ್ ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಪ್ರಭು ಅವರ ಮನವಿ ಮೇರೆ ನೋಟಿಸ್ ಜಾರಿ ಮಾಡಿದೆ. ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಎನ್‌ಸಿಪಿ …

Read More »

ಕೋಲಾರದ ಟೊಮೆಟೊ ಮಾರುಕಟ್ಟೆ ವಿಸ್ತರಣೆ ಮಾಡಲು ಜಾಗ ಪಡೆದುಕೊಳ್ಳಲು ಕ್ರಮ : ಶಿವಾನಂದ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣಗೊಳ್ಳುವ ಜವಳಿ ಪಾರ್ಕ್​ಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವುದು ಅನಿವಾರ್ಯ ಎಂದು ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಇಂದು ಪ್ರಶ್ನೋತ್ತರದ ವೇಳೆ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದೆ ಶಿಗ್ಗಾಂವಿ ಮತ್ತು ಕಾರ್ಕಳಕ್ಕೆ 2020-21ನೇ ಸಾಲಿನಲ್ಲಿ ಜವಳಿ ಪಾರ್ಕ್ ಗಳನ್ನು ಮಂಜೂರು ಮಾಡಲಾಗಿತ್ತು. ಶಿಗ್ಗಾಂವಿ ಕ್ಷೇತ್ರದ ಜವಳಿ ಪಾರ್ಕ್​ ಅನ್ನು 50 ಕೋಟಿ ರೂ. …

Read More »

ಗೃಹಲಕ್ಷ್ಮಿ ಯೋಜನೆಗೆ ಇನ್ನೂ ಅರ್ಜಿ ಕರೆದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಹೊಸ ಆಯಪ್ ಸಿದ್ದಪಡಿಸಲಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಆಯಪ್ ಬಿಡುಗಡೆ ಮಾಡಿ ಅರ್ಜಿ ಸ್ವೀಕಾರ ಕಾರ್ಯ ಆರಂಭಿಸಲಾಗುತ್ತದೆ. ಆಗಸ್ಟ್ 16ರಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯೆ ಹೇಮಲತಾ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾವು ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿಯನ್ನು ಇನ್ನೂ ಕರೆದಿಲ್ಲ. ಅರ್ಜಿಯನ್ನೇ ಕರೆದಿಲ್ಲ ಎಂದ …

Read More »

ಮಳೆ ಪ್ರಮಾಣ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಈಗಾಗಲೇ ಸಾಕಷ್ಟು ಸಿದ್ಧತೆ

ಧಾರವಾಡ : ಮುಂಗಾರು ತಡವಾಗಿ ಆರಂಭವಾದರೂ ಮಳೆಯ ಪ್ರಮಾಣ ಹೆಚ್ಚಾಗಲಿದೆ.  ಮಾಡಿಕೊಂಡಿದ್ದು, ಪ್ರವಾಹದ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧವಾಗಿದೆ. ಹೌದು..ಈಗಾಗಲೇ ಅವಳಿನಗರದಲ್ಲಿ ನಡೆಯುವ ಅಗ್ನಿ ಅವಘಡ ಹಾಗೂ ನೀರಿನಲ್ಲಿ ಬಿದ್ದವರ ರಕ್ಷಣೆ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿರುವ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಈಗ ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ಎದುರಿಸಲು ಸಿದ್ಧತೆ ನಡೆಸಿದ್ದು, ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಕರ್ತವ್ಯ ನಿರ್ವಹಿಸಲು ಸನ್ನದ್ಧವಾಗುತ್ತಿದೆ.

Read More »

ಜೈನ ಮುನಿ ಹತ್ಯೆ ನಂದಿ ಪರ್ವತ ಆಶ್ರಮಕ್ಕೆ ಸತೀಶ್‌ ಜಾರಕಿಹೊಳಿ ಅವರ ಭೇಟಿ

ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಇಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿ ನೀಡಿ, ಭಕ್ತಾದಿಗಳಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಿಂದ ಆಘಾತವಾದ ಸಮಸ್ತ ಜೈನ ಸಮುದಾಯದ ಬಂಧುಗಳ, ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾವೆಲ್ಲ …

Read More »

ಬಿಲೀವ್ ಫೌಂಡೇಶನ್ ವತಿಯಿಂದ ಹಸುವಿನ ಅಂತ್ಯಸಂಸ್ಕಾರ

ಬೆಳಗಾವಿಯ ಮುಜಾವರ ಗಲ್ಲಿಯಲ್ಲಿ ಬಿಡಾಡಿ ಹಸು ಸತ್ತು ಬಿದ್ದಿರುವ ಬಗ್ಗೆ ಬಿಲೀವ್ ಫೌಂಡೇಶನ್ ಸದಸ್ಯರಿಗೆ ಮಾಹಿತಿ ಸಿಕ್ಕಿದೆ. ಅದರಂತೆ ಬಿಲೀವ್ ಫೌಂಡೇಶನ್ ಸದಸ್ಯರು ಸ್ಥಳಕ್ಕೆ ತೆರಳಿ ಹಸುವನ್ನು ವಶಕ್ಕೆ ಪಡೆದು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದರು. ಸೌರಭ್ ಸಾವಂತ್, ಅತಿಶ ಧಾತೋಂಬೆ, ಅವಧೂತ್ ತುಡ್ವೇಕರ್, ನೀಲೇಶ್ ಹಿರೇಹೊಳ್ಳಿ, ರೋಹಿತ್ ಫಸಲ್ಕರ್ ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಅವರಿಗೆ ಸ್ಥಳೀಯ ಕಾರ್ಪೊರೇಟರ್ ಮತ್ತು ಮಹಾನಗರ ಸಭೆಯ ಬೆಂಬಲ ಸಿಕ್ಕಿತು.

Read More »

ಹುಂಚೇನಟ್ಟಿ ಗ್ರಾಮದ ಇಂಜಿನಿಯರಿಂಗ್ ಕಾಲೇಜು ಬಳಿ ಯುವಕನನ ಬರ್ಬರ ಹತ್ಯೆ

ಬೆಳಗಾವಿ ಸಮೀಪದ ಹುಂಚೇನಟ್ಟಿ ಗ್ರಾಮದ ಇಂಜಿನಿಯರಿಂಗ್ ಕಾಲೇಜು ಬಳಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗುರುವಾರ ರಾತ್ರಿ ಇಂಜಿನಿಯರಿಂಗ್ ಕಾಲೇಜು ಹಿಂಭಾಗದ ಆವರಣದಲ್ಲಿ ಕುಡಿದ ಮತ್ತಿನಲ್ಲಿ ಕೆಲ ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ಜಗಳದಲ್ಲಿ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಪಿರನವಾಡಿ ನಿವಾಸಿ ಅರ್ಬಾಜ್ ರಫೀಕ್ ಮುಲ್ಲಾ (25) ಕೊಲೆಯಾದವರು. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಂಜಾ ಅಥವಾ ಮದ್ಯದ ಅಮಲಿನಿಂದ ಗೊಂದಲ ಉಂಟಾಗಿರಬಹುದು …

Read More »

ಬಾಯಿ ಚಪ್ಪರಿಸಿ ಹಾವು ತಿಂದ ಜಿಂಕೆ!, ಹೌಹಾರುವ ವಿಡಿಯೋ ಇಲ್ಲಿದೆ ನೋಡಿ

ನವದೆಹಲಿ: ಜಿಂಕೆ ಮಾಂಸಹಾರಿಯೇ..? ಜಿಂಕೆ ಕೇವಲ ಹುಲ್ಲು ತಿಂದು ಬದುಕುತ್ತದೆ ಅಲ್ಲವೇ? ಆದರೆ ಈ ವಿಡಿಯೋ ನೋಡಿದ್ರೆ ನೀವು ಹೌಹಾರುತ್ತೀರಿ. ಏಕೆಂದರೆ ಇಲ್ಲಿ ಜಿಂಕೆಯೊಂದು ಬಾಯಿ ಚಪ್ಪರಿಸಿ ಹಾವೊಂದನ್ನು ತಿನ್ನುತ್ತಿದೆ. ಹೌದು, ಇದು ಆಶ್ಚರ್ಯವಾದರೂ ನಿಜ. ಜಿಂಕೆ ಹಾವು ತಿನ್ನುತ್ತಿರುವ ವಿಡಿಯೋಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟಿಜನ್‍ಗಳು ಹೌಹಾರಿದ್ದಾರೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಡಾ.ಸಾಮ್ರಾಟ್ ಗೌಡ ತಮ್ಮ ಟ್ವಿಟರ್‌ ಖಾತೆಯಲ್ಲಿ …

Read More »

‘ಅನ್ನಭಾಗ್ಯ’ ಯೋಜನೆ: ಇಂದು ಈ ಜಿಲ್ಲೆಯ ‘ಫಲಾನುಭವಿ’ಗಳ ಖಾತೆಗೆ ಹಣ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿತ್ತು. ಮೊದಲ ಹಂತದಲ್ಲಿ ಮೈಸೂರು, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಬಾಗಲಕೋಟೆ ಬಳಿಕ, ಇಂದು ಇತರೆ ಜಿಲ್ಲೆಗಳ ಪಡಿತರ ಚೀಟಿದಾರರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ.   ಜುಲೈ.10ರಂದು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದರು. …

Read More »

ಬಿಸಿಯೂಟ ಅಡುಗೆ ಸಿಬ್ಬಂದಿ’ಗೆ ‘ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಏಪ್ರಾನ್, ತಲೆಗವಸು, ಕೈಗವರು ಧರಿಸಲು ಸೂಚಿಸಿದೆ. ಅಲ್ಲದೇ ವಿವಾದಕ್ಕೀಡು ಮಾಡುವಂತೆ ಅಡುಗೆ ಸಿಬ್ಬಂದಿಗಳು ಬಳೆ ತೊಡದಂತೆ ಸೂಚಿಸಲಾಗಿದೆ.   ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿರುವಂತ ಮಾರ್ಗಸೂಚಿಯಲ್ಲಿ …

Read More »