Breaking News

ಎಂಪಿ ಎಲೆಕ್ಷನ್​​​​ವರೆಗೂ ಕಾದು ನೋಡೋಣ.. ವಿಪಕ್ಷದವರ ಟೀಕೆಗೆ ಮಹತ್ವ ಕೊಡಬೇಕಿಲ್ಲ: ಸತೀಶ್​ ಜಾರಕಿಹೊಳಿ

ಬೆಳಗಾವಿ: ಈ ಬಜೆಟ್ ಪ್ರಣಾಳಿಕೆ ಬಜೆಟ್ ಎಂದು ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ, ಅವರದ್ದು ಹಿಂದಿನ ಬಜೆಟ್ ಹಾಗೇ ಆಗಿದ್ದರೆ,‌ ನಮ್ಮದು ಹಾಗೇ ಅಂದುಕೊಳ್ಳಲಿ ಎಂದಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ವಿಕ್ಷಪದವರಿಂದ ಟೀಕೆ ಸ್ವಾಭಾವಿಕ. ಆದರೆ, ಬಜೆಟ್ ಬಗ್ಗೆ ಜನ ಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದರು. ರಾಜಕೀಯ ಮಾಡುವುದಕ್ಕಾಗಿ ವಿಪಕ್ಷದವರು …

Read More »

ಜುಲೈ ಅಂತ್ಯದೊಳಗೆ ಮಳೆಯಾಗುವ ಮುನ್ಸೂಚನೆ: ಕೃಷ್ಣ ಬೈರೇಗೌಡ

ಕಾರವಾರ: ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದೆ. ಜುಲೈ ಅಂತ್ಯದೊಳಗೆ ಬಹುತೇಕ ಕಡೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸದ್ಯಕ್ಕೆ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಉತ್ತರಕನ್ನಡದ ಕುಮಟಾದಲ್ಲಿ ನೆರೆಪೀಡಿತ ಪ್ರದೇಶಗಳ ಪರಿಶೀಲನೆ ಹಾಗೂ ಬೆಟ್ಕುಳಿ ಗ್ರಾಮದಲ್ಲಿ ನೆರೆಗೆ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಮಾತನಾಡಿದ ಅವರು, ಕಾರವಾರ, ಬೆಳಗಾವಿ ಭಾಗದಲ್ಲಿ ಮಳೆಯಾಗಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗಿಲ್ಲ. …

Read More »

ಆನ್​​​ಲೈನ್ ಬೆಟ್ಟಿಂಗ್ ಗೀಳು: ಅಣ್ಣನ ಮನೆಗೆ ಕನ್ನ ಹಾಕಿದ ತಮ್ಮನ ಬಂಧನ

ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದು ಅಣ್ಣನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ತಮ್ಮನನ್ನ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ಮೀಜಾನ್ ಎಂಬುವರು ಜುಲೈ 4ರಂದು ನೀಡಿದ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ತಮ್ಮನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಮೊಹಮ್ಮದ್ ಪರ್ವೀನ್ (22) ಎಂಬುವನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಸೋಮೇಶ್ವರ ನಗರದಲ್ಲಿ ದೂರುದಾರ ಮಿಜಾನ್ ವಾಸವಾಗಿದ್ದ. ಈತನೊಂದಿಗೆ ತಾಯಿ – ತಮ್ಮ …

Read More »

ಇಂದಿರಾ ಕ್ಯಾಂಟೀನ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿ.ಕೆ.ಶಿ.

ಬೆಂಗಳೂರು : ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಇಂದು (ಭಾನುವಾರ) ಬೆಳಗ್ಗೆ ನಗರ ಪ್ರದಕ್ಷಣೆ ಹಮ್ಮಿಕೊಂಡು ಮೊದಲಿಗೆ ಇಂದಿರಾ ಗಾಂಧಿ ಕ್ಯಾಂಟೀನ್ ಪರಿಸ್ಥಿತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಯಾವುದೇ ಅಧಿಕಾರಿಗಳು ಹಾಗು ಸಿಬ್ಬಂದಿಗೆ ಮುನ್ಸೂಚನೆ ನೀಡಿರಲಿಲ್ಲ. ಮೊದಲು ದಾಸರಹಳ್ಳಿ ವಲಯದ ವಾರ್ಡ್ ಸಂಖ್ಯೆ 39ರ ಚೊಕ್ಕಸಂದ್ರದ ಇಂದಿರಾ ಗಾಂಧಿ ಕ್ಯಾಂಟೀನ್​ಗೆ ಬೆಳಗ್ಗೆ 9:10ಕ್ಕೆ ಭೇಟಿ ನೀಡಿ, ತಿಂಡಿ ಕೇಳಿದರು. ಆದರೆ ಅದಾಗಲೇ ಅಲ್ಲಿ ತಿಂಡಿ …

Read More »

ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸುತ್ತಿದ್ದೇವೆ- ಬೆಳಗಾವಿ ಎಸ್ಪಿ

ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಭೀಕರ ಕೊಲೆ ಪ್ರಕರಣವನ್ನು ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ್​ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದಲ್ಲಿ ಶ್ರೀಗಳ ಮೃತದೇಹಗಳ ಅಂತಿಮ ಕಾರ್ಯಗಳ ಸಕಲ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳ ಪಾರ್ಥಿವ ಶರೀರವನ್ನು ಬೆಳಗಾವಿಯಲ್ಲಿ ಪರೀಕ್ಷೆ ನಡೆಸಿ …

Read More »

ಕಾಮಕುಮಾರ​ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಬಿಜೆಪಿ‌ ಶಾಸಕ ಅಭಯ ಪಾಟೀಲ್​ ಸರ್ಕಾರವನ್ನು ಒತ್ತಾಯ

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈ‌ನ‌ ಮುನಿಗಳಾದ ಕಾಮಕುಮಾರ​ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಆಗ್ರಹಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುನಿಗಳು ಹಣಕಾಸಿನ ವ್ಯವಹಾರ ಮಾಡಿದ್ದಾರೆ ಎಂದು ಪೊಲೀಸರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಜೈನ ಸಮುದಾಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ. ಪ್ರಕರಣದ ತನಿಖೆ ಅನುಮಾನ ಮೂಡಿಸುವಂತಿದೆ. ಹಾಗಾಗಿ ಸಿಬಿಐಗೆ …

Read More »

ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ವಿಧಿವಶರಾಗಿದ್ದಾರೆ.

ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ (76) ಅನಾರೋಗ್ಯದಿಂದ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಪುತ್ರಿಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು ಎನ್ನಲಾಗಿದೆ. ಮೃತದೇಹವನ್ನು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ. ಸಿ.ಎಂ.ನಿಂಬಣ್ಣವರ್​ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದರು. ಮಾಜಿ ಶಾಸಕರ ಅಗಲಿಕೆಗೆ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ‌.

Read More »

ಜೈನ ಸಂಪ್ರದಾಯದಂತೆ ನೆರವೇರಿದ ಕಾಮಕುಮಾರ ನಂದಿ ಮಹಾರಾಜ ಅವರ ಅಂತ್ಯಕ್ರಿಯೆ

ಚಿಕ್ಕೋಡಿ(ಬೆಳಗಾವಿ): ಕಳೆದ 15 ವರ್ಷಗಳಿಂದ ‘ಅಹಿಂಸೆ ಪರಮೋಧರ್ಮ’ ಎಂದು ಶಾಂತಿ ಮಂತ್ರ ಸಾರುತ್ತ ಧರ್ಮ ಪ್ರಚಾರ ಮಾಡಿದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜ (51) ಅವರು ಕಳೆದ ಎರೆಡು ದಿನಗಳ ಹಿಂದೆ ಭೀಕರವಾಗಿ ಹತ್ಯೆಗೀಡಾಗಿದ್ದರು. ನಂದಿ ಪರ್ವತ ಆಶ್ರಮದಲ್ಲಿ ಜೈನ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆಯನ್ನು ಇಂದು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಜೈನ ಮಠಗಳ ಮಹಾಸ್ವಾಮಿಗಳಾದ ನಾಂದಣಿ ಮಠದ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿ ಹಾಗೂ …

Read More »

ರಾಜ್ಯದ ಅಮರನಾಥ ಯಾತ್ರಿಕರು ಸುರಕ್ಷಿತವಾಗಿದ್ದಾರೆ: H.K. ಪಾಟೀಲ್

ಗದಗ: ಹವಾಮಾನ ವೈಪರೀತ್ಯ ಕಾರಣ ಅಮರನಾಥ ಯಾತ್ರೆಗೆ ತೆರಳಿದ್ದ 300 ಜನ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ನಿನ್ನೆ ರಾತ್ರಿ ಹವಾಮಾನ ವೈಪರೀತ್ಯ ಹಾಗೂ ಅತಿಯಾದ ಚಳಿಯಿಂದಾಗಿ ಸಮಸ್ಯೆಯಾಗಿತ್ತು. ಅಮರನಾಥ ದೇವಸ್ಥಾನದ ಆಡಳಿತ ಮಂಡಳಿ, ಮಿಲಿಟರಿ ಅಧಿಕಾರಿಗಳು ಎಲ್ಲರಿಗೂ ಅಗತ್ಯ ನೆರವನ್ನು ನೀಡಿದ್ದು, ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ಹಾಗೂ ಗುಡ್ಡ ಕುಸಿತದಿಂದಾಗಿ …

Read More »

ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣವೂ ಜೈನ ಸಮಾಜವನ್ನು ಸಿಡಿದೇಳುವಂತೆ ಮಾಡಿದೆ.

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣವೂ ಜೈನ ಸಮಾಜವನ್ನು ಸಿಡಿದೇಳುವಂತೆ ಮಾಡಿದೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯ ಸುವರ್ಣವಿಧಾನಸೌಧ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಜೈನ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು. ಹೌದು.. ಜೈನ ಮುನಿಗಳನ್ನು ಆರೋಪಿಗಳು ಬರ್ಬರವಾಗಿ ಹತ್ಯೆ ಮಾಡಿರುವುದು ಬೆಳಗಾವಿ ಜಿಲ್ಲೆ ಅಷ್ಟೇ ಅಲ್ಲದೇ ಇಡೀ ರಾಜ್ಯವನ್ನೇ …

Read More »