Breaking News

ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್, ಚಂದ್ರಯಾನ 2 ರ ಲ್ಯಾಂಡರ್‌ಗಿಂತ ಹೇಗೆ ಭಿನ್ನವಾಗಿದೆ

ಬೆಂಗಳೂರು: ಚಂದ್ರಯಾನ-2 ರಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಪಾಠ ಕಲಿತಿದೆ. ಇದೇ ಅನುಭವಗಳನ್ನು ಆಧರಿಸಿ, ಇಸ್ರೋ ಜಾಗತಿಕ ಬಾಹ್ಯಾಕಾಶ ಸಂಶೋಧನಾ ರಂಗದಲ್ಲಿ ಭಾರತದ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸುವ ಗುರಿ ಹೊಂದಿದೆ. ಇಸ್ರೋದ ಎಂಜಿನಿಯರ್‌ಗಳು ಚಂದ್ರಯಾನ-3 ರಲ್ಲಿ ವಿಕ್ರಮ್ ಲ್ಯಾಂಡರ್‌ನ ಕಾರ್ಯಕ್ಷಮತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ನಿರ್ಣಾಯಕ ವಿನ್ಯಾಸ ಹಾಗೂ ಮಾರ್ಪಾಡುಗಳು ಮತ್ತು ತ್ವರಿತ ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಭಾರತದ ಚಂದ್ರಯಾನ 3 ನೇ ಯೋಜನೆಯ ಭಾಗವಾಗಿ ಇಂದು …

Read More »

ಗೃಹಲಕ್ಷ್ಮಿ ಯೋಜನೆ ಅರ್ಜಿ ಸ್ವೀಕಾರಕ್ಕೆ ದಿನಾಂಕ ನಿಗದಿ ಪಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆ ನೀಡುವುದಾಗಿ ಕಾಂಗ್ರೆಸ್ ನಾಯಕರು ಚುನಾವಣೆಗೆ ಮುನ್ನವೇ ಗ್ಯಾರಂಟಿಯಾಗಿ ಘೋಷಿಸಿದ್ದರು. ಇದೀಗಾ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರಕ್ಕೆ ದಿನಾಂಕ ನಿಗದಿ‌ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜುಲೈ 17 ಅಥವಾ 18 ರಂದು ಯೋಜನೆಗೆ ಚಾಲನೆ ನೀಡಲು ತೀರ್ಮಾನ‌ ಮಾಡುವ ಸಾಧ್ಯತೆ ಇದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡಲಿದ್ದಾರೆ. …

Read More »

ಸದನದಲ್ಲಿ ವರ್ಗಾವಣೆ ಕಮಿಷನ್ ರೇಟ್ ಕಾರ್ಡ್ ಸದ್ದು

ಬೆಂಗಳೂರು: ಸದನದಲ್ಲಿ ವರ್ಗಾವಣೆ ಕಮಿಷನ್ ರೇಟ್ ಕಾರ್ಡ್ ಸದ್ದು ಮಾಡಿತು. ವಿಷಯ ಪ್ರಸ್ತಾಪ ಮಾಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿದ್ರು ಅಂತ ಸದನದಲ್ಲಿ ಪತ್ರ ತೋರಿಸಿದ್ರು. ಆದ್ರೆ, ಆ ಪತ್ರ ನಮಗೆ ಕೊಡದೇ ಅವರೇ ತಗೊಂಡು ಹೋದ್ರು ಎಂದು ಟಾಂಗ್ ನೀಡಿದರು. ನಮ್ಮ ಮೇಲೆ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿದ್ದಾರೆ. ಆದರೆ, ಅದು ಸುಳ್ಳು, ಯಾವುದೇ ವರ್ಗಾವಣೆ ದಂಧೆ ನಡೆಯುತ್ತಿಲ್ಲ. ಪತ್ರಿಕೆಯಲ್ಲಿ ಹೆಚ್​ಡಿಕೆ ಪತ್ರ ಕೊಟ್ಟಿದ್ದಾರೆ …

Read More »

4 ದಿನಗಳಲ್ಲಿ 250ಕ್ಕಿಂತ ಹೆಚ್ಚು ನಕಲಿ ಪಾಸ್ ಪತ್ತೆ

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧಕ್ಕೆ ಕಳೆದ ವಾರ ಶಾಸಕ ಸೋಗಿನಲ್ಲಿ ವ್ಯಕ್ತಿಯೋರ್ವ ತೆರಳಿ ಸದನದೊಳಗೆ ಪ್ರವೇಶಿಸಿದ ಪ್ರಕರಣ ಬೆಳಕಿಗೆ ಬಂದ ನಂತರ ತಪಾಸಣೆ ಚುರುಕುಗೊಳಿಸಿದ್ದ ಪೊಲೀಸರು ಕಳೆದ ನಾಲ್ಕು ದಿನಗಳಲ್ಲಿ 250ಕ್ಕಿಂತ ಹೆಚ್ಚು ನಕಲಿ ಪಾಸ್​ಗಳನ್ನು ಪತ್ತೆ ಹಚ್ಚಿದ್ದಾರೆ.   ಸಚಿವರ ಹಾಗೂ ಶಾಸಕರ ಪಾಸ್​ಗಳನ್ನು ಕಲರ್ ಝರಾಕ್ಸ್ ಮಾಡಿ ಭದ್ರತಾ ಸಿಬ್ಬಂದಿ ಹಾಗೂ ಮಾರ್ಷಲ್​ಗಳಿಗೆ ಯಾಮಾರಿಸುತ್ತಿದ್ದವರ ಖರ್ತನಾಕ್ ಪ್ಲಾನ್ ಬಹಿರಂಗಗೊಂಡಿದೆ. ಇದೀಗ ನಕಲಿ ಪಾಸ್ ಬಳಸಿ ವಿಧಾನಸೌಧಕ್ಕೆ ಒಳಪ್ರವೇಶಿಸುತ್ತಿದ್ದವರಿಗೆ …

Read More »

ತಿಯೊಂದು ಸಮಸ್ಯೆಗಳಿಗೂ ಪರಿಹಾರ ಎಂಬುದು ಇದ್ದೇ ಇರುತ್ತದೆ.: ಬಾಲ್ಯದಲ್ಲೇ ಉದ್ಯಮಿಗಳಾದ ಅಪ್ಪಟ ಗ್ರಾಮೀಣ ಪ್ರತಿಭೆಗಳು

ಬೆಳಗಾವಿ : ಪ್ರತಿಯೊಂದು ಸಮಸ್ಯೆಗಳಿಗೂ ಪರಿಹಾರ ಎಂಬುದು ಇದ್ದೇ ಇರುತ್ತದೆ. ನಾವು ಪರಿಹಾರವನ್ನು ಹುಡುಕುವ ಮನಸು ಮಾಡಬೇಕು ಅಷ್ಟೇ. ಇದಕ್ಕೆ ಉದಾಹರಣೆ ಎಂಬಂತೆ ಬೆಳಗಾವಿ ವಿದ್ಯಾರ್ಥಿಗಳು ವಿದ್ಯುತ್ ವ್ಯತ್ಯಯದಿಂದ ಓದು ಬರಹಕ್ಕೆ ತೊಂದರೆ ಆಗುತ್ತಿದ್ದರೂ ಸಹಾ ಕೈಕಟ್ಟಿ ಕೂರದೇ ಸ್ವತಃ ತಾವೇ ಲೈಟ್ ಪೆನ್ ಕಂಡು ಹಿಡಿಯುವ ಮೂಲಕ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ. ಬಾಲ್ಯದಲ್ಲೇ ಇಂತಹ ಕ್ರಿಯಾತ್ಮಕ ಕೆಲಸದಿಂದ ಉದ್ಯಮಿಗಳಾಗುವತ್ತ ಹೆಜ್ಜೆ ಇಟ್ಟಿದ್ದಾರೆ. ಹೌದು, ಈ ಸಾಧನೆ ಮಾಡಿರುವ ಆರು …

Read More »

ಬೆಂಗಳೂರಿನಲ್ಲಿ ಸಿಇಒ, ಎಂಡಿ ಜೋಡಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಂಗಳೂರು : ಖಾಸಗಿ ಕಂಪನಿಗೆ ನುಗ್ಗಿ ಎಂ.ಡಿ ಹಾಗೂ ಸಿಇಒ ಇಬ್ಬರನ್ನೂ ಮಾರಕಾಸ್ತ್ರಗಳಿಂದ ಕೊಚ್ಚಿ‌ ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡ ಪೊಲೀಸರ ತಂಡ ಆರೋಪಿಗಳಾದ ಫಿಲಿಕ್ಸ್, ವಿನಯ್ ರೆಡ್ಡಿ ಹಾಗೂ ಶಿವು ಎಂಬವರನ್ನು ಕುಣಿಗಲ್ ಸಮೀಪ ಬಂಧಿಸಿದೆ. ಪ್ರಕರಣದ ವಿವರ: ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಮಾರಕಾಸ್ತ್ರ ಹಿಡಿದು ಕಂಪನಿ ಕಚೇರಿಗೆ ನುಗ್ಗಿದ್ದ ಫಿಲಿಕ್ಸ್ ಹಾಗೂ ಇತರರು ಖಾಸಗಿ ಕಂಪನಿಯ …

Read More »

ಶಕ್ತಿ ಬಂದ ನಂತರ ಸಾರಿಗೆ ಸಂಸ್ಥೆ ಆದಾಯ ವೃದ್ಧಿಸಿದೆ: ಕೃಷ್ಣ ಬೈರೇಗೌಡ

ಬೆಂಗಳೂರು : ಶಕ್ತಿ ಯೋಜನೆಯಿಂದ ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಮೌನಕ್ರಾಂತಿ ಹೆಚ್ಚಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಮಾತನಾಡಿದ ಅವರು, ಜನ ಬಸ್​​ಗಳಲ್ಲಿ ಹೆಚ್ಚಾಗಿ ಓಡಾಡುತ್ತಿದ್ದಾರೆ. ಪ್ರವಾಸೋದ್ಯಮ ಹೆಚ್ಚಾಗುತ್ತಿದೆ. ಮಹಿಳೆಯರು ಮಾತ್ರವಲ್ಲ, ಪುರುಷ ಪ್ರಯಾಣಿಕರು ಹೆಚ್ಚಾಗಿದ್ದಾರೆ . ಶೇ. 20 ರಿಂದ 30 ರಷ್ಟು ಪ್ರಯಾಣಿಕರು ಹೆಚ್ಚಾಗಿದ್ದಾರೆ. ಇದರಿಂದ ಸಾರಿಗೆ ಸಂಸ್ಥೆಗೆ ಆದಾಯ ಬಂದಿದೆ ಎಂದು ಹೇಳಿದ್ದಾರೆ. ಪ್ರಯಾಣಿಕರ ಹೆಚ್ಚಳದಿಂದ ಸಾರಿಗೆ ನಿಗಮ ಸ್ವಾವಲಂಬಿ ಆಗುತ್ತದೆ. ಇಂದು …

Read More »

ಬಿಜೆಪಿಯವರು ಪ್ರತಿಪಕ್ಷದ ನಾಯಕರಾಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮಾಡುತ್ತಾರೆ ಎಂದು ಲಕ್ಷ್ಮಣ್ ಸವದಿ ಲೇವಡಿ ಮಾಡಿದರು.

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ತಿಂಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡಲು ಬಿಜೆಪಿ ಹೈಕಮಾಂಡ್​ಗೆ ಸಾಧ್ಯವಾಗಿಲ್ಲ. ಮತ್ತೊಂದೆಡೆ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿವಾರ ಕಳೆದರೂ ಇನ್ನೂ ಕೂಡ ಬಿಜೆಪಿ ಪ್ರತಿಪಕ್ಷ ನಾಯಕನ ಹೆಸರನ್ನು ಕೇಂದ್ರ ನಾಯಕರು ಬಹಿರಂಗಪಡಿಸಿಲ್ಲ. ಈ ವಿಷಯವಾಗಿಯೇ ಇಂದು ವಿಧಾನಸಭೆಯಲ್ಲಿ ಸ್ವಲ್ಪ ದಿನ ತಟಸ್ಥವಾಗಿರಿ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರೇ ಆರಂಭದಲ್ಲಿ ಪ್ರತಿಪಕ್ಷದ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡುತ್ತಾರೆ. …

Read More »

ಗ್ರಾಹಕರಿಗೆ ಚಿಲ್ಲರೆ ಮಳಿಗೆಗಳ ಮೂಲಕ ರಿಯಾಯಿತಿ ದರದಲ್ಲಿ ಟೊಮೆಟೊ ವಿತರಿಸಲಾಗುವುದು ಎಂದು ಗ್ರಾಹಕ

ನವದೆಹಲಿ: ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಪ್ರಮುಖ ಗ್ರಾಹಕ ಕೇಂದ್ರಗಳಲ್ಲಿ ಟೊಮೆಟೊ ಕಡಿಮೆ ಬೆಲೆಗೆ ಲಭ್ಯವಾಗುವಂತೆ ಮಾಡಲು, ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸುವಂತೆ ಕೇಂದ್ರ ಸರ್ಕಾರ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್) ಮತ್ತು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್)ಗೆ ಬುಧವಾರ ನಿರ್ದೇಶನ ನೀಡಿದೆ.   ‘ಕ್ವೀನ್ ಆಫ್ ಕಿಚನ್’ ಎಂದು ಕರೆಯಲ್ಪಡುವ ಟೊಮೆಟೊದ ಚಿಲ್ಲರೆ ಬೆಲೆಯೂ ಭಾರೀ ಮಳೆಯಿಂದಾಗಿ ಉಂಟಾದ …

Read More »

ಅನುದಾನಿತ ಶಾಲೆಗಳ ಫಲಿತಾಂಶ ಇಳಿಕೆ ಗಂಭೀರವಾಗಿ ಪರಿಗಣನೆ: ಮಧು ಬಂಗಾರಪ್ಪ

ಬೆಂಗಳೂರು: ಅನುದಾನಿತ ಶಾಲೆಗಳಲ್ಲಿ ಫಲಿತಾಂಶ ಗಣನೀಯವಾಗಿ ಇಳಿಯುತ್ತಿರುವುದು ದೊಡ್ಡ ಸಮಸ್ಯೆ. ಇದರ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯ ಡಾ. ವೈ.ಎ.ನಾರಾಯಣ ಸ್ವಾಮಿ ನಿಯಮ 72ರ ಅಡಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಯನ್ನು ಕಾಲಕಾಲಕ್ಕೆ ಭರ್ತಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಫಲಿತಾಂಶ ಹೆಚ್ಚಳಕ್ಕೆ 2020ರ ನಂತರದ ಖಾಲಿ …

Read More »