Breaking News

ಜೈನ ಮುನಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳನ್ನು ವಶಕ್ಕೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಜೈನ ಆಶ್ರಮದ ಜೈನ ಮುನಿ ಕಾಮ ಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ ಸಂಜೀವ ಪಾಟೀಲ್ ಹೇಳಿದರು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟಕಬಾವಿ ಗ್ರಾಮದಲ್ಲಿ ಮಾಧ್ಯಮಮಗಳ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕು ಕಟಕಬಾವಿ ಗ್ರಾಮದ ನಿವಾಸಿ ನಾರಾಯಣ ಮಾಳಿ ಹಾಗೂ ಚಿಕ್ಕೋಡಿ ಪಟ್ಟಣದ ನಿವಾಸಿ …

Read More »

ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ:C.M. ಸಿದ್ದರಾಮಯ್ಯ

ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ.ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಈಗಾಗಲೇ ನಮ್ಮ ಅಧಿಕಾರಿಗಳು …

Read More »

ಅರ್ಚಕನ ಕೆಲಸ ಬಿಡಿಸಿದ್ದಕ್ಕೆ ಮಲಪ್ರಭಾ ನದಿ ತೀರದಲ್ಲಿ ಧರಣಿಗೆ ಕುಳಿತ

ಅರ್ಚಕನ ಕೆಲಸ ಬಿಡಿಸಿದ್ದಕ್ಕೆ ಮಲಪ್ರಭಾ ನದಿ ತೀರದಲ್ಲಿ ಧರಣಿಗೆ ಕುಳಿತ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹಬ್ಬನಹಟ್ಟಿ ಗ್ರಾಮದಲ್ಲಿ ನಡೆದಿದೆ. ಪೊಲೀಸರು, ಆಡಳಿತ ಮಂಡಳಿ ಹಾಗೂ ಸ್ಥಳೀಯರು ಅರ್ಚಕನನ್ನು ಅಲ್ಲಿಂದಹೊರತೆಗೆಯಲು ಹರಸಾಹಸ ಪಟ್ಟರು.  ಹರಿಯಾಣ ಮೂಲದ ಅರ್ಚಕ ದೇವೇಂದ್ರ ಸಿಂಗ್ ಶರ್ಮಾ ಅವರು ನದಿ ಬಳಿ ಧರಣಿಕುಳಿತಿದ್ದು. ಖಾನಾಪುರ ಪೊಲೀಸರು, ಗ್ರಾಮಾಂತರ ಪಿಡಿಒ ಹಾಗೂ ಸ್ಥಳೀಯರು. ನದಿಯ ದಡದಲ್ಲಿ ಕುಳಿತಿದ್ದ ಅರ್ಚಕರನ್ನು ಸ್ಥಳೀಯ ನಾಗರಿಕರು ಹೊರ ಬರುವಂತೆ ಮನವಿ …

Read More »

ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ K.N ರಾಜಣ್ಣ

ಮೈಸೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸಹಕಾರ ಸಚಿವ K. N ರಾಜಣ್ಣ ಹಾಲಿನ ದರ ಏರಿಕೆಯ ಸುಳಿವು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಹಾಲಿನ ದರ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ ಎಂದರು. ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದ್ದೇವೆ ಎಂದರು. ಇನ್ನೂ,. ನಂದಿನಿ ಹಾಲಿನ ದರವನ್ನು …

Read More »

ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥ

ಯಾದಗಿರಿ : ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯಲ್ಲಿ ಬೆಳಗ್ಗೆ ಮಾಡಿದ್ದ ಉಪ್ಪಿಟ್ಟು ತಿಂದ ಮಕ್ಕಳಿಗೆ ಹೊಟ್ಟೆನೋವು ವಾಂತಿಭೇದಿ ಕಾಣಿಸಿಕೊಂಡಿದೆ. ನಂತರ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಘಟನೆ ಹಿನ್ನೆಲೆ ಪೋಷಕರು ಶಾಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More »

ರಾಜ್ಯಾದ್ಯಂತ ಮಳೆ 21 ಜನರು ಸಾವನ್ನಪ್ಪಿದ್ದಾರೆ ಎಂದ ಕೃಷ್ಣಬೈರೇಗೌಡ

ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಮಳೆ ಅವಾಂತರದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಸಚಿವರು, ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ 21 ಜನ ಮೃತಪಟ್ಟಿದ್ದು, 40 ಜಾನುವಾರುಗಳು ಮೃತಪಟ್ಟಿವೆ ಎಂದರು.

Read More »

ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ :C.M.

ಬೆಂಗಳೂರು : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ನುಡಿದಂತೆ ನಡೆಯುತ್ತೇವೆ, ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.   ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, …

Read More »

ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ನವದೆಹಲಿ : ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಕೋಚ್ ಟೆಕೆಟ್ ದರವನ್ನು 25 % ಕ್ಕೆ ಇಳಿಕೆ ಮಾಡಿದೆ. ವಂದೇ ಭಾರತ್ ಮತ್ತು ಅನುಭೂತಿ ಮತ್ತು ವಿಸ್ಟಾಡೋಮ್ ಬೋಗಿಗಳು ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ಬೆಲೆಯನ್ನು ಶೇಕಡಾ 25 ರವರೆಗೆ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. ದರಗಳು ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೂ ಅವಲಂಬಿತವಾಗಿರುತ್ತದೆ ಎಂದು …

Read More »

ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ: ಹೆಚ್.ವಿಶ್ವನಾಥ್,

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಹೆಚ್.ಡಿ.ಕುಮಾರಸ್ವಾಮಿ ಪೆನ್ ಡ್ರೈವ್ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ ಎಂದು ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ, ಮಾಜಿ ಸಿಎಂ, ಮಾಜಿ ಪ್ರಧಾನಿಗಳ ಮಗ. ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದರು.

Read More »

ಸಿಎಂ ಸಿದ್ದರಾಮಯ್ಯ ಬಜೆಟ್​ ಕೊಂಡಾಡಿದ ಲಕ್ಷ್ಮಿ ಹೆಬ್ಬಾಳಕರ್, ಈಶ್ವರ ಖಂಡ್ರೆ !

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿರುವ ಬಜೆಟ್ ಬಗ್ಗೆ ಅವರ ಸಂಪುಟ ಸಚಿವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರಾದ ಎಂ ಬಿ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಸಚಿವರು ತಮ್ಮ ಮೆಚ್ಚುಗೆಯನ್ನು ಮಾಧ್ಯಮ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಜನಪರ ಬಜೆಟ್‌ – ಎಂ ಬಿ ಪಾಟೀಲ್: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಾರಿಗೆ ಮಂಡಿಸಿರುವ ಬಜೆಟ್‌ ಮಹಿಳೆಯರು, ದಲಿತರು, ರೈತರು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಮತ್ತು …

Read More »