Breaking News

ಪ್ರವಾಸೋದ್ಯಮ ಪ್ರಚಾರದ ಶ್ರೇಷ್ಠತೆಗಾಗಿ ರಾಮೋಜಿ ಫಿಲ್ಮ್ ಸಿಟಿಗೆ ಎಫ್​ಟಿಸಿಸಿಐ ಪ್ರಶಸ್ತಿ ಗರಿ

ಹೈದರಾಬಾದ್: ತೆಲಂಗಾಣದ ಅಪೆಕ್ಸ್ ಟ್ರೇಡ್ ಮತ್ತು ಇಂಡಸ್ಟ್ರಿ ಮಂಡಳಿ, ತೆಲಂಗಾಣ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಫೆಡರೇಶನ್ (ಎಫ್‌ಟಿಸಿಸಿಐ) ವತಿಯಿಂದ ನೀಡಲಾಗುವ ಎಕ್ಸಲೆನ್ಸ್ ಪ್ರಶಸ್ತಿ ಗರಿ ರಾಮೋಜಿ ಫಿಲ್ಮ್ ಸಿಟಿಗೆ ದೊರೆತಿದೆ.   ರಾಮೋಜಿ ಫಿಲ್ಮ್ ಸಿಟಿಗೆ ತೆಲಂಗಾಣ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಫೆಡರೇಶನ್​ನಿಂದ (ಎಫ್​ಟಿಸಿಸಿಐ) ಪ್ರಶಸ್ತಿ ಗರಿ ಲಭಿಸಿದೆಹೈದರಾಬಾದ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ತೆಲಂಗಾಣ ಸರ್ಕಾರದ ಕೈಗಾರಿಕೆಗಳು ಮತ್ತು ಐಟಿ ಸಚಿವರಾದ ಶ್ರೀ ಕೆ.ಟಿ. ರಾಮರಾವ್ …

Read More »

ಜುಲೈ 7ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ; ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜುಲೈ 7ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಶುಕ್ರವಾರದವರೆಗೆ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಬಾಗಲಕೋಟೆ, ಯಾದಗಿರಿ, ಹಾವೇರಿ, ರಾಯಚೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ …

Read More »

ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ನೂತನ ಕಸದ ವಾಹನಕ್ಕೆ ಚಾಲನೆ

ಬೆಳಗಾವಿಯ ವಾರ್ಡ್ ನಂ.29ರಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ನೂತನ ಕಸದ ವಾಹನಕ್ಕೆ ಚಾಲನೆ ನೀಡಲಾಯಿತು.   ವಾರ್ಡ್ ನಂ.29ರಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಲು ಕಸದ ಗಾಡಿಗಳು ಕಡಿಮೆ ಇದ್ದವು. ಮನೆಯ ತ್ಯಾಜ್ಯವನ್ನು ವಾರಕ್ಕೆ 3 ಬಾರಿ ಮಾತ್ರ ಸಂಗ್ರಹಿಸಲಾಗುತ್ತದೆ. ಇದನ್ನು ಗಮನಿಸಿದ ಕಾರ್ಪೊರೇಟರ್ ನಿತಿನ್ ಜಾಧವ್ ಅವರು ಅಭಯ ಪಾಟೀಲ ಅವರೊಂದಿಗೆ ಚರ್ಚಿಸಿ ನೂತನ ಕಸದ ವಾಹನಕ್ಕೆ ಅನುಮೋದನೆ ಪಡೆದು. ಸೋಮವಾರ ಕಸದ ವಾಹನ …

Read More »

ವಂದೇ ಭಾರತ್ ರೈಲಿನ ಸಮಯಕ್ಕೆ ತಕ್ಕಂತೆ ಹುಬ್ಬಳ್ಳಿ – ಬೆಳಗಾವಿ ನಡುವೆ ವೋಲ್ವೊ ಬಸ್ ಸೌಲಭ್ಯ

ಹುಬ್ಬಳ್ಳಿ: ಬೆಂಗಳೂರು – ಧಾರವಾಡ ನಡುವೆ ಹೊಸದಾಗಿ ಆರಂಭವಾಗಿರುವ “ವಂದೇ ಭಾರತ್” ರೈಲಿನ ಸಮಯಕ್ಕೆ ಹೊಂದಾಣಿಕೆ ಆಗುವಂತೆ ಹುಬ್ಬಳ್ಳಿ ರೈಲ್ವೆ ನಿಲ್ದಾಣ – ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ನಡುವೆ ವೋಲ್ವೊ ಬಸ್ ಹಾಗೂ ಧಾರವಾಡ ರೈಲು ನಿಲ್ದಾಣ – ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ನಡುವೆ ರಾಜಹಂಸ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.   ಬೆಳಗಾವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕ ಪ್ರಯಾಣಿಕರಿಗೆ ಬೆಂಗಳೂರು ಧಾರವಾಡ ನಡುವೆ ಆರಂಭಿಸಲಾಗಿರುವ “ವಂದೇ ಭಾರತ್” …

Read More »

ವಿರೋಧ ಪಕ್ಷದ ನಾಯಕನ ಆಯ್ಕೆಯಾದ ಮೇಲೆ ಬಿಜೆಪಿ ಎರಡು ಪಾರ್ಟಿ ಆಗುತ್ತೆ: ಕಿಮ್ಮನೆ ರತ್ನಾಕರ್

ಶಿವಮೊಗ್ಗ: ”ವಿರೋಧ ಪಕ್ಷದ ನಾಯಕ ಹಾಗೂ ರಾಜಾಧ್ಯಕ್ಷರ ಆಯ್ಕೆಯಾದ ಬಳಿಕ ಬಿಜೆಪಿಯಲ್ಲಿ ಎರಡು ಪಾರ್ಟಿ ಆಗುತ್ತದೆ” ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವ್ಯಂಗ್ಯವಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ದೇಶದಲ್ಲೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದೆ ಪಕ್ಷ ಎನ್ನುವ ಬಿಜೆಪಿ ಪಕ್ಷದ ಕಥೆ ಹೀಗಾಗಿದೆ. ಕರ್ನಾಟಕದಲ್ಲಿ ಎಷ್ಟು ಜಿಲ್ಲೆಯಿದೆ ಅಂತ ಗೊತ್ತಿರದವರನ್ನು ರಾಜ್ಯಾಧ್ಯಕ್ಷನಾಗಿ ಮಾಡಿದ್ದಾರೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಈಗ ಕೊಡಲ್ಲ ಎನ್ನುತ್ತಿದ್ದಾರೆ. …

Read More »

ನನ್ನದು ಆಡಿಯೋಗಳು ಮಾತ್ರ, ಆದ್ರೆ ಅವರ ವಿಡಿಯೋಗಳಿವೆ, ರಿಲೀಸ್ ಮಾಡಿದ್ರೆ ನೇಣು ಹಾಕಿಕೊಳ್ತಾರೆ: ವೀರಣ್ಣ ಚರಂತಿಮಠ

ಬಾಗಲಕೋಟೆ: ನನ್ನ ಆಡಿಯೋ ಬಂದಿವೆಯೇ ಹೊರತು ವಿಡಿಯೋ ಏನ್ ಬಂದಿಲ್ಲ ಅಲ್ವಾ?. ಆದ್ರೆ ನನ್ನ ಹತ್ತಿರ ಅವರ ವಿಡಿಯೋಗಳಿವೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೊಸ ಬಾಂಬ್ ಹಾಕಿದ್ದಾರೆ. ಇಲ್ಲಿನ ಬಸವೇಶ್ವರ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬಳಿ ಇರುವ ವಿಡಿಯೋ ರಿಲೀಸ್ ಮಾಡಿದ್ರೆ, ಅವರು ನೇಣು ಹಾಕಿಕೊಳ್ಳಬೇಕಾಗುತ್ತದೆ ಎಂದು ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದರು. ತಮ್ಮ ಆಡಿಯೋ ಸಂಭಾಷಣೆ ವೈರಲ್ ಬಗ್ಗೆ …

Read More »

ಮೈಸೂರು: ಅನಾರೋಗ್ಯದಿಂದ ಪತಿ ಸಾವು, ಆಘಾತಕ್ಕೊಳಗಾಗಿ ಪತ್ನಿ ಆತ್ಮಹತ್ಯೆ!

ಮೈಸೂರು: ಅನಾರೋಗ್ಯದಿಂದ ಪತಿ ಮನೆಯಲ್ಲಿ ಸಾವನ್ನಪ್ಪಿರುವ ದೃಶ್ಯ ನೋಡಿ ಆಘಾತಕ್ಕೊಳಗಾದ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ನಗರದ ಕೊಯಮತ್ತೂರು ಕಾಲೋನಿಯಲ್ಲಿ ಸೋಮವಾರ ನಡೆದಿದೆ. ಬಂಡಾರಿ ಎಂಬವರ ಪುತ್ರ ದೊರೆ (55) ಹಾಗೂ ಇವರ ಪತ್ನಿ ಸಾವಿತ್ರಿ (47) ಮೃತಪಟ್ಟಿದ್ದಾರೆ. ಇವರಿಗೆ ಓರ್ವ ಪುತ್ರ ಹಾಗೂ ಮಗಳಿದ್ದು ಮದುವೆಯಾಗಿ ಬೇರೆಡೆ ವಾಸವಾಗಿದ್ದಾರೆ. ದೊರೆ ಮೂರು ತಿಂಗಳ ಹಿಂದೆ ಕೆಲಸಕ್ಕೆಂದು ಕೆ.ಆರ್. ನಗರಕ್ಕೆ ಹೋಗಿದ್ದು ಅಪಘಾತಕ್ಕೊಳಗಾಗಿ ತಮಿಳುನಾಡಿನ ಕೊಯಮತ್ತೂರು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. …

Read More »

ಸರ್ಕಾರದ ವಿರುದ್ಧ ಹೆಚ್ ​​ಡಿ ಕುಮಾರಸ್ವಾಮಿ ಆರೋಪಗಳಿಗೆ ನಮ್ಮ ಬೆಂಬಲವಿದೆ: ಬಿ ಎಸ್​ ಯಡಿಯೂರಪ್ಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಾನು ಸ್ವಾಗತಿಸುತ್ತೇನೆ. ಕುಮಾರಸ್ವಾಮಿ ಅವರಿಗೆ ನಮ್ಮ ಪೂರ್ಣ ಬೆಂಬಲ ಇದೆ. ಕುಮಾರಸ್ವಾಮಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಹೆಚ್​ಡಿಕೆ ಹೇಳಿಕೆಗಳನ್ನು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್‌ ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಾನು ಸ್ವಾಗತಿಸುತ್ತೇನೆ. ಕುಮಾರಸ್ವಾಮಿ …

Read More »

ಮಧ್ಯಪ್ರದೇಶದ ಗಡಿಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ: 10 ಮಂದಿ ದಾರುಣ ಸಾವು,

ಮಹಾರಾಷ್ಟ್ರ,- ಮಧ್ಯಪ್ರದೇಶದ ಗಡಿಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಧುಲೆ (ಮಹಾರಾಷ್ಟ್ರ): ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್​ ಮತ್ತು ಇತರೆ ವಾಹನಗಳ ಮೇಲೆ ಹರಿದು ಪರಿಣಾಮ ಸಂಭವಿಸಿದ ಸರಣಿ ಭೀಕರ ಅಪಘಾತದಲ್ಲಿ 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಗಡಿಭಾಗದ ಪಲಾಸ್ನೇರ್ ಗ್ರಾಮದ ಮುಂಬೈ- ಆಗ್ರಾ ಹೆದ್ದಾರಿಯಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಅವರನ್ನು …

Read More »

ಗ್ಯಾರಂಟಿ ಯೋಜನೆ ನೀಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ: ಬಿಜೆಪಿ ಪ್ರತಿಭಟನೆ

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಫ್ರೀಡಂ ಪಾರ್ಕ್​ನಲ್ಲಿ ಒಂದು ದಿನದ ಧರಣಿ ನಡೆಸಿದ ಬಿಜೆಪಿಗರು, ಕಾಂಗ್ರೆಸ್​ ಗ್ಯಾರಂಟಿಗಳನ್ನು ಬೇಷರತ್ತಾಗಿ ಜಾರಿ ಮಾಡಬೇಕು ಎಂದು …

Read More »