ಹೈದರಾಬಾದ್ (ತೆಲಂಗಾಣ): ಮಾನವನ ದೇಹ ರಹಸ್ಯಗಳ ಗೂಡು. ದೇಹದಲ್ಲಿ ಕೆಲವೊಮ್ಮೆ ವಿಶೇಷತೆಗಳು ಘಟಿಸಿ ವೈದ್ಯಲೋಕಕ್ಕೇ ಅಚ್ಚರಿ ಉಂಟು ಮಾಡುತ್ತವೆ. ಅಂಥಹದ್ದೇ ಒಂದು ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಹೊಟ್ಟೆ ನೋವೆಂದು ಹೋದ ವ್ಯಕ್ತಿಗೆ ತಪಾಸಣೆಯ ವೇಳೆ ದೇಹದಲ್ಲಿ ಪುರುಷ ಮತ್ತು ಸ್ತ್ರೀ ಜನನಾಂಗ ಎರಡೂ ಇರುವುದು ಕಂಡುಬಂದಿದೆ. ಇದರಲ್ಲಿ ಒಂದನ್ನು ಶಸ್ತ್ರಚಿಕಿತ್ಸೆ ನಡೆಸಿ ತೆಗೆದುಹಾಕಲಾಗಿದೆ. 40 ವರ್ಷದ ವ್ಯಕ್ತಿಯೊಬ್ಬರು ಇತ್ತೀಚೆಗೆ ಸಿಕಂದರಾಬಾದ್ನ ಕಿಮ್ಸ್ ಆಸ್ಪತ್ರೆಗೆ ಹೊಟ್ಟೆ ನೋವೆಂದು ದಾಖಲಾಗಿದ್ದರು. ಅವರಿಗೆ ನಡೆಸಿದ …
Read More »ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಕಲ್ಪಿಸದೇ ಇರುವುದು ಖಂಡನೀಯ ಎಂದು ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ವಾಗ್ದಾಳಿ ನಡೆಸಿದ್ದಾರೆ
ಬೆಂಗಳೂರು : ಪರಿಷತ್ತು ಸಮಸ್ತ ಕನ್ನಡಿಗರ ಪರವಾಗಿ ಮಾಡಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶ ನೀಡಬೇಕು ಎನ್ನುವ ಬೇಡಿಕೆಯ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ ಎನ್ನುವುದು ಖೇದದ ಸಂಗತಿ. ಕನ್ನಡ ಸಾಹಿತ್ಯ ಪರಿಷತ್ತು ಸಹಿಸುವುದಿಲ್ಲ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಕಲ್ಪಿಸದೇ ಇರುವುದು ಸಮಸ್ತ …
Read More »ಇಸ್ರೋ ಚಂದ್ರೋದಯ! ‘ನಾಲ್ಕು ವರ್ಷದ ಪರಿಶ್ರಮಕ್ಕೆ ಪ್ರತಿಫಲ ಸಿಕ್ಕಿದೆ’- ಇಸ್ರೋ ಅಧ್ಯಕ್ಷ ಸೋಮನಾಥ್
ಬೆಂಗಳೂರು : ಚಂದ್ರಯಾನ-3 ಯೋಜನೆ ಸಕ್ಸಸ್ ಕಂಡು ವಿಕ್ರಮ್ ಲ್ಯಾಂಡರ್ ಚಂದ್ರಸ್ಪರ್ಶವಾಗಿದೆ. ಭಾರತ ಚಂದ್ರನ ಮೇಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಖ್ಯಸ್ಥ ಎಸ್.ಸೋಮನಾಥ್ ಇಂದು ಸಂಜೆ (ಬುಧವಾರ) ಘೋಷಿಸಿದರು. ಚಂದ್ರಯಾನ-3 ಯೋಜನೆಯು ಅಭೂತಪೂರ್ವ ಯಶಸ್ಸು ಕಂಡ ಬಳಿಕ ಎಲ್ಲರಿಗೂ ಧನ್ಯವಾದ ತಿಳಿಸಿ ಮಾತನಾಡಿದ ಅವರು, ಇನ್ನು ನಾವು ಚಂದ್ರನ ಊರಿನ ಪಯಣಿಗರು. ಶಶಿಯ ಮೇಲೆ ನಮ್ಮ ನೌಕೆ ನಿಂತಿದೆ. ನಾಲ್ಕು ವರ್ಷಗಳ ಶ್ರಮ ಇಂದು ಪ್ರತಿಫಲ ಕಂಡಿತು. …
Read More »ವಿದ್ಯುತ್ ಕಂಬಗಳ ಮೇಲಿನ ಅನಧಿಕೃತ ಕೇಬಲ್ಗಳ ತೆರವಿಗೆ ಬೆಸ್ಕಾಂ ಒಂದು ವಾರದ ಗಡುವು
ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಒಎಫ್‌ಸಿ ಕೇಬಲ್, ಡೇಟಾ ಕೇಬಲ್ ಹಾಗೂ ಡಿಶ್ ಕೇಬಲ್ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್ ನೆಟ್ ಸೇವಾ ಕಂಪನಿಗಳು, ಟಿವಿ ಕೇಬಲ್ ಆಪರೇಟರ್ ಗಳಿಗೆ ಬೆಸ್ಕಾಂ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬೆಸ್ಕಾಂ ವಿದ್ಯುತ್ ಕಂಬಗಳ ಮೇಲೆ ಅನಧಿಕೃತವಾಗಿ ಒಎಫ್‌ಸಿ ಕೇಬಲ್ ಹಾಗೂ ಇನ್ನಿತರ ಕೇಬಲ್ ಗಳನ್ನು ಅಳವಡಿಸಿದ್ದ ಪರಿಣಾಮ ವಿದ್ಯುತ್ ಕಂಬ ಉರುಳಿ …
Read More »ಬಸವನಕುಡಚಿಯ ಗ್ರಾಮದಲ್ಲಿನ ಸಮಸ್ಯೆ ಆಲಿಸಲು ಪಾಲಿಕೆಯ ಆಯುಕ್ತರು ಭೇಟಿ ನೀಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಬೆಳಗಾವಿ : ಮಹಾನಗರ ಪಾಲಿಕೆಯ 48ನೇ ವಾರ್ಡ್ಗೆ ಒಳಪಡುವ ಬಸವನಕುಡಚಿಯ ಜನರ ಸಮಸ್ಯೆ ಆಲಿಸಲು ಕಳೆದ ನಾಲ್ಕು ದಶಕಗಳಿಂದ ಒಬ್ಬ ಪಾಲಿಕೆ ಆಯುಕ್ತರು ಭೇಟಿ ಕೊಟ್ಟಿಲ್ಲ ಎಂಬ ಆರೋಪ ಕೇಳಿಬಂದಿದೆ. 1984ರಲ್ಲಿ ಈ ಪಾಲಿಕೆ ಅಸ್ತಿತ್ವಕ್ಕೆ ಬಂದಿದೆ. ಆದರೆ ಈವರೆಗೆ ಒಬ್ಬರೇ ಒಬ್ಬ ಪಾಲಿಕೆ ಆಯುಕ್ತರು ಬಂದು ಜನರ ಸಮಸ್ಯೆ ಆಲಿಸಿಲ್ಲವಂತೆ. ನಾವು ಹೆಸರಿಗಷ್ಟೇ ಪಾಲಿಕೆ ವ್ಯಾಪ್ತಿಯಲ್ಲಿದ್ದೇವೆ. ಹಾಗಾಗಿ ನಾವು ಪಾಲಿಕೆಯಲ್ಲಿ ಮುಂದುವರಿಯಲ್ಲ. ನಮ್ಮ ಊರಿಗೆ ಪ್ರತ್ಯೇಕ ಗ್ರಾಮ ಪಂಚಾಯತಿ ರಚಿಸಿ …
Read More »ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದೆ
ಬೆಂಗಳೂರು : ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಕಡೆಗಣಿಸಿದೆ. ತಮಿಳುನಾಡಿಗೆ ನೀರು ಬಿಟ್ಟ ಬಳಿಕ ಇದೀಗ ತರಾತುರಿಯಲ್ಲಿ ಸರ್ವಪಕ್ಷ ಸಭೆ ಕರೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಊರು ಕೊಳ್ಳೆ ಹೊಡೆದ ಮೇಲೆ ಡಿಡ್ಡಿ ಬಾಗಿಲು ಹಾಕಿದ ರೀತಿ ರಾಜ್ಯ ಸರ್ಕಾರದ ವರ್ತನೆ ಇದೆ ಎಂದು ಅವರು ಟೀಕಿಸಿದ್ದಾರೆ. ಇಂದಿನ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಮುಖಂಡರು, …
Read More »ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡರ್ ಇಳಿಸಿದ ಮೊದಲ ದೇಶ ಭಾರತ! ಇತಿಹಾಸ ಸೃಷ್ಟಿಸಿದ ಇಸ್ರೋ!
ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿತು. ಇಡೀ ವಿಶ್ವವೇ ಎದುರು ನೀಡುತ್ತಿದ್ದ ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್ ವಿಕ್ರಮ್ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ 6:04ಕ್ಕೆ ಸರಿಯಾಗಿ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದರು. ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬ್ಯಾಹಾಕಾಶ ಕೇಂದ್ರದಿಂದ …
Read More »ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ: ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಹೆಚ್ಡಿಡಿ.. ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ
ಬೆಂಗಳೂರು : ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ರ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಹಲವರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸತೊಡಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಇಸ್ರೋಗೆ ಶುಭಾಶಯ ಕೋರಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿಯೂ ಚಂದ್ರಯಾನ-3ರ ವಿಜಯೋತ್ಸವ ಆಚರಿಸಲಾಯಿತು. “ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ …
Read More »Chandrayaan 3: ಚಂದ್ರಯಾನ 3ರ ಯಶಸ್ಸಿಗೆ ಚಿತ್ರರಂಗದ ಗಣ್ಯರು ಶುಭ ಹಾರೈಸಿದ್ದಾರೆ.
ಸಿನಿ ಗಣ್ಯರಿಂದ ಚಂದ್ರಯಾನ 3ರ ಯಶಸ್ಸಿಗೆ ಶುಭ ಹಾರೈಕೆ ಚಂದ್ರಯಾನ 3ರ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ. ಯೋಜನೆಯಂತೆ ಎಲ್ಲವೂ ನಡೆಯಲಿದ್ದು, ದೇಶಾದ್ಯಂತ ಚಂದ್ರಯಾನ 3ರ ಯಶಸ್ಸಿಗೆ ಹೋಮ, ಹವನ, ಪೂಜೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಸಿನಿ ಗಣ್ಯರು ಮೈಕ್ರೋ ಬ್ಲಾಗಿಂಗ್ ಸೈಟ್ X (ಟ್ವಿಟರ್) ನಲ್ಲಿ ಚಂದ್ರಯಾನ 3ರ ಯಶಸ್ಸಿಗೆ …
Read More »ಆಸ್ತಿ ವಿವಾದ ಹಿನ್ನೆಲೆಯಲ್ಲಿ ಜಗಳಧಾರವಾಡದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ
ಧಾರವಾಡ: ಆಸ್ತಿ ವಿವಾದ ಸಂಬಂಧ ಎರಡು ಕಡೆಯವರ ನಡುವೆ ಗಲಾಟೆ ನಡೆದು, ಆತಂಕದಿಂದ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಇಲ್ಲಿನ ಅತ್ತಿಕೊಳ್ಳ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಮುಂಬೈ ಮೂಲದ ಸುಶಾಂತ ಅಗರವಾಲ್ ಎಂಬಾತ ಗುಂಡು ಹಾರಿಸಿದ್ದು, ಮತ್ತೊಂದು ಕಡೆಯವರನ್ನು ಹೆದರಿಸಲು ಫೈರಿಂಗ್ ಮಾಡಿರುವುದಾಗಿ ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದೆ. ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಆರೋಪಿ ಸುಶಾಂತ ಮುಂಬೈನಲ್ಲಿದ್ದ ಎಂದು ತಿಳಿದುಬಂದಿದೆ. ನಿವೇಶನದ ಸಂಬಂಧ ಸುಶಾಂತ್ ಹಾಗೂ ಪವನ ಕುಲಕರ್ಣಿ …
Read More »
Laxmi News 24×7