ಬೆಂಗಳೂರು: ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಪ್ರಕರಣ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಸೋಮವಾರ ನಡೆದಿದೆ. ಸೊಹೇಲ್ (17) ಮೃತಪಟ್ಟ ವಿದ್ಯಾರ್ಥಿ. ಮಂಜುನಾಥ ನಗರದ ಗೌತಮ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಸೋಮವಾರ ಮಧ್ಯಾಹ್ನ 2.30ರ ಸಮಯಲ್ಲಿ ಕಾಲೇಜು ಸಮೀಪ ವಿದ್ಯಾರ್ಥಿ ನಿಂತಾಗ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಸೊಹೇಲ್ ಎಡಗೈ ಮತ್ತು ತೊಡೆಗೆ ಗಂಭೀರವಾದ …
Read More »ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಪತಿ ಕತ್ತುಹಿಸುಕಿ ಕೊಲೆ
ಹುಬ್ಬಳ್ಳಿ: ಅವರಿಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ರು. ಅವರಿಬ್ಬರ ಮದುವೆಗೆ ಜಾತಿಯೂ ಅಡ್ಡ ಬಂದಿರಲಿಲ್ಲ. ಅವರಿಬ್ಬರಿಗೆ ಮುದ್ದಾದ ಗಂಡು ಮಗು ಕೂಡಾ ಇದೆ. ಆದ್ರೆ ಪ್ರೀತಿಸಿ ಕೈ ಹಿಡಿದವಳನ್ನೇ ಗಂಡನೆ ಕತ್ತು ಹಿಸುಕಿ ಕೊಲೆ ಮಾಡಿ ಬಾಗಿಲು ಹಾಕಿಕೊಂಡು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ನೇಕಾರನಗರದಲ್ಲಿ ನಡೆದಿದೆ. ನೇಕಾರ ನಗರದ ಜನ ಇವತ್ತು ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದಿದ್ದಾರೆ. ಅದಕ್ಕೆ ಕಾರಣ ಪ್ರೀತಿಸಿ ಮದುವೆಯಾದ ಗಂಡನೇ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಸುಧಾ …
Read More »ಬಿಜೆಪಿ ಸಭೆಗೆ ಬಂದ ಬಳ್ಳಾರಿ ಜಿಲ್ಲಾ ಪ್ರಭಾರಿ ಸಿದ್ದೇಶ್ ಹೃದಯಾಘಾತದಿಂದ ನಿಧನ
ಬೆಂಗಳೂರು: ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡ ಸಿದ್ದೇಶ್ ಯಾದವ್ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಪಕ್ಷದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಯಾದವ್, ಸಭೆ ಮುಗಿಸಿ ಹೊರಗೆ ಬಂದಾಗ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿತಾದರೂ ಅಷ್ಟರಲ್ಲಿ ನಿಧನರಾಗಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ …
Read More »ಬತ್ತಿದ ಕಬಿನಿ : ಹಿನ್ನೀರಿನಲ್ಲಿ ಕಾಣಿಸುತ್ತಿವೆ ಐತಿಹಾಸಿಕ ಪುರಾತನ ದೇವಾಲಯ
ಮೈಸೂರು : ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು. ಬಹುತೇಕ ಜಲಾಶಯಗಳು 10 ವರ್ಷಗಳ ನಂತರ ಖಾಲಿಯಾಗಿವೆ. ಮತ್ತೊಂದೆಡೆ ಜಲಾಶಯಗಳ ಹಿನ್ನೀರಿನಲ್ಲಿ ಇರುವ ದೇವಾಲಯಗಳು ಈಗ ಗೋಚರಿಸುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ 10 ವರ್ಷಗಳ ನಂತರ ಮೈಸೂರು ಜಿಲ್ಲೆಯ ಬೀಚನಹಳ್ಳಿ ಸಮೀಪದಲ್ಲಿರುವ, ಕಬಿನಿ ಡ್ಯಾಂನಲ್ಲಿ ನೀರು ಸಂಪೂರ್ಣ ಕಡಿಮೆ ಆಗಿದ್ದು, ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ, ಐತಿಹಾಸಿಕ, ಪುರಾಣ ಪ್ರಸಿದ್ಧ ದೇವಾಲಯಗಳ ಕುರುಹುಗಳು ಪತ್ತೆಯಾಗಿವೆ. ಕೀರ್ತಿಪುರ ಗ್ರಾಮದ ಅರಳಿ ಮರದ ಬುಡಈ ಕುರುಹುಗಳು ಇತಿಹಾಸದ ಪುನ್ನಾಟ …
Read More »ಮಂಗಳೂರ ಮಳೆಗೆ ಪಂಪ್ವೆಲ್ ಜಲಾವೃತ:
ಮಂಗಳೂರು: ನಗರದಲ್ಲಿ ಮಧ್ಯಾಹ್ನದ ಬಳಿಕ ಸುರಿದ ಭಾರೀ ಮಳೆಗೆ ಪಂಪ್ ವೆಲ್ ಸಂಪೂರ್ಣ ಜಲಾವೃತಗೊಂಡಿದೆ. ಮಧ್ಯಾಹ್ನ 3 ಗಂಟೆಯ ಬಳಿಕ ಮಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. 2 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಪಂಪ್ವೆಲ್ ಫ್ಲೈಓವರ್ ಅಡಿಭಾಗ ಸಂಪೂರ್ಣ ಜಲಾವೃತಗೊಂಡಿದೆ. ಎಡ ಬಿಡದೇ ಮಳೆ ಸುರಿಯುತ್ತಿದ್ದು, ಫ್ಲೈಓವರ್ ಅಡಿ ನಿಂತ ನೀರಿನಿಂದಾಗಿ ವಾಹನ ಸಂಚಾರಕ್ಕೆ ಭಾರೀ ತೊಂದರೆಯುಂಟಾಗಿದೆ. ಪರಿಣಾಮ ರಸ್ತೆ ಉದ್ದಕ್ಕೂ ವಾಹನಗಳು ನಿಲುಗಡೆಯಾಗಿ ಟ್ರಾಫಿಕ್ ಜಾಮ್ ಆಗಿದೆ. ಮಂಗಳೂರಿನ ಪ್ರಮುಖ …
Read More »ಕ್ಷುಲ್ಲಕ ಕಾರಣಕ್ಕೆ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಕಲಬುರಗಿ: ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕೊರಿಕೋಟಾ ಗ್ರಾಮದಲ್ಲಿ ನಡೆದಿದೆ. ಕೆಲ ಯುವಕರು ಸೇರಿ ವಿನಾಃಕಾರಣ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಕುರಿಕೋಟಾ ಗ್ರಾಮದ ಪ್ರಶಾಂತ ಅಷ್ಟಗಿ (16) ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ. ಈತ ಅವರಾದ (ಬಿ) ಪ್ರೌಢ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ‘ಕುರಿಕೋಟಾ ಗ್ರಾಮದ …
Read More »ಇತಿಹಾಸದಲ್ಲೇ ಮೊದಲ ಬಾರಿಗೆ ಅಧಿಕೃತ ಪ್ರತಿಪಕ್ಷದ ನಾಯಕನ ಆಯ್ಕೆಯಾಗದೇ ಅಧಿವೇಶನ
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ. ಹೈಕಮಾಂಡ್ ವೀಕ್ಷಕರು ಇನ್ನು ಆಗಮಿಸದೇ ಇರುವ ಕಾರಣದಿಂದಾಗಿ ನಾಳೆಗೆ ಶಾಸಕಾಂಗ ಸಭೆ ಮುಂದೂಡಿಕೆಯಾಗಿದ್ದು, ನಾಳೆಯ ಕಲಾಪ ಅಧಿಕೃತ ಪ್ರತಿಪಕ್ಷದ ನಾಯಕನಿಲ್ಲದೇ ನಡೆಯಲಿದೆ. ಆದರೆ ಗ್ಯಾರಂಟಿ ವಿಚಾರದಲ್ಲಿನ ಬಿಜೆಪಿ ಹೋರಾಟ ಮಾತ್ರ ಮುಂದುವರೆಯಲಿದೆ. ಉಭಯ ಸದನದಲ್ಲಿ ಬಿಜೆಪಿ ಸದಸ್ಯರು ಹೋರಾಟ ನಡೆಸಿದರೆ ಫ್ರೀಡಂ ಪಾರ್ಕ್ ನಲ್ಲಿ ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ …
Read More »ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿ
ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾದ ಘಟನೆ ನಗರದ ನೇಕಾರನಗರದ ಬಸವೇಶ್ವರ ಸರ್ಕಲ್ ಬಳಿ ಇಂದು ಮುಂಜಾನೆ ನಡೆದಿದೆ. ಕೊಲೆಯಾದ ಮಹಿಳೆ ಸುಧಾ (೨೪) ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ ಹಿರೇಮಠ (೨೮) ಎಂಬಾತನೇ ಕುಡಿದ ಮತ್ತಿನಲ್ಲಿಯೇ ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಿನ ಜಾವ ೧೨.೩೦ ರಿಂದ ಬೆಳಿಗ್ಗೆ ೯.೩೦ ರ ಮಧ್ಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ …
Read More »ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು
ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಹಾಗೂ ಗಜಪತಿ ಗ್ರಾಮಕ್ಕೆ ಪ್ರತ್ಯೇಕ ಬಸ್ ಬಿಡುವಂತೆ ಒತ್ತಾಯಿಸಿದರು. ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಂಜಾನೆಯೇ ವಿದ್ಯಾರ್ಥಿಗಳು ಬಸ್‌ಗಾಗಿ ಕಾಯುತ ನಿಲ್ಲುತ್ತಾರೆ. ಆದರೆ ಹಿಂದಿನ ಗ್ರಾಮದಿಂದ ಮುಗುಳಿಗಲ್ ,ಬಿಡಿ ಗ್ರಾಮದಿಂದ ಬೆಳಗಾವಿಗೆ ಹೋಗುವ …
Read More »ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಆದೇಶ ಪ್ರತಿ ನೀಡದ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಳ ಕಾವು
ಬೆಂಗಳೂರು: ಹೊಸ ಸರ್ಕಾರದ ಜಂಟಿ ಹಾಗೂ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ, ಮತ್ತೊಂದೆಡೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಳ ಕಾವು ಜೋರಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಆದೇಶ ಪ್ರತಿ ನೀಡದ ಸರ್ಕಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ಮಳೆಯ ಅಭಾವವಾಗಿರುವುದರಿಂದ ರಾಜ್ಯದಲ್ಲಿ ಬರಗಾಲ ಎಂದು ಘೋಷಿಸುವ ಮೂಲಕ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ …
Read More »