ಬೆಂಗಳೂರು: ಪೊಲೀಸರ ಸೋಗಿನಲ್ಲಿ ಯುವಕರ ಮನೆಗೆ ನುಗ್ಗಿದ ದರೋಡೆಕೋರರು, ಫೋನ್ ಪೇ ಮೂಲಕ 13 ಸಾವಿರ ರೂ. ಹಾಕಿಸಿಕೊಂಡು ಪರಾರಿಯಾಗಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡ್ರಗ್ಸ್ ಸೇವಿಸುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿ ಪರಿಶೀಲನೆ ನೆಪದಲ್ಲಿ ಮನೆಯೊಳಗೆ ಬಂದು, ಬಳಿಕ ಹಣ ಮತ್ತು ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ವಿದ್ಯಾರಣ್ಯಪುರದ ರಾಮಚಂದ್ರಾಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ನಾಲ್ವರು ಯುವಕರು ವಾಸಿಸುತ್ತಿದ್ದರು. ಈ ಪೈಕಿ ಮೂವರು ಖಾಸಗಿ ಕಂಪನಿಯಲ್ಲಿ …
Read More »ಮಹಾರಾಷ್ಟ್ರ, ಆಂಧ್ರದಂತೆ ಸಿನಿಮಾ ಟಿಕೆಟ್ ಬೆಲೆ ಕಡಿಮೆ ಮಾಡಿ: ಹಿರಿಯ ನಟ ಅಶೋಕ್
ಸಿನಿಮಾ ಟಿಕೆಟ್ ಬಗ್ಗೆ ಹಿರಿಯ ನಟ ಅಶೋಕ್ ಮಾತನಾಡಿರುವುದು..ಕನ್ನಡ ಸಿನಿಮಾಗಳು ವಿಶ್ವದಾದ್ಯಂತ ಸದ್ದು ಮಾಡುತ್ತಿವೆ. ಅದ್ಧೂರಿ ಮೇಕಿಂಗ್ ಜೊತೆಗೆ ಬೆಸ್ಟ್ ಕಂಟೆಂಟ್ ಆಧಾರಿತ ಚಿತ್ರಗಳು ಸಿನಿಪ್ರಿಯರನ್ನು ಆಕರ್ಷಿಸುತ್ತಿವೆ. ಸ್ಯಾಂಡಲ್ವುಡ್ನಲ್ಲಿ ಹೊಸ ಸಿನಿಮಾಗಳ ಭರಾಟೆ ಜೋರಾಗಿದೆ. ಆದರೆ ಚಿತ್ರಮಂದಿರಗಳು ಮಾತ್ರ ಮಂಕಾಗಿವೆ. ಪ್ರೇಕ್ಷಕರು ಅಷ್ಟಾಗಿ ಚಿತ್ರಮಂದಿರಗಳತ್ತ ಬರುತ್ತಿಲ್ಲ ಅನ್ನೋದು ಮಾಲೀಕರ ಅಳಲು. ಇದರ ಎಫೆಕ್ಟ್ ನಿರ್ಮಾಪಕರು ಹಾಗೂ ಚಿತ್ರಮಂದಿರದ ಮಾಲೀಕರಿಗೆ ತಟ್ಟುತ್ತಿದೆ. ಓಟಿಟಿಯಲ್ಲಿ ಶೀಘ್ರ ಬಿಡುಗಡೆ: ಅಷ್ಟಕ್ಕೂ ಚಿತ್ರಮಂದಿರಗಳಿಗೆ ಪ್ರೇಕ್ಷಕರು ಏಕೆ ಬರುತ್ತಿಲ್ಲ …
Read More »ಚಂದ್ರಯಾನ – 3 ಮಿಷನ್ನಲ್ಲಿ ಬೆಳಗಾವಿ ಯುವ ವಿಜ್ಞಾನಿ
ಬೆಳಗಾವಿ: ಇಸ್ರೋದಿಂದ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಈ ಮಹತ್ಕಾರ್ಯದಲ್ಲಿ ಬೆಳಗಾವಿ ಜಿಲ್ಲೆ ಯುವಕನೊಬ್ಬ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ‘ಪ್ರಕಾಶ ಪೆಡ್ನೇಕರ್’ ಎಂಬ ಯುವ ವಿಜ್ಞಾನಿ ಚಂದ್ರಯಾನ- 3 ಮಿಷನ್ನಲ್ಲಿ ಕೆಲಸ ಮಾಡುತ್ತಿರುವವರು. ಚಂದ್ರಯಾನ-2 ರಲ್ಲಿಯೂ ಇವರು ಕೆಲಸ ಮಾಡಿದ್ದರು. ಶುಭ ಹಾರೈಸಿದ ಸ್ವಾಮೀಜಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಚಂದ್ರಯಾನ – 3 ಉಡಾವಣೆ ಬಗ್ಗೆ ಮಾತನಾಡಿರುವ ಬೆಳಗಾವಿಯ ನಾಗನೂರು ರುದ್ರಾಕ್ಷಿ …
Read More »ನಾಡ ಅಧಿದೇವತೆಗೆ ವಿಶೇಷ ನಾಗಲಕ್ಷ್ಮೀ ಅಲಂಕಾರ
ಮೈಸೂರು: ಇಂದು ಕೊನೆಯ ಆಷಾಢ ಶುಕ್ರವಾರದ ಸಂಭ್ರಮ. ನಾಡ ಅಧಿದೇವತೆಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಇದರ ಜೊತೆಗೆ ದೇವಾಲಯದ ಒಳಭಾಗದಲ್ಲಿ ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಭಕ್ತರು ಬೆಳಗ್ಗೆಯಿಂದಲೇ ತಾಯಿಯ ದರ್ಶನ ಪಡೆಯುತ್ತಿದ್ದು, ರಾತ್ರಿಯವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಅನುಕೂಲಕ್ಕಾಗಿ ಸರತಿ ಸಾಲಿನ ವ್ಯವಸ್ಥೆ ಹಾಗೂ ಬಿಗಿಯಾದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಲಾಗಿದೆ. ಗರ್ಭಗುಡಿಯ ಒಳಗಿರುವ ಮೂಲ ಚಾಮುಂಡೇಶ್ವರಿ ಮೂರ್ತಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಉತ್ಸವ …
Read More »ಜೈನ ಮುನಿ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ.
ಚಿಕ್ಕೋಡಿ: ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದ ಇಬ್ಬರೂ ಆರೋಪಿಗಳನ್ನು ಪೊಲೀಸರು ಏಳು ದಿನ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆರೋಪಿಗಳು ಜೈನಮುನಿಯ ಡೈರಿ ಸುಟ್ಟು ಹಾಕಿದ್ದರು. ಸದ್ಯ ಚಿಕ್ಕೋಡಿ ಪೊಲೀಸರು ಡೈರಿಯಲ್ಲಿದ್ದ ವಿಷಯದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜೈನಮುನಿ ಹತ್ಯೆ ಕೇಸ್‌ನಲ್ಲಿ ಬಂಧಿಸಿದ್ದ ಇಬ್ಬರು ಆರೋಪಿಗಳ ವಿಚಾರಣೆಯೂ ಚುರುಕು ಪಡೆದುಕೊಂಡಿದೆ. ಜೈನ ಮುನಿಯ ಹತ್ಯೆ ಬಳಿಕ ಆಶ್ರಮದಲ್ಲಿ ಕಾಮಕುಮಾರ ನಂದಿ ಮಹಾರಾಜರ ಡೈರಿಯನ್ನು ಸಹ ಅಲ್ಲಿಂದ ಆರೋಪಿಗಳು ಹೊತ್ಯೊಯ್ದಿದ್ದರು. ಅದಾದ …
Read More »“ಚಂದ್ರಯಾನ 3 ರಾಷ್ಟ್ರದ ಭರವಸೆ, ಕನಸುಗಳನ್ನು ಹೊತ್ತೊಯ್ಯಲಿದೆ”:
ನವದೆಹಲಿ: ಕೋಟ್ಯಾಂತರ ಕಂಗಳು ಎದುರು ನೋಡುತ್ತಿರುವ ಚಂದ್ರಯಾನ 3 ಉಡಾವಣೆಗೆ ಇನ್ನೇನು ಕೆಲವೇ ಕ್ಷಣಗಳಿರುವಾಗ ಪ್ರಧಾನಿ ಮೋದಿ ಅವರು ಯೋಜನೆಯ ಹಿಂದಿರುವ ಎಲ್ಲಾ ಭಾರತದ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ. ಎರಡು ದಿನಗಳ ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ”ಈ ಚಂದ್ರಯಾನ 3 ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯಲಿದೆ” ಎಂದು ಬಣ್ಣಿಸಿದ್ದಾರೆ. ‘ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2023 ಜುಲೈ 14 ಯಾವಾಗಲೂ ಸುವರ್ಣಾಕ್ಷರಗಳಲ್ಲಿ ಕೆತ್ತಲ್ಪಡುತ್ತದೆ. ನಮ್ಮ …
Read More »ರಾಯಚೂರು: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ
ರಾಯಚೂರು: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾಗಿರುವ ಘಟನೆ ರಾಯಚೂರು ತಾಲೂಕಿನ ನಡೆದಿದೆ. ಬೇವಿನ ಗಿಡಕ್ಕೆ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದ ಇಡಪನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ರಾಯಚೂರಿನ ರಿಮ್ಸ್‌ನ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಬಾಲಕಿಯ ಪೊಷಕರು, ”ನಾವು ವ್ಯಾಪಾರಕ್ಕೆ …
Read More »ನಟ ಮಾಸ್ಟರ್ ಆನಂದ್ ಪುತ್ರಿ ಹೆಸರಿನಲ್ಲಿ ಹಣ ದುರ್ಬಳಕೆ ಆರೋಪ: ಪತ್ನಿಯಿಂದ ಪ್ರಕರಣ ದಾಖಲು
ಬೆಂಗಳೂರು : ನಟ ಹಾಗೂ ನಿರೂಪಕ ಮಾಸ್ಟರ್ ಆನಂದ್ ಪುತ್ರಿ ವಂಶಿಕ ಹೆಸರು ಬಳಸಿ ನಟನೆ ಮಕ್ಕಳ ಪೋಟೋಶೂಟ್ ಮಾಡಿಸಲು ಪೋಷಕರಿಂದ ಹಣ ಪಡೆದು ಮಹಿಳೆಯೊಬ್ಬರು ಮೋಸ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಈ ಕುರಿತು ಆನಂದ್ ಪತ್ನಿ ಯಶಸ್ವಿನಿ ಆನಂದ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿಶಾ ನರಸಪ್ಪ ಎಂಬುವರ ವಿರುದ್ಧ ದೂರು ನೀಡಲಾಗಿದೆ. ಆಯಡ್ ಶೂಟ್, ಕಾರ್ಯಕ್ರಮಗಳು, ಮಕ್ಕಳ ಟ್ಯಾಲೆಂಟ್ ಶೋ, ಖಾಸಗಿ ಚಾನಲ್ನಲ್ಲಿ ಟ್ಯಾಲೆಂಟ್ ಶೋ …
Read More »ಟೊಮೆಟೊ ದರ ಗಗನಕ್ಕೆ ಏರುತ್ತಿದ್ದು ದಾಖಲೆ ಬೆಲೆಗೆ ಮಾರಾಟವಾಗುತ್ತಿದೆ.
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಸರಿಯಾದ ಸಮಯಕ್ಕೆ ಬರಲಿಲ್ಲ. ಮಳೆಯಲ್ಲಿ ಆಶ್ರಯಿಸಿ ಬೆಳೆಯುತ್ತಿದ್ದ ಬೆಳೆಯನ್ನು ರೈತರು ಎಪ್ಪತ್ತರಷ್ಟು ಈಗಾಗಲೇ ಕಳೆದು ಕೊಂಡಿದ್ದಾರೆ. ಇದ್ದಂತಹ ಅಷ್ಟು ಇಷ್ಟು ನೀರಿನಲ್ಲಿ ರೈತರು ತರಕಾರಿ ಬೆಳೆಗಳನ್ನು ಬೆಳೆದಿದ್ದು, ಈಗ ಟೊಮೆಟೊ ದಾಖಲೆಯ ಬೆಲೆಗೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಹೌದು, ಈ ಬಾರಿ ಮುಂಗಾರು ಮಳೆ ರೈತರಿಗೆ ಸರಿಯಾಗಿ ಕೈ ಕೊಟ್ಟಿದೆ. ಸರಿಯಾದ ಸಮಯಕ್ಕೆ ಮಳೆ ಬಾರದ ಹಿನ್ನೆಲೆ ಮಳೆ ಆಶ್ರಹಿಸಿ ಬೆಳೆಯುತ್ತಿದ್ದ ಟೊಮೆಟೊ, ಆಲೂಗಡ್ಡೆ, ಹೂ …
Read More »ನಾಡಗೀತೆ ಹಾಡುವುದಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ.
ಬೆಂಗಳೂರು: ನಾಡಗೀತೆ ಹಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಸಂಬಂಧ ಸಮಗ್ರ ಮಾಹಿತಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ದಿ.ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರವು 2022ರ ಸೆ.25ರಂದು ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ಧೀಕ್ಷಿತ್ ಅವರಿದ್ದ ಪೀಠ, ಈ ಸಂಬಂಧ …
Read More »